ಚಾಮರಾಜನಗರ: ಹುಲಿಗೆ ಇಟ್ಟಿದ್ದ ಬೋನಿಗೆ ಬಿದ್ದ 4 ವರ್ಷದ ಚಿರತೆ
ಚಾಮರಾಜನಗರ, ಏಪ್ರಿಲ್ 08: ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಮಹದೇವಸ್ವಾಮಿ ಎಂಬವರ ಜಮೀನಿನಲ್ಲಿ ಹುಲಿ ಸೆರೆಗೆ ಇಟ್ಟಿದ್ದ ಬೋನಿಗೆ 4 ವರ್ಷದ ಚಿರತೆ ಬಿದ್ದಿರುವ ಘಟನೆ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಪಡಗೂರಿನಲ್ಲಿ ಕಳೆದ 10 ದಿನದಿಂದ ಹುಲಿ ಮತ್ತು ಚಿರತೆಗಳ ಓಡಾಟ ಕಂಡುಬಂದಿತ್ತು. ಈ ಹಿನ್ನೆಲೆ ಹುಲಿಯ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇಟ್ಟಿದ್ದರು. ಬೋನಿಗೆ ಬಿದ್ದ ಚಿರತೆಯನ್ನು ಸುರಕ್ಷಿತ ಪ್ರದೇಶಕ್ಕೆ ಬಿಡುವುದಾಗಿ ಅರಣ್ಯ ಇಲಾಖೆಯ ಸಿಬ್ಬಂದಿ ತಿಳಿಸಿದ್ದಾರೆ. ಈಗ ಚಿರತೆ…