ದೈವ ಅನುಕರಣೆ ಪ್ರಕರಣ; ಪರಿಷ್ಕೃತ ಕ್ಷಮಾಪಣೆ ಸಲ್ಲಿಸಲು ಒಪ್ಪಿದ ರಣವೀರ್ ಸಿಂಗ್
ಚಾವುಂಡಿ ದೈವ ಅನುಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಣವೀರ್ ಸಿಂಗ್ ಅವರು ಕೇಸ್ ಎದುರಿಸುತ್ತಿದ್ದಾರೆ. ಈ ಪ್ರಕರಣ ಕರ್ನಾಟಕ ಹೈಕೋರ್ಟ್ನಲ್ಲಿದೆ. ಇಂದು (ಏಪ್ರಿಲ್ 10) ನಡೆದ ವಿಚಾರಣೆಯಲ್ಲಿ ರಣವೀರ್ ಸಿಂಗ್ ಪರವಾಗಿ ವಕೀಲರು ಹೊಸ ಹೇಳಿಕೆ ನೀಡಿದ್ದಾರೆ. ಹೊಸದಾಗಿ ಕ್ಷಮೆ ಕೇಳಲು ಸಿದ್ಧ ಎಂದಿರುವ ರಣವೀರ್, ದೇವಾಲಯಕ್ಕೂ ಭೇಟಿ ನೀಡುವುದಾಗಿ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ‘ಚಾವುಂಡಿ ದೈವ ಅನುಕರಿಸಿದ ಪ್ರಕರಣದಲ್ಲಿ ಪರಿಷ್ಕೃತ ಕ್ಷಮೆಯಾಚನಾ ಅಫಿಡವಿಟ್ ಸಲ್ಲಿಸಲು ನಾನು ಸಿದ್ಧ. ಈ ಹಿಂದಿನ ಕ್ಷಮೆಯಾಚನೆ ಪ್ರಾಮಾಣಿಕವಾಗಿಲ್ಲ ಎಂಬ ಕಳವಳವನ್ನು ಇದು…