‘ಜನ ನಾಯಗನ್’ ಯಾಕೆ ವಿಳಂಬ ಆಗಿದೆ ಅಂತ ಕೇಳಿದ್ದಕ್ಕೆ ಸೈಲೆಂಟ್ ಆದ ರಜನಿಕಾಂತ್
ಕಾಲಿವುಡ್ ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ಅವರು ಸದ್ಯ ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ‘ಜೈಲರ್ 2’ (Jailer 2) ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿತ್ರದ ಶೂಟಿಂಗ್ ಹೇಗೆ ನಡೆಯುತ್ತಿದೆ ಹಾಗೂ ತಮ್ಮ ಮುಂದಿನ ಪ್ರಾಜೆಕ್ಟ್‌ಗಳ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ದಳಪತಿ ವಿಜಯ್ ನಟನೆಯ ‘ಜಗ ನಾಯಗನ್’ (Jana Nayagan) ಸಿನಿಮಾದ ವಿಳಂಬದ ಬಗ್ಗೆ ಅವರಿಗೆ ಪ್ರಶ್ನೆ ಎದುರಾಯಿತು. ಸಿನಿಮಾ ಪ್ರೇಮಿಗಳಲ್ಲಿ ಭಾರೀ ಕುತೂಹಲ ಮೂಡಿಸಿರುವ ‘ಜೈಲರ್ 2’ ಬಗ್ಗೆ…