All posts by nagaraj11081993

AMFI data: ಮಾರ್ಚ್​ನಲ್ಲಿ ಈಕ್ವಿಟಿ ಫಂಡ್​ಗಳಿಗೆ ಹೂಡಿಕೆ ಸುಗ್ಗಿ; ಶೇ. 55ರಷ್ಟು ಹೆಚ್ಚಿದ ಒಳಹರಿವು

AMFI data: ಮಾರ್ಚ್​ನಲ್ಲಿ ಈಕ್ವಿಟಿ ಫಂಡ್​ಗಳಿಗೆ ಹೂಡಿಕೆ ಸುಗ್ಗಿ; ಶೇ. 55ರಷ್ಟು ಹೆಚ್ಚಿದ ಒಳಹರಿವು

ನವದೆಹಲಿ, ಏಪ್ರಿಲ್ 10: ಕಳೆದ ಒಂದು ಒಂದೂವರೆ ವರ್ಷದಿಂದ ಭಾರತದ ಈಕ್ವಿಟಿ ಮಾರುಕಟ್ಟೆ (stock market) ಹಿನ್ನಡೆಯಲ್ಲಿದ್ದರೂ ಹೂಡಿಕೆ ಆಕರ್ಷಿಸುವುದರಲ್ಲಿ ಹಿಂದೆ ಬಿದ್ದಿಲ್ಲ. ಮ್ಯೂಚುವಲ್ ಫಂಡ್​ನ ಒಟ್ಟಾರೆ ಅಸೆಟ್​ಗಳು (Mutual Fund AUMs) ಕಡಿಮೆಗೊಂಡರೂ ಈಕ್ವಿಟಿ ಸ್ಕೀಮ್​ಗಳು ಭರ್ಜರಿ ಹೂಡಿಕೆ ಪಡೆದಿವೆ. ಭಾರತೀಯ ಮ್ಯೂಚುವಲ್ ಫಂಡ್ ಸಂಸ್ಥೆಯಾದ ಎಎಂಎಫ್​ಐ ಇಂದು (ಏ. 10) ಬಿಡುಗಡೆ ಮಾಡಿದ ಮಾರ್ಚ್ ತಿಂಗಳ ದತ್ತಾಂಶದಲ್ಲಿ ಕೆಲ ಕುತೂಹಲಕಾರಿ ಅಂಶಗಳನ್ನು ಗಮನಿಸಬಹುದು.

ಮಾರ್ಚ್ ತಿಂಗಳಲ್ಲಿ ಮ್ಯೂಚುವಲ್ ಫಂಡ್ ಉದ್ಯಮದ ಒಟ್ಟು ಎಯುಎಂ ಅಥವಾ ನಿರ್ವಹಿತ ಆಸ್ತಿ 73.73 ಲಕ್ಷ ಕೋಟಿ ರೂ ಇದೆ. ಫೆಬ್ರುವರಿಯಲ್ಲಿ ಈ ಎಯುಎಂ 82.03 ಲಕ್ಷ ಕೋಟಿ ರೂನಷ್ಟು ಇತ್ತು. ಫೆಬ್​ರುವರಿಗೆ ಹೋಲಿಸಿದರೆ ಮಾರ್ಚ್​ನಲ್ಲಿ ಮ್ಯೂಚುವಲ್ ಫಂಡ್​ನ ಒಟ್ಟು ನಿರ್ವಹಿತ ಆಸ್ತಿಯಲ್ಲಿ ಶೇ. 10ರಷ್ಟು ಇಳಿಕೆಯಾಗಿದೆ.

ಇದನ್ನೂ ಓದಿ: ಎಡಿಬಿ ವರದಿ: ಭಾರತದ ಜಿಡಿಪಿ ಬೆಳವಣಿಗೆ 2025ರಲ್ಲಿ ಶೇ. 6.9, 2027ರಲ್ಲಿ ಶೇ. 7.3 ಅಂದಾಜು

ಒಟ್ಟಾರೆ ಎಯುಎಂ ಕುಸಿತ ಕಂಡರೂ ಈಕ್ವಿಟಿ ಸ್ಕೀಮ್​ಗಳಿಗೆ ಭರ್ಜರಿ ಒಳಹರಿವು ಬಂದಿದೆ. ಫೆಬ್ರುವರಿಗಿಂತ ಮಾರ್ಚ್​ನಲ್ಲಿ ಶೇ. 55ರಷ್ಟು ಹೂಡಿಕೆ ಜಂಪ್ ಆಗಿದೆ. ಫೆಬ್ರುವರಿಯಲ್ಲಿ ಮ್ಯುಚುವಲ್ ಫಂಡ್​ನ ಈಕ್ವಿಟಿ ಸ್ಕೀಮ್​ಗಳಿಗೆ 25,965 ಕೋಟಿ ರೂ ಹೂಡಿಕೆ ಬಂದಿತ್ತು. ಮಾರ್ಚ್​ನಲ್ಲಿ ಅದು 40,366 ಕೋಟಿ ರೂಗೆ ಏರಿದೆ.

ಈಕ್ವಿಟಿ ಸೆಗ್ಮೆಂಟ್​ಗೆ ಬಂದರೆ ಲಾರ್ಜ್ ಕ್ಯಾಪ್, ಮಿಡ್ ಕ್ಯಾಪ್ ಮತ್ತು ಸ್ಮಾಲ್ ಕ್ಯಾಪ್, ಹೀಗೆ ಎಲ್ಲಾ ಗಾತ್ರದ ಈಕ್ವಿಟಿಗಳಿಗೂ ಒಳಹರಿವು ಏರಿಳಿತದಲ್ಲಿ ಹೆಚ್ಚಿನ ಅಂತರ ಕಾಣುತ್ತಿಲ್ಲ. ಲಾರ್ಜ್ ಕ್ಯಾಪ್ ಫಂಡ್​ಗಳಿಗೆ ಬಂದ ಹೂಡಿಕೆ 2,111.7 ಕೋಟಿ ರೂನಿಂದ 2,997.8 ಕೋಟಿ ರೂಗೆ ಏರಿದೆ. ಮಿಡ್​ಕ್ಯಾಪ್ ಫಂಡ್​ಗಳಿಗೆ ಹೂಡಿಕೆ 4,003 ಕೋಟಿ ರೂನಿಂದ 6,063.5 ಕೋಟಿ ರೂಗೆ ಏರಿದೆ. ಸ್ಮಾಲ್ ಕ್ಯಾಪ್ ಫಂಡ್​ಗಳು ಮಾರ್ಚ್​ನಲ್ಲಿ 6,263.6 ಕೋಟಿ ರೂ ಹೂಡಿಕೆ ಆಕರ್ಷಿಸಿವೆ.

ಇದನ್ನೂ ಓದಿ: ಭಾರತ ಶೇ 7.8, ಅಮೆರಿಕ ಶೇ. 0.5; ಆರ್ಥಿಕ ಬೆಳವಣಿಗೆ ವೇಗದಲ್ಲಿ ಅಜಗಜಾಂತರ

ಮ್ಯುಚುವಲ್ ಫಂಡ್​ಗಳಿಗೆ ಹೂಡಿಕೆಗಳು ಎಸ್​ಐಪಿ ಮೂಲಕ ಹರಿದುಬರುವುದು ಹೆಚ್ಚುತ್ತಿದೆ. ಫೆಬ್ರುವರಿಯಲ್ಲಿ 29,845 ಕೋಟಿ ರೂ ಹೂಡಿಕೆಗಳು ಎಸ್​ಐಪಿ ಮೂಲಕ ಆಗಿದ್ದವು. ಮಾರ್ಚ್​ನಲ್ಲಿ ಅದು 32,087 ಕೋಟಿ ರೂಗೆ ಏರಿದೆ.

ನಿರ್ಗಮನ ಕಂಡ ಫಂಡ್​ಗಳು

ಲಿಕ್ವಿಡ್ ಫಂಡ್​ಗಳಲ್ಲಿ ಹೊರಹರಿವು ಹೆಚ್ಚಿದೆ. ಗೋಲ್ಡ್ ಇಟಿಎಫ್​ಗಳಲ್ಲಿ ಹೂಡಿಕೆ ಕಡಿಮೆಗೊಂಡಿದೆ. ಅಚ್ಚರಿಯ ಸಂಗತಿ ಎಂದರೆ ಹೈಬ್ರಿಡ್ ಫಂಡ್​ಗಳಿಂದ 16,538.5 ಕೋಟಿ ರೂ ಮೊತ್ತದ ಹೂಡಿಕೆಗಳು ನಿರ್ಗಮಿಸಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸಿದ್ದರಾಮಯ್ಯಗೆ ಹಳೆಯ ದಿನಗಳನ್ನ ನೆನಪಿಸಿ ವ್ಯಂಗ್ಯವಾಡಿದ ಕುಮಾರಸ್ವಾಮಿ

ಮೈಸೂರು, (ಏಪ್ರಿಲ್ 10): ಸಿದ್ದರಾಮಯ್ಯ (Siddaramaiah)  ಜೆಡಿಎಸ್​ನಲ್ಲಿದ್ದಾಗ 58 ಸೀಟು ಗೆದ್ದಿದ್ದೆವು ಅಂತಾರೆ. 1999ರಲ್ಲೂ ಅವರು ಅಧ್ಯಕ್ಷರಾಗಿದ್ದರು, ಆಗ ಎಷ್ಟು ಸೀಟು ಗೆದ್ದಿದ್ದರು? ಮಹದೇವಪ್ಪ, ಸಿದ್ದರಾಮಯ್ಯ ಇಬ್ಬರೂ ಮನೆಗೆ ಬಂದು ಕಣ್ಣೀರಿಟ್ಟಿದ್ದರು. ಅವರು ಕಣ್ಣೀರು ಹಾಕುವಾಗ ಅಲ್ಲಿ ಬಕೆಟ್ ಇದ್ದಿದ್ದರೆ ತುಂಬಿಹೋಗುತ್ತಿತ್ತು. ಸಿದ್ದರಾಮಯ್ಯನವರು ಒಮ್ಮೆ ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಳ್ಳಲಿ ಎಂದು ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ (HD Kumaraswamy)  ವ್ಯಂಗ್ಯವಾಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಹಿಂದೆ ಚುನಾವಣೆಯಲ್ಲಿ ದೇವೇಗೌಡರು, ನಾನು, ರೇವಣ್ಣ, ಮಹದೇವಪ್ಪ, ಸಿದ್ದರಾಮಯ್ಯ ಸೇರಿ ಬಹುತೇಕರು ಸೋತಿದ್ದೆವು. ಆಗ ನನಗೆ ರಾಜಕೀಯ ಬೇಡ ಅಂತ ಸಿದ್ದರಾಮಯ್ಯ ಕಣ್ಣೀರು ಹಾಕಿದ್ದರು. 2004ರಲ್ಲಿ ಮಂಡ್ಯ, ರಾಮನಗರದಲ್ಲಿ ಸಿದ್ದರಾಮಯ್ಯ ಪ್ರಚಾರಕ್ಕೆ ಬಂದಿಲ್ಲ. ನಾವು ಕೂಡ ಸಿದ್ದರಾಮಯ್ಯರನವರನ್ನು ಕರೆಯಲಿಲ್ಲ. ಸಿದ್ದರಾಮಯ್ಯ ಅಹಿಂದ ಅಂತ ಸಮುದಾಯಗಳ ಸಂಘಟನೆ ಮಾಡಿದ್ರು. ದೇವೇಗೌಡರಿಗೆ ಅನ್ಯಾಯ ಮಾಡಿದರು, ಬೆನ್ನಿಗೆ ಚೂರಿ ಹಾಕಿದರು. 2006ರಲ್ಲಿ 200 ವೋಟ್​​​​​ಗಳಲ್ಲಿ ಗೆದ್ದಾಗ ಹೇಗಿತ್ತು ನೆನಪಿಸಿಕೊಳ್ಳಿ? ಎಂದು ಸಿಎಂಗೆ ಆ ದಿನಗಳನ್ನ ನೆನಪಿಸಿದರು.

ಚುನಾವಣೆಯಲ್ಲಿ ಗೆಲುವು ಸೋಲು ಸಾಮಾನ್ಯ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಯಾಕೆ ಸೋತರು? ಜೆಡಿಎಸ್ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯನವರಿಗಿಲ್ಲ. ಸಿದ್ದರಾಮಯ್ಯ ಅಹಿಂದ ಚಾಂಪಿಯನ್ ಅಂತ ಹೇಳಿಕೊಳ್ಳುತ್ತಾರೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷ ಬಿಟ್ಟು ಬಂದು 5 ಸ್ಥಾನ ಗೆಲ್ಲಲಿ ಎಂದು ಸವಾಲು ಹಾಕಿದರು.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪ್ರೇಮ ಸಂಬಂಧವೋ? ಲವ್​​ ಜಿಹಾದೋ?: ಅಸಲಿಗೆ ಹುಬ್ಬಳ್ಳಿ, ಧಾರವಾಡದಲ್ಲಿ ಆಗ್ತಿರೋದೇನು?

ಹುಬ್ಬಳ್ಳಿ, ಏಪ್ರಿಲ್​​ 10: ರಾಜ್ಯದ ವಾಣಿಜ್ಯ ನಗರ ಹುಬ್ಬಳ್ಳಿ ಮತ್ತು ಶಿಕ್ಷಣ ಕಾಶಿ ಧಾರವಾಡದಲ್ಲಿ ಅದ್ಯಾಕೋ ಗೊತ್ತಿಲ್ಲ ಮೇಲಿಂದ ಮೇಲೆ ಲವ್​​ ಜಿಹಾದ್​​ ಆರೋಪ ಪ್ರಕರಣಗಳು ಕೇಳಿಬರತೊಡಗಿವೆ. ಕಳೆದ ಎರಡು ತಿಂಗಳ ಅವಧಿಯಲ್ಲಿಯೇ ಇಂತಹ ನಾಲ್ಕು ಆರೋಪಗಳು ವರದಿಯಾಗಿದ್ದು, ಈ ಬಗ್ಗೆ ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಕೆಲವರು ಇದನ್ನು ಪ್ರೇಮ ಸಂಬಂಧ ಮಾತ್ರ ಎಂದು ಕರೆದರೆ, ಇನ್ನು ಕೆಲವರು ಇದು ವ್ಯವಸ್ಥಿತವಾಗಿ ಹಿಂದೂ ಯುವತಿಯರನ್ನು ಮುಸ್ಲಿಂ ಧರ್ಮಕ್ಕೆ ಪ್ರೀತಿ ಪ್ರೇಮದ ಹೆಸರಲ್ಲಿ ಮತಾಂತರ ಮಾಡುವ ಷಡ್ಯಂತ್ರ ಎನ್ನುತ್ತಿದ್ದಾರೆ.

ಏನಿದು ಲವ್ ಜಿಹಾದ್?

ಹಿಂದೂ ಯುವತಿಯರು, ಮಹಿಳೆಯರನ್ನು ಮದುವೆಯಾಗಿ ನಂತರ ಅವರನ್ನು ಅನ್ಯ ಧರ್ಮಕ್ಕೆ ಮತಾಂತರ ಮಾಡೋದನ್ನು ಸಾಮಾನ್ಯವಾಗಿ ಲವ್ ಜಿಹಾದ್ ಎಂದು ಕರೆಯಲಾಗುತ್ತಿದೆ. ಈ ಲವ್​​ ಜಿಹಾದ್​​ ಕುರಿತು ನಿರ್ದಿಷ್ಟ ವ್ಯಾಖ್ಯಾನಗಳು ಇಲ್ಲದಿದ್ದರೂ ಇಂತಹ ಘಟನೆಗಳನ್ನು ಇದೇ ಹೆಸರಲ್ಲಿ ಉಲ್ಲೇಖಿಸಿಕೊಂಡು ಬರಲಾಗ್ತಿದೆ. ಕೆಲ ವರ್ಷಗಳ ಹಿಂದೆ ಬಿಡುಗಡೆಯಾದ ಕೇರಳ ಲವ್ ಸ್ಟೋರಿ ಪಾರ್ಟ್ 1 ಮತ್ತು ಇತ್ತೀಚೆಗೆ ಬಿಡುಗಡೆಯಾದ ಪಾರ್ಟ್ 2 ಸಿನಿಮಾಗಳ ನಂತರ ದೇಶದಲ್ಲಿ ಲವ್ ಜಿಹಾದ್ ಎಂಬ ಪದ ಹೆಚ್ಚು ಪ್ರಚಲಿತದಲ್ಲಿದೆ. ಈ ಹಿಂದೆ ಕೇರಳದಲ್ಲಿ ಹೆಚ್ಚಾಗಿ ಸದ್ದು ಮಾಡುತ್ತಿದ್ದ ಈ ಆರೋಪಗಳೀಗ ನಮ್ಮ ರಾಜ್ಯದ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡಲ್ಲಿಯೂ ಕೇಳಿಬರತೊಡಗಿವೆ.

ಇದನ್ನೂ ಓದಿ: ಹಿಂದೂ ಯುವತಿ ಜೊತೆ ವಿವಾಹಿತ ಮುಸ್ಲಿಂ ವ್ಯಕ್ತಿ ಪರಾರಿ: ಲವ್​​ ಜಿಹಾದ್​​ಗೆ ಒಳಗಾದ ಮಗಳನ್ನು ಹುಡುಕಿಕೊಡಿ ಎಂದು ತಾಯಿಯ ಅಳಲು

2024ರ ಏಪ್ರಿಲ್ 18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್​​ನಲ್ಲಿ ಹಿಂದೂ ಯುವತಿ ನೇಹಾ ಹಿರೇಮಠ ಹತ್ಯೆಯಾಗಿತ್ತು. ಫಯಾಜ್ ಎಂಬ ಕಾಲೇಜು ಸ್ನೇಹಿತನೇ ಆಕೆಯನ್ನು ಕೊಲೆ ಮಾಡಿದ್ದ. ಮದುವೆಗೆ ನಿರಾಕರಣೆಯೇ ಘಟನೆಗೆ ಕಾರಣ ಎನ್ನಲಾಗಿತ್ತು. ಆ ಬಳಿಕ ಕೇಳಿಬರಲು ಆರಂಭವಾದ ಲವ್​​ ಜಿಹಾದ್​​ ಎಂಬ ಮಾತು ಇತ್ತೀಚಿನ ಕೆಲ ಪ್ರಕರಣಗಳಲ್ಲೂ ಪ್ರತಿಧ್ವನಿಸಿದೆ. ಜಿಮ್ ಟ್ರೈನರ್ ಸಮೀರ್ ವಿರುದ್ಧ ಕೇಳಿಬಂದ ಆರೋಪ ಸೇರಿ, ಕಾಲೇಜು ಯುವತಿಗೆ ಬೆದರಿಕೆ ಸಂಬಂಧ ಮುಪಿಜ್ ಮಿಯಾನವರ್ ಪ್ರಕರಣದವರೆಗೂ ಇದೇ ಪದ ಕೇಳಿಬಂದಿದೆ. ಮುಸ್ಲಿಂ ಧರ್ಮದ ವ್ಯಕ್ತಿಯ ಜೊತೆ ತನ್ನ ಮಗಳು ಓಡಿಹೋಗಿದ್ದಾಳೆ ಎಂಬ ತಾಯಿಯ ದೂರಿಗೂ ಲವ್​​ ಜಿಹಾದ್​​ ಆರೋಪ ಮೆತ್ತಿಕೊಂಡಿದೆ. ಕಳೆದ ಒಂದು ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಲವ್ ಜಿಹಾದ್ ಆರೋಪ ಪ್ರಕರಣಗಳು ವರದಿಯಾಗಿದ್ದರೆ, ಕಳೆದ ಮೂರು ತಿಂಗಳಲ್ಲಿ ನಾಲ್ಕು ಲವ್ ಜಿಹಾದ್ ಆರೋಪ ಕೇಸ್​​ಗಳು ಹುಬ್ಬಳ್ಳಿ-ಧಾರವಾಡದಲ್ಲಿ ಕೇಳಿ ಬಂದಿವೆ.

ಇನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಕೇಳಿ ಬರ್ತಿರುವ ಲವ್ ಜಿಹಾದ್ ಆರೋಪ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಕಮಿಷನರ್, ಸದ್ಯ ಯಾವೆಲ್ಲ ಪ್ರಕರಣದಲ್ಲಿ ದೂರು ನೀಡಿದ್ದಾರೋ ಅವನ್ನು ದಾಖಲಿಸಲಾಗಿದೆ. ಆರೋಪಗಳ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಅದು ಪ್ರೀತಿನಾ ಅಥವಾ ಲವ್ ಜಿಹಾದ್ ಭಾಗವಾ ಎಂಬುದು ಆ ಬಳಿಕವೇ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಗಣಂಗೂರು ಟೋಲ್‌ನಲ್ಲಿ ಗೂಂಡಾವರ್ತನೆ: ಫಾಸ್ಟ್‌ಟ್ಯಾಗ್‌ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!

ಮಂಡ್ಯ, ಏಪ್ರಿಲ್ 10: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್ ಸಿಬ್ಬಂದಿ ಯುವಕನ ಮೇಲೆ ಹಲ್ಲೆ ನಡೆಸಿ ಗೂಂಡಾವರ್ತನೆ ತೋರಿದ್ದಾರೆ. ಫಾಸ್ಟ್‌ಟ್ಯಾಗ್‌ನಲ್ಲಿ ಹಣ ಖಾಲಿಯಾದ ಕಾರಣಕ್ಕೆ ಉಂಟಾದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಮಹೇಶ್ ಎಂಬ ಯುವಕನಿಗೆ ಟೋಲ್ ಸಿಬ್ಬಂದಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಎರಡು ದಿನದ ಹಿಂದೆ ಮಹೇಶ್ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ಬರುತ್ತಿದ್ದಾಗ ಫಾಸ್ಟ್‌ಟ್ಯಾಗ್‌ನಲ್ಲಿ ಹಣವಿಲ್ಲದಿರುವುದು ಗೊತ್ತಾಗಿತ್ತು. ಈ ವೇಳೆ ಯುವಕ ತನ್ನ ಪರಿಚಿತರಿಗೆ ಕರೆ ಮಾಡಿ ಮಾತಾಡುವುದಾಗಿ ಹೇಳಿದರೂ ಕೇಳದ ಸಿಬ್ಬಂದಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಆತನ ಮೊಬೈಲ್ ಕಿತ್ತುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಮಹೇಶ್ ಮೇಲೆ ಗೂಂಡಾಗಳಂತೆ ಮುಗಿಬಿದ್ದು ಹಲ್ಲೆ ನಡೆಸಿದ್ದು, ಈ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಟೋಲ್ ಸಿಬ್ಬಂದಿಯ ಈ ದರ್ಪಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾ ಸೆಟ್​​ನಲ್ಲಿ ಬೆಂಕಿ: ಹಲವರಿಗೆ ಗಾಯ

ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ನಿರ್ದೇಶನ ಮಾಡಿ ಪ್ರಭಾಸ್ ನಟಿಸಿರುವ ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಇದೀಗ ಸಿನಿಮಾ ಸೆಟ್​​ನಲ್ಲಿ ಅವಘಡ ಸಂಭವಿಸಿದೆ. ‘ಸ್ಪಿರಿಟ್’ ಸಿನಿಮಾ ಸೆಟ್​​ನಲ್ಲಿ ಅಗ್ನಿ ಅವಘಡ ನಡೆದಿದ್ದು, ಚಿತ್ರತಂಡದ ಕೆಲವರಿಗೆ ಗಾಯಗಳಾಗಿವೆ ಎನ್ನಲಾಗುತ್ತಿದೆ. ಸಿನಿಮಾದ ಚಿತ್ರೀಕರಣ ಹೈದರಾಬಾದ್​​ನಲ್ಲಿ ನಡೆಯುತ್ತಿದ್ದು, ಹೈದರಾಬಾದ್​​ನ ಸೆಟ್​​ನಲ್ಲಿ ಈ ಅವಘಡ ಸಂಭವಿಸಿದೆಯಂತೆ.

ಶಾರ್ಟ್ ಸರ್ಕ್ಯೂಟ್​​ನಿಂದ ಈ ಅಗ್ನಿ ಅವಘಡ ಸಂಭವಿಸಿದ್ದು, ಸಿನಿಮಾದ ಸಿಬ್ಬಂದಿಗಾಗಿ ಹಾಕಲಾಗಿದ್ದ ಸೆಟ್​​ ಸುಟ್ಟಿವೆ ಹಾಗೂ ಸಿನಿಮಾ ತಂಡದ ಕೆಲವು ವಸ್ತುಗಳು ಅಗ್ನಿಗೆ ಆಹುತಿಯಾಗಿವೆಯಂತೆ. ಕೆಲವು ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳು ಸಹ ಆಗಿವೆ ಎನ್ನಲಾಗುತ್ತಿದೆ. ಆದರೆ ಈ ಘಟನೆ ನಡೆದಾಗ ನಟ ಪ್ರಭಾಸ್ ಅವರು ಸೆಟ್​​ನಲ್ಲಿ ಇರಲಿಲ್ಲ ಎನ್ನಲಾಗುತ್ತಿದೆ. ಇಂದು (ಏಪ್ರಿಲ್ 10) ಬೆಳಿಗ್ಗೆ ಘಟನೆ ನಡೆದಿದ್ದು, ಚಿತ್ರತಂಡವು ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

ಪ್ರಭಾಸ್ ನಟನೆಯ ‘ಆದಿಪುರುಷ್’ ಸಿನಿಮಾದ ಸೆಟ್​ಗೂ ಸಹ ಬೆಂಕಿ ತಗುಲಿತ್ತು. ‘ಆದಿಪುರುಷ್’ ಸಿನಿಮಾಕ್ಕಾಗಿ ಮುಂಬೈನಲ್ಲಿ ಭಾರಿ ದೊಡ್ಡ ಸೆಟ್ ನಿರ್ಮಾಣ ಮಾಡಲಾಗಿತ್ತು. ಆದರೆ ಇಡೀ ಸೆಟ್ ಬೆಂಕಿಗೆ ಆಹುತಿಯಾಯ್ತು. ಆ ಸಮಯದಲ್ಲಿ ಸಾಕಷ್ಟು ಋಣಾತ್ಮಕ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದವು. ಸಿನಿಮಾ ಬಿಡುಗಡೆ ಆದ ಬಳಿಕ ದೊಡ್ಡ ಫ್ಲಾಪ್ ಆಯ್ತು. ಇದೀಗ ‘ಸ್ಪಿರಿಟ್’ ಸಿನಿಮಾದ ಸೆಟ್​​ಗೂ ಬೆಂಕಿ ಬಿದ್ದಿರುವುದು ಪ್ರಭಾಸ್ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ:‘ಡಕಾಯತ್’ ಸಿನಿಮಾ ಆಫರ್ ಮೊದಲು ಹೋಗಿದ್ದು ದಕ್ಷಿಣದ ಈ ಸ್ಟಾರ್ ನಟನಿಗೆ

ನಿನ್ನೆಯಷ್ಟೆ ಪ್ರಭಾಸ್ ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರುಗಳು ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣದಿಂದ ಬಿಡುವು ಪಡೆದು ‘ಧುರಂಧರ್ 2’ ಸಿನಿಮಾ ವೀಕ್ಷಿಸಿ, ಸಿನಿಮಾ ಅನ್ನು ಮೆಚ್ಚಿಕೊಂಡಿದ್ದರು. ಸಂದೀಪ್ ರೆಡ್ಡಿ ವಂಗಾ ಸಹ ಬೇರೊಂದು ಕಡೆ, ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣ ಬೇಗನೆ ಸಾಗುತ್ತಿದ್ದು, ಬೇಗನೆ ಚಿತ್ರೀಕರಣ ಮುಗಿಸುವುದಾಗಿ ಹೇಳಿಕೊಂಡಿದ್ದರು. ಆದರೆ ಅಷ್ಟರಲ್ಲೇ ಈ ದುರ್ಘಟನೆ ನಡೆದಿದೆ.

ಪ್ರಭಾಸ್ ಪ್ರಸ್ತುತ ‘ಸ್ಪಿರಿಟ್’, ‘ಫೌಜಿ’ ಮತ್ತು ‘ಕಲ್ಕಿ 2898 ಎಡಿ’ ಸಿನಿಮಾಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಒಟ್ಟಿಗೆ ಈ ಮೂರು ಸಿನಿಮಾಗಳ ಚಿತ್ರೀಕರಣ ನಡೆಯುತ್ತಿದೆ. ‘ಫೌಜಿ’ ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದೆ. ‘ಕಲ್ಕಿ 2898 ಎಡಿ’ ಚಿತ್ರೀಕರಣ ಪ್ರಾರಂಭ ಆಗಿದೆಯಾದರೂ, ಪ್ರಭಾಸ್ ಇನ್ನೂ ಚಿತ್ರೀಕರಣದಲ್ಲಿ ಭಾಗಿ ಆಗಿಲ್ಲ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಒಂದು ವಾರದ ನಿರೀಕ್ಷಣಾ ಜಾಮೀನು ಮಂಜೂರು

ಹೈದರಾಬಾದ್, ಏಪ್ರಿಲ್ 10: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ (ಏಪ್ರಿಲ್ 10) ಕಾಂಗ್ರೆಸ್ ನಾಯಕ ಪವನ್ ಖೇರಾ(Pawan Khera) ಅವರಿಗೆ ಒಂದು ವಾರದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಂಬಂಧಿತ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಒಂದು ವಾರ ಕಾಲಾವಕಾಶ ನೀಡಲಾಗಿದೆ. ಖೇರಾ ಅವರ ನಿವಾಸವಿರುವ ಹೈದರಾಬಾದ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಲಾಗಿದೆ.

ಗುರುವಾರ ತೆಲಂಗಾಣ ಹೈಕೋರ್ಟ್ ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿತು. ತಕ್ಷಣದ ಪರಿಹಾರ ನೀಡುವ ಬದಲು, ನ್ಯಾಯಾಲಯವು ತನ್ನ ಆದೇಶವನ್ನು ಶುಕ್ರವಾರಕ್ಕೆ ಕಾಯ್ದಿರಿಸಿತ್ತು.ಏಪ್ರಿಲ್ 5 ರಂದು ಪತ್ರಿಕಾಗೋಷ್ಠಿಯಲ್ಲಿ ಪವನ್ ಖೇರಾ ಅವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದಾಗ ವಿವಾದ ಭುಗಿಲೆದ್ದಿತ್ತು.

ಬಹು ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ ಮತ್ತು ವಿದೇಶದಲ್ಲಿ ಆಸ್ತಿ ಹೊಂದಿದ್ದಾರೆಂದು ಹೇಳಿಕೊಂಡಿದ್ದಾರೆ, ಆದರೆ ಅವುಗಳನ್ನು ಅವರ ಚುನಾವಣಾ ಅಫಿಡವಿಟ್‌ನಲ್ಲಿ ಬಹಿರಂಗಪಡಿಸಿಲ್ಲ ಎಂದಿದ್ದರು. ಶರ್ಮಾ ಕುಟುಂಬವು ಈ ಆರೋಪಗಳನ್ನು ತೀವ್ರವಾಗಿ ತಿರಸ್ಕರಿಸಿತು, ಅವುಗಳನ್ನು ಸುಳ್ಳು, ಕಟ್ಟುಕಥೆ ಮತ್ತು ದುರುದ್ದೇಶಪೂರಿತ ಎಂದು ಕರೆದಿದೆ.

ಮತ್ತಷ್ಟು ಓದಿ: ಬೆಂಗಳೂರಿನ 1 ಲಕ್ಷ ನಕಲಿ ಮತದಾರರಿಗೇಕೆ ನೋಟಿಸ್ ನೀಡಿಲ್ಲ? ಚುನಾವಣಾ ಆಯೋಗಕ್ಕೆ ಪವನ್ ಖೇರಾ ಪ್ರಶ್ನೆ

ರಿನಿಕಿ ಭುಯಾನ್ ಶರ್ಮಾ ಅವರ ದೂರಿನ ನಂತರ, ಖೇಡಾ ವಿರುದ್ಧ ಗುವಾಹಟಿ ಅಪರಾಧ ಶಾಖೆಯಲ್ಲಿ ಹಲವಾರು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು. ಪ್ರಕರಣ ದಾಖಲಾದ ನಂತರ, ಅಸ್ಸಾಂ ಪೊಲೀಸರ ತಂಡವು ಖೇಡಾ ಅವರ ದೆಹಲಿ ನಿವಾಸಕ್ಕೆ ವಿಚಾರಣೆಗಾಗಿ ಆಗಮಿಸಿತು.ಆದರೆ ಅವರು ಹಾಜರಿರಲಿಲ್ಲ.

ಖೇಡಾ ತಮ್ಮ ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ, ತಾವು ಕಾನೂನು ಪಾಲಿಸುವ ನಾಗರಿಕ, ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಮತ್ತು ತನಿಖೆಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ನ್ಯಾಯಾಲಯಕ್ಕೆ ಸಂಪೂರ್ಣವಾಗಿ ಸಹಕರಿಸುವುದಾಗಿ ತಿಳಿಸಿದ್ದಾರೆ. ಬಂಧನ ಪೂರ್ವ ಜಾಮೀನು ನೀಡುವಂತೆ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

SSLC ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್​​ ಪ್ರಶ್ನಿಸಿ PIL: ಅರ್ಜಿದಾರರಿಗೆ ಬಿಗ್​​ ಶಾಕ್​​ ಕೊಟ್ಟ ಹೈಕೋರ್ಟ್​

ಬೆಂಗಳೂರು, ಏಪ್ರಿಲ್​​ 10: ಎಸ್​​ಎಸ್​​ಎಲ್​​ಸಿ ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​​ ನೀಡುವ ನಿರ್ಧಾರ ಭಾರಿ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು. ಈ ನಡುವೆ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ಗೆ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಪರೀಕ್ಷೆಯ ಕೊನೆಯ ಹಂತದಲ್ಲಿ ಸರ್ಕಾರದ ತೆಗೆದುಕೊಂಡಿರುವ ಈ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಲಾಗಿತ್ತು. ಆದರೆ ಅರ್ಜಿದಾರರಿಗೆ ಹೈಕೋರ್ಟ್​​ ಈಗ ಬಿಗ್​​ ಶಾಕ್​​ ಕೊಟ್ಟಿದೆ.

ಅರ್ಜಿದಾರರಿಗೆ 1 ಲಕ್ಷ ದಂಡ!

ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಪಿಐಎಲ್​ ಸಲ್ಲಿಕೆ ಮಾಡಿರುವವರು, ಸರ್ಕಾರದ ಆದೇಶದ ವಿವರ ಒದಗಿಸದೇ ಕೇವಲ ಪತ್ರಿಕೆ ವರದಿ ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಹಿನ್ನೆಲೆ ಅರ್ಜಿದಾರರಾದ ಹೆಚ್.ಎನ್.ಚಂದನಾ ಮತ್ತು ಎಸ್.ವೆಂಕಟೇಶ್​​ಗೆ 1 ಲಕ್ಷ ರೂಪಾಯಿ ದಂಡ ವಿಧಿಸಿರುವ ಹೈಕೋರ್ಟ್​​, ಪಿಐಎಲ್ ವಜಾಗೊಳಿಸಿ ಆದೇಶಿಸಿದೆ. ಆ ಮೂಲಕ ಅರ್ಜಿದಾರರಿಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ.

ಇದನ್ನೂ ಓದಿ: SSLC ತೃತೀಯ ಭಾಷೆಗೆ ಗ್ರೇಡ್​​ ವಿವಾದ; ರಾಜ್ಯಪಾಲರ ನಿಲುವಿಗೆ ಕರವೇ ಕೆಂಡ

SSLC ತೃತೀಯ ಭಾಷೆಗಳ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕನ್ನಡಪರ ಸಂಘಟನೆಗಳು ಸ್ವಾಗತಿಸಿದ್ದವಾದರೂ, ಬಿಜೆಪಿಯ ಕೆಲವು ನಾಯಕರು ಸೇರಿ ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಈ ವಿಚಾರವಾಗಿ ಸ್ವತಃ ಮಧ್ಯಪ್ರವೇಶ ಮಾಡಿದ್ದ ರಾಜ್ಯಪಾಲರು, ಸರ್ಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿ ಶಾಲನೀಶ್​​ಗೆ ಪತ್ರ ಕೂಡ ಬರೆದಿದ್ದರು. ಗವರ್ನರ್​​ ಈ ನಡೆ ವಿರುದ್ಧ ಸಿಡಿದೆದ್ದಿದ್ದ ಕರವೇ, ಈ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತಿದೆ. ನಿಮ್ಮ ಅಧಿಕಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ. ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಸದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ಈ ರೀತಿ ಮಾಡೋದು ತಪ್ಪು. ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ, ಸಾಂವಿಧಾನಿಕ ಹೊಣೆಗಾರಿಕೆಯಿಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ ಎಂದು ವಾಗ್ದಾಳಿ ನಡೆಸಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಲೆಬನಾನ್‌ನಲ್ಲಿ ಶಾಂತಿ ಸ್ಥಾಪನೆಯಾಗುವವರೆಗೆ ಚರ್ಚೆ ಇಲ್ಲ, ಅಮೆರಿಕದೊಂದಿಗೆ ಮಾತುಕತೆ ಸ್ಥಗಿತಗೊಳಿಸುವುದಾಗಿ ಇರಾನ್ ಎಚ್ಚರಿಕೆ

ಟೆಹ್ರಾನ್, ಏಪ್ರಿಲ್ 10: ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಆಶಾಕಿರಣವಾಗಿದ್ದ ಅಮೆರಿಕ-ಇರಾನ್(Iran) ಕದನ ವಿರಾಮ ಒಪ್ಪಂದವು ಈಗ ಸಂಪೂರ್ಣ ಕುಸಿತದ ಅಂಚಿಗೆ ಬಂದು ನಿಂತಿದೆ. ನಾಳೆ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ನಿರ್ಣಾಯಕ ಮಾತುಕತೆಯಿಂದ ಹಿಂದೆ ಸರಿಯುವುದಾಗಿ ಇರಾನ್ ಘೋಷಿಸಿದ್ದು, ಜಾಗತಿಕ ರಾಜಕೀಯದಲ್ಲಿ ಮತ್ತೆ ಆತಂಕದ ಕಾರ್ಮೋಡ ಕವಿಯುವಂತೆ ಮಾಡಿದೆ. ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿದ್ದ 14 ದಿನಗಳ ಕದನ ವಿರಾಮವು ಮುರಿದುಬೀಳುವ ಹಂತಕ್ಕೆ ತಲುಪಿದೆ. ಲೆಬನಾನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ಭೀಕರ ದಾಳಿಗಳನ್ನು ನಿಲ್ಲಿಸದ ಹೊರತು ನಾವು ಯಾವುದೇ ಮಾತುಕತೆಗೆ ಬರುವುದಿಲ್ಲ ಎಂದು ಇರಾನ್ ಹೇಳಿದೆ.

ಇರಾನ್‌ನ ಉನ್ನತ ಮಟ್ಟದ ನಿಯೋಗವು ಈಗಾಗಲೇ ಪಾಕಿಸ್ತಾನಕ್ಕೆ ತಲುಪಿದೆ ಎಂದು ಹರಡಿದ್ದ ವರದಿಗಳನ್ನು ಇರಾನ್ ಸರ್ಕಾರಿ ಸಂಸ್ಥೆಗಳಾದ ‘ಫಾರ್ಸ್’ ಮತ್ತು ‘ತಸ್ನಿಮ್’ ಸಂಪೂರ್ಣವಾಗಿ ನಿರಾಕರಿಸಿವೆ. ಇರಾನ್ ನಿಯೋಗವು ಇಸ್ಲಾಮಾಬಾದ್‌ಗೆ ಹೋಗಿದೆ ಎಂಬ ಸುದ್ದಿ ಸಂಪೂರ್ಣವಾಗಿ ಸುಳ್ಳು. ಲೆಬನಾನ್‌ನಲ್ಲಿ ಕದನ ವಿರಾಮ ಜಾರಿಯಾಗುವವರೆಗೂ ನಾವು ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಯೋಜನೆ ಹೊಂದಿಲ್ಲ,ಎಂದು ಅಧಿಕೃತ ಮೂಲಗಳು ಸ್ಪಷ್ಟಪಡಿಸಿವೆ.

ಲೆಬನಾನ್ ರಕ್ತಪಾತ: ಟೆಹ್ರಾನ್ ಕೆಂಗಣ್ಣು
ಬುಧವಾರ ಇಸ್ರೇಲ್ ನಡೆಸಿದ ದಾಳಿಗಳಲ್ಲಿ ಲೆಬನಾನ್‌ನಲ್ಲಿ ಕನಿಷ್ಠ 182 ಜನರು ಮೃತಪಟ್ಟಿದ್ದಾರೆ. ಇಸ್ರೇಲ್‌ನ ಈ ಆಕ್ರಮಣಕಾರಿ ನಡೆಯಿಂದ ಕೆರಳಿರುವ ಇರಾನ್, ಪ್ರತೀಕಾರವಾಗಿ ಜಾಗತಿಕ ತೈಲ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿದೆ. ಇದು ಈಗಾಗಲೇ ದುರ್ಬಲವಾಗಿದ್ದ ಶಾಂತಿ ಒಪ್ಪಂದವನ್ನು ಮರಣಶಯ್ಯೆಗೆ ತಳ್ಳಿದೆ.

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಪ್ರಕಾರ, ಲೆಬನಾನ್‌ನಲ್ಲಿ ಯುದ್ಧವನ್ನು ನಿಲ್ಲಿಸುವುದು ಅಮೆರಿಕಕ್ಕೆ ನೀಡಿದ 10 ಅಂಶಗಳ ಪ್ರಸ್ತಾವನೆಯ ಭಾಗವಾಗಿತ್ತು. ಆದರೆ ಡೊನಾಲ್ಡ್ ಟ್ರಂಪ್ ಮತ್ತು ಬೆಂಜಮಿನ್ ನೆತನ್ಯಾಹು ಇದನ್ನು ತಳ್ಳಿಹಾಕಿದ್ದಾರೆ. ಲೆಬನಾನ್ ವಿಷಯವು ಈ ಒಪ್ಪಂದದಲ್ಲಿ ಇರಲೇ ಇಲ್ಲ ಎಂಬುದು ಅವರ ವಾದ.

ಮತ್ತಷ್ಟು ಓದಿ: ಲೆಬನಾನ್ ಮೇಲಿನ ದಾಳಿಗೆ ಪ್ರತೀಕಾರ; ಮತ್ತೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ಇರಾನ್

ಹೊಸ ಹತ್ಯೆ ಮತ್ತು ಇಸ್ರೇಲ್ ನಡೆ
ಒಂದೆಡೆ ಮಾತುಕತೆಯ ಗೊಂದಲವಿದ್ದರೆ, ಇನ್ನೊಂದೆಡೆ ಇಸ್ರೇಲ್ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಹಿಜ್ಬುಲ್ಲಾ ನಾಯಕ ನಯೀಮ್ ಖಾಸಿಮ್ ಅವರ ಆಪ್ತ ಸಹಾಯಕ ಅಲಿ ಯೂಸುಫ್ ಹರ್ಷಿಯನ್ನು ಕೊಂದಿರುವುದಾಗಿ ಇಸ್ರೇಲ್ ಗುರುವಾರ ಘೋಷಿಸಿದೆ. ಹಿಜ್ಬುಲ್ಲಾ ನಾಗರಿಕ ಪ್ರದೇಶಗಳನ್ನು ಬಳಸಿಕೊಂಡು ದಾಳಿ ಮಾಡುತ್ತಿದೆ ಎಂದು ಇಸ್ರೇಲ್ ಆರೋಪಿಸಿದ್ದರೆ, ಸ್ಥಳೀಯ ಅಧಿಕಾರಿಗಳು ಇದನ್ನು ನಿರಾಕರಿಸುತ್ತಿದ್ದಾರೆ.

ಇರಾನ್‌ನ ಈ ಕಠಿಣ ನಿಲುವು ಇಸ್ಲಾಮಾಬಾದ್‌ನಲ್ಲಿ ನಡೆಯಬೇಕಿದ್ದ ರಾಜತಾಂತ್ರಿಕ ಪ್ರಯತ್ನಗಳಿಗೆ ದೊಡ್ಡ ಪೆಟ್ಟು ನೀಡಿದೆ. ನಮ್ಮ ಷರತ್ತುಗಳು ಈಡೇರದ ಹೊರತು ನಾವು ಹೆಜ್ಜೆ ಇಡುವುದಿಲ್ಲ ಎಂದು ಇರಾನ್ ಪಟ್ಟು ಹಿಡಿದಿದ್ದು, ಅಮೆರಿಕ ಮತ್ತು ಇಸ್ರೇಲ್ ಈ ಒತ್ತಡಕ್ಕೆ ಮಣಿಯುತ್ತದೆಯೇ ಅಥವಾ ಯುದ್ಧದ ಜ್ವಾಲೆ ಮತ್ತಷ್ಟು ವ್ಯಾಪಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಒಟ್ಟಾರೆಯಾಗಿ, ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಯು ಈಗ ಲೆಬನಾನ್‌ನ ರಣಾಂಗಣದಲ್ಲಿ ಸಿಲುಕಿಕೊಂಡಿದೆ. ಹಾರ್ಮುಜ್ ಜಲಸಂಧಿಯ ಮುಚ್ಚುವಿಕೆಯು ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟನ್ನು ಸೃಷ್ಟಿಸುವ ಭೀತಿಯನ್ನು ಹುಟ್ಟುಹಾಕಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಮಹಾ ಎಡವಟ್ಟು! 600ಕ್ಕೆ 683 ಅಂಕ ನೀಡಿದ ಬೋರ್ಡ್​!

ಬೆಂಗಳೂರು, ಏಪ್ರಿಲ್ 10: ಗುರುವಾರ ದ್ವಿತೀಯ ಪಿಯುಸಿ ಪರೀಕ್ಷೆಯ ಪಲಿತಾಂಶ (2nd PUC result) ಪ್ರಕಟವಾಗಿದೆ. ಹಲವಾರು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. 600ಕ್ಕೆ 600 ಅಂಕವನ್ನೂ ಪಡೆದವರಿದ್ದಾರೆ. ಆದರೆ ಕರ್ನಾಟಕ ಸರ್ಕಾರದ ಅಧಿಕೃತ ಫಲಿತಾಂಶ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಅಂಕಪಟ್ಟಿಯಲ್ಲಿಯೇ ಗಂಭೀರ ಲೋಪವೊಂದು ಕಂಡುಬಂದಿದೆ. 600 ಅಂಕಗಳ ಪರೀಕ್ಷೆಗೆ 683 ಅಂಕಗಳನ್ನು ನೀಡಿದ ಬೋರ್ಡ್​ನ ಎಡವಟ್ಟು ಬೆಳಕಿಗೆ ಬಂದಿದೆ.

ಆರೂ ವಿಷಯಗಳಲ್ಲೂ 100ಕ್ಕೂ ಹೆಚ್ಚು ಅಂಕ!

ಕಳೆದ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ ಕೆಲ ವಿದ್ಯಾರ್ಥಿಗಳು ಈ ವರ್ಷ ಮರು ಪರೀಕ್ಷೆ ಬರೆದಿದ್ದರು. ಈ ವಿದ್ಯಾರ್ಥಿಗಳ ಫಲಿತಾಂಶವೂ ನಿನ್ನೆ ಪ್ರಕಟವಾಗಿದ್ದು, ಅಧಿಕೃತ ವೆಬ್‌ಸೈಟ್‌ನಲ್ಲಿಯೇ ಈ ರೀತಿಯ ಎಡವಟ್ಟು ನಡೆದಿರುವುದು ಮುಜುಗರ ತಂದಿದೆ. ಕೆಲ ವಿದ್ಯಾರ್ಥಿಗಳಿಗೆ ಆರು ವಿಷಯಗಳಲ್ಲೂ 100ಕ್ಕೂ ಹೆಚ್ಚು ಅಂಕಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ ತಾಯಿ ಸತ್ತ ನೋವಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ ಈಗ ಟಾಪರ್! ಸಾಧನೆಗೆ ಅಮ್ಮನ ಮಾತುಗಳೇ ಸ್ಪೂರ್ತಿಯಾಗಿದ್ದು ಹೇಗೆ?

ಡಿಜಿ ಲಾಕರ್​ನಲ್ಲಿ ಸರಿಯಾಗೇ ಇದೆ ರಿಸಲ್ಟ್!

Karresults.nic.in ವೆಬ್​ಸೈಟ್​ನಲ್ಲಿ ಪ್ರಕಟವಾದ ಫಲಿತಾಂಶದಲ್ಲಿ ಮಾತ್ರ ಈ ಲೋಪ ಕಾಣಿಸಿದೆ. ಆದರೆ ಡಿಜಿ ಲಾಕರ್‌ನಲ್ಲಿ ಲಭ್ಯವಿರುವ ಅದೇ ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯಲ್ಲಿ ಅಂಕಗಳು ಸರಿಯಾಗಿರುವುದು ಗಮನಾರ್ಹವಾಗಿದೆ. ಇದರಿಂದ ವೆಬ್‌ಸೈಟ್ ಡೇಟಾ ಅಪ್‌ಲೋಡ್ ವೇಳೆ ತಾಂತ್ರಿಕ ದೋಷ ಸಂಭವಿಸಿರುವ ಸಾಧ್ಯತೆ ವ್ಯಕ್ತವಾಗಿದೆ. ಈ ಎಡವಟ್ಟಿನಿಂದ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮೂಡಿದ್ದು, ಫಲಿತಾಂಶದ ನಿಖರತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ

ಸೆಲೆಬ್ರಿಟಿಗಳ ಬಾಲ್ಯದ ಫೋಟೋಗಳು ಆಗಾಗ ವೈರಲ್ ಆಗುತ್ತವೆ. ಈಗ ವಿರಾಟ್ ಕೊಹ್ಲಿ, ಪಡಿಕ್ಕಲ್ ಅವರ ಬಾಲ್ಯದ ಫೋಟೋ ಗಮನ ಸೆಳೆದಿದೆ. ಸೆಷನ್ ಒಂದನ್ನು ನಡೆಸಿ ಇದರಲ್ಲಿ ಬಾಲ್ಯದ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. ಕೊಹ್ಲಿ ಹಾಗೂ ಇಶಾನ್ ಶರ್ಮಾ ಒಂದೇ ಫೋಟೋದಲ್ಲಿ ಇದ್ದರು. ಪಡಿಕ್ಕಲ್ ಅವರು ಸಣ್ಣ ವಯಸ್ಸಿನಲ್ಲೇ ಕ್ರಿಕೆಟ್ ಬಗ್ಗೆ ಆಸಕ್ತಿ ಹೊಂದಿದ್ದರು. ಆ ಬಗ್ಗೆ ಇಲ್ಲಿದೆ ವಿವರ.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link