Headlines

nagaraj11081993

ಆಟವಾಡುವಾಗ ಮೊದಲನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು: ಬದುಕಿದ್ದೇ ಪವಾಡ!

ಬೆಂಗಳೂರು, ಏಪ್ರಿಲ್​​ 09: ಆಟವಾಡುವಾಗ ಮೊದಲನೇ ಮಹಡಿಯಿಂದ ಬಿದ್ದು ಮಗುವೊಂದು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನ (Bengaluru) ನಾಯಂಡಳ್ಳಿಯಲ್ಲಿ ನಡೆದಿದೆ. ಆಯತಪ್ಪಿ ಬಿದ್ದ ಪರಿಣಾಮ ಒಂದೂವರೆ ವರ್ಷದ ಹೆಣ್ಣು ಮಗು ಸಹನಾಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಏಪ್ರಿಲ್‌ 6ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಹಡಿಯಿಂದ ಹೆಣ್ಣು ಮಗು ಬೀಳುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಗುವಿನ ಆರೋಗ್ಯದಲ್ಲಿ ಚೇತರಿಕೆ ಇನ್ನು ಗಂಭೀರ ಗಾಯಗೊಂಡಿರುವ ಮಗು ಸಹನಾ ನವೀನ್…

Read More

Video: ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ

ಪುದುಚೇರಿ, ಏಪ್ರಿಲ್ 09: ಇಂದು ಎರಡು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಅದರಲ್ಲಿ ಪುದುಚೇರಿ ಕೂಡ ಒಂದು. ಇಂದು ಬೆಳಗ್ಗೆಯಿಂದಲೇ ಮತದಾನ ಶುರುವಾಗಿದೆ. ಮತದಾರರು ಮತಗಟ್ಟೆಗೆ ಬರುತ್ತಿದ್ದಂತೆ ಒಂದು ಅಚ್ಚರಿ ಕಾದಿತ್ತು. ರೋಬೋಟ್ ನೀಲಾ ಕೈಯಲ್ಲಿ ಹೂವು, ಸ್ವೀಟುಗಳನ್ನು ಹಿಡಿದು ಮತದಾರರನ್ನು ಸ್ವಾಗತಿಸುತ್ತಿರುವುದು ಕಂಡು ಬಂತು. ಪುದುಚೇರಿಯ ಸರ್ಕಾರಿ ಶಾಲೆಯ ಮತದಾನ ಕೇಂದ್ರದಲ್ಲಿ ನೀಲಾ ಎಂಬ ರೋಬೋಟ್ ಮತದಾರರನ್ನು ಸ್ವಾಗತಿಸುತ್ತಿದೆ, ಮತದಾನದ ಅನುಭವಕ್ಕೆ ತಂತ್ರಜ್ಞಾನದ ಟಚ್ ಸಿಕ್ಕಂತಾಗಿದೆ.   ವಿಡಿಯೋ ಸುದ್ದಿಗಳಿಗಾಗಿ…

Read More

ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ

ಬಳ್ಳಾರಿ, ಏಪ್ರಿಲ್ 9: ಬಳ್ಳಾರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬುಧವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಹಗರಿ ಗ್ರಾಮದ ಬಳಿ ರೈಲು ಚಲಿಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ತಕ್ಷಣ ರೈಲು ನಿಲ್ಲಿಸಿ ಬೆಂಕಿ ನಂದಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ನಂದಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಚಾರಣಿಗರ ಸುರಕ್ಷತೆಗೆ ಸರ್ಕಾರದ ಮಾಸ್ಟರ್ ಪ್ಲಾನ್: ಕಡ್ಡಾಯವಾಗಲಿದೆ ಟ್ರ್ಯಾಕಿಂಗ್ ಆ್ಯಪ್, ವಿಮೆ ! ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು, ಏಪ್ರಿಲ್ 9: ಕರ್ನಾಟಕದ (Karnataka) ಗಿರಿಶ್ರೇಣಿಗಳಲ್ಲಿ ಚಾರಣಕ್ಕೆ (Trekking) ಹೋಗುವವರ ಸುರಕ್ಷತೆಯನ್ನು ಖಚಿತಪಡಿಸಲು ಅರಣ್ಯ ಇಲಾಖೆಯು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಚಂದ್ರದ್ರೋಣ ಪರ್ವತ ಶ್ರೇಣಿ ಮತ್ತು ಕೊಡಗಿನ ತಡಿಯಂಡಮೋಳ್​​ನಲ್ಲಿ ಇತ್ತೀಚೆಗೆ ಚಾರಣಿಗರು ನಾಪತ್ತೆಯಾದ ಆತಂಕಕಾರಿ ಪ್ರಕರಣಗಳ ಹಿನ್ನೆಲೆಯಲ್ಲಿ, ಸಚಿವ ಈಶ್ವರ ಖಂಡ್ರೆ ಅವರು ದೇಶಕ್ಕೇ ಮಾದರಿಯಾಗುವಂತಹ ಪ್ರಮಾಣಿತ ಕಾರ್ಯವಿಧಾನ (SOP) ರೂಪಿಸಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೊಸ SOP ನಲ್ಲಿ ಏನೇನು ಇರಲಿದೆ? ಹೊಸ ಪ್ರಮಾಣಿತ ಕಾರ್ಯವಿಧಾನದಲ್ಲಿ ಏನೇನು…

Read More

IPL 2026: ಐಪಿಎಲ್​ ನಡುವೆ 5 ಹೊಸ ನಿಯಮಗಳು ಜಾರಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ 19ನೇ ಆವೃತ್ತಿಯಲ್ಲಿ ಪಂದ್ಯದ ಶಿಸ್ತು ಮತ್ತು ಸಮಯ ಪಾಲನೆಯನ್ನು ಕಾಪಾಡಿಕೊಳ್ಳಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಮುಖ್ಯವಾಗಿ ಪಂದ್ಯದ ವೇಳೆ ತಂಡದ ‘ಬೆಂಚ್ ಆಟಗಾರರ’ (ಆಡದ ಆಟಗಾರರು) ಅನಗತ್ಯ ಓಡಾಟಕ್ಕೆ ಬಿಸಿಸಿಐ ಕಡಿವಾಣ ಹಾಕಿದೆ. ಪಂದ್ಯದ ವೇಳೆ ಮೈದಾನದ ಒಳಗೆ ಮತ್ತು ಬೌಂಡರಿ ಗೆರೆಯ ಸುತ್ತ ಉಂಟಾಗುವ ಗೊಂದಲಗಳನ್ನು ತಪ್ಪಿಸಲು ಈ ಕೆಳಗಿನ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ: ಮೈದಾನ ಪ್ರವೇಶಕ್ಕೆ ನಿರ್ಬಂಧ: ತಂಡದ…

Read More

ಧುರಂಧರ್ ರಣವೀರ್ ಸಿಂಗ್ ಸಿನಿಮಾ ಎಂದು ಹೇಳಲು ಸಾಧ್ಯವಿಲ್ಲ; ಕರೀನಾ ಕಪೂರ್

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar Movie) ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಸೃಷ್ಟಿಸಿದೆ. ಈ ಚಿತ್ರದ ಎರಡೂ ಭಾಗಗಳನ್ನು ಪ್ರೇಕ್ಷಕರನ್ನು ರಂಜಿಸಿವೆ. ಬಾಲಿವುಡ್‌ನಿಂದ ಟಾಲಿವುಡ್‌ವರೆಗೆ.. ಅನೇಕ ನಟರು ಇದನ್ನು ಹೊಗಳುತ್ತಿದ್ದಾರೆ. ಅದೇ ರೀತಿ, ನಟಿ ಕರೀನಾ ಕಪೂರ್ ಅವರ ಪ್ರತಿಕ್ರಿಯೆಯ ಬಗ್ಗೆ ಪ್ರಸ್ತುತ ಸಾಕಷ್ಟು ಚರ್ಚೆ ನಡೆಯುತ್ತಿದೆ. ‘ಧುರಂಧರ್’ ಚಿತ್ರದ ಯಶಸ್ಸಿಗೆ ಅವರು ನೀಡಿದ ಪ್ರತಿಕ್ರಿಯೆಗಾಗಿ ನೆಟ್ಟಿಗರು ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ‘ಫೈನಾನ್ಷಿಯಲ್ ಟೈಮ್ಸ್’ ಗೆ ನೀಡಿದ ಸಂದರ್ಶನದಲ್ಲಿ ಕರೀನಾ ಅವರು ಧುರಂಧರ್…

Read More

‘ಡಕೈತ್’ ಸಿನಿಮಾದಿಂದ ಶ್ರುತಿ ಹಾಸನ್ ಹೊರಬಂದಿದ್ದೇಕೆ?

ಅಡಿವಿ ಶೇಷ್ (Adivi Sesh) ನಟನೆಯ ‘ಡಕೈತ್’ (Dacoit) ಸಿನಿಮಾ ಇದೇ ವಾರ ಬಿಡುಗಡೆ ಆಗಲಿದೆ. ಈ ಮೊದಲು ಈ ಸಿನಿಮಾ ‘ಟಾಕ್ಸಿಕ್’ ಎದುರು ಬಿಡುಗಡೆಗೆ ಸಜ್ಜಾಗಿತ್ತು. ಆದರೆ ಸಿನಿಮಾ ಬಿಡುಗಡೆಯನ್ನು ಮುಂದೂಡಿ ಈಗ ನಾಳೆ ಅಂದರೆ ಏಪ್ರಿಲ್ 10ಕ್ಕೆ ತೆರೆಗೆ ಬರಲಿದೆ. ಈ ಸಿನಿಮಾದ ಮೊದಲ ಪ್ರೋಮೊ ಬಿಡುಗಡೆ ಆದಾಗ ಸಿನಿಮಾ ನಾಯಕಿ ಆಗಿದ್ದಿದ್ದು ಶ್ರುತಿ ಹಾಸನ್. ಅವರು ನಟಿಸಿದ್ದ ಪ್ರೋಮೊ ಸಹ ಒಂದು ಬಿಡುಗಡೆ ಆಗಿತ್ತು. ಆದರೆ ಅದಾದ ಕೆಲ ತಿಂಗಳ ಬಳಿಕ ಶ್ರುತಿ…

Read More

Video: ಮಗಳ ತೊಡೆ ಮೇಲೆ ತಲೆಯಿಟ್ಟು ಹಾಯಾಗಿ ಮಲಗಿದ ತಂದೆ; ಎಷ್ಟು ಚಂದ ನೋಡಿ ಈ ಬಾಂಧವ್ಯ

ಹೆಣ್ಣು ಮಕ್ಕಳಿಗೆ ತಂದೆಯೆಂದರೆ (father) ಪ್ರಪಂಚ. ಅದೇ ರೀತಿ ತಂದೆಗೂ ತಮ್ಮ ಮುದ್ದು ಮಗಳೆಂದರೆ ಅದೇನೋ ವಿಶೇಷ ಪ್ರೀತಿ ಹಾಗೂ ಕಾಳಜಿ. ತಂದೆ ಮಗಳ ಬಾಂಧವ್ಯ ಸಾರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ಇಲ್ಲೊಬ್ಬಳು ಮಗಳು ತನ್ನ ತಂದೆಗೆ ಎರಡನೇ ತಾಯಿಯಾಗಿದ್ದಾಳೆ. ತನ್ನ ತಂದೆಯನ್ನು ತೊಡೆ ಮೇಲೆ ಮಲಗಿಸಿಕೊಂಡಿದ್ದು, ತಂದೆ ತಲೆಯಿಟ್ಟು ನಿದ್ರಿಸುತ್ತಿರುವ ವಿಡಿಯೋ ವೈರಲ್ ಆಗಿದೆ. theiconictrolls ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಂದೆ ಮಗಳ ಬಾಂಧವ್ಯ ಸಾರುವ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ…

Read More

ಹಿಂದೂ ದೇವರ ಹಾಡು ಹಾಡಿದಾಗ ಸುಹಾನಾಗೆ ಆದ ತೊಂದರೆಗಳು ಒಂದೆರಡಲ್ಲ; ಭದ್ರತೆ ಹೇಗಿತ್ತು?

ಗಾಯಕಿ ಸುಹಾನಾ ಸೈಯ್ಯದ್ (Suhana) ಅವರು ‘ಸರಿಗಮಪ’ ಮೂಲಕ ಫೇಮಸ್ ಆಗಿದ್ದಾರೆ. ಅವರು ಮುಸ್ಲಿಂ ಧರ್ಮದವರಾದರೂ ಹಿಂದೂ ಹಾಡನ್ನು ಹಾಡಿದ್ದರು. ಈ ಮೂಲಕ ಚರ್ಚೆ ಹುಟ್ಟುಹಾಕಿದ್ದರು. ಆ ಬಳಿಕ ಅವರು ರಂಗಭೂಮಿ ಕಲಾವಿದ ನಿತೀನ್ ಶಿವಾಂಶ್ ಜೊತೆ ಮದುವೆ ಆಗಿ ಮತ್ತಷ್ಟು ಚರ್ಚೆ ಹುಟ್ಟುಹಾಕಿದರು. ಅವರು ಮಂತ್ರ ಮಾಂಗಲ್ಯ ಮಾಡಿಕೊಂಡಿದ್ದಾರೆ. ಅವರಿಗೆ ಕೆಲವರು ಅಭಿನಂದನೆ ತಿಳಿಸಿದರೆ, ಇನ್ನೂ ಕೆಲವರು ವಿವಾಹವನ್ನು ಟೀಕೆ ಮಾಡಿದ್ದರು. ಭಕ್ತಿಗೀತೆ ಹಾಡಿದ ಬಳಿಕ ಆದ ಘಟನೆ ಬಗ್ಗೆ ಸುಹಾನಾ ಮಾಹಿತಿ ನೀಡಿದ್ದಾರೆ. ಸುಹಾನಾ…

Read More

ಶಾಂತಿ ಒಪ್ಪಂದದ ನಡುವೆಯೂ ಯುದ್ಧದ ಕಾರ್ಮೋಡ, ಒಪ್ಪಂದ ಮೀರಿದರೆ ಹುಷಾರ್, ಇರಾನ್ ಸುತ್ತ ಸೇನೆ ಜಮಾವಣೆ ಮಾಡಿದ ಟ್ರಂಪ್

ವಾಷಿಂಗ್ಟನ್, ಏಪ್ರಿಲ್ 09: ಅಮೆರಿಕ ಮತ್ತು ಇರಾನ್(Iran) ನಡುವಿನ ಕದನ ವಿರಾಮದ ಘೋಷಣೆಯ ಬೆನ್ನಲ್ಲೇ ಜಾಗತಿಕ ರಾಜಕೀಯದಲ್ಲಿ ಮತ್ತೆ ಯುದ್ಧದ ಕಾರ್ಮೋಡಗಳು ಕವಿಯತೊಡಗಿವೆ. ತಮ್ಮ ‘ಟ್ರುತ್ ಸೋಶಿಯಲ್’ ವೇದಿಕೆಯಲ್ಲಿ ಅಬ್ಬರಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಸರ್ಕಾರಕ್ಕೆ ಅತ್ಯಂತ ಗಂಭೀರ ಎಚ್ಚರಿಕೆ ನೀಡಿದ್ದಾರೆ.ಇರಾನ್ ಸುತ್ತಮುತ್ತ ಅಮೆರಿಕದ ನೌಕಾಪಡೆ, ಯುದ್ಧ ವಿಮಾನಗಳು ಮತ್ತು ಮಿಲಿಟರಿ ಸಿಬ್ಬಂದಿ ಸರ್ವ ಸನ್ನದ್ಧ ಸ್ಥಿತಿಯಲ್ಲಿ ಇರಲಿದ್ದಾರೆ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಹೆಚ್ಚುವರಿ ಮದ್ದುಗುಂಡು ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ನಮ್ಮ ಸೇನೆ ಇರಾನ್‌ನ…

Read More