SSLC ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್ ಪ್ರಶ್ನಿಸಿ PIL: ಅರ್ಜಿದಾರರಿಗೆ ಬಿಗ್ ಶಾಕ್ ಕೊಟ್ಟ ಹೈಕೋರ್ಟ್
ಬೆಂಗಳೂರು, ಏಪ್ರಿಲ್ 10: ಎಸ್ಎಸ್ಎಲ್ಸಿ ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ನಿರ್ಧಾರ ಭಾರಿ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು. ಈ ನಡುವೆ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ಗೆ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಪರೀಕ್ಷೆಯ ಕೊನೆಯ ಹಂತದಲ್ಲಿ ಸರ್ಕಾರದ ತೆಗೆದುಕೊಂಡಿರುವ ಈ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಲಾಗಿತ್ತು. ಆದರೆ ಅರ್ಜಿದಾರರಿಗೆ ಹೈಕೋರ್ಟ್ ಈಗ ಬಿಗ್ ಶಾಕ್ ಕೊಟ್ಟಿದೆ. ಅರ್ಜಿದಾರರಿಗೆ…