ರೇಣುಕಾಸ್ವಾಮಿ ಕೇಸ್: ಪ್ರತಿ ದಿನ ವಿಚಾರಣೆಗೆ ಕೋರ್ಟ್ ಸೂಚನೆ; ದರ್ಶನ್ ಪರ ವಕೀಲರ ಮನವಿ ತಿರಸ್ಕಾರ – Kannada News | Renukaswamy Case Darshan Court Hearing Daily Witness Examination updates
ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ಮತ್ತು ಗ್ಯಾಂಗ್ ಒಳಗೊಂಡಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯು ವೇಗ ಪಡೆದುಕೊಂಡಿದೆ. ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಇಂದು (ಜೂನ್ 15) ಸಾಕ್ಷ್ಯ ವಿಚಾರಣೆ ಮುಂದುವರಿದಿದ್ದು, ಹಲವು ಪ್ರಮುಖ ಬೆಳವಣಿಗೆಗಳು ಸಂಭವಿಸಿವೆ. ಇಂದು ನ್ಯಾಯಾಲಯದಲ್ಲಿ ಪ್ರಕರಣದ 13ನೇ ಸಾಕ್ಷಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಯಿತು. ಇದೇ ವೇಳೆ, ಸಾಕ್ಷಿಗಳ ಪಾಟೀಸವಾಲು ನಡೆಸುವುದನ್ನು ಮುಂದೂಡಬೇಕೆಂದು ಆರೋಪಿಗಳ ಪರ ವಕೀಲರು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಧೀಶರಾದ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ತಿರಸ್ಕರಿಸಿದರು. ಸುಪ್ರೀಂಕೋರ್ಟ್ ಈಗಾಗಲೇ ಈ ಪ್ರಕರಣದ…