ಎಣ್ಣೆ ಪ್ರಿಯರೇ ಎಚ್ಚರ: ಅಧಿಕಾರಿಗಳ ನೇತೃತ್ವದಲ್ಲೇ ನಡೀತಿದೆ ಅವಧಿ ಮೀರಿದ ಮದ್ಯ ಮಾರಾಟ!
ರಾಮನಗರ, ಮಾರ್ಚ್ 29: ಮದ್ಯ ಮಾರಾಟ ವಿಚಾರವಾಗಿ ಅಕ್ರಮಗಳನ್ನು ತಡೆಯಬೇಕಿದ್ದ ಅಧಿಕಾರಿಗಳೇ ಕಳ್ಳಾಟ ಆಡುತ್ತಿರುವ ಪ್ರಸಂಗವೊಂದು ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಬಯಲಾಗಿದೆ. ಹಣದಾಸೆಗೆ ಅಧಿಕಾರಿಗಳಿಂದಲೇ ಅವಧಿ ಮೀರಿದ ಮದ್ಯ ಮಾರಾಟ ನಡೆಯುತ್ತಿರೋದು, ಐಜೂರು ಠಾಣೆ ಪೊಲೀಸರ ಕಾರ್ಯಾಚರಣೆ ವೇಳೆ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಪಾನೀಯ ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಪ್ತಿ ಮಾಡಿದ ಅವಧಿಮೀರಿದ ಮದ್ಯ ಮಾರುತ್ತಿದ್ದು, ನಿಗಮದ ಸೂಪರ್ ವೈಸರ್ ಮನೆಯಲ್ಲಿ ಇವು ಪತ್ತೆಯಾಗಿದೆ. ಸುರೇಶ್ ನಿವಾಸದಲ್ಲಿ ವಿವಿಧ ಕಂಪನಿಗಳ 20 ಬಾಕ್ಸ್…