All posts by nagaraj11081993

Video: ಒಡಿಶಾದ ಕಲ್ಲು ಕ್ವಾರಿಯಲ್ಲಿ ಭಾರಿ ಸ್ಫೋಟ, ಹಲವರು ಮೃತಪಟ್ಟಿರುವ ಶಂಕೆ – Kannada News | Major Quarry Blast in Odisha’s Dhenkanal Triggers Emergency Response

ಧೆಂಕನಲ್, ಜನವರಿ 04: ಒಡಿಶಾದ ಕಲ್ಲು ಕ್ವಾರಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಹಲವರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಕಲ್ಲು ಕ್ವಾರಿಯಲ್ಲಿ ಬಂಡೆಗಳ ದೊಡ್ಡ ಭಾಗ ಕುಸಿದು ಹಲವಾರು ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಗೋಪಾಲಪುರ ಗ್ರಾಮದ ಬಳಿಯ ಕಲ್ಲು ಕ್ವಾರಿಯಲ್ಲಿ ಕಾರ್ಮಿಕರು ಕಲ್ಲುಗಳನ್ನು ಕೊರೆಯುತ್ತಿರುವಾಗ ಘಟನೆ ಸಂಭವಿಸಿದೆ.ಸ್ಫೋಟದಿಂದಾಗಿ ಬಂಡೆಗಳು ಕುಸಿದು ಬಿದ್ದಿವೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ದೊಡ್ಡ ಕಲ್ಲುಗಳ ಕೆಳಗೆ ಎರಡರಿಂದ ನಾಲ್ಕು ಜನರು ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆಯತ್ತ ಜೋ ರೂಟ್ – Kannada News | The battle is on, Joe Root is nearing Sachin Tendulkar’s World record

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಅರ್ಧಶತಕ ಬಾರಿಸಿದ ವಿಶ್ವ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಇದೀಗ ಈ ದಾಖಲೆಯನ್ನು ಮುರಿಯುವತ್ತ ಇಂಗ್ಲೆಂಡ್​ನ ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್ (Joe Root) ಹೆಜ್ಜೆಯನ್ನಿಟ್ಟಿದ್ದಾರೆ.

Source link

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಮೆಂಟ್​ ಹಾಕಿದ್ದ ಇನ್ನಿಬ್ಬರ ಬಂಧನ – Kannada News | Bengaluru Police arrest 2 more in Darshan wife Vijayalakshmi case

ನಟ ದರ್ಶನ್ ತೂಗುದೀಪ (Darshan) ಅವರ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್​ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಗರಾಜ್ ತಳವಾರ ಮತ್ತು ಪ್ರಶಾಂತ್ ತಳವಾರ ಎಂಬುದವರು ಬಂಧಿತರು. ಹುಬ್ಬಳ್ಳಿಯಲ್ಲಿ ಪೆಟ್ರೋಲ್ ಬಂಕ್ ಮ್ಯಾನೇಜರ್ ಆಗಿರುವ ನಾಗರಾಜ್ ಹಾಗೂ ಧಾರವಾಡದಲ್ಲಿ ಆಡಿಟರ್ ಆಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ತಳವಾರ ಬಂಧನ ಆಗಿದೆ. ಆ ಮೂಲಕ ಪ್ರಕರಣದಲ್ಲಿ ಈವರೆಗೆ ಬಂಧಿತರ ಸಂಖ್ಯೆ 4ಕ್ಕೆ ಏರಿಕೆ ಆಗಿದೆ.

ಇತ್ತೀಚೆಗೆ ಕಿಚ್ಚ ಸುದೀಪ್ ಮತ್ತು ದರ್ಶನ್ ಅಭಿಮಾನಿಗಳ ನಡುವೆ ಫ್ಯಾನ್ಸ್ ವಾರ್ ಶುರುವಾಯಿತು. ಆ ಬಳಿಕ ತಮಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಬಂದಿದೆ ಎಂದು ಪೊಲೀಸರಿಗೆ ವಿಜಯಲಕ್ಷ್ಮಿ ದರ್ಶನ್ ಅವರು ದೂರು ನೀಡಿದ್ದರು. ಈ ಮೊದಲು ಚಂದ್ರು ಹಾಗೂ ನಿತಿನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಚಂದ್ರು ಬೆಂಗಳೂರಿನ ಚಿಕ್ಕಬಾಣಾವರದ ಆಟೋ ಚಾಲಕ ಮತ್ತು ನಿತಿನ್ ದಾವಣಗೆರೆ ಮೂಲದ ಇಂಜಿನಿಯರ್ ಎಂದು ಗುರುತಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳಿಂದ ದರ್ಶನ್​ ಪತ್ನಿಗೆ ನಿಂದಿಸಿದ್ದ ಅನೇಕರಿಗೆ ಈಗ ನಡುಕ ಶುರು ಆಗಿದೆ. ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇತ್ತೀಚೆಗೆ ಆನ್​​ಲೈನ್​​ನಲ್ಲಿ ಕೆಲವರು ಅಶ್ಲೀಲ ಪದ ಬಳಕೆ ಮಾಡಿದ್ದರು. ತಮಗೆ ಬಂದ ಕಮೆಂಟ್​ಗಳ ಸ್ಕ್ರೀನ್ ಶಾಟ್​​ಗಳನ್ನು ವಿಜಯಲಕ್ಷ್ಮಿ ಅವರು ಜಗಜ್ಜಾಹೀರು ಮಾಡಿದ್ದರು. ಬಳಿಕ ದೂರು ದಾಖಲಿಸಿದ್ದರು.

ವಿಜಯಲಕ್ಷ್ಮಿ ದರ್ಶನ್ ಅವರು ಇತ್ತೀಚೆಗೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿದ್ದರು. ಅಲ್ಲಿನ ತನಕ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಎಂಬ ವಿಷಯ ತಿಳಿದು ಅಸಮಾಧಾನ ವ್ಯಕ್ತಪಡಿಸಿದ್ದರು. ಅವರು ಬಂದು ಹೋದ ನಂತರ ತನಿಖೆ ಚುರುಕುಗೊಳಿಸಲಾಯಿತು. ಈಗ ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್

ಈ ಮೊದಲು ನಟಿ ರಮ್ಯಾ ಅವರಿಗೂ ಸಾಮಾಜಿಕ ಜಾಲತಾಣದಲ್ಲಿ ಹಲವರು ಅಶ್ಲೀಲ ಕಮೆಂಟ್ ಹಾಕಿದ್ದರು. ಅಂಥವರ ವಿರುದ್ಧ ದೂರು ನೀಡಲಾಗಿತ್ತು. ಪೊಲೀಸರು ಕೂಡಲೇ ಕ್ರಮ ತೆಗೆದುಕೊಂಡು ಹಲವರನ್ನು ಬಂಧಿಸಲಾಗಿತ್ತು. ಬಳಿಕ ಆರೋಪಿಗಳಿಗೆ ಜಾಮೀನು ಸಿಕ್ಕಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Weekly Horoscope 2025: ನಿಮ್ಮ ರಾಶಿಗನುಗುಣವಾಗಿ ಜನವರಿ ತಿಂಗಳ ಮೊದಲ ವಾರದ ಭವಿಷ್ಯ ತಿಳಿಯಿರಿ – Kannada News | Jan First Week Horoscope 2025: Zodiac Predictions and Guidance

ಜನವರಿ ತಿಂಗಳ ಮೊದಲ ವಾರ ಕೆಲವರಿಗೆ ಮಾತ್ರ ಶುಭವಿದ್ದು, ಉಳಿದವರು ಯಾರೂ ಭಯಪಡುವ ಅವಶ್ಯಕತೆಯಿಲ್ಲ. ಏರಿಳಿತಗಳನ್ನು ಸಹಿಸಿಕೊಳ್ಳಬೇಕಾಗುವುದು. ಭವಿಷ್ಯದ ಕಡೆ ನಿಮ್ಮ ಚಿತ್ತವಿರಲಿ. ಕ್ಷಣಿಕವನ್ನು ತೀರ್ಮಾನ ಮಾಡುವುದು ಬೇಡ.

ಮೇಷ ರಾಶಿ:

ರಾಶಿ ಚಕ್ರದ ಮೊದಲನೇ ರಾಶಿಯವರಿಗೆ ಹೊಸ ವರ್ಷದ ಮೊದಲ ವಾರ ನಿಮ್ಮ ಮನಸ್ಸಿನ ಮಾತನ್ನು ಕೇಳದೇ ಬುದ್ಧಿಯಿಂದ ಸರಿಯಾದ ತೀರ್ಮಾನವನ್ನು ಮಾಡಿ. ಆಗಿಹೋದ ಸಾಮಾಜಿಕ ಕಾರ್ಯಗಳಿಗೆ ಪ್ರಶಂಸೆ ಬರಬಹುದು. ಆದಾಯಕ್ಕೆ ಮೂಲವಾದುದನ್ನು ಹುಡುಕಿಕೊಳ್ಳುವುದು ಭವಿಷ್ಯ ದೃಷ್ಟಿಯಿಂದ ಉತ್ತಮ. ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವುದು ಕಷ್ಟವಾಗಬಹುದು. ಆದಾಯದ ಮೂಲದಿಂದ ನಿಮಗೆ ನೆಮ್ಮದಿ ಸಿಗುವುದು. ಶತ್ರುಗಳ ಅನ್ಯಾಯಕ್ಕೆ ಸಾಕ್ಷಿಯು ಸಿಗಬಹುದು. ನಕಾರಾತ್ಮಕತೆಯನ್ನು ಬುದ್ಧಿಪೂರ್ವಕವಾಗಿ ಹಿಮ್ಮೆಟ್ಟಿಸಿ. ನಿಮ್ಮ ಮನೋಬಲವು ಹೆಚ್ಚಾಗಿ ಉತ್ಸಾಹ ಕಾಣಿಸುವುದು.

ವೃಷಭ ರಾಶಿ:

ಎರಡನೇ ರಾಶಿಯವರಿಗೆ ಈ ವಾರ ಅದೃಷ್ಟವನ್ನು ನಂಬಿ ಸುಮ್ಮನೆ ಕುಳಿತರೆ ಪ್ರಯೋಜನವಾಗದು. ಕಾರ್ಯೋನ್ಮುಖರಾಗುವ ಅವಶ್ಯಕತೆ ಬಹಳ ಇರಲಿದೆ. ಜೀವನೋತ್ಸಾಹಕ್ಕೆ ನಿಮ್ಮದಾದ ಚಿಂತನೆಗಳು ಇರಲಿ. ಸತ್ಪಾತ್ರರಿಗೆ ಸುವಸ್ತುವನ್ನು ದಾನ ಕೊಡಲು ಇಚ್ಛಿಸುವಿರಿ. ಕೆಲವೊಮ್ಮೆ ನಿಮ್ಮ ಸ್ವಭಾವವು ನಾಟಕೀಯದಂತೆ ತೋರುವುದು. ಕಲ್ಪನೆಯಲ್ಲಿ ಓಡಾಡುವುದನ್ನು ಕಡಿಮೆ ಮಾಡಿ. ಈ ವಾರ ಮಕ್ಕಳಿಂದ ನೀವು ಸ್ವತಂತ್ರರಾಗಲು ಬಯಸುವಿರಿ. ಇಂದು ನಿಮ್ಮ ವೈಯಕ್ತಿಕ ಕೆಲಸಗಳಿಗೆ ತೊಂದರೆ ಬರುವುದು. ಇಲ್ಲದೆ ಸಮಸ್ಯೆಯನ್ನು ಸೃಷ್ಟಿಸಿಕೊಳ್ಳಲಿದ್ದೀರಿ. ಭೂಮಿಯ ವ್ಯವಹಾರದಲ್ಲಿ ನೀವು ಜಯಶಾಲಿಯಾಗುವಿರಿ. ಒಬ್ಬರ ಬಳಿಯೇ ಎಲ್ಲವನ್ನೂ ಹೇಳಿಕೊಳ್ಳಿ.

ಮಿಥುನ ರಾಶಿ:

ಈ ವಾರ ಸ್ವಂತ ಮಕ್ಕಳಿಂದ ನಿಮಗೆ ಆಗಬೇಕಾದ ಸಹಾಯವು ಆಗಬಹುದು. ನೌಕರರ ವಿಚಾರದಲ್ಲಿ ಗಟ್ಟಿಯಾದ ನಿಲುವು ಅಗತ್ಯ. ಸಂಗಾತಿಯನ್ನು ವಿಧವಾಗಿ ಪರೀಕ್ಷಿಸುವಿರಿ. ನೆರೆಯವರ ಜೊತೆ ಕಲಹ ಬೇಡ. ನಂಬಿಕೆಯನ್ನು ಕಳೆದುಕೊಳ್ಳುವಿರಿ. ನಿಮ್ಮಲ್ಲಿ ಎಷ್ಟೇ ಆತ್ಮವಿಶ್ವಾಸವಿದ್ದರೂ ಕೆಲಸಗಳ ಒತ್ತಡದಲ್ಲಿ ಗೊಂದಲದಲ್ಲಿ ಸಿಕ್ಕಿಕೊಳ್ಳುವಿರಿ. ನಿಮ್ಮ ಆಸೆಗಳನ್ನು ಯಾವುದೇ ಪೂರ್ವಾಪರ ವಿಚಾರವಿಲ್ಲದೇ ಪೂರೈಸಿಕೊಳ್ಳುವಿರಿ. ಕುಟುಂಬ ಸದಸ್ಯರ ಮೇಲೆ ವಿನಾಕಾರಣ ಸಿಟ್ಟಾಗುವಿರಿ. ಮಕ್ಕಳ ಮೇಲೇ ಅಕ್ಕರೆ ಹೆಚರಚಗುವುದು.

 ಕರ್ಕಾಟಕ ರಾಶಿ:

ಜನವರಿಯ ಈ ವಾರ ನಿಮ್ಮ ಸಮಯವನ್ನಷ್ಟೇ ಅಲ್ಲದೇ ಇತರರ ಸಮಯವನ್ನೂ ಹಾಳುಮಾಡುವಿರಿ. ನಿಶ್ಚಿತ ಕೆಲಸದಲ್ಲಿ ಆಲಸ್ಯದಿಂದ ಇದ್ದು ಎಲ್ಲರಿಂದ ಹೇಳಿಸಿಕೊಳ್ಳುವಿರಿ. ಯಾರಿಗಾದರೂ ನಿಜವನ್ನು ತಿಳಿಸಬೇಕಾದರೆ ಮನಸ್ಸಿಗೆ ನೋವಾಗದಂತೆ ತಿಳಿಸಿ. ಉಪಕಾರದ ವಿಚಾರದಲ್ಲಿ ನೀವು ಹಿಂದಿರುವಿರಿ. ವೃತ್ತಿಯು ಬೇಸರ ತರಿಸಬಹುದು. ಸರ್ಕಾರಿ ನೌಕರರು ಅಧಿಕ‌ ಕಾರ್ಯಗಳ‌ ಕಡೆ ಗಮನಹರಿಸಬೇಕಾದೀತು. ಎಂದೋ ಆದ ಘಟನೆಯನ್ನು ಮತ್ತೆ ನೆನಪಿಸಿಕೊಂಡು ಮನಸ್ತಾಪವನ್ನು ತಂದುಕೊಳ್ಳುವಿರಿ. ಅಧಿಕಾರಿಗಳಿಂದ ಆರ್ಥಿಕತೆಯ ಪರಿಶೀಲನೆ ನಡೆಯುವುದು. ಅಪರಿಚಿತ ವ್ಯಕ್ತಿಗಳ ಜೊತೆ ಯಾವ ವ್ಯವಹಾರವನ್ನು ಕಡಮೆ‌ ಮಾಡಿ. ಯಾರ ಮಾತನ್ನೂ ನಂಬದ ಸ್ಥಿತಿಯನ್ನು ನೀವೇ ತಂದುಕೊಳ್ಳುವಿರಿ.

ಸಿಂಹ ರಾಶಿ:

ವಾರದ ಮಧ್ಯದಲ್ಲಿ ಆಕಸ್ಮಿಕ ಧನಲಾಭಕ್ಕೆ ಹಿಂದೇಟು ಹಾಕುವಿರಿ. ಮೋಜಿನಲ್ಲಿ ನಿಮ್ಮ ಸಮಯವು ಕಳೆಯುವುದು. ನಿಮ್ಮ ಒತ್ತಡವನ್ನು ಸಹೋದ್ಯೋಗಿಗಳ ಮೇಲೆ‌ಹಾಕಿ ಸ್ವಲ್ಪ ಹಗುರಾಗಬಹುದು. ಉದ್ಯೋಗದ ಕಾರಣಕ್ಕೆ ಪ್ರವಾಸ ಮಾಡಬೇಕಾಗಬಹುದು. ವಿದೇಶದ ಸಂಪರ್ಕವು ವ್ಯಾಪಾರಕ್ಕಾಗಿ ಇರಲಿದೆ. ಈ ವಾರ ಅಪಮಾನವನ್ನು ಸಹಿಸಲಾಗದೇ ಎದುರಿಸಲೂ ಆಗದೇ ಹತಾಶೆಗೊಳ್ಳುವಿರಿ. ದುಃಖವನ್ನು ಆಪ್ತರ ಬಳಿ ಮಾತ್ರ ಹಂಚಿಕೊಳ್ಳಿ. ನಿಮ್ಮ ಮಾತಿಗೆ ಕೆಲವರ ಬೆಂಬಲವು ನಿಮಗೆ ಖುಷಿಕೊಡುವುದು. ಶ್ರಮಪಟ್ಟು ಆರಂಭಿಸಿದ ಕಾರ್ಯಗಳು ಪಿತೂರಿಯಿಂದ ಅರ್ಧಕ್ಕೆ ಸ್ಥಗಿತವಾಗಬಹುದು.

ಕನ್ಯಾ ರಾಶಿ:

ಈ ವಾರ ಸುಳ್ಳನ್ನು ಸತ್ಯವೆಂದು ನಂಬಿಸುವ ಸಾಹಸಕ್ಕೆ ಹೋಗುವುದು ಬೇಡ, ಅದು ಆಗದು. ಆಸ್ತಿಯ ದಾಖಲೆಗಳು ಕಾಣದೇ ಆತಂಕ ಉಂಟಾಗಬಹುದು. ಮಿತಿಯಲ್ಲಿ ನಿಮ್ಮ ಮಾತು ಇರಬೇಕಾಗುವುದು. ಸತ್ಯವನ್ನು ಮರೆಮಾಚಲು ತಂತ್ರವನ್ನು ಹೆಣೆಯಬಹುದು. ಮಕ್ಕಳು ನಿಮ್ಮ ಪ್ರತಿ ಬದಲಾವಣೆಯನ್ನೂ ಗಮನಿಸುವರು. ಈ ವಾರ ನಿಮ್ಮ ಜಾಣ್ಮೆಯಿಂದ ಆದಾಯವನ್ನು ಅಧಿಕ ಮಾಡಿಕೊಳ್ಳುವಿರಿ. ವಿದೇಶೀಯ ವಸ್ತುಗಳ ಬಳಕೆಯನ್ನು ಮಾಡುವುದು ಕಾರಣಾಂತರಗಳಿಂದ ಇಷ್ಟವಾಗದು. ನಿಮ್ಮ ಅಸಹಾಯಕತೆಯನ್ನು ಮನೆಯವರ ಮುಂದೆ ಹೇಳಿಕೊಳ್ಳುವಿರಿ. ಆಕಸ್ಮಿಕವಾಗಿ ಬಂಧುಗಳ ಜೊತೆ ನಿಮ್ಮ ಬಾಂಧವ್ಯವು ಗಟ್ಟಿಯಾಗಿ ಇರುವುದು.

ತುಲಾ ರಾಶಿ:

ಏಳನೇ ರಾಶಿಯವರಿಗೆ ಜನವರಿಯ ಮೊದಲ ವಾರ ದೇವರ ಇಚ್ಛೆಯಂತೆ ಎಲ್ಲವೂ ಆಗುತ್ತದೆ ಎಂಬ ದಾರ್ಢ್ಯತೆಯು ನಿಮ್ಮ ಎಲ್ಲ ಕೆಲಸಕ್ಕೂ ಬಲವನ್ನು ಕೊಡುವುದು. ಉನ್ನತ ಮಟ್ಟದ ಕಾರ್ಯಕ್ಕೆ ಪರಿಚಿತರ ಬೆಂಬಲವನ್ನು ಪಡೆಯುವಿರಿ. ಕೆಲವನ್ನು ನೀವು ಬುದ್ಧಿಪೂರ್ವಕವಾಗಿ ಮಾಡುವಿರಿ. ಈ ವಾರ ಮನೋವಿಕಾರವನ್ನು ಕಡಿಮೆ‌ ಮಾಡಿಕೊಳ್ಳಿ. ಕುಟುಂಬದಲ್ಲಿ ನಡೆಯುವ ಕಾರ್ಯಗಳಿಗೆ ನಿಮ್ಮಿಂದ ಹೆಚ್ಚಿನ ಹಣ ಖರ್ಚು ಮಾಡುವ ಸನ್ನಿವೇಶವು ಬರಬಹುದು. ಕೃಷಿಯ ಉತ್ಪನ್ನಗಳನ್ನು ಸೂಕ್ತ ಸ್ಥಳದಲ್ಲಿ ಸಮಯದಲ್ಲಿ ಮಾರಾಟ ಮಾಡಿ ಆದಾಯವನ್ನು ಹೆಚ್ಚಿಸಿಕೊಳ್ಳುವಿರಿ. ಹೂಡಿಕೆಯಲ್ಲಿ ಉತ್ಸಾಹವಿರುವ ನೀವು ವಿವೇಚನೆಯಿಂದ ಮುಂದುವರಿಯುವಿರಿ.

ವೃಶ್ಚಿಕ ರಾಶಿ:

ಈ ವಾರ ಉದ್ಯಮವನ್ನು ಯೋಗ್ಯ ರೀತಿಯಿಂದ ನಿಭಾಯಿಸಲಾಗದು. ಉದ್ಯೋಗಕ್ಕೆ ಸಂಬಂಧಿಸಿದಂತೆ ದೇವತೋಪಾಸನೆಯನ್ನು ಮಾಡುವುದು ಅನಿವಾರ್ಯವಾದೀತು. ಹೇಳಿಕೊಳ್ಳುವಷ್ಟು ಆದಾಯವಿಲ್ಲದಿದ್ದರೂ ಅಹಂಕಾರಕ್ಕೇನು ಕೊರತೆ ಇರದು. ನಿಮ್ಮ ಮಾತಿನಿಂದ‌ ಶತ್ರುಗಳು ಹುಟ್ಟಿಕೊಳ್ಳಬಹುದು. ಮೇಲಿಂದ‌ ಮೇಲೆ‌ ಬರುತ್ತಿರುವ ಆರೋಗ್ಯದ ತೊಂದರೆಯು ನಿಮಗೆ ಅಸತಂಕವನ್ನು ಉಂಟುಮಾಡಬಹುದು. ಕಛೇರಿಯಲ್ಲಿ ಎಲ್ಲರ ಜೊತೆ ಒಂದಿಲ್ಲೊಂದು ವಿಚಾರಕ್ಕೆ ಕಿರಿಕ್ ಮಾಡಿಕೊಳ್ಳುವಿರಿ. ನಿಮ್ಮ ಕಾರ್ಯದಲ್ಲಿ ತಾಳ್ಮೆಯು ಅಗತ್ಯವಾಗಿ ಬೇಕಾಗುವುದು. ಶತ್ರುವನ್ನು ಉಪಾಯದಿಂದ ಗೆಲ್ಲುವ ತಂತ್ರ ಬಳಸಿ. ಅಳತೆಯನ್ನು ಅರಿತು ವ್ಯವಹರಿಸುವುದು ಎಲ್ಲ ದೃಷ್ಟಿಯಿಂದ ಉತ್ತಮ.

ಧನು ರಾಶಿ:

ಮೊದಲನೇ ವಾರ ಭೂಮಿಗೆ ಸಂಬಂಧಿಸ ವ್ಯವಹಾರವು ಪೂರ್ಣವಾಗಿ ಗೊತ್ತಾಗಲು ಸಮಯವನ್ನು ತೆಗೆದುಕೊಳ್ಳುವಿರಿ. ಸ್ನೇಹಿತರ ನಿರೀಕ್ಷೆಯಲ್ಲಿ ಹೆಚ್ಚಿನ‌ ಸಮಯವು ಕಳೆದುಹೋಗುವುದು. ಅಪರಿಚಿತರ ಮೂಲಕ ನಿಮ್ಮ ಹಣವನ್ನು ಕಳೆದುಕೊಳ್ಳಲಿದ್ದೀರಿ. ಈ ವಾರ ವೃತ್ತಿಯಲ್ಲಿ ನಿಮಗೆ ವಿರಾಮವ ಸಿಗದೇ ನಿಮ್ಮ ಸ್ವಂತ ಕಾರ್ಯವನ್ನು ಕೈ ಬಿಡಬೇಕಾಗುವುದು. ಒಪ್ಪಿಕೊಂಡ ಕೆಲಸದಲ್ಲಿ ಯಶಸ್ಸು ಸಾಧಿಸುವುದು ಆಗದು.‌ ಸಂಗಾತಿಯ ಬೆಂಬಲವು ನಿಮ್ಮ‌‌ ಕಾರ್ಯಗಳಿಗೆ ಸಿಗಲಿದೆ. ಅಗತ್ಯವಿದ್ದಾಗ ಮಾತ್ರ ಸಾಲದ ಬಗ್ಗೆ ಆಲೋಚಿಸಿ. ಸರ್ಕಾರಿ ಉದ್ಯೋಗದವರು ವರ್ಗಾವಣೆಯಿಂದ ಬೇಸರಪಡುವಿರಿ. ಗೃಹ ನಿರ್ಮಾಣದ ಕಾರ್ಯವನ್ನು ಮುಂದೂಡಿ.

ಮಕರ ರಾಶಿ:

ಹತ್ತನೇ ರಾಶಿಯವರಿಗೆ ಈ ವಾರ ನಿಮ್ಮ ಇಷ್ಟದ ಕ್ಷೇತ್ರದಲ್ಲಿ ಅನ್ಯರ ಆಗಮನವು, ಸಲಹೆಯನ್ನು ಕೊಡುವುದು ಇಷ್ಟವಾಗದು. ಅಚ್ಚುಕಟ್ಟಾದ ಕಾರ್ಯಕ್ಕೆ ಪ್ರಸಿದ್ಧಿ ಸಿಗುವುದು. ಸಂಗಾತಿಯ ಸಂಪತ್ತಿನಿಂದ ನಿಮಗೆ ಬೇಕಾದುದನ್ನು ಪಡೆಯುವಿರಿ. ಯಾರ ಮಾತನ್ನು ಒಪ್ಪಿಕೊಳ್ಳದೇ ನಿಮ್ಮದೇ ಆದ ದಾರಿಯಲ್ಲಿ ನಡೆಯುವಿರಿ. ಕಛೇರಿಯ ಕೆಲಸದಲ್ಲಿ ನಿಮ್ಮ ಮಧ್ಯೆ ಅನಗತ್ಯ ಪ್ರವೇಶದಿಂದ ಕೋಪಗೊಳ್ಳುವಿರಿ. ಈ ವಾರ ಅಲ್ಪ ಆದಾಯದಲ್ಲಿ ತೃಪ್ತಿ ಹೊಂದಬೇಕಾದೀತು. ಹೆಚ್ಚಿನ ಆದಾಯದಿಂದ ದುರಭ್ಯಾಸವು ಹೆಚ್ಚಾಗಬಹುದು. ಶಿಕ್ಷಕರು ವೇತನವನ್ನು ಹೆಚ್ಚಿಸಿಕೊಳ್ಳುವರು. ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ಉತ್ತಮ. ವಿದ್ಯಾರ್ಥಿಗಳ ಉತ್ಸಾಹವನ್ನು ಕುಗ್ಗಸುವುದು ಬೇಡ.

 ಕುಂಭ ರಾಶಿ:

ಈ ರಾಶಿಯವರಿಗೆ ಮೊದಲ ವಾರ ಮಕ್ಕಳಿಗೆ ಬೇಕಾದ ವ್ಯವಸ್ಥೆಯನ್ನು ಮಾಡುವ ಹೊರೆಯನ್ನು ಹೊತ್ತು ಓಡಾಟಮಾಡುವಿರಿ. ಬಾಯಿಯ ಚಪಲಕ್ಕೆ ವಿರುದ್ಧ ಆಹಾರವನ್ನು ತಿಂದು ಹೊಟ್ಟೆಯನ್ನು ಹಾಳುಮಾಡಿಕೊಳ್ಳಬೇಕಾಗುವುದು. ಕೆಲಸದ ಸ್ಥಳದಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗಲಿದೆ. ಈ ವಾರ ಅನೇಕ ಶುಭ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶಗಳಿದ್ದರೂ ಕಾರ್ಯದ ಒತ್ತಡದಿಂದ ಸಾಧ್ಯವಾಗದು. ನಿಮ್ಮ ಬದುಕಿನ ಬದಲಾವಣೆಯನ್ನು ಅನಿವಾರ್ಯವಾಗಿ ಮಾಡಿಕೊಳ್ಳಬೇಕಾಗಬಹುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗುವುದು. ಸಹೋದ್ಯೋಗಿಗಳಿಗೆ ಸಹಕರಿಸುವ ಮನಸ್ಸಾಗುವುದು. ಮೋಜಿನ ಕಾರಣಕ್ಕೆ ಸುತ್ತಾಟ ಮಾಡುವಿರಿ. ಬಂಧುಗಳ ಜೊತೆ ಅನಗತ್ಯ ವಾಗ್ವಾದ ಬೇಡ.

ಮೀನ ರಾಶಿ:

ಈ ವಾರ ನಿಮ್ಮ ವ್ಯಾಪಾರವು ಬಹಳ ಶಿಸ್ತುಬದ್ಧವಾಗಿರಲಿದ್ದು, ಹಣದ ಹರಿವೂ ನಿಮಗೆ ಎಣಿಸಿದಂತೆ ಇರಲಿದೆ. ಹಳೆಯ ದಾಂಪತ್ಯವಾದರೂ ಸಂತೋಷಕ್ಕೆ ಕೊರತೆ ಇಲ್ಲದಂತೆ ಇರುವಿರಿ. ಸಾಮಾಜಿಕ ಕಾರ್ಯಕ್ಕೆ ನಿಮ್ಮ ಕೊಡುಗೆಯನ್ನು ನೀಡುವಿರಿ. ಕಛೇರಿಯ ಕೆಲಸಗಳನ್ನು ವೇಗವಾಗಿ ಮಾಡಿ ಜವಾಬ್ದಾರಿಯನ್ನು ಮುಗಿಸುವಿರಿ. ಕೆಲವು ಸಂಗತಿಗಳನ್ನು ನಿರೀಕ್ಷಿಸದೇ ಬರಬಹುದು. ನಿಮ್ಮನ್ನು ಕೆಲವರು ಅನಾದರ ಮಾಡಿದಂತೆ ಕಾಣಿಸೀತು. ಖಾಸಗಿ ಸಂಸ್ಥೆಯಲ್ಲಿ ಇರುವವರಿಗೆ ವೇತನವು ಹೆಚ್ಚಾಗಬಹುದು. ನೀವು ವರ್ಗಾವಣೆಗೆ ಒತ್ತಡವನ್ನು ತರುವಿರಿ. ಅಸಮಯದ ಆಹಾರವು ನಿಮಗೆ ಅಭ್ಯಾಸವಾಗಲಿದೆ. ಈ ವಾರ ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಮಾಡಬೇಕಾದೀತು.

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ: ಇನ್ಸ್ಟಾಗ್ರಾಮ್​​ ಪೇಜ್​​ ವಿರುದ್ಧ ಕೇಸ್​​ – Kannada News | Threats to Hindu Leaders From Instagram Page: Mangaluru Police File Suo Moto Case

ಮಂಗಳೂರು, ಜನವರಿ 04: ಸಾಕಷ್ಟು ಕಠಿಣ ಕ್ರಮಗಳ ಹೊರತಾಗಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಹಾಳುಮಾಡುವ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇವುಗಳ ಸಾಲಿಗೀಗ ಇನ್ಸ್ಟಾಗ್ರಾಮ್​​ ಪೇಜ್​​ನಲ್ಲಿ ಮಾಡಿರುವ ಪೋಸ್ಟ್​​ ಕೂಡ ಸೇರ್ಪಡೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷಕ್ಕೆ ಪ್ರಚೋದನೆ ನೀಡುವ ಯತ್ನ ನಡೆದಿರುವ ಹಿನ್ನಲೆ ಪೊಲೀಸರು ಸುಮೋಟೋ ಕೇಸ್​​ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದ ಅಬ್ದುಲ್ ಸತ್ತಾರ್ ಎಂಬವರ ಮೇಲೆ ಸುಮಿತ್​​ ಮತ್ತು ರಜತ್ ನಾಯಕ್ ಹಲ್ಲೆ ನಡೆಸಿದ್ದರು. ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಆ ಬೆನ್ನಲ್ಲೇ ನೈತಿಕ ಪೊಲೀಸ್ ಗಿರಿ ನಡೆಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ನಾರ್ಲಪದವಿನ ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಬೆದರಿಕೆ ಹಾಕಲಾಗಿದೆ. muslim__leader ಎಂಬ ಇನ್ಸ್ಟಾಗ್ರಾಮ್​​ ಪೇಜ್​​ನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರಾದ ಪ್ರದೀಪ್, ರಜಿತ್, ಸಂತೋಷ್ ಹಾಗೂ ಜನಾರ್ಧನ ಎಂಬವರಿಗೆ ಬೆದರಿಕೆ ಹಾಕಲಾಗಿದೆ.

ಇದನ್ನೂ ಓದಿ: ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು

ಪೋಸ್ಟ್​​ನಲ್ಲಿ ಏನಿದೆ?

ಸಂಘಿಗಳ ಅಟ್ಟಹಾಸ ಮಿತಿಮೀರುತ್ತಿದ್ದು ಇದಕ್ಕೆ ಕಡಿವಾಣ ಇಲ್ಲವಾಯಿತೇ? ಸಂಘಪರಿವಾರದ ಭಯೋತ್ಪಾದಕರ ದಾಳಿ ಈಗೀಗ ಹೆಚ್ಚುತ್ತಲೇ ಇದ್ದು,
ಅವರಿಗೆ ಕಾನೂನಿನ ಭಯವಿಲ್ಲ ಮತ್ತು ಕಾನೂನು ಅವರನ್ನು ಏನು ಮಾಡುವುದಿಲ್ಲ. ಇನ್ನೂ ಗೋಮಾಂಸ ತಿನ್ನುತ್ತೇವೆ, ಸಂಘಿಗಳೆ ಏನು ಮಾಡುತ್ತೀರ? ಎಂದು ಪ್ರಶ್ನಿಸಿರೋದಲ್ಲದೆ, ಇವರಿಗೆ ಸದ್ಯದಲ್ಲಿ ಸುಹಾಸ್ ಶಟ್ಟಿ ಟ್ರೀಟ್ ಮೆಂಟ್ ಕೊಡಬೇಕು ಎಂದೂ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ BNS ಕಲಂ 351(2), 351(3), 352, 353(2),192ರಡಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: 750 ಮೀಟರ್ ಪ್ರಯಾಣಕ್ಕೆ 21 ನಿಮಿಷ ತೆಗೆದುಕೊಂಡೆ; ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಿಚ್ಚಿಟ್ಟ ಮಹಿಳೆ – Kannada News | Bengaluru: Woman says traffic problem is a daily struggle for Bengaluru commuters

ಬೆಂಗಳೂರು, ಜನವರಿ 04: ಟ್ರಾಫಿಕ್ ಎಂದರೆ ಕಣ್ಣ ಮುಂದೆ ಬರುವುದೇ ಮಾಯಾನಗರಿ ಬೆಂಗಳೂರು (Bengaluru).ಇಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಗುವಂತೆ ಕಾಣುತ್ತಿಲ್ಲ. ಪೀಕ್‌ ಟೈಮ್‌ಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಿರುತ್ತದೆ. ಬೆಂಗಳೂರಿನ ಟ್ರಾಫಿಕ್ ಸಿಲುಕಿದ ಮಹಿಳೆಯೂ 750 ಮೀಟರ್ ಪ್ರಯಾಣಕ್ಕೆ 21 ನಿಮಿಷ ತೆಗೆದುಕೊಂಡೆ ಎಂದು ಟ್ರಾಫಿಕ್ ಸಮಸ್ಯೆಯ ಬಗ್ಗೆ ಮಾತನಾಡಿದ್ದಾರೆ. ಈ ಕುರಿತಾದ ವಿಡಿಯೋ ಸದ್ಯ ವೈರಲ್ ಆಗಿದ್ದು, ನಗರದಲ್ಲಿನ ದೈನಂದಿನ ಸಂಚಾರ ತೊಂದರೆಗಳನ್ನು ಎತ್ತಿ ತೋರಿಸಿದೆ.

ಅಂಜಲಿ (anjaleeee_suresh) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋವನ್ನು ಕಾರಿನ ಒಳಗಿನಿಂದ ರೆಕಾರ್ಡ್ ಮಾಡಲಾಗಿದ್ದು, ವಾಹನದ ನ್ಯಾವಿಗೇಷನ್ ಪರದೆಯ ಮೇಲೆ ಕೇಂದ್ರೀಕರಿಸಿರುವುದನ್ನು ನೋಡಬಹುದು. ಕೇವಲ 750 ಮೀಟರ್ ಕ್ರಮಿಸಲು ಅಂದಾಜು 21 ನಿಮಿಷ ತೆಗೆದುಕೊಂಡಿರುವುದನ್ನು ಇಲ್ಲಿ ತೋರಿಸಲಾಗಿದೆ. ರಾಜಧಾನಿಯಲ್ಲಿ ಅನೇಕ ಪ್ರಯಾಣಿಕರು ದೈನಂದಿನ ಹೋರಾಟ ಎಂದು ವಿವರಿಸಲಾಗಿದೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:ಜೀವನದ ಕಠಿಣ ಕ್ಷಣ: ಚರ್ಚ್ ಸ್ಟ್ರೀಟ್​​ನಲ್ಲಿ ಕಂಡ ಅದ್ಭುತ ದೃಶ್ಯ, ಕಲಿಕೆಗಾಗಿ ಈ ಹುಡುಗಿಯ ಹೋರಾಟ ನೋಡಿ

ಈ ವಿಡಿಯೋ ಒಂದೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ನಡೆದುಕೊಂಡು ಹೋಗುವುದು ಉತ್ತಮ ಎಂದು ಹೇಳಿದ್ದಾರೆ. ಮತ್ತೊಬ್ಬರು, ನನಗೂ ಇಂತಹ ಅನುಭವ ಆಗಿದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ನಗರದ ವಿವಿಧ ಭಾಗಗಳಲ್ಲಿ ಈ ಸಮಸ್ಯೆ ವ್ಯಾಪಕವಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಥಾರ್​ನಲ್ಲಿ ಬಂದು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು – Kannada News | Daylight Firing Incident Reported in Ghaziabad’s Raj Nagar Extension

ಗಾಜಿಯಾಬಾದ್, ಜನವರಿ 04: ಥಾರ್​ನಲ್ಲಿ ಬಂದ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಗಾಜಿಯಾಬಾದ್​ನ ನಂದಗ್ರಾಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಲೆನೊ ಕಾರಿಗೆ ಮೂರು ಗುಂಡುಗಳು ತಗುಲಿವೆ. ಸಿಕ್ರೋಡ್ ನಿವಾಸಿ ಸುನಿಲ್ ಕುಮಾರ್, ಮುಖ್ಯ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ, ಅವರ ಮಗ ಶುಭಮ್ ಮನೆಯ ಬಳಿ ನಿಂತಿದ್ದರು, ಅವರ ಇನ್ನೊಬ್ಬ ಮಗ ಹರ್ಷ್ ತನ್ನ ಸ್ನೇಹಿತ ಅಂಕುರ್ ಜೊತೆ ಬಲೆನೊ ಕಾರಿನಲ್ಲಿದ್ದರು. ಮೀರತ್ ರಸ್ತೆಯಿಂದ ಬರುತ್ತಿದ್ದ ಕಪ್ಪು ಬಣ್ಣದ ಥಾರ್, ಬಲೆನೊ ಕಾರನ್ನು ಸಮೀಪಿಸುತ್ತಿದ್ದಂತೆ ಕಾರಿನಲ್ಲಿದ್ದ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

VIDEO: ಶತಕ ಬಾರಿಸಿ ಅಶ್ಲೀಲವಾಗಿ ಸಂಭ್ರಮಿಸಿದ RCB ಆಟಗಾರ – Kannada News | Swapnil Singh’s magnificent century in the Vijay Hazare Trophy

ವಿಜಯ ಹಝಾರೆ ಟೂರ್ನಿಯಲ್ಲಿ ಕರ್ನಾಟಕ ವಿರುದ್ಧ ಶತಕ ಸಿಡಿಸಿ ತ್ರಿಪುರ ಆಟಗಾರ ಸ್ವಪ್ನಿಲ್ ಸಿಂಗ್ ಅಶ್ಲೀಲವಾಗಿ ಸಂಭ್ರಮಿಸಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡದ ಪರ ದೇವದತ್ ಪಡಿಕ್ಕಲ್ (108) ಶತಕ ಸಿಡಿಸಿದ್ದರು. ಈ ಶತಕದ ನೆರವಿನೊಂದಿಗೆ ಕರ್ನಾಟಕ ತಂಡವು 50 ಓವರ್​ಗಳಲ್ಲಿ 332 ರನ್ ಕಲೆಹಾಕಿತು.

ಈ ಕಠಿಣ ಗುರಿ ಬೆನ್ನತ್ತಿದ ತ್ರಿಪುರ ಪರ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ವಪ್ನಿಲ್ ಸಿಂಗ್ 93 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಶತಕ ಸಿಡಿಸಿದರು. ಈ ಶತಕದ ಬೆನ್ನಲ್ಲೇ ಬ್ಯಾಟ್ ಮೂಲಕ ಅಶ್ಲೀಲ ಸನ್ನೆ ಮಾಡಿ ಸ್ವಪ್ನಿಲ್ ವಿಚಿತ್ರವಾಗಿ ಸಂಭ್ರಮಿಸಿದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ 333 ರನ್​ಗಳ ಗುರಿ ಬೆನ್ನತ್ತಿದ ತ್ರಿಪುರ ತಂಡವು 49 ಎಸೆತಗಳಲ್ಲಿ 252 ರನ್ ಕಲೆಹಾಕಲಷ್ಟೇ ಶಕ್ತರಾದರು. ಈ ಮೂಲಕ ಕರ್ನಾಟಕ ತಂಡವು 80 ರನ್​ಗಳ ಜಯ ಸಾಧಿಸಿದೆ.

ಅಂದಹಾಗೆ ಸ್ವಪ್ನಿಲ್ ಸಿಂಗ್ ಮುಂಬರುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯಲಿದ್ದಾರೆ. ಕಳೆದೆರಡು ಸೀಸನ್​ಗಳಿಂದ ಆರ್​ಸಿಬಿ ತಂಡದ ಭಾಗವಾಗಿರುವ ಸ್ವಪ್ನಿಲ್ ಮುಂಬರುವ ಟೂರ್ನಿಯಲ್ಲಿ ಆರ್​ಸಿಬಿ ತಂಡದ ಸ್ಪಿನ್ನರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

 

Source link

ಯಶ್ ತಾಯಿ ಪುಷ್ಪಾ ಮನೆ ಕಾಂಪೌಂಡ್ ಧ್ವಂಸ: ಲಾಯರ್ ಮೊದಲ ಪ್ರತಿಕ್ರಿಯೆ – Kannada News | Yash mother Pushpa house compound demolished Layer first reaction

ಹಾಸನದಲ್ಲಿ ಇರುವ ಯಶ್ ತಾಯಿ (Yash Mother) ಪುಷ್ಪಾ ಅರುಣ್​ಕುಮಾರ್ ಅವರ ಮನೆಯ ಕಾಂಪೌಂಡ್ ಧ್ವಂಸ ಮಾಡಲಾಗಿದೆ. ದೇವರಾಜು ಎಂಬುವವರು ಕೋರ್ಟ್ ಆದೇಶದ ಮೇರೆಗೆ ಕೌಂಪೌಂಡ್ ತೆರವುಗೊಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪುಷ್ಪಾ ಅರುಣ್​ಕುಮಾರ್ ಪರ ಲಾಯರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ‘ದೇವರಾಜು ಅವರು ಪಡೆದುಕೊಂಡ ಆದೇಶಕ್ಕೆ ಸಂಬಂಧಿಸಿದ ಆಸ್ತಿಯೇ ಬೇರೆ. ಈ ಆಸ್ತಿಯೇ ಬೇರೆ. ಇದರಲ್ಲಿ ಅವರು ಸ್ವಾದೀನ ಪಡೆಯಬೇಕು ಎಂದರೆ ಪ್ರತ್ಯೇಕ ಆದೇಶ ಪಡೆಯಬೇಕು. ದುರುದ್ದೇಶದಿಂದ ಅವರು ಆದೇಶ ಪಡೆದುಕೊಂಡಿದ್ದಾರೆ. ನೋಟಿಸ್ ಜಾರಿ ಆಗಿಲ್ಲ. ಅದೇ ಹಿನ್ನಲೆಯಲ್ಲಿ ನಾನು ಪ್ರಕರಣ ದಾಖಲಿಸಿದ್ದೇವೆ. ಕೊನೆ ಹಂತದಲ್ಲಿ ಈ ರೀತಿ ಮಾಡಿದ್ದಾರೆ’ ಎಂದು ಪುಷ್ಪಾ ಅರುಣ್​ಕುಮಾರ್ (Pushpa Arunkumar) ಪರ ವಕೀಲರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಟ್ಯಾಕ್ಸ್ ವಂಚನೆ ಆರೋಪ: ಬೆಂಗಳೂರಿನಲ್ಲಿ ಐಷಾರಾಮಿ ಕಾರು ಸೀಜ್!

ಬೆಂಗಳೂರು, ಜನವರಿ 04:  ಟ್ಯಾಕ್ಸ್ ವಂಚನೆ ಆರೋಪದ ಹಿನ್ನೆಲೆ ನಗರದಲ್ಲಿ ಐದೂವರೆ ಕೋಟಿ ರೂ. ಮೌಲ್ಯದ ಬೆಂಟ್ಲಿ ಕಾರನ್ನು ಕೋರಮಂಗಲದಲ್ಲಿ ಆರ್‌ಟಿಒ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಕಾರು ನೋಂದಣಿ ವೇಳೆ 5 ಕೋಟಿ 50 ಲಕ್ಷ ರೂ. ಮೌಲ್ಯದ ಕಾರನ್ನು ಕೇವಲ 2 ಕೋಟಿ 43 ಲಕ್ಷ 50 ಸಾವಿರ ರೂ. ಎಂದು ದಾಖಲಿಸಿದ್ದು, ಸುಮಾರು 70 ಲಕ್ಷ ರೂ. ತೆರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಕಾರು ಸೀಜ್ ಮಾಡುವ ವೇಳೆ ಮಾಲೀಕ ಗಲಾಟೆ ನಡೆಸಿದ್ದು, ವಿಜಯ್ ಮಲ್ಯ ಹಾಗೇ ನಾವು ಫ್ರಾಡ್ ಅಲ್ಲ. RTO ನವರೆ ಫ್ರಾಡ್ ಎಂದು ಎಂದು ವಾದಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link