ಹೊಸ ವರ್ಷಕ್ಕೆ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಪ್ರಾಯೋಗಿಕ ಪರೀಕ್ಷೆಗಳಿಗೆ ಹೊಸ ರೂಲ್ಸ್ ತಂದ ಇಲಾಖೆ – Kannada News | 2nd PUC Practical Exams Live Web Streamed by KSEAB for Transparency and Monitoring
ಬೆಂಗಳೂರು, ಜ.2: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಈ ವರ್ಷ ದ್ವಿತೀಯ ಪಿಯು ಕೋರ್ಸ್‌ಗಳ ಪ್ರಾಯೋಗಿಕ ಪರೀಕ್ಷೆಗಳಿಗೆ ವೆಬ್-ಸ್ಟ್ರೀಮಿಂಗ್ ಕಡ್ಡಾಯಗೊಳಿಸಿದೆ. ಪರೀಕ್ಷೆಯಲ್ಲಿ ಪಾರದರ್ಶಕತೆ ತರಲು ಈ ಕ್ರಮವನ್ನು ಕೆಎಸ್‌ಇಎಬಿ ತಂದಿದೆ. ಈ ಹೊಸ ವ್ಯವಸ್ಥೆಯನ್ನು ತರುವ ಮೂಲಕ ವಿದ್ಯಾರ್ಥಿಗಳಿಗೆ ಅಂಕದಲ್ಲಿ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳುತ್ತದೆ. ಪರೀಕ್ಷಾ ಕೇಂದ್ರದಲ್ಲಿ ನಡೆಯುವ ಎಲ್ಲಾ ಚಟುವಟಿಕೆಯನ್ನು ರಿಯಲ್ ಟೈಮ್ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ. ಕಳೆದ ವರ್ಷ ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ್ದರೂ, ಥಿಯರಿ ಪರೀಕ್ಷೆಯಲ್ಲಿ…