Headlines

nagaraj11081993

ತಮಿಳುನಾಡಲ್ಲಿ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

ಚೆನ್ನೈ, ಏಪ್ರಿಲ್ 9: ಜಾತ್ಯತೀತ ರಚನೆಯನ್ನು ಉಳಿಸಲು ಶ್ರಮಿಸುತ್ತಿರುವ ನಿಜವಾದ ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂದು ಟಿವಿಕೆ ಮುಖ್ಯಸ್ಥ ಹಾಗೂ ನಟ ವಿಜಯ್ ನೀಡಿದ್ದ ಹೇಳಿಕೆ ತಮಿಳುನಾಡಿನಲ್ಲಿ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಸ್ಪಷ್ಟನೆ ನೀಡಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಡಿಎಂಕೆಯೊಂದಿಗೆ ದೃಢವಾಗಿ ನಿಂತಿದೆ. ತಳಮಟ್ಟದ ಕಾಂಗ್ರೆಸ್ ಕಾರ್ಯಕರ್ತರು ಟಿವಿಕೆಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ವಿಜಯ್ ಹೇಳಿಕೆ ಸಂಪೂರ್ಣ ಸುಳ್ಳು ಎಂದಿದ್ದಾರೆ. “ವಿಜಯ್ ಒಬ್ಬ ಅಪ್ರಬುದ್ಧ…

Read More

2nd PUC Results 2026 Toppers: ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳು ಯಾರು? ಇಲ್ಲಿದೆ ವಿಭಾಗವಾರು ಕಂಪ್ಲೀಟ್​​ ಮಾಹಿತಿ

ಬೆಂಗಳೂರು, ಏಪ್ರಿಲ್​​ 09: 2025-26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದುಮ ಶೇಕಡಾ 86.48ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದಿದ್ದ 6,32,200 ಮಂದಿ ಪೈಕಿ 5,46,698 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ದಾಖಲೆ ಮಟ್ಟದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಏರಿಕೆ ಕಂಡಿದೆ. ಕಳೆದ ವರ್ಷ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, ಪ್ರಸಕ್ತ ಸಾಲಿನಲ್ಲಿ ಶೇಕಡಾ 86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಮಧು ಬಂಗಾರಪ್ಪ, ವಿದ್ಯಾರ್ಥಿಗಳ ಸಾಧನೆಗೆ ಸಂತಸ…

Read More

‘ಅಂತ್ಯವನ್ನು ಒಪ್ಪಿಕೊಳ್ಳಿ’: ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅರ್ಜುನ್ ಕಪೂರ್ ಮನಸ್ಥಿತಿ

ಬಾಲಿವುಡ್ ನಟ ಅರ್ಜುನ್ ಕಪೂರ್ (Arjun Kapoor) ಕಳೆದ ಕೆಲವು ಸಮಯದಿಂದ ಸೋಷಿಯಲ್ ಮೀಡಿಯಾದಲ್ಲಿ ಸತತವಾಗಿ ಟ್ರೋಲಿಂಗ್ ಮತ್ತು ನೆಗೆಟಿವಿಟಿಗೆ ಗುರಿಯಾಗುತ್ತಿದ್ದಾರೆ. ಇತ್ತೀಚೆಗಷ್ಟೇ ತಮ್ಮ ತಾಯಿಯ ಜನ್ಮದಿನದಂದು ಭಾವುಕ ಪೋಸ್ಟ್ ಹಂಚಿಕೊಂಡಿದ್ದ ಅವರು, ಜೀವನವು ತಮಗೆ ‘ಕ್ರೂರವಾಗಿ ವರ್ತಿಸುತ್ತಿದೆ’ ಎಂದು ಬರೆದುಕೊಂಡಿದ್ದರು. ಇದೀಗ ಅರ್ಜುನ್ ಹಂಚಿಕೊಂಡಿರುವ ಮತ್ತೊಂದು ಗೂಢಾರ್ಥದ ಸಂದೇಶವು ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಗುರುವಾರ (ಏಪ್ರಿಲ್ 9) ಅರ್ಜುನ್ ಕಪೂರ್ ಅವರು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಒಂದು ಸಾಲನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ, ‘ಅಂತ್ಯವನ್ನು ಒಪ್ಪಿಕೊಳ್ಳಿ, ಅದು…

Read More

ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯ ಮೈಕ್​​ನಿಂದ ಸಂದೇಶ

ದಾವಣಗೆರೆ, (ಏಪ್ರಿಲ್ 09): ಕಾಂಗ್ರೆಸ್ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಉಪಚನಾವಣೆ (Davanagere south By Election) ಎದುರಾಗಿದ್ದು, ಇಂದು (ಏಪ್ರಿಲ್ 09) ಮತದಾನ ನಡೆದಿದೆ. ಮತದಾರರು ಸಹ ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿ ಓಟ್ ಮಾಡುತ್ತಿದ್ದಾರೆ. ಸಂಜೆ 5ರವರೆಗೆ ದಾವಣಗೆರೆ ದಕ್ಷಿಣದಲ್ಲಿ ಶೇಕಡಾ 63.04% ಮತದಾನವಾಗಿದೆ. ಇನ್ನು ಇದರ ಮಧ್ಯೆ ಮಸೀದಿಯಿಂದ ಮಹತ್ವದ ಸಂದೇಶವೊಂದು ಮೊಳಗಿದೆ.ಯಾರು ಮತದಾನ ಮಾಡಿಲ್ಲವೋ ಅವರು ಹೋಗಿ ಮತದಾನ ಮಾಡಿ ಎಂದು ಮಸೀದಿಯ…

Read More

ಭಾರತ ಶೇ 7.8, ಅಮೆರಿಕ ಶೇ. 0.5; ಆರ್ಥಿಕ ಬೆಳವಣಿಗೆ ವೇಗದಲ್ಲಿ ಅಜಗಜಾಂತರ

ವಾಷಿಂಗ್ಟನ್, ಏಪ್ರಿಲ್ 9: ಟ್ಯಾರಿಫ್​ಗಳ ಬರೆ ಎಳೆದು ಜಗತ್ತನ್ನು ಅಲುಗಾಡಿಸಿದ್ದ ಅಮೆರಿಕದ ಆರ್ಥಿಕತೆ (US economy) ಮಂದಗೊಂಡಿದೆ. 2025ರ ಕ್ಯಾಲಂಡರ್ ವರ್ಷದ ಕೊನೆಯ ಕ್ವಾರ್ಟರ್​ನಲ್ಲಿ (ಅಕ್ಟೋಬರ್-ಡಿಸೆಂಬರ್) ಅಮೆರಿಕದ ಜಿಡಿಪಿ ಶೇ. 0.50ರಷ್ಟು ಮಾತ್ರ ಹೆಚ್ಚಿದೆ. ಅಮೆರಿಕದ ವಾಣಿಜ್ಯ ಇಲಾಖೆ ನಿರೀಕ್ಷಿಸಿದುದಕ್ಕಿಂತಲೂ ಕಡಿಮೆ ವೇಗದಲ್ಲಿ ಆರ್ಥಿಕ ಬೆಳವಣಿಗೆ ದಾಖಲಾಗಿದೆ. ಇಲಾಖೆಯು ಈ ಅವಧಿಯಲ್ಲಿ ಶೇ. 0.7ರಷ್ಟು ಜಿಡಿಪಿ ದರದ ನಿರೀಕ್ಷೆ ಮಾಡಿತ್ತು. ಭಾರತದ ಆರ್ಥಿಕತೆಯು ಇದೇ ಅವಧಿಯಲ್ಲಿ (ಅಕ್ಟೋಬರ್-ಡಿಸೆಂಬರ್) ಶೇ. 7.8ರಷ್ಟು ಬೆಳವಣಿಗೆ ಹೊಂದಿದ್ದು ಗಮನಾರ್ಹ. ಹಣಕಾಸು ವರ್ಷದ…

Read More

KKR vs LSG Playing XI: ಟಾಸ್ ಗೆದ್ದ ಲಕ್ನೋ; ಕೆಕೆಆರ್ ತಂಡದಲ್ಲಿ ಬದಲಾವಣೆ

ಇಂದು ಈಡನ್ ಗಾರ್ಡನ್ಸ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (KKR vs LSG) ಮುಖಾಮುಖಿಯಾಗಿವೆ. ಇದು ಈ ಆವೃತ್ತಿಯ 15 ನೇ ಪಂದ್ಯವಾಗಿದೆ. ಇಲ್ಲಿಯವರೆಗೆ ಆತಿಥೇಯ ಕೆಕೆಆರ್ ಒಂದೇ ಒಂದು ಪಂದ್ಯವನ್ನು ಗೆಲ್ಲದೆ ಗೆಲುವಿನ ಖಾತೆ ತೆರೆಯಲು ಎದುರು ನೋಡುತ್ತಿದೆ. ಇತ್ತ ಲಕ್ನೋ ತಂಡ ತನ್ನ ಕೊನೆಯ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಲ್ಲಿ ಬೀಗುತ್ತಿದೆ. ಹೀಗಾಗಿ ಇಂದಿನ ಪಂದ್ಯ ಗೆಲುವಿನ ದೃಷ್ಟಯಿಂದ ಉಭಯ ತಂಡಗಳಿಗೂ ಅತ್ಯಂತ ಮಹತ್ವದಾಗಿದೆ. ಲಕ್ನೋಗೆ ಹೋಲಿಸಿದರೆ, ಕೆಕೆಆರ್ ತಂಡ ಎಲ್ಲಾ…

Read More

2nd PUC District Wise Result 2026: ಯಾವ ಜಿಲ್ಲೆ ಫಸ್ಟ್, ಯಾವುದು ಲಾಸ್ಟ್? ಇಲ್ಲಿದೆ ಜಿಲ್ಲಾವಾರು ಲಿಸ್ಟ್

ಬೆಂಗಳೂರು, (ಏಪ್ರಿಲ್ 09): ಪ್ರಸಕ್ತ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಫಲಿತಾಂಶ (Karnataka 2nd PUC Results 2026) ಏಪ್ರಿಲ್‌ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಆನ್​​ಲೈನ್​​ನಲ್ಲಿ ಪ್ರಕಟಗೊಂಡಿದ್ದು, ಬಳಿಕ ಇದೀಗ ಶಿಕ್ಷಣ ಸಚಿವ ಮಧುಬಂಗಾರಪ್ಪ (Madhu Bangarappa) ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ದಾಖಲೆಯ ರಿಸಲ್ಟ್​ ಬಂದಿದೆ. ಹೌದು…2025-26ನೇ ಸಾಲಿನ ಸೆಕೆಂಡ್ ಪಿಯುಸಿ ಪರೀಕ್ಷೆಯಲ್ಲಿ ಶೇ.86.48ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ…

Read More

ಇಸ್ರೇಲ್ ಹಿಜ್ಬೊಲ್ಲಾ ಮೇಲೆ ದಾಳಿ ಮುಂದುವರಿಸುತ್ತದೆ; ನೆತನ್ಯಾಹು ಎಚ್ಚರಿಕೆ

ಟೆಲ್ ಅವೀವ್, ಏಪ್ರಿಲ್ 9: ಲೆಬನಾನ್‌ನಾದ್ಯಂತ ಮಾರಕ ದಾಳಿಗಳ ನಂತರವೂ ಇಸ್ರೇಲ್ ಹೆಜ್ಬೊಲ್ಲಾ ವಿರುದ್ಧ ತನ್ನ ಮಿಲಿಟರಿ ದಾಳಿಯನ್ನು ಮುಂದುವರಿಸುತ್ತದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಘೋಷಿಸಿದ್ದಾರೆ. ಇಸ್ರೇಲ್​ನ ದಾಳಿಯಲ್ಲಿ ಹೆಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸೆಮ್ ಅವರ ಸೋದರಳಿಯ ಮತ್ತು ಆಪ್ತ ಸಹಾಯಕ ಕೊಲ್ಲಲ್ಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇಸ್ರೇಲ್ ಅಗತ್ಯವಿರುವಲ್ಲೆಲ್ಲ ಹಿಜ್ಬೊಲ್ಲಾ ಮೇಲೆ ದಾಳಿಯನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್…

Read More

ಬಿಸಿಲಿಗೆ ಹೋದ ತಕ್ಷಣ ತಲೆನೋವು ಬರುತ್ತಾ? ಹಾಗಿದ್ರೆ ನಿಮಗೆ ಈ ಸಮಸ್ಯೆ ಇದೆ ಎಂದರ್ಥ!

ಬಿಸಿಲಿನಲ್ಲಿ ಹೊರಗೆ ಹೋದ ತಕ್ಷಣ ಅನೇಕರಿಗೆ ತಲೆನೋವು (Headache) ಬರುತ್ತದೆ. ಇದನ್ನು ಸಾಮಾನ್ಯವೆಂದು ಪರಿಗಣಿಸಿ ನಿರ್ಲಕ್ಷಿಸುವುದು ಸೂಕ್ತವಲ್ಲ, ಏಕೆಂದರೆ ಇದು ದೇಹದಲ್ಲಿನ ಕೆಲವು ಅಸಮತೋಲನದ ಸಂಕೇತವಾಗಿರಬಹುದು. ತಲೆ ಭಾರ, ಕಣ್ಣುಗಳಲ್ಲಿ ಉರಿ, ತಲೆತಿರುಗುವಿಕೆ, ದೌರ್ಬಲ್ಯ, ಅತಿಯಾದ ಬೆವರು ಅಥವಾ ಚಡಪಡಿಕೆ ಮುಂತಾದ ಲಕ್ಷಣಗಳು ಸೂರ್ಯನ ಬೆಳಕಿಗೆ ಒಡ್ಡಿಕೊಂಡ ತಕ್ಷಣ ಕಾಣಿಸಿಕೊಳ್ಳಬಹುದು. ಕೆಲವು ಸಂದರ್ಭಗಳಲ್ಲಿ, ವೇಗದ ಹೃದಯ ಬಡಿತ, ಆಯಾಸ ಕಂಡುಬರಬಹುದು. ಹಾಗಾದರೆ ಈ ರೀತಿಯಾಗುವುದಕ್ಕೆ ಕಾರಣವೇನು, ಈ ಸಮಸ್ಯೆ ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ…

Read More

ತಮ್ಮ ಮೊದಲ ಹೀರೋ ದಳಪತಿ ವಿಜಯ್ ಬಗ್ಗೆ ಪ್ರಿಯಾಂಕಾ ಚೋಪ್ರಾ ಮಾತು: ನಟಿ ಹೇಳಿದ್ದೇನು?

ಪ್ರಿಯಾಂಕಾ ಚೋಪ್ರಾ (Priyanka Chopra), ಈಗ ಹಾಲಿವುಡ್​ನ ಬ್ಯುಸಿ ನಟಿಯರಲ್ಲಿ ಒಬ್ಬರು. ಬಾಲಿವುಡ್​​ನಲ್ಲಿ ಸಹ ದಶಕದ ಕಾಲ ಸ್ಟಾರ್ ನಟಿಯಾಗಿ ಮೆರೆದಿದ್ದರು. ಬಾಲಿವುಡ್, ಹಾಲಿವುಡ್​​ನಲ್ಲೂ ಚಾಪು ಮೂಡಿಸಿರುವ ಪ್ರಿಯಾಂಕಾ ಚೋಪ್ರಾ ಅವರ ಮೊದಲ ಸಿನಿಮಾ ತಮಿಳು ಭಾಷೆಯ ‘ತಮಿಳನ್’. ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ವೃತ್ತಿಜೀವನದ ಆರಂಭದ ದಿನಗಳ ಬಗ್ಗೆ ಮಾತನಾಡಿರುವ ಪ್ರಿಯಾಂಕಾ ಚೋಪ್ರಾ, ‘ತಮಿಳನ್’ ಸಿನಿಮಾ ಬಗ್ಗೆಯೂ ಮಾತನಾಡಿದ್ದಾರೆ. ವಿಶೇಷವಾಗಿ ದಕ್ಷಿಣ ಭಾರತದ ಸೂಪರ್‌ಸ್ಟಾರ್ ದಳಪತಿ ವಿಜಯ್ ಅವರ ಜನಪ್ರಿಯತೆಯನ್ನು ಕಂಡು ತಾವು ಮೊದಲ ಬಾರಿಗೆ ಹೇಗೆ…

Read More