Headlines

nagaraj11081993

ಮೋದಿಯಿಂದ ಹೊಸ ಪ್ರಯೋಗ; ಬಂಗಾಳ ರ‍್ಯಾಲಿ ವೇಳೆ ವ್ಲಾಗರ್ ಆದ ಪ್ರಧಾನಿ

ನವದೆಹಲಿ, ಏಪ್ರಿಲ್ 11: ಪಶ್ಚಿಮ ಬಂಗಾಳದ ಪುರ್ಬಾ ವರ್ಧಮಾನ್‌ನಲ್ಲಿ ತಮ್ಮ ರ‍್ಯಾಲಿಗೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನರನ್ನು ಉದ್ದೇಶಿಸಿ ಒಂದು ವಿಡಿಯೋ ಮಾಡಿ ರಿಲೀಸ್ ಮಾಡಿದ್ದಾರೆ. ಈ ವಿಡಿಯೋ ಮೂಲಕ ಪ್ರಧಾನಿ ಮೋದಿ (PM Modi) ವ್ಲಾಗರ್ ಆಗಿ ಬದಲಾಗಿದ್ದಾರೆ. ಪಶ್ಚಿಮ ಬಂಗಾಳದ ಹೆಲಿಪ್ಯಾಡ್‌ನಲ್ಲಿ ನೆರೆದಿದ್ದ ದೊಡ್ಡ ಜನಸಮೂಹವನ್ನು ಅದ್ಭುತ ದೃಶ್ಯ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಬಿಸಿಲಿನ ಬೇಗೆಯ ಹೊರತಾಗಿಯೂ ಜನರ ಉತ್ಸಾಹ ಕಡಿಮೆಯಾಗದೆ ಹಾಗೆಯೇ ಉಳಿದಿದೆ ಎಂದು ಅವರು ಹೇಳಿದ್ದಾರೆ. ಬಿಸಿಲಿನ…

Read More

ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷ: ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ; ಬೆಳ್ಳಿಹಬ್ಬದ ಮೂಲಕ ಜಿಬಿಎ ಚುನಾವಣೆಗೆ ರಣಕಹಳೆ

ಬೆಂಗಳೂರು, ಏಪ್ರಿಲ್​ 11: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯನ್ನೇ ಟಾರ್ಗೆಟ್ ಮಾಡಿ ಬೆಂಗಳೂರಿನಲ್ಲಿ ಜೆಡಿಎಸ್​ ಪಕ್ಷ ಶಕ್ತಿ ಪ್ರದರ್ಶನ ಮಾಡಿದೆ. ಜೆಡಿಎಸ್ (JDS) 25ನೇ ವರ್ಷದ ಬೆಳ್ಳಿ ಹಬ್ಬದ ಆಚರಣೆ ನೆಪದಲ್ಲಿ ಸುಮಾರು 50 ಸಾವಿರಕ್ಕೆ ಹೆಚ್ಚು ಕಾರ್ಯಕರ್ತರನ್ನ ಸೇರಿಸುವ ಮೂಲಕ ಬೆಂಗಳೂರಿನಲ್ಲಿ ಜೆಡಿಎಸ್ ಇದೆಯಾ ಎಂಬ ಟೀಕೆಗಳಿಗೆ ದಳಪತಿಗಳು ಉತ್ತರ ನೀಡಿದ್ದಾರೆ. ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷ ಪ್ರಾದೇಶಿಕ ಪಕ್ಷ ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷವಾಗಿದೆ‌. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ…

Read More

ಸಿಬಿಐ ಅಧಿಕಾರಿ ಸೋಗಿನಲ್ಲಿ ಉದ್ಯಮಿಗೆ ಗಾಳ: 30 ದಿನಗಳ ಕಾಲ ಡಿಜಿಟಲ್ ಅರೆಸ್ಟ್ ಮಾಡಿ 15 ಕೋಟಿ ಲೂಟಿ!

ಬೆಂಗಳೂರು,ಏ. 11 : ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ವಂಚನೆ ಜಾಲಗಳು ಹೆಚ್ಚಾಗಿದೆ. ಸಾಮಾನ್ಯರಿಂದ ಹಿಡಿದು, ದೊಡ್ಡ ವ್ಯಕ್ತಿಗಳನ್ನು ಈ ಜಾಲದಲ್ಲಿ ಸಿಲುಕಿಸಲಾಗುತ್ತಿದೆ. ಇದೀಗ ಸಿಬಿಐ (CBI) ಅಧಿಕಾರಿಗಳೆಂದು ನಂಬಿಸಿ ಉದ್ಯಮಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಭೀತಿಯಲ್ಲಿಟ್ಟು ಬರೋಬ್ಬರಿ 15 ಕೋಟಿ 45 ಲಕ್ಷ ರೂಪಾಯಿ ದೋಚಿದ್ದ ಇಬ್ಬರು ಆರೋಪಿಗಳನ್ನು ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ಮೂಲದ ವೆಂಕಟೇಶ್ ಶರತ್ ನಾಯಕ್ ಮತ್ತು ಡೆವಗತ್ ಶ್ರೀಪಾದ್ ನಾಯಕ್ ಬಂಧಿತ ಆರೋಪಿಗಳು. ಬೆಳಗಾವಿ ಮೂಲದ ಉದ್ಯಮಿ ಅಜಿತ್ ಗೋಪಾಲಕೃಷ್ಣ ಅವರಿಗೆ…

Read More

‘ಧುರಂಧರ್ 2’ ಗೆಲುವಿನ ಬೆನ್ನಲ್ಲೆ ಆರ್​​ಎಸ್​​ಎಸ್ ಕಚೇರಿಗೆ ರಣ್ವೀರ್ ಸಿಂಗ್ ಭೇಟಿ

ರಣ್ವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಕಳೆದ ತಿಂಗಳು ಬಿಡುಗಡೆ ಆಗಿದ್ದು ಚಿತ್ರಮಂದಿರದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈಗಾಗಲೇ ಭಾರತದಲ್ಲಿ 1000 ಕೋಟಿ ಗಳಿಕೆಯನ್ನು ದಾಟಿದ್ದು, ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇತ್ತೀಚೆಗಷ್ಟೆ ಚುನಾವಣಾ ಪ್ರಚಾರವೊಂದರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸಿನಿಮಾದ ಬಗ್ಗೆ ಧನಾತ್ಮಕವಾಗಿ ಮಾತನಾಡಿದ್ದಾರೆ. ಇದೆಲ್ಲದರ ಬೆನ್ನಲ್ಲೆ ನಟ ರಣ್ವಿರ್ ಸಿಂಗ್ ಆರ್​​ಎಸ್​​ಎಸ್ ಕಚೇರಿಗೆ ಭೇಟಿ ನೀಡಿದ್ದು ಆರ್​​ಎಸ್​​ಎಸ್ ಮುಖ್ಯಸ್ಥ…

Read More

PBKS vs SRH: ಪಂಜಾಬ್​ ಅಜೇಯ ಓಟ; ಸನ್‌ರೈಸರ್ಸ್​ಗೆ ಮೂರನೇ ಸೋಲು

ಐಪಿಎಲ್ 2026 (IPL 2026) ಟೂರ್ನಮೆಂಟ್‌ನ 17 ನೇ ಪಂದ್ಯದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ (SRH vs PBKS) ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 219 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 6 ವಿಕೆಟ್‌ಗಳ ಜಯ ಸಾಧಿಸಿತು. ಎಂದಿನಂತೆ ಈ ಪಂದ್ಯದಲ್ಲೂ ಸನ್‌ರೈಸರ್ಸ್ ಹೈದರಾಬಾದ್‌ನ ಬೌಲಿಂಗ್ ತೀರ ಕಳಪೆಯಾಗಿತ್ತು. ಹೀಗಾಗಿ ಪಂಜಾಬ್ ಕಿಂಗ್ಸ್…

Read More

ಬಂಗಾಳದ ಸಿಲಿಗುರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ; ಜನರಿಂದ ಜೈ ಶ್ರೀರಾಮ್ ಘೋಷಣೆ

ಸಿಲಿಗುರಿ, ಏಪ್ರಿಲ್ 11: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Modi) ಅವರು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಈ ರೋಡ್ ಶೋ ಪಶ್ಚಿಮ ಬಂಗಾಳದಲ್ಲಿ ಭಾರಿ ಜನಸಮೂಹವನ್ನು ಆಕರ್ಷಿಸಿತು. ಪ್ರಧಾನ ಮಂತ್ರಿಯನ್ನು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಸಿಲಿಗುರಿಯ ಬೀದಿಗಳು ತುಂಬಿ ತುಳುಕುತ್ತಿದ್ದವು. ಅಲ್ಲಿ ಸೇರಿದ್ದ ಜನರು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ, ಕೇಸರಿ ಬಾವುಟಗಳನ್ನು ಹಾರಿಸುತ್ತಾ ಪ್ರಧಾನಿ ಮೋದಿಯನ್ನು ಸ್ವಾಗತಿಸಿದರು. ಈ ರೋಡ್ ಶೋ ಬಂಗಾಳದಲ್ಲಿ ಚುನಾವಣೆಗೂ…

Read More

CSK vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ – Kannada News | Chennai Super Kings vs Delhi Capitals IPL 2026 Live Cricket Score CSK vs DC Match on 11th April latest news in Kannada

ಐಪಿಎಲ್ 2026 ರ 18 ನೇ ಪಂದ್ಯವು ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ಈ ಪಂದ್ಯವನ್ನು ತಮ್ಮ ತವರು ಮೈದಾನವಾದ MA ಚಿದಂಬರಂ ಕ್ರೀಡಾಂಗಣದಲ್ಲಿ ಆಡುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ಈ ಋತುವಿನ ಮೊದಲ ಗೆಲುವಿಗಾಗಿ ಕಾಯುತ್ತಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಮೂರನೇ ಗೆಲುವಿನ ನಿರೀಕ್ಷೆಯಲ್ಲಿದೆ. Source link

Read More

ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು

ಬೆಂಗಳೂರು, ಏಪ್ರಿಲ್​ 11: ಮಧ್ಯಪ್ರಾಚ್ಯದಲ್ಲಿ ಕದನ ವಿರಾಮ ಘೋಷಣೆಯಾದ ನಂತರ ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಕೆ ಆಗಿದೆ. ಈ ಹಿಂದೆ ಯುದ್ಧದ ಸಂದರ್ಭದಲ್ಲಿ ಚಿನ್ನದ ಬೆಲೆ ಕಡಿಮೆ ಆಗಿತ್ತು. ಆದರೆ ಈಗ ಏರಿಕೆ ಕಂಡಿರುವುದು ಗ್ರಾಹಕರು ಬೇಜಾರು ಆಗಿದ್ದಾರೆ. ಕಳೆದ ಮೂರು ವಾರಗಳಿಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಸುಮಾರು 11 ಸಾವಿರ ರೂಪಾಯಿಗಳಷ್ಟು ವ್ಯತ್ಯಾಸ ಕಂಡುಬಂದಿದೆ. ಅಕ್ಷಯ ತೃತೀಯ ಸಮೀಪಿಸುತ್ತಿರುವ ಕಾರಣ, ಅನೇಕ ಗ್ರಾಹಕರು ಬೆಲೆ ಏರಿಕೆಯ ನಡುವೆಯೂ ಚಿನ್ನ ಖರೀದಿಗೆ ಮುಂದಾಗಿದ್ದಾರೆ. ಭವಿಷ್ಯದಲ್ಲಿ ಮತ್ತಷ್ಟು ಏರಿಕೆಯಾಗಬಹುದು…

Read More

PBKS vs SRH: ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಪ್ರಿಯಾಂಶ್ ಆರ್ಯ

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ 2026 (IPL 2026) ರ 17ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್‌ (SRH vs PBKS) ತಂಡಕ್ಕೆ 220 ರನ್‌ಗಳ ಗುರಿ ನೀಡಿತು. ಇದಕ್ಕೆ ಪ್ರತಿಯಾಗಿ ಈ ಗುರಿ ಬೆನ್ನಟ್ಟಿದ ಪಂಜಾಬ್ ಉತ್ತಮ ಆರಂಭ ಪಡೆಯಿತು. ಆರಂಭಿಕರಾದ ಪ್ರಿಯಾಂಶ್ ಆರ್ಯ (Priyansh Arya ) ಮತ್ತು ಪ್ರಭ್ಸಿಮ್ರಾನ್ ಸಿಂಗ್ ಜೋಡಿ ಸನ್‌ರೈಸರ್ಸ್ ಹೈದರಾಬಾದ್ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಇಬ್ಬರು ಆರಂಭಿಕರು…

Read More

ಪರಪ್ಪನ ಅಗ್ರಹಾರದಲ್ಲಿ ‘ನೋ ಮೊಬೈಲ್, ನೋ ಆತಿಥ್ಯ’: ಕೈದಿಗಳ ಹೈಟೆಕ್ ಆಟಕ್ಕೆ ಬ್ರೇಕ್ ಹಾಕಲು ಡಿಜಿಪಿ ಅಲೋಕ್ ಕುಮಾರ್ ಮಾಸ್ಟರ್ ಪ್ಲಾನ್!

ಬೆಂಗಳೂರು, ಏ.11: ರಾಜ್ಯದ ಬಂದೀಖಾನೆ ಮತ್ತು ಸುಧಾರಣಾ ಇಲಾಖೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಡಿಜಿಪಿ ಅಲೋಕ್ ಕುಮಾರ್ ಅವರು ಮುಂದಾಗಿದ್ದಾರೆ. ಪರಪ್ಪನ ಅಗ್ರಹಾರದಂತಹ ಕೇಂದ್ರ ಕಾರಾಗೃಹಗಳಲ್ಲಿ ಪದೇ ಪದೇ ಮೊಬೈಲ್ ಫೋನ್‌ಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ, ಈ ಬಾರಿ ಕೇವಲ ಕೈದಿಗಳಷ್ಟೇ ಅಲ್ಲದೆ ಮೊಬೈಲ್ ಸರ್ವೀಸ್ ಪ್ರೊವೈಡರ್‌ಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಜೈಲುಗಳಲ್ಲಿ ಜಾಮರ್ ಅಳವಡಿಸಿದ್ದರೂ ಮೊಬೈಲ್ ಸಂಪರ್ಕ ಹೇಗೆ ಲಭ್ಯವಾಗುತ್ತಿದೆ ಎಂಬ ಬಗ್ಗೆ ಗಂಭೀರ ತನಿಖೆ ನಡೆಸಲಾಗುತ್ತಿದೆ. ತಪಾಸಣೆಯ ವೇಳೆ ಮಾತ್ರ ಸಿಗ್ನಲ್…

Read More