Headlines

nagaraj11081993

ಗುಜರಾತ್‌ನ ಅಪಘಾತದಲ್ಲಿ 7 ಜನ ಸಾವು; ರಾಷ್ಟ್ರಪತಿ, ಪ್ರಧಾನಿ ಮೋದಿ ಸಂತಾಪ

ನವದೆಹಲಿ, ಏಪ್ರಿಲ್ 13: ಇಂದು ಬೆಳಗಿನ ಜಾವ ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯಲ್ಲಿ ದುರಂತ ಸಂಭವಿಸಿದ್ದು, ವೇಗವಾಗಿ ಬಂದ ಟ್ರಕ್ ಯಾತ್ರಿಕರ ಗುಂಪಿನ ಮೇಲೆ ಡಿಕ್ಕಿ ಹೊಡೆದ ಪರಿಣಾಮವಾಗಿ 7 ಜನರು ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಲಖ್ತಾರ್-ವಿರಮ್‌ಗಮ್ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಸುಮಾರು 1.30 ಗಂಟೆಗೆ ಭಕ್ತರು ರಾಜ್‌ಕೋಟ್‌ನಿಂದ ಬಹುಚರಾಜಿ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Mumru)…

Read More

IPL 2026: ಮುಂಬೈಗೆ ಮಣ್ಣು ಮುಕ್ಕಿಸಿರುವ ಆರ್​ಸಿಬಿಗೆ ಮುಂದಿನ ಎದುರಾಳಿ ಯಾರು? ಪಂದ್ಯ ಯಾವಾಗ?

ಐಪಿಎಲ್​ 2026 ರ (IPL 2026) 20ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಅವರ ನೆಲದಲ್ಲಿ 18 ರನ್​ಗಳಿಂದ ಮಣಿಸಿದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ತಂಡ ಮತ್ತೆ ತನ್ನ ತವರು ನೆಲದತ್ತ ಪ್ರಯಾಣಿಸಲಿದೆ. ಮೊದಲ ಎರಡು ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಡಿದ್ದ ಆರ್​ಸಿಬಿ ಆ ಬಳಿಕ ಎದುರಾಳಿ ತಂಡಗಳ ತವರು ನೆಲದಲ್ಲಿ ಆಡಲು ಅಲ್ಲಿಗೆ ಪ್ರಯಾಣ ಬೆಳೆಸಿತ್ತು. ಇದೀಗ ಆರ್​ಸಿಬಿ (RCB) ತನ್ನ ಐದನೇ ಪಂದ್ಯವನ್ನು ತನ್ನ ತವರು ನೆಲದಲ್ಲಿ…

Read More

ಕಾರಿನಲ್ಲೇ ಪ್ರಿಯಕರನಿಂದ ತಾಳಿಕಟ್ಟಿಸಿಕೊಂಡ ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ಬಿಟ್ಟ ಮಹಿಳೆ ಹೇಳಿದ್ದೇನು?

ಹಾಸನ, (ಏಪ್ರಿಲ್ 13): 8 ವರ್ಷಗಳ ಹಿಂದೆಯೇ ಮದುವೆಯಾಗಿದ್ದ ಮಹಿಳೆ (Women) ತನ್ನ ಗಂಡ ಹಾಗೂ ಮಗಳನ್ನು ಬಿಟ್ಟು ರಾತ್ರೋ ರಾತ್ರಿ ಲವರ್ ಜೊತೆ ಪರಾರಿಯಾಗಿರೋ ಘಟನೆ ಹಾಸನ (Hassan) ಗೆರೂರು ಪೊಲೀಸ್​ ಠಾಣಾ (Police Station) ವ್ಯಾಪ್ತಿಯಲ್ಲಿ ನಡೆದಿದೆ. ಓಡಿ ಹೋಗಿದ್ದಷ್ಟೇ ಅಲ್ಲ ಕಾರಿನಲ್ಲಿ ಪ್ರಿಯಕರನ ಕೈಯಿಂದ ತಾಳಿ ಕಟ್ಟಿಸಿಕೊಂಡಿದ್ದು, ಸದ್ಯ ಈ ವಿಡಿಯೋ (Video) ಇದೀಗ ವೈರಲ್ ಅಗಿದೆ. ಆದ್ರೆ, ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ತಾಳಿ ಕಟ್ಟಿಸಿಕೊಂಡ ಬಳಿಕ ಪತಿ ಪ್ರಕಾಶ್…

Read More

ಮುಜರಾಯಿ ಇಲಾಖೆಗೆ ಲಕ್ಷ ಲಕ್ಷ ಆದಾಯ ತಂದ ದೇಗುಲ, ಸಮುದಾಯ ಭವನಗಳಲ್ಲಿನ ಶೂಟಿಂಗ್​​!

ಬೆಂಗಳೂರು, ಏಪ್ರಿಲ್​​ 13: ದೇವಾಲಯಗಳು ಮತ್ತು ಸಮುದಾಯ ಭವನಗಳನ್ನು ಚಲನಚಿತ್ರ ಹಾಗೂ ಧಾರಾವಾಹಿ ಚಿತ್ರೀಕರಣಕ್ಕಾಗಿ ಬಾಡಿಗೆಗೆ ನೀಡುವ ಮೂಲಕವೇ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಇಲಾಖೆ ಕಳೆದ ಮೂರು ವರ್ಷಗಳಲ್ಲಿ ಸುಮಾರು 71 ಲಕ್ಷ ಆದಾಯ ಗಳಿಸಿದೆ. 2023–24ರಿಂದ 2025–26ರವರೆಗೆ ಚಿತ್ರ ಚಿತ್ರೀಕರಣದಿಂದ 53.91 ಲಕ್ಷ ರೂ. , ಧಾರಾವಾಹಿಗಳಿಂದ 16.86 ಲಕ್ಷ ರೂ. ಬಂದಿದೆ. ಡಾಕ್ಯುಮೆಂಟರಿ, ನ್ಯೂಸ್ ಫೀಚರ್ ಹಾಗೂ ಜಾಹೀರಾತುಗಳಿಂದ ಹೆಚ್ಚುವರಿಯಾಗಿ 42 ಸಾವಿರ ಹಣವನ್ನು ಇಲಾಖೆ ಗಳಿಸಿದೆ. ಮೈಸೂರು ನಗರದ…

Read More

‘ಜನ ನಾಯಗನ್’ ಲೀಕ್ ಬೆನ್ನಲ್ಲೇ ಕಠಿಣ ಕ್ರಮ: ಸೈಬರ್ ಕ್ರೈಂ ಪೊಲೀಸರಿಂದ 6 ಜನರ ಬಂಧನ

ಕಾಲಿವುಡ್ ನಟ ದಳಪತಿ ವಿಜಯ್ ಅವರ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾಗೆ ಪೈರಸಿ ಕಾಟ ಎದುರಾಗಿದೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾವನ್ನು ಲೀಕ್ ಮಾಡಲಾಗಿದೆ. ಈ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಕ್ರೈಂ ವಿಭಾಗದ ಪೊಲೀಸರು ಈಗಾಗಲೇ ಆರು ಜನರನ್ನು ಬಂಧಿಸಿದ್ದಾರೆ. ಈ ಚಿತ್ರವನ್ನು ಪ್ರತಿಷ್ಠಿತ ಕೆವಿಎನ್ (KVN) ಪ್ರೊಡಕ್ಷನ್ಸ್ ನಿರ್ಮಿಸುತ್ತಿದ್ದು, ಸಿನಿಮಾ ಲೀಕ್ ಆಗಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಂಸ್ಥೆಯ ಪರವಾಗಿ ಕಾನೂನು ಸಲಹೆಗಾರರಾದ ವಿಜಯನ್ ಸುಬ್ರಹ್ಮಣ್ಯಂ ಅವರು ಸೋಶಿಯಲ್ ಮೀಡಿಯಾದಲ್ಲಿ…

Read More

ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು

ದಾವಣಗೆರೆ, ಏಪ್ರಿಲ್​ 13: ಹರಿಹರ ತಾಲೂಕಿನ ಹನಗವಾಡಿ ಬಳಿಯ ಗುರುಪೀಠದಿಂದ ವಚನಾನಂದ ಸ್ವಾಮೀಜಿಯನ್ನ ಉಚ್ಚಾಟನೆ ಮಾಡಿದ್ದಕ್ಕೆ ಮಠದ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧರ್ಮದರ್ಶಿಗಳು ಹೋಗುತ್ತಿದ್ದ ವಾಹನಕ್ಕೆ ಚಪ್ಪಲಿ ತೋರಿಸಿ ಭಕ್ತರು ಆಕ್ರೋಶ ಹೊರಹಾಕಿದ್ದಾರೆ. ಹೀಗಾಗಿ ಹನಗವಾಡಿಯ ಪಂಚಮಸಾಲಿ ಗುರುಪೀಠದ ಎದುರು ಭಾರೀ ಹೈಡ್ರಾಮಾವೇ ನಡೆದಿದೆ. ಇನ್ನು ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಚನಾನಂದಶ್ರೀ, ನನ್ನ ಉಚ್ಚಾಟನೆ ಹಾಸ್ಯಾಸ್ಪದ. ಟ್ರಸ್ಟ್​ನವರಿಗೆ ಲೆಕ್ಕ ಕೇಳಿದ್ದಕ್ಕೆ ಟಾರ್ಗೆಟ್​ ಮಾಡುತ್ತಿದ್ದಾರೆ. ವ್ಯವಸ್ಥಿತವಾಗಿ ಷಡ್ಯಂತ್ರ ಮಾಡಿ ನನ್ನನ್ನು ಉಚ್ಚಾಟನೆ ಮಾಡಿದ್ದಾರೆ ಎಂದು ಆರೋಪಿಸಿದರು. ಶ್ವಾಸಪೀಠದಿಂದಲೇ…

Read More

ಅಮ್ಮನಿಗೆ ಆಸರೆ ಆಗಿದ್ದ ಮಗಳು ವಿಧಿಯಾಟಕ್ಕೆ ಬಲಿ: ಪ್ರವಾಸಕ್ಕೆ ಹೋಗಿದ್ದಾಗ ಸುಳ್ಯದ ಯುವ ಇಂಜಿನಿಯರ್ ದುರಂತ ಅಂತ್ಯ

ಆಂಧ್ರಪ್ರದೇಶ, ಏ.13: ಹಲವು ಆಸೆಗಳು, ಆಗಷ್ಟೇ ಕೈ ತುಂಬಾ ಸಂಬಳ ಸಿಗುವ ಕೆಲಸಕ್ಕೆ ಸೇರಿದ್ದ ಮನೆ ನಂದಾದೀಪ, ಇದೀಗ ಆ ವಿಧಯಾಟಕ್ಕೆ ಬಲಿಯಾಗಿದೆ. ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಕ್ಷಿಪ್ರಾ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಶನಿವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ 27 ವರ್ಷದ ಕ್ಷಿಪ್ರಾ ಪ್ರಾಣ ಬಿಟ್ಟಿದ್ದಾರೆ. ಸುಳ್ಯದ ಕಂದಡ್ಕ ನಿವಾಸಿ ಶಶಿಕಲಾ ಭಟ್ ಅವರ ಏಕೈಕ ಪುತ್ರಿ ಕ್ಷಿಪ್ರಾ (27), ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ…

Read More

ವಾಹನ ತಪಾಸಣೆ ನಡೆಸಿ ಬಿಡಲು ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಆರ್​​ಟಿಒ ಅಧಿಕಾರಿಗಳು

ನೆಲಮಂಗಲ, ಏಪ್ರಿಲ್​​ 13: ನೈಸ್ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸಿ ಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ನೆಲಮಂಗಲ ಆರ್​ಟಿಒ ಕಚೇರಿಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 30,000 ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಆರ್​ಟಿಒ ಕಚೇರಿಯ ಪ್ರೊಬೇಷನರಿ ಇನ್ಸ್​ಪೆಕ್ಟರ್​ಗಳಾದ ದಿನೇಶ್ ಕುಮಾರ್, ಕಿರಣ್ ಮತ್ತು ಖಾಸಗಿ ವ್ಯಕ್ತಿ ರಮೇಶ್ ಎಂಬಾತನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅಧಿಕಾರಿಗಳು ಗೂಗಲ್ ಪೇ ಮೂಲಕ 2,000, 1,000 ರೂಪಾಯಿ ಹಣವನ್ನು…

Read More

ಹಣ್ಣು ತರಕಾರಿಗಳಲ್ಲಿ ಅಂಟಿಕೊಂಡಿರುವ ಕೀಟನಾಶಕಗಳನ್ನು ತೆಗೆದು ಹಾಕಲು ಈ ಸರಳ ವಿಧಾನ ಅನುಸರಿಸಿ

ಇಂದಿನ ಈ ಕಾಲಘಟ್ಟದಲ್ಲಿ ಕೃಷಿಯಲ್ಲಿ ಕೀಟನಾಶಕಗಳನ್ನು (pesticides) ವ್ಯಾಪಕವಾಗಿ ಬಳಸಲಾಗುತ್ತಿದೆ. ಈ ಕೀಟನಾಶಕಗಳು ಬೆಳೆಗಳನ್ನು ರೋಗಗಳು ಮತ್ತು ಕೀಟಗಳಿಂದ ರಕ್ಷಿಸುತ್ತವೆ ನಿಜ. ಆದರೆ ಈ ರಾಸಾಯನಿಕಗಳ ಅವಶೇಷಗಳು ಹಣ್ಣು, ತರಕಾರಿಗಳ ಮೇಲ್ಮೈನಲ್ಲಿ ಹಾಗೆಯೇ ಉಳಿದು ಬಿಡುತ್ತದೆ. ಹೀಗಿರುವಾಗ ಮಾರುಕಟ್ಟೆಯಿಂದ ತಂದಂತಹ ಹಣ್ಣು-ತರಕಾರಿಗಳನ್ನು ಬರೀ ನೀರಿನಿಂದ ತೊಳೆದರೆ ರಾಸಾಯನಿಕ ಶೇಷ ಹಾಗೆಯೇ ಉಳಿದು ಬಿಡುತ್ತದೆ. ಇದು ನಮ್ಮ ದೇಹವನ್ನು ತಲುಪಿ ಕ್ರಮೇಣ ಆರೋಗ್ಯಕ್ಕೆ ಹಾನಿಯನ್ನುಂಟುಮಾಡುತ್ತದೆ. ಈ ರಾಸಾಯನಿಕಗಳಿಗೆ ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದರಿಂದ ಹಾರ್ಮೋನು ಅಸಮತೋಲನ, ಅಲರ್ಜಿ ಮತ್ತು ಕ್ಯಾನ್ಸರ್‌ನಂತಹ ಗಂಭೀರ…

Read More

ಆಶಾ ಭೋಸ್ಲೆ ಬದಲು ಬೇರೆ ಫೋಟೋ ಹಂಚಿಕೊಂಡು ಸಂತಾಪ ಸೂಚಿಸಿದ ಅಥಿಯಾ ಶೆಟ್ಟಿ; ಸಖತ್ ಟ್ರೋಲ್

ಭಾರತೀಯ ಚಿತ್ರರಂಗದ ಹಿರಿಯ ಗಾಯಕಿ ಆಶಾ ಭೋಸ್ಲೆ (Asha Bhosle) ಅವರ ಅಗಲಿಕೆಯಿಂದ ಅಭಿಮಾನಿಗಳು, ಆಪ್ತರು ಮತ್ತು ಕುಟುಂಬದವರು ಕಂಬನಿ ಮಿಡಿಯುತ್ತಿದ್ದಾರೆ. ಆದರೆ, ಈ ದುಃಖದ ಸಂದರ್ಭದಲ್ಲೂ ನಟಿ ಅಥಿಯಾ ಶೆಟ್ಟಿ (Athiya shetty) ಅವರು ಮಾಡಿದ ಒಂದು ಎಡವಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಆಶಾ ಭೋಸ್ಲೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಭರದಲ್ಲಿ ಅಥಿಯಾ ಅವರು ಲತಾ ಮಂಗೇಶ್ಕರ್ (Lata Mangeshkar) ಫೋಟೋವನ್ನು ಹಂಚಿಕೊಂಡಿರುವುದೇ ಈ ವಿವಾದಕ್ಕೆ ಕಾರಣ ಆಗಿದೆ. ಏಪ್ರಿಲ್…

Read More