All posts by nagaraj11081993

ನಿರಂತರ ಆಯಾಸವಾಗಿ ಕೈ, ಕಾಲುಗಳಲ್ಲಿ ಜುಮ್ಮೆನಿಸುತ್ತಾ? ಹಾಗಿದ್ರೆ ನಿಮ್ಮ ದೇಹದಲ್ಲಿ ಈ ವಿಟಮಿನ್ ಕೊರತೆ ಇದೆ ಎಂದರ್ಥ! – Kannada News | Vitamin B12 Deficiency: Early Warning Signs You Need to Know

ನಮ್ಮ ದೇಹ ಮತ್ತು ಅಂಗಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸಲು, ಜೀವಸತ್ವ (Vitamin) ಅಂದರೆ ವಿಟಮಿನ್ ಮತ್ತು ಖನಿಜಗಳು ಅವಶ್ಯಕ. ದೇಹವು ಪೋಷಕಾಂಶಗಳನ್ನು ಸರಿಯಾಗಿ ಪಡೆಯದಿದ್ದರೆ, ದೈಹಿಕ ಕಾರ್ಯಗಳಿಗೆ ಅಡ್ಡಿಯಾಗುತ್ತದೆ ಮತ್ತು ಅಂಗಗಳು ಸರಿಯಾಗಿ ಕೆಲಸ ಮಾಡುವುದಿಲ್ಲ. ಅದೇ ರೀತಿ, ಜೀವಸತ್ವಗಳು ಮತ್ತು ಖನಿಜಗಳನ್ನು ಒಳಗೊಂಡಿರುವ ಪೋಷಕಾಂಶಗಳನ್ನು ಹೊಂದಿರುವ ಸಮತೋಲಿತ ಆಹಾರವು ದೇಹದ ಬೆಳವಣಿಗೆ, ರೋಗನಿರೋಧಕ ಶಕ್ತಿ ಮತ್ತು ಜೀವನ ಪ್ರಕ್ರಿಯೆಗಳಿಗೆ ಸಹಾಯ ಮಾಡುತ್ತದೆ. ಅಂತಹ ಪ್ರಮುಖ ಜೀವಸತ್ವಗಳಲ್ಲಿ ವಿಟಮಿನ್ ಬಿ 12 (Vitamin B12) ಕೂಡ ಒಂದು. ಇದು ದೇಹದಲ್ಲಿ ಕೆಂಪು ರಕ್ತ ಕಣಗಳು, ನರಗಳ ಆರೋಗ್ಯ ಮತ್ತು ಡಿಎನ್‌ಎ ರಚನೆಗೆ ಅಗತ್ಯವಾದ ಪೋಷಕಾಂಶವಾಗಿದೆ. ಅನೇಕರು ಇದರ ಕೊರತೆಯ ಬಗ್ಗೆ ಗಮನ ಹರಿಸುವುದಿಲ್ಲ, ಆದರೆ ಇದು ದೇಹಕ್ಕೆ ಬಹಳ ಅವಶ್ಯಕವಾಗಿದೆ. ಇದರ ಕೊರತೆಯಿದ್ದಾಗ, ದೈಹಿಕ ಮತ್ತು ನರವೈಜ್ಞಾನಿಕ ಸಂಬಂಧಿತ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಅಷ್ಟೇ ಅಲ್ಲ, ಇದು ಅಗತ್ಯಕ್ಕಿಂತ ಕಡಿಮೆ ಇದ್ದಾಗ ದೇಹದಲ್ಲಿ ವಿವಿಧ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಹೌದು ಅವುಗಳ ಬಗ್ಗೆ ತಿಳಿದು ನಿಮಗೂ ಕೂಡ ಈ ರೀತಿಯಾದಾಗ ನಿರ್ಲಕ್ಷ್ಯ ಮಾಡಬಾರದು.

ವಿಟಮಿನ್ ಬಿ 12 ಕೊರತೆಯ ಲಕ್ಷಣಗಳು:

ಕೈ ಮತ್ತು ಕಾಲುಗಳಲ್ಲಿ ಜುಮ್ಮೆನಿಸುವಿಕೆ: ವಿಟಮಿನ್ ಬಿ 12 ಕೊರತೆಯು ನರಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ. ಕೆಲವರಲ್ಲಿ ಕೈ ಮತ್ತು ಕಾಲುಗಳಲ್ಲಿ ಜುಮ್ಮೆನಿಸುವಿಕೆ ಅಥವಾ ಮರಗಟ್ಟುವಿಕೆ ಉಂಟಾಗುತ್ತದೆ.

ನಿರಂತರ ಆಯಾಸ: ವಿಟಮಿನ್ ಬಿ 12 ಕೊರತೆಯು ತೀವ್ರ ಆಯಾಸಕ್ಕೆ ಕಾರಣವಾಗಬಹುದು. ಈ ಕೊರತೆಯು ದೇಹಕ್ಕೆ ಸಾಕಷ್ಟು ಆಮ್ಲಜನಕವನ್ನು ಪಡೆಯುವುದನ್ನು ತಡೆಯುತ್ತದೆ.

ಉಸಿರಾಟದ ತೊಂದರೆ: ಕೆಂಪು ರಕ್ತ ಕಣಗಳ ರಚನೆಗೆ ವಿಟಮಿನ್ ಬಿ 12 ಬಹಳ ಮುಖ್ಯ. ಆದ್ದರಿಂದ, ಇದರ ಕೊರತೆಯು ರಕ್ತಹೀನತೆಗೆ ಕಾರಣವಾಗುತ್ತದೆ. ಇದರಿಂದ ಆಮ್ಲಜನಕದ ಕೊರತೆಯಾಗಿ ಉಸಿರಾಟದ ತೊಂದರೆ ಉಂಟಾಗುತ್ತದೆ.

ಇದನ್ನೂ ಓದಿ: ವಿಟಮಿನ್ ಬಿ12 ಕೊರತೆ ಇದ್ದು ನೀವು ಸಸ್ಯಾಹಾರಿಗಳಾಗಿದ್ದರೆ ಈ 4 ಸೊಪ್ಪುಗಳನ್ನು ತಪ್ಪದೆ ತಿನ್ನಿ!

ಮಸುಕಾದ ಚರ್ಮ: ವಿಟಮಿನ್ ಬಿ 12 ಕೊರತೆಯು ಚರ್ಮವು ಮಸುಕಾಗಲು ಕಾರಣವಾಗುತ್ತದೆ. ದೇಹವು ಸಾಕಷ್ಟು ಕೆಂಪು ರಕ್ತ ಕಣಗಳನ್ನು ಉತ್ಪಾದಿಸಲು ಸಾಧ್ಯವಾಗದ ಕಾರಣ ಇದು ರಕ್ತಹೀನತೆಗೆ ಕಾರಣವಾಗುತ್ತದೆ.

ನರಮಂಡಲಕ್ಕೆ ಸಂಬಂಧಿಸಿದ ಸಮಸ್ಯೆಗಳು: ವಿಟಮಿನ್ ಬಿ 12 ಕೊರತೆಯು ಮೆಮೊರಿ ಸಮಸ್ಯೆಗಳು, ನರಗಳಿಗೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ತಜ್ಞರು ಹೇಳುತ್ತಾರೆ.

ಇಂತಹ ಲಕ್ಷಣ ನಿಮ್ಮಲ್ಲಿ ಕಂಡುಬಂದರೂ ಕೂಡ ತಕ್ಷಣ ವೈದ್ಯರನ್ನು ಸಂಪರ್ಕಿಸಲು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

New Year 2026: ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು – Kannada News | New Year 2026 Security: Bengaluru Expects Over 10 Lakh Revelers; Focus on Womens Safety and Crowd Management

ಬೆಂಗಳೂರು, ಡಿಸೆಂಬರ್ 28: ಹೊಸ ವರ್ಷ 2026ರ ಆಚರಣೆಗೆ ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಈ ಬಾರಿ 10 ಲಕ್ಷಕ್ಕೂ ಹೆಚ್ಚು ಜನರು ಆಚರಣೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಜನದಟ್ಟಣೆ ನಿರ್ವಹಣೆಗೆ ವಿಶೇಷ ಸೂಚನೆ ನೀಡಲಾಗಿದೆ. ಮಹಿಳೆಯರ ಸುರಕ್ಷತೆಗೆ ಅತ್ಯುನ್ನತ ಆದ್ಯತೆ ನೀಡಲಾಗಿದೆ. ಬಾರ್, ರೆಸ್ಟೋರೆಂಟ್ ಮತ್ತು ಮಾಲ್‌ಗಳೊಂದಿಗೆ ಸಭೆ ನಡೆಸಿ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ. ಕುಡಿದು ಅಸ್ವಸ್ಥರಾದವರಿಗೆ 15 ಸುರಕ್ಷತಾ ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಆಂಬುಲೆನ್ಸ್, ಅಗ್ನಿಶಾಮಕ ವಾಹನಗಳು ಹಾಗೂ ಡ್ರೋನ್ ಕ್ಯಾಮರಾಗಳ ಮೂಲಕ ನಿಗಾವಹಿಸಲಾಗುತ್ತದೆ. ಇದೇ ವೇಳೆ, ಕಲಬುರಗಿಯಲ್ಲಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಹೊಸ ಮದ್ಯ ಮಾರಾಟ ಮಾರ್ಗಸೂಚಿಗಳಿಲ್ಲ ಎಂದು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ? – Kannada News | Bigg Boss Kannada 12: Spandana and Malu were in trouble

ಬಿಗ್​​ಬಾಸ್ ಕನ್ನಡ ಸೀಸನ್ 12ರಲ್ಲಿ (Bigg Boss Kannada) ನಿನ್ನೆ (ಡಿಸೆಂಬರ್ 27)ರ ರಾತ್ರಿ ಒಂದು ಭರ್ಜರಿ ಎಲಿಮಿನೇಷನ್ ನಡೆದಿದೆ. ಯಾರೂ ಊಹಿಸದ ಸ್ಪರ್ಧಿಯೊಬ್ಬರು ಹೊರಗೆ ಹೋಗಿದ್ದಾರೆ. ಸೂರಜ್ ಅವರನ್ನು ಮನೆಯಿಂದ ಹೊರಗೆ ಕಳಿಸಲಾಗಿದೆ. ಈ ವಾರ ಡಬಲ್ ಎಲಿಮಿನೇಷನ್ ಇದ್ದು, ಮತ್ತೊಬ್ಬ ಸ್ಟ್ರಾಂಗ್ ಅಭ್ಯರ್ಥಿ ಮನೆಯಿಂದ ಹೊರಗೆ ಹೋಗುವುದು ಪಕ್ಕಾ ಆಗಿದೆ. ಸ್ಪಂದನಾ ಮತ್ತು ಮಾಳು ಇಬ್ಬರಲ್ಲಿ ಒಬ್ಬ ಸ್ಪರ್ಧಿ ಮನೆಯಿಂದ ಹೊರಗೆ ಹೋಗಲಿದ್ದಾರೆ. ಇಬ್ಬರೂ ಕಾರು ಹತ್ತಿದ್ದು, ಒಬ್ಬರು ಹೊರ ಹೋದರೆ ಒಬ್ಬರು ಉಳಿದುಕೊಂಡಿದ್ದಾರೆ. ಯಾರದು?

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್’ ತಡೆಯೋರು ಯಾರೂ ಇಲ್ಲ: ಸಾವಿರ ಕೋಟಿ ರೂ. ದಾಟಿದರೂ ನಿಂತಿಲ್ಲ ಹವಾ – Kannada News | Dhurandhar Box Office Collection: Ranveer Singh movie total collection in India and Overseas

‘ಧುರಂಧರ್’ ಸಿನಿಮಾ (Dhurandhar Movie) ಬಿಡುಗಡೆ ಆಗಿ 23 ದಿನಗಳ ಕಳೆದಿವೆ. ಯಶಸ್ವಿಯಾಗಿ 25ನೇ ದಿನಕ್ಕೆ ಈ ಸಿನಿಮಾ ಕಾಲಿಡುತ್ತಿದೆ. ಅಕ್ಷರಶಃ ಈ ಸಿನಿಮಾ 25 ದಿನಗಳ ಹೌಸ್​ಫುಲ್ ಪ್ರದರ್ಶನ ಕಂಡಿದೆ. ಅದರ ಪರಿಣಾಮವಾಗಿ ಬಾಕ್ಸ್ ಆಫೀಸ್​​ನಲ್ಲಿ ಹಣದ ಹೊಳೆ ಹರಿದಿದೆ. ಜನರು ಮುಗಿಬಿದ್ದು ‘ಧುರಂಧರ್’ ಸಿನಿಮಾ ವೀಕ್ಷಿಸಿದ್ದಾರೆ. 23ನೇ ದಿನವಾದ ಶನಿವಾರ (ಡಿಸೆಂಬರ್ 27) ಕೂಡ ಈ ಚಿತ್ರಕ್ಕೆ ಭರ್ಜರಿ ಕಲೆಕ್ಷನ್ ಆಗಿದೆ. ರಣವೀರ್ ಸಿಂಗ್ (Ranveer Singh) ಅಭಿನಯದ ಈ ಸಿನಿಮಾಗೆ ಈವರೆಗೂ ಭಾರತದ ಮಾರುಕಟ್ಟೆಯಲ್ಲಿ 668 ಕೋಟಿ ರೂಪಾಯಿ ಕಲೆಕ್ಷನ್ (Dhurandhar Box Office Collection) ಆಗಿದೆ. ವಿದೇಶದ ಗಳಿಕೆಯನ್ನೂ ಸೇರಿಸಿದರೆ 1024 ಕೋಟಿ ರೂಪಾಯಿ ಮೀರಲಿದೆ!

ಆದಿತ್ಯ ಧಾರ್ ನಿರ್ದೇಶನ ಮಾಡಿರುವ ‘ಧುರಂಧರ್’ ಸಿನಿಮಾದಲ್ಲಿ ದೇಶಭಕ್ತಿ ಕಥಾಹಂದರ ಇದೆ. ಪಾಕಿಸ್ತಾನದಲ್ಲಿ ನಡೆದ ರಿಯಲ್ ಘಟನೆಗಳನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಪ್ರೇಕ್ಷಕರಿಗೆ ಈ ಸಿನಿಮಾ ಬಹಳ ಇಷ್ಟ ಆಗಿದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮವಾದ ಬಾಯಿ ಮಾತಿನ ಪ್ರಚಾರ ಸಿಕ್ಕಿದೆ. 23 ದಿನ ಕಳೆದು, 24ನೇ ದಿನಕ್ಕೆ ಕಾಲಿಟ್ಟರೂ ಕೂಡ ಈ ಸಿನಿಮಾ ಭರ್ಜರಿಯಾಗಿ ಕಲೆಕ್ಷನ್ ಮಾಡುತ್ತಲೇ ಇದೆ.

ಪ್ರತಿ ವೀಕೆಂಡ್ ಕೂಡ ‘ಧುರಂಧರ್’ ಸಿನಿಮಾಗೆ ಹಣದ ಹೊಳೆ ಹರಿದಿದೆ. ಡಿಸೆಂಬರ್ 27ರಂದು ಅಂದಾಜು 20.50 ಕೋಟಿ ರೂಪಾಯಿ ಆಗಿದೆ. ಭಾನುವಾರ (ಡಿಸೆಂಬರ್ 28) ಕೂಡ ಖಂಡಿತವಾಗಿ ಕಲೆಕ್ಷನ್ ಹೆಚ್ಚಾಗಲಿದೆ. ಆ ಮೂಲಕ ಅನಾಯಾಸವಾಗಿ ‘ಧುರಂಧರ್’ ಸಿನಿಮಾ ಭಾರತದ ಮಾರುಕಟ್ಟೆಯಲ್ಲೇ 700 ಕೋಟಿ ರೂಪಾಯಿ ಗಡಿ ದಾಟಲಿದೆ.

ಎಷ್ಟೇ ಹೊಸ ಸಿನಿಮಾಗಳು ಬಿಡುಗಡೆ ಆದರೂ ಕೂಡ ‘ಧುರಂಧರ್’ ಸಿನಿಮಾದ ಗಳಿಕೆ ಮೇಲೆ ಪರಿಣಾಮ ಬೀರಲು ಸಾಧ್ಯವಾಗಿಲ್ಲ. ‘ಅಖಂಡ 2’, ‘ದಿ ಡೆವಿಲ್’, ‘ಮಾರ್ಕ್’, ‘45’, ‘ವೃಷಭ’, ‘ಅವತಾರ್ 3’, ‘ಅನಾಕೊಂಡ’, ‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ ಮುಂತಾದ ಸಿನಿಮಾಗಳ ಪೈಪೋಟಿಯ ನಡುವೆಯೂ ‘ಧುರಂಧರ್’ ಸಿನಿಮಾ ಅಬ್ಬರಿಸುತ್ತಿದೆ.

ಇದನ್ನೂ ಓದಿ: ‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ

ವೀಕೆಂಡ್ ಮತ್ತು ಹೊಸ ವರ್ಷದ ಸಂಭ್ರಮದಲ್ಲಿ ‘ಧುರಂಧರ್’ ಸಿನಿಮಾದ ಕಲೆಕ್ಷನ್ ಇನ್ನಷ್ಟು ಹೆಚ್ಚಾಗಲಿದೆ. ಹೊಸ ವರ್ಷದ ಆರಂಭದಲ್ಲಿ ಕೂಡ ಈ ಸಿನಿಮಾದ ಅಬ್ಬರ ಮುಂದುವರಿಯಲಿದೆ. ರಣವೀರ್ ಸಿಂಗ್ ಜೊತೆ ಸಾರಾ ಅರ್ಜುನ್, ಅಕ್ಷನ್ ಖನ್ನಾ, ಸಂಜಯ್ ದತ್, ಅರ್ಜುನ್ ರಾಮ್​​ಪಾಲ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಎಲ್ಲರ ಖ್ಯಾತಿ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೊನೆಯ ಸಿನಿಮಾ: ಅಭಿಮಾನಿಗಳಿಗೆ ಭಾವುಕ ವಿದಾಯ ಹೇಳಿದ ವಿಜಯ್ – Kannada News | Thalapathy Vijay emotional speech at Jana Nayagan movie event

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ನಿನ್ನೆ (ಡಿಸೆಂಬರ್ 27) ಮಲೇಷ್ಯಾನಲ್ಲಿ ಬಲು ಅದ್ಧೂರಿಯಾಗಿ ನಡೆದಿದೆ. ರಾಜಕೀಯ ಪಕ್ಷ ಸ್ಥಾಪಿಸಿರುವ ವಿಜಯ್ ಅವರು, ‘ಜನ ನಾಯಗನ್’ ತಮ್ಮ ಕೊನೆಯ ಸಿನಿಮಾ ಎಂದು ಈಗಾಗಲೇ ಘೋಷಣೆ ಮಾಡಿದ್ದಾರೆ. ನಿನ್ನೆ ನಡೆದ ಕಾರ್ಯಕ್ರಮವೂ ಸಹ ಒಂದು ರೀತಿ ವಿಜಯ್ ಅವರಿಗೆ ಚಿತ್ರರಂಗದಿಂದ ವಿದಾಯ ಕೊಡುವಂತೆಯೇ ಇತ್ತು. ತಮಿಳಿನ ಖ್ಯಾತ ಯುವ ನಿರ್ದೇಶಕರುಗಳಾದ ಅಟ್ಲಿ, ಲೋಕೇಶ್ ಕನಗರಾಜ್ ಇನ್ನೂ ಕೆಲವರು ಕಾರ್ಯಕ್ರಮದಲ್ಲಿ ಹಾಜರಿದ್ದು, ವಿಜಯ್ ಅವರನ್ನು ಕೊಂಡಾಡಿದರು. ಕೊನೆಯಲ್ಲಿ ವಿಜಯ್ ಸಹ ತುಸು ಭಾವುಕವಾಗಿಯೇ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ್ದಾರೆ.

‘ಜನ ನಾಯಗನ್ ನನ್ನ ಕೊನೆಯ ಸಿನಿಮಾ, ಇದನ್ನು ಹೇಳುವುದೇ ನನಗೆ ಸ್ವಲ್ಪ ಕಷ್ಟವಾಗುತ್ತಿದೆ. ಆದರೆ ಬೇರೆ ಆಯ್ಕೆ ಇಲ್ಲ’ ಎಂದಿದ್ದಾರೆ ವಿಜಯ್. ‘ಅಭಿಮಾನಿಗಳು ಕೇಳುತ್ತಿದ್ದಾರೆ, ನೀವೇಕೆ ಸಿನಿಮಾ ಬಿಟ್ಟು ಹೋಗುತ್ತಿದ್ದೀರಿ ಎಂದು, ನಾನು ಬೀಚ್ ಬದಿ ಸಣ್ಣ ಮನೆ ಕಟ್ಟಿಕೊಳ್ಳೋಣ ಎಂದುಕೊಂಡೆ, ಆದರೆ ಅಭಿಮಾನಿಗಳು ದೊಡ್ಡ ಕೋಟೆಯನ್ನೇ ಕಟ್ಟಿಕೊಟ್ಟಿದ್ದೀರಿ. ನಾನು ನಟನೆಗೆ ಬಂದಾಗಿನಿಂದ ಈಗಿನ ವರೆಗೂ ಅಭಿಮಾನಿಗಳು ನನ್ನ ಜೊತೆಗೆ ಇದ್ದೀರಿ, ನನಗೆ ಬೆಂಬಲಿಸಿದ್ದೀರಿ, ನನಗೆ ಬೇಕಾದ ಎಲ್ಲವನ್ನೂ ನೀಡಿದ್ದೀರಿ, ಆದರೆ ಮುಂದಿನ ನನ್ನ ಜೀವನದ 30 ವರ್ಷಗಳನ್ನು ನಾನು ಅಭಿಮಾನಿಗಳಿಗಾಗಿ ಕಳೆಯಬೇಕು ಎಂದುಕೊಂಡಿದ್ದೀನಿ’ ಎಂದರು ವಿಜಯ್.

‘ನನಗಾಗಿ ತಮ್ಮ ಎಲ್ಲವನ್ನೂ ಕೊಟ್ಟಿರುವ ಅಭಿಮಾನಿಗಳಿಗಾಗಿ ನಾನು ನನ್ನ ಪ್ರೀತಿಯ ಸಿನಿಮಾವನ್ನು ಬಿಟ್ಟುಕೊಡುತ್ತಿದ್ದೀನಿ. ಈ ವಿಜಯ್ ಕೇವಲ ಒಳ್ಳೆಯದು ಹೇಳಲು ಬಂದವನಲ್ಲ. ಒಳ್ಳೆಯತನವನ್ನು ಸ್ಥಾಪಿಸಲು ಬಂದವ. ಇದು ನನ್ನ ಕೊನೆಯ ಸಿನಿಮಾ ಆಗಿರಬಹುದು, ಆದರೆ ಇದರ ಅಂತ್ಯದ ಬಳಿಕ ಹೊಸ ಅಧ್ಯಾಯವೇ ಆರಂಭ ಆಗಲಿದೆ’ ಎಂದಿದ್ದಾರೆ ದಳಪತಿ ವಿಜಯ್.

ಇದನ್ನೂ ಓದಿ:‘ಜನ ನಾಯಗನ್ ಬಳಿಕ ಸಿನಿಮಾ ಮಾಡ್ತೀರಾ?’; ಉತ್ತರಿಸಿದ ದಳಪತಿ ವಿಜಯ್

‘ಜನ ನಾಯಗನ್’ ಸಿನಿಮಾ ತಂಡದ ಬಗ್ಗೆ ಮಾತನಾಡಿರುವ ವಿಜಯ್, ‘ಅನಿರುದ್ಧ್ ರವಿಚಂದ್ರನ್ ‘ಮ್ಯೂಸಿಕ್ ಡಿಪಾರ್ಟ್​​ಮೆಂಟ್ ಸ್ಟೋರ್’ ಅವರು ಎಂದಿಗೂ ನಿರಾಶೆ ಮಾಡಿದ್ದೇ ಇಲ್ಲ. ಇನ್ನು ನಿರ್ದೇಶಕ ಎಚ್ ವಿನೋದ್, ಕಮರ್ಶಿಯಲ್ ಸಿನಿಮಾನಲ್ಲಿಯೂ ಸಂದೇಶ ನೀಡುತ್ತಾರೆ’ ಎಂದಿದ್ದಾರೆ. ಸಿನಿಮಾದ ನಾಯಕಿ ಪೂಜಾ ಬಗ್ಗೆ ಮಾತನಾಡಿ, ‘ಪೂಜಾ ತಮಿಳು ಚಿತ್ರರಂಗದ ಮೋನಿಕಾ ಬೆಳ್ಳುಚಿ, ಅವರ ನಟನೆ, ಡ್ಯಾನ್ಸು, ಅಂದಕ್ಕೆ ಸರಿಸಾಟಿ ಇಲ್ಲ’ ಎಂದಿದ್ದಾರೆ. ಇನ್ನೊಬ್ಬ ನಟಿ ಮಮಿತಾ ಬಗ್ಗೆ ಮಾತನಾಡಿ, ‘ಮಮಿತಾ ಡ್ಯೂಡ್ ಮೂಲಕ ಯುವಕರನ್ನು ಚಿತ್ರಮಂದಿರಕ್ಕೆ ಸೆಳೆದಿದ್ದರು, ಈಗ ಈ ಸಿನಿಮಾ ಮೂಲಕ ಕುಟುಂಬವನ್ನು ಸೆಳೆಯಲಿದ್ದಾರೆ. ಇನ್ನು ಪ್ರಕಾಶ್ ರೈ ಹಾಗೂ ನನ್ನ ಕಾಂಬಿನೇಷನ್ ದಶಕಗಳಿಂದಲೂ ಚೆನ್ನಾಗಿದೆ. ಒಳ್ಳೆಯ ಗೆಳೆಯರಿಗಿಂತಲೂ ಒಳ್ಳೆಯ ಎದುರಾಳಿಗಳು ಬಹಳ ಮುಖ್ಯ’ ಎಂದಿದ್ದಾರೆ.

ಮಲೇಷ್ಯಾ ಬಗ್ಗೆಯೂ ಮಾತನಾಡಿದ ವಿಜಯ್, ‘ಮಲೇಷ್ಯಾ, ತಮಿಳು ಚಿತ್ರರಂಗದ ಪಾಲಿಗೆ ಬಹಳ ಮುಖ್ಯವಾದ ಮಾರುಕಟ್ಟೆ ಆಗಿದೆ. ಮಲೇಷ್ಯಾ ಎಂದೊಡನೆ, ನನ್ನ ಗೆಳೆಯ ಅಜಿತ್ ನಟಿಸಿರುವ ‘ಬಿಲ್ಲಾ’, ಸೇರಿದಂತೆ ಇನ್ನೂ ಕೆಲವು ಸಿನಿಮಾಗಳು ನೆನಪಾಗುತ್ತವೆ. ನನ್ನ ಕೊನೆಯ ಸಿನಿಮಾದ ಕಾರ್ಯಕ್ರಮ ಇಲ್ಲಿ ನಡೆಯುತ್ತಿರುವುದು ನನ್ನ ಪಾಲಿಗೆ ವಿಶೇಷವಾದುದು’ ಎಂದಿದ್ದಾರೆ.

‘ಶೀಘ್ರವೇ ಅಭಿಮಾನಿಗಳ ಮುಂದೆ ಸಿನಿಮಾ ಬರಲಿದೆ. ಈ ಬಾರಿ ಒಂಟಿಯಾಗಿ ಬರಲಿದ್ದೇವಾ? ಜಂಟಿಯಾಗಿ ಬರಲಿದ್ದೇವ ಎಂಬ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆ ಕುತೂಹಲ ಹಾಗೆಯೇ ಇರಲಿ ಎಂದಿರುವ ವಿಜಯ್, ಇಷ್ಟು ವರ್ಷ ಒಂಟಿಯಾಗಿಯೇ ಹೋರಾಡಿದ್ದೇವೆ’ ಎಂದೂ ಸಹ ಹೇಳಿದ್ದಾರೆ. ‘ಜನ ನಾಯಗನ್’ ಸಿನಿಮಾ ಜನವರಿ 09 ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪಂಚ ಭಾಷೆಯಲ್ಲಿ ಬಿಡುಗಡೆಗೆ ಸಜ್ಜಾಗಿದೆ ಕನ್ನಡದ ‘ಕರಿಕಾಡ’ ಸಿನಿಮಾ – Kannada News | Karikaada Kannada movie releasing on 6 February 2025 in 5 languages

ಟೀಸರ್ ಮೂಲಕ ‘ಕರಿಕಾಡ’ ಸಿನಿಮಾ (Karikada Movie) ಗಮನ ಸೆಳೆದಿದೆ. ಈಗ ಈ ಸಿನಿಮಾ ಬಿಡುಗಡೆ ಸಿದ್ಧವಾಗಿದೆ. 2026ರ ಫೆಬ್ರವರಿ 6ಕ್ಕೆ ಸಿನಿಮಾ ತೆರೆಕಾಣಿಸಲು ಚಿತ್ರತಂಡ ರೆಡಿಯಾಗಿದೆ. ಪಂಚಭಾಷೆಯಲ್ಲಿ ಬಿಡುಗಡೆ ಆಗಲಿದೆ. ಇದೊಂದು ಅಡ್ವೆಂಚರಸ್ ಎಲಿಮೆಂಟ್ಸ್ ಹೊಂದಿರುವ ಸಿನಿಮಾ ಎಂದು ಚಿತ್ರತಂಡ ಹೇಳಿದೆ. ಟೀಸರ್ ನೋಡಿದ ಬಳಿಕ ಪ್ರೇಕ್ಷಕರಿಗೆ ಈ ಸಿನಿಮಾ ಮೇಲೆ ಭರವಸೆ ಹುಟ್ಟಿದೆ. ಆ್ಯಕ್ಷನ್, ಲವ್ ಸ್ಟೋರಿ, ಅದ್ದೂರಿ ಮೇಕಿಂಗ್, ಪ್ರತಿಭಾವಂತ ಕಲಾವಿದರ ಬಳಗ, ಹಿನ್ನೆಲೆ ಸಂಗೀತ ಸೇರಿದಂತೆ ಹಲವು ಅಂಶಗಳು ‘ಕರಿಕಾಡ’ (Karikada) ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿವೆ.

‘ಕರಿಕಾಡ’ ಸಿನಿಮಾದಲ್ಲಿ ಕಾಡ ನಟರಾಜ್ ಅವರು ಹೀರೋ ಆಗಿ ಅಭಿನಯಿಸಿದ್ದಾರೆ. ಬಲರಾಜವಾಡಿ, ಯಶ್ ಶೆಟ್ಟಿ ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ನಿರೀಕ್ಷಾ ಶೆಟ್ಟಿ ಅವರು ನಾಯಕಿಯಾಗಿದ್ದಾರೆ. ಮಂಜು ಸ್ವಾಮಿ, ದಿವಾಕರ್, ಗೋವಿಂದೇ ಗೌಡ, ಕಾಮಿಡಿ ಕಿಲಾಡಿ ಸೂರ್ಯ, ರಾಕೇಶ್ ಪೂಜಾರಿ, ವಿಜಯ್ ಚಂಡೂರು, ಕರಿಸುಬ್ಬು, ಚಂದ್ರಪ್ರಭ , ಗಿರಿ, ಆರ್ಯನ್, ರಿದ್ಧಿ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

‘ರಿದ್ಧಿ ಎಂಟರ್ಟೈನ್ಮೆಂಟ್ಸ್’ ಮೂಲಕ ಕಾಡ ನಟರಾಜ್ ಅವರ ಪತ್ನಿ ದೀಪ್ತಿ ದಾಮೋದರ್ ಅವರು ನಿರ್ಮಾಣ ಮಾಡಿದ್ದಾರೆ. ಸ್ನೇಹಿತರಾದ ರವಿಕುಮಾರ್ ಎಸ್.ಆರ್. ಕೂಡ ನಿರ್ಮಾಣದ ಸಾಥ್ ನೀಡಿದ್ದಾರೆ. ಈ ಸಿನಿಮಾವನ್ನ ಗಿಲ್ಲಿ ವೆಂಕಟೇಶ್ ಅವರು ನಿರ್ದೇಶಿಸಿದ್ದಾರೆ. ಕಾಡ ನಟರಾಜ ಅವರೇ ಕಥೆ ಬರೆದಿದ್ದಾರೆ. ಅತೀಶಯ್ ಜೈನ್ ಮತ್ತು ಶಶಾಂಕ್ ಶೇಷಾಗಿರಿ ಅವರು ಸಂಗೀತ ನೀಡಿದ್ದಾರೆ.

ಶಶಾಂಕ್ ಶೇಷಾಗರಿ ಅವರು ಹಾಡುಗಳಿಗೆ ಸಂಗೀತ ನೀಡುವುದರ ಜೊತೆ ಹಿನ್ನಲೆ ಸಂಗೀತ ಕೂಡ ನೀಡಿದ್ದಾರೆ. ಜೀವನ್ ಗೌಡ ಅವರು ಛಾಯಾಗ್ರಹಣ ಮಾಡಿದ್ದಾರೆ. ದೀಪಕ್ ಸಿ.ಎಸ್. ಅವರ ಸಂಕಲನ ಈ ಸಿನಿಮಾಗಿದೆ. ‘ಕರಿಕಾಡ’ ಸಿನಿಮಾದ ಟೀಸರ್ ಬಿಡುಗಡೆ ಮಾಡಿದ ಬಳಿಕ ಪರಭಾಷೆ ಮಂದಿ ಕೂಡ ಈ ಚಿತ್ರದ ಬಗ್ಗೆ ಆಸಕ್ತಿ ತೋರಿಸುತ್ತಿದ್ದಾರೆ ಎಂದು ಚಿತ್ರತಂಡ ಹೇಳಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾ: ಎಲಿಜಬೆತ್ ಪಾತ್ರದಲ್ಲಿ ಹುಮಾ ಖುರೇಷಿ; ಫಸ್ಟ್ ಲುಕ್ ರಿಲೀಸ್

ಕನ್ನಡದ ಪ್ರತಿಭೆಗಳು ಮಾಡಿರುವ ಈ ಸಿನಿಮಾವನ್ನು ನೋಡಿ ಬಾಲಿವುಡ್ ಫಿಲ್ಮ್ ಟ್ರೇಡರ್ಸ್ ಹಿಂದಿಯಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. ಫೆಬ್ರವರಿ 6ರಂದು ಸಿನಿಮಾ ಬಿಡುಗಡೆ ಆಗಲಿದೆ. ವಿಶ್ವಾದ್ಯಂತ 1200ಕ್ಕೂ ಅಧಿಕ ಪರದೆಗಳಲ್ಲಿ ಬಿಡುಗಡೆಗೆ ಮಾಡುವ ತಯಾರಿ ನಡೆಯುತ್ತಿದೆ. ಕರ್ನಾಟಕದ ಜೊತೆ ಹಿಂದಿ ಮಾರ್ಕೆಟ್​ನಲ್ಲಿ ಅದ್ದೂರಿಯಾಗಿ ರಿಲೀಸ್ ಮಾಡಲು ಚಿತ್ರತಂಡದ ಪ್ಲ್ಯಾನ್ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ.. – Kannada News | Kannada actor Daali Dhananjaya speech in Belagavi Utsava

ನಟ ಡಾಲಿ ಧನಂಜಯ್ ಅವರು ಬೆಳಗಾವಿ ಉತ್ಸವಕ್ಕೆ (Belagavi Utsava) ತೆರಳಿದ್ದಾರೆ. ಅವರು ವೇದಿಕೆಯಲ್ಲಿ ಮಾತನಾಡಿದ ವಿಡಿಯೋ ಇಲ್ಲಿದೆ. ಸಿನಿಮಾದ ಡೈಲಾಗ್ ಹೇಳುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ‘ಈ ಜನಸಾಗರ ನೋಡಿ ಬಹಳ ಖುಷಿ ಆಯಿತು. ಪ್ರತಿ ಬಾರಿ ಇಲ್ಲಿಗೆ ಬಂದಿದ್ದೇನೆ. ಆದರೆ ಈ ಬಾರಿ ಸೇರಿದ್ದಷ್ಟು ಜನರನ್ನು ನಾನು ನೋಡಿಲ್ಲ. ಬಹಳ ಚೆನ್ನಾಗಿ ಆಯೋಜನೆ ಮಾಡಿದ್ದಾರೆ. ಎಲ್ಲರೂ ಸೇರಿ ಪ್ರೀತಿಯಿಂದ ಮಾಡಿದಾಗ ಎಷ್ಟು ಖುಷಿಯಿಂದ ಜನರು ಸೇರುತ್ತಾರೆ ಎಂಬುದಕ್ಕೆ ಬೆಸ್ಟ್ ಉದಾಹರಣೆ ಇದು. ಬೆಳಗಾವಿಯಲ್ಲಿ ಕನ್ನಡದ ಉತ್ಸವಕ್ಕೆ ಇಷ್ಟು ಜನರು ಸೇರಿರುವುದು ಬಹಳ ಖುಷಿ’ ಎಂದು ಡಾಲಿ ಧನಂಜಯ (Daali Dhananjaya) ಅವರು ಹೇಳಿದರು. ಅಲ್ಲದೇ ‘ಸುಬ್ಬಿ ಅಂಕಲ್​​ನ ಹೊಡಿತೀನಿ ಸುಬ್ಬಿ’ ಎನ್ನುವ ಡೈಲಾಗ್ ಹೇಳಿದಾಗ ಅಭಿಮಾನಿಗಳು ಖುಷಿಯಿಂದ ಕೇಕೆ ಹಾಕಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚಿಕ್ಕೋಡಿ: ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ! – Kannada News | Raibag Horror: Grandfather Makes Minor Drink Alcohol

ಚಿಕ್ಕೋಡಿ, ಡಿಸೆಂಬರ್​​ 28: ಮದ್ಯ ಸೇವಿಸಲು ಬಾರ್​​​ಗೆ ಸ್ನೇಹಿತರು,ಸಂಬಂಧಿಕರನ್ನು ಕರೆದುಕೊಂಡು ಹೋಗೋದನ್ನ ನಾವು ಕೇಳಿದ್ದೇವೆ, ನೋಡಿದ್ದೇವೆ. ಆದ್ರೆ ಬೆಳಗಾವಿಯಲ್ಲೊಬ್ಬ ಪಾಪಿ ಅಜ್ಜ ಮೊಮ್ಮಗನ ಬಾರ್​​ಗೆ ಕರೆದುಕೊಂಡು ಹೋಗಿದ್ದಲ್ಲದೆ ಆತನಿಗೆ ಎಣ್ಣೆ ಕುಡಿಸಿರುವ ವಿಡಿಯೋವೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಬಾರ್​​ ಒಂದರಲ್ಲಿ ಘಟನೆ ನಡೆದಿದ್ದು, ಅಲ್ಲಿದ್ದವರ ವಿರೋಧದ ನಡುವೆಯೂ ಅಜ್ಜ ಚಿಕ್ಕ ಹುಡುಗನಿಗೆ ಕುಡಿಯಲು ಮದ್ಯ ನೀಡಿದ್ದಾನೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಚಳಿಯ ಅಬ್ಬರ, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ – Kannada News | Bengaluru temperature:Dry weather all over karnataka, misty weather in bengaluru

ರಾಜ್ಯದೆಲ್ಲೆಡೆ ಚಳಿಯ ಅಬ್ಬರ, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

ಬೆಂಗಳೂರು, ಡಿಸೆಂಬರ್ 28: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೀತದಲೆಯ ಪ್ರಭಾವ ಹೆಚ್ಚಿದ್ದು, ಕಳೆದ ಹಲವು ತಿಂಗಳಿಂದ ಎಲ್ಲೆಡೆ ಒಣ ಹವೆಯ (Weather Forecast) ವಾತಾವರಣವಿದೆ. ಇಂದೂ ಸಹ ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೆಳಗಿನ ಸಮಯ ದಟ್ಟ ಮಂಜು ಕಾಣಿಸಿಕೊಲ್ಳುವ ಸಾಧ್ಯತೆ ಇದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕೆಂದು ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಮಂಜು

ಇಂದು ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಎಲ್ಲೆಲ್ಲಿ ಒಣ ಹವೆ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್ – Kannada News | Laura Harris equals fastest fifty record in women’s T20s

ಮಹಿಳಾ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಲಾರಾ ಹ್ಯಾರಿಸ್ ಪಾಲಾಗಿದೆ. ನ್ಯೂಝಿಲೆಂಡ್​ನಲ್ಲಿ ನಡೆಯುತ್ತಿರುವ ಸೂಪರ್ ಸ್ಮ್ಯಾಶ್ ಮಹಿಳಾ ಟಿ20 ಟೂರ್ನಿಯಲ್ಲಿ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಲಾರಾ ಈ ದಾಖಲೆ ಬರೆದಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಮೇರಿ ಕೆಲ್ಲಿ ಹೆಸರಿನಲ್ಲಿತ್ತು. 2022 ರಲ್ಲಿ ಗ್ಲೌಸೆಸ್ಟರ್‌ಶೈರ್ ವಿರುದ್ಧದ ಪಂದ್ಯದಲ್ಲಿ ವಾರ್ವಿಕ್‌ಷೈರ್ ಪರ ಕಣಕ್ಕಿಳಿದಿದ್ದ ಕೇವಲ 15 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ಆಸ್ಟ್ರೇಲಿಯನ್ ಆಟಗಾರ್ತಿ ಲಾರಾ ಹ್ಯಾರಿಸ್ ಅಗ್ರಸ್ಥಾನಕ್ಕೇರಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕ್ಯಾಂಟರ್ಬರಿ ಮಹಿಳಾ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 145 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಒಟಾಗೊ ಮಹಿಳಾ ತಂಡದ ಪರ 17 ಎಸೆತಗಳನ್ನು ಎದುರಿಸಿದ ಲಾರಾ ಹ್ಯಾರಿಸ್ 4 ಭರ್ಜರಿ ಸಿಕ್ಸರ್ ಹಾಗೂ 6 ಫೋರ್​ಗಳೊಂದಿಗೆ 52 ರನ್ ಸಿಡಿಸಿದರು.

ಈ ಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಮೂಲಕ ಒಟಾಗೊ ಮಹಿಳಾ ತಂಡ 14.5 ಓವರ್​ಗಳಲ್ಲಿ 146 ರನ್ ಬಾರಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

 

Source link