ಬಿಹಾರ ವಿಧಾನಸಭೆಗೆ ಬಾಂಬ್ ಬೆದರಿಕೆ; ತೀವ್ರ ಶೋಧ ಕಾರ್ಯಾಚರಣೆ ಆರಂಭ
ಪಾಟ್ನಾ, ಏಪ್ರಿಲ್ 10: ಬಿಹಾರ ವಿಧಾನಸಭೆಗೆ (Bihar Assembly) ಇಂದು ಇಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 2 ದಿನಗಳ ಹಿಂದಷ್ಟೇ ದೆಹಲಿ ವಿಧಾನಸಭೆ ಆವರಣದೊಳಗೆ ಕಾರಿನಲ್ಲಿ ನುಗ್ಗಿದ್ದ ವ್ಯಕ್ತಿಯೊಬ್ಬ ಸ್ಪೀಕರ್ ಕಚೇರಿ ಬಳಿ ಹೂವಿನ ಬೊಕ್ಕೆ ಇಟ್ಟು ಹೋಗಿದ್ದ. ಆತನನ್ನು ಬಂಧಿಸಲಾಗಿತ್ತು. ದೆಹಲಿ ವಿಧಾನಸಭೆಗೂ ಬಾಂಬ್ ಬೆದರಿಕೆ ಬಂದಿತ್ತು. ಅದರ ಬೆನ್ನಲ್ಲೇ ಇದೀಗ ಬಿಹಾರ ವಿಧಾನಸಭೆಗೂ ಬಾಂಬ್ ಬೆದರಿಕೆ ಬಂದಿರುವುದರಿಂದ ಶೋಧ ಕಾರ್ಯಾಚರಣೆ ತೀವ್ರವಾಗಿ ನಡೆದಿದೆ. “ಬಿಹಾರ ವಿಧಾನಸಭೆ ಅಧಿಕಾರಿಗಳಿಗೆ…