‘ಜನ ನಾಯಗನ್’ ಪೈರಸಿ ಕಾಪಿ ಡೌನ್ಲೋಡ್ ಮಾಡಿದವರಿಗೂ ಎದುರಾಗಲಿದೆ ಸಂಕಷ್ಟ
ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ಹಾಗೂ ಅವರ ವೃತ್ತಿಜೀವನದ ಕೊನೆಯ ಚಿತ್ರ ಎನ್ನಲಾದ ‘ಜನ ನಾಯಗನ್’ (Jana Nayagan) ಬಿಡುಗಡೆಗೂ ಮುನ್ನವೇ ಪೈರಸಿ ಕಾಟಕ್ಕೆ ಸಿಲುಕಿದೆ. ಸೆನ್ಸಾರ್ ಮಂಡಳಿಯೊಂದಿಗೆ ಚಿತ್ರತಂಡ ಸುದೀರ್ಘ ಹೋರಾಟ ನಡೆಸುತ್ತಿರುವ ನಡುವೆಯೇ, ಚಿತ್ರದ ಸಂಪೂರ್ಣ ತುಣುಕುಗಳು ಆನ್ಲೈನ್ನಲ್ಲಿ ಸೋರಿಕೆಯಾಗಿರುವುದು ಇಡೀ ಭಾರತೀಯ ಚಿತ್ರರಂಗಕ್ಕೆ ಶಾಕ್ ನೀಡಿದೆ. ಈ ದುರದೃಷ್ಟಕರ ಘಟನೆಯ ಬೆನ್ನಲ್ಲೇ ಚಿತ್ರದ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ (KVN Productions) ಅಧಿಕೃತ ಪ್ರಕಟಣೆ ಹೊರಡಿಸಿದೆ. ‘ಜನ ನಾಯಗನ್’ ಸಿನಿಮಾದ ಪೈರಸಿ (Piracy)…