All posts by nagaraj11081993

ನಮ್ಮವರು ಬೇರೆ ಭಾಷೆಗೆ ಹೋಗ್ತಾರೆ, ಆದ್ರೆ ಪರಭಾಷೆಯವರು ಬರಲ್ಲ; ಸುದೀಪ್ ಬೇಸರ – Kannada News | Kichcha Sudeep express sadness over other language Actors

ಕನ್ನಡ ಕಲಾವಿದರಿಗೆ ಈಗ ಸಾಕಷ್ಟು ಬೇಡಿಕೆ ಬರುತ್ತಿದೆ. ಅನೇಕ ಸ್ಟಾರ್ ಕಲಾವಿದರು ಪರಭಾಷೆಗೆ ತೆರಳಿ ಅತಿಥಿ ಪಾತ್ರ ಮಾಡಿದ್ದು ಇದೆ. ಶಿವರಾಜ್​​ಕುಮಾರ್ ಅವರು ‘ಜೈಲರ್​’ ಅಲ್ಲಿ, ಉಪೇಂದ್ರ ಅವರು ‘ಕೂಲಿ’ ಚಿತ್ರದಲ್ಲಿಅತಿಥಿ ಪಾತ್ರ ಮಾಡಿದ್ದಾರೆ. ಅತಿಥಿ ಪಾತ್ರಗಳ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ನಮ್ಮ ಕಲಾವಿದರು ಅಲ್ಲಿಗೆ ತೆರಳಿ ಅತಿಥಿ ಪಾತ್ರ ಮಾಡುವ ಬಗ್ಗೆ ಅವರಿಗೆ ಯಾವುದೇ ತಕರಾರು ಇಲ್ಲ. ಆದರೆ, ಅಲ್ಲಿಯವರು ಇಲ್ಲಿಗೆ ಬರೋದಿಲ್ಲ ಎಂಬ ಬೇಸರ ಅವರನ್ನು ಕಾಡುತ್ತಿದೆ.

ಈ ಬಗ್ಗೆ ಸಂದರ್ಶನ ಒಂದರಲ್ಲಿ ಸುದೀಪ್ ಮಾತನಾಡಿದ್ದಾರೆ. ‘ನಾವು ಕನ್ನಡ ಕಲಾವಿದರು ಬೇರೆ ಭಾಷೆಗಳಲ್ಲಿ ಸಾಕಷ್ಟು ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತೇವೆ. ಆದರೆ, ಬೇರೆ ಭಾಷೆಯವರು ನಮ್ಮ ಸಿನಿಮಾಗಳಲ್ಲಿ ನಟಿಸಲು ಸಿದ್ಧರಿರುವುದಿಲ್ಲ’ ಎಂದಿದ್ದಾರೆ ಸುದೀಪ್.

‘ನಮ್ಮ ಸಿನಿಮಾಗಳಲ್ಲಿ ನಟಿಸುವಂತೆ ನಾನು ವೈಯಕ್ತಿಕವಾಗಿ ಕೆಲವು ನಟರನ್ನು ಕೇಳಿಕೊಂಡೆ. ಆದರೆ, ಅದು ಸಾಧ್ಯವಾಗಿಲ್ಲ. ಇದು ಎರಡೂ ಕಡೆಗಳಿಂದ ಹಾಕಬೇಕಾದ ಶ್ರಮ. ಆದರೆ, ಈಗ ನನಗೆ ಅದು ಕಾಣಿಸುತ್ತಿಲ್ಲ’ ಎಂದು ಸುದೀಪ್ ಅವರು ಬೇಸರ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಯುದ್ಧಕ್ಕೆ ಸಿದ್ಧ ಎಂದ ಸುದೀಪ್ ಮಾತಿಗೆ ಅರ್ಜುನ್ ಜನ್ಯ ಮೊದಲ ರಿಯಾಕ್ಷನ್

ಕನ್ನಡದ ಕಲಾವಿದರು ಪರಭಾಷೆಯಲ್ಲಿ ನಟಿಸೋದನ್ನು ಸಾಕಷ್ಟು ಕಾಣಬಹುದು. ಆದರೆ, ಅವರು ಇಲ್ಲಿ ಬಂದು ನಟಿಸಿದ್ದು ಕಡಿಮೆ. ಸುದೀಪ್ ಅವರು ಕೂಡ ಈ ಮೊದಲು ಅತಿಥಿ ಪಾತ್ರ ಮಾಡಿದ್ದರು. ‘ಬಾಹುಬಲಿ’ ಸಿನಿಮಾದಲ್ಲಿ ಅವರು ಅತಿಥಿ ಕಲಾವಿದರಾಗಿ ನಟಿಸಿದ್ದರು.

ಸದ್ಯ ಸುದೀಪ್ ಹೇಳಿದ ಮಾತನ್ನು ಅನೇಕರು ಬೆಂಬಲಿಸಿದ್ದಾರೆ. ಸಂಜಯ್ ದತ್ ಸೇರಿದಂತೆ ಅನೇಕ ಕಲಾವಿದರು ದೊಡ್ಡ ದೊಡ್ಡ ಬಜೆಟ್ ಸಿನಿಮಾಗಳಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದನ್ನು ಹೊರತುಪಡಿಸಿದರೆ ಯಾರೊಬ್ಬರೂ ಸಿನಿಮಾಗಳಲ್ಲಿ ಅತಿಥಿ ಪಾತ್ರ ಮಾಡುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಓಪನ್: ಎಸ್ಟೀಮ್ ಮಾಲ್, ತುಮಕೂರು ರಸ್ತೆ ವಾಹನಗಳ ‌ಮೇಖ್ರೀ ಸರ್ಕಲ್ ಪ್ರವೇಶ ತುಂಬಾ ಸುಲಭ – Kannada News | Hebbal Flyover New Loop Opens: Easy Access to Mekhri Circle for Esteem Mall and Tumakuru Road Vehicles

ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಓಪನ್

ಬೆಂಗಳೂರು, ಡಿಸೆಂಬರ್ 27: ತುಂಬಾ ವರ್ಷಗಳಿಂದ ಕಾಯುತ್ತಾ ಇದ್ದ ವಾಹನ ಸವಾರರಿಗೆ ಕೊನೆಗೂ ಶುಭ ಸುದ್ದಿ ಸಿಕ್ಕಿದೆ. ಹೆಬ್ಬಾಳ ಮೇಲ್ಸೇತುವೆಯ (Hebbal Flyover) ಮತ್ತೊಂದು ಹೊಸ ಲೂಪ್ ರ್ಯಾಂಪ್ ಸಂಚಾರಕ್ಕೆ ಮುಕ್ತ ಆಗಿದೆ. ಇದರಿಂದ ಎಸ್ಟೀಮ್ ಮಾಲ್ ಮತ್ತು ತುಮಕೂರು ರಸ್ತೆ ವಾಹನ ಸವಾರರು ಮೇಖ್ರಿ ಸರ್ಕಲ್ ಪ್ರವೇಶಿಸುವುದಕ್ಕೆ ತುಂಬಾ ಅನುಕೂಲಕವಾಗಲಿದೆ. ಜತೆಗೆ, ಯಲಹಂಕ, ಜಕ್ಕೂರು, ಸಹಕಾರ ನಗರದಿಂದ ನಗರದ ಪ್ರವೇಶಕ್ಕೆ ತುಂಬಾ ಅನುಕೂಲವಾಗಲಿದೆ.

ಕಳೆದ ಆಗಸ್ಟ್ ನಲ್ಲಿ ಕೆಆರ್ ಪುರದಿಂದ ಮೇಖ್ರಿ ಸರ್ಕಲ್ ಕಡೆಗೆ ಲೂಪ್ ರ್ಯಾಂಪ್ ಓಪ‌ನ್ ಆಗಿತ್ತು. ಈಗ ಮತ್ತೆ ಎಸ್ಟೀಮ್ ಮಾಲ್​ನಿಂದ ಮೇಖ್ರಿ ಸರ್ಕಲ್ ಕಡೆಗೆ ಹೊಸ ಲೂಪ್ ರ್ಯಾಂಪ್ ಓಪನ್ ಆಗಿರುವುದು ವಾಹನ ಸವಾರರಿಗೆ ಖುಷಿ ತಂದಿದೆ. ಟ್ರಾಫಿಕ್ ಕಡಿಮೆ ಆಗಿದೆ, ಇದರಿಂದ ತುಂಬಾ ಅನುಕೂಲ ಆಗಿದೆ ಎಂದು ವಾಹನ ಸವಾರರು ಪ್ರತಿಕ್ರಿಯಿಸಿದ್ದಾರೆ.

ಹೊಸ ಲೂಪ್ ರ್ಯಾಂಪ್​​ನಿಂದ ಹೆಬ್ಬಾಳ ಪ್ಲೈ ಓವರ್ ಬಳಿ ಟ್ರಾಫಿಕ್ ಜಾಮ್ ಕಡಿಮೆ ಆಗುತ್ತದೆ. ಆದರೆ ಪ್ಲೈ ಓವರ್ ಮೇಲೆ ಹೋಗುವ ವಾಹನಗಳು ಮೇಖ್ರಿ ಸರ್ಕಲ್ ಬಳಿ ನಿಲ್ಲುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗಲಿದ್ದು, ಅದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ.

ಇದನ್ನೂ ಓದಿ: ಬೆಂಗಳೂರು: ಚಿತ್ರದುರ್ಗ ಬಸ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಡ್ರಂಕ್ ಆ್ಯಂಡ್ ಡ್ರೈವ್ ಮಾಡಿ ಸಿಕ್ಕಿಬಿದ್ದ ಖಾಸಗಿ ಬಸ್ ಚಾಲಕ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹರ್ಮನ್​ಪ್ರೀತ್ ಕೌರ್​ – Kannada News | Captain Harmanpreet Kaur created history in womens T20I

ಶ್ರೀಲಂಕಾ ಮಹಿಳಾ ತಂಡದ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ಮಹಿಳಾ ತಂಡ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕ್ರಮವಾಗಿ 8 ಮತ್ತು 7 ವಿಕೆಟ್​ಗಳ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಮೂರನೇ ಮ್ಯಾಚ್​ನಲ್ಲಿ 8 ವಿಕೆಟ್​ಗಳ ಗೆಲುವು ದಾಖಲಿಸಿದೆ.

Source link

ನವವಿವಾಹಿತೆ ಸೂಸೈಡ್ ಕೇಸ್​ನಲ್ಲಿ ಬಿಗ್ ಟ್ವಿಸ್ಟ್: ನಾಗಪುರದಲ್ಲಿ ಆತ್ಮಹತ್ಯೆಗೆ ಶರಣಾದ ಗಾನವಿ ಪತಿ ಸೂರಜ್! – Kannada News | Big twist in Bengaluru newly wed Ganavi case: Husband Suraj commits Suicide

ನಾಗಪುರದಲ್ಲಿ ಆತ್ಮಹತ್ಯೆಗೆ ಶರಣಾದ ಗಾನವಿ ಪತಿ ಸೂರಜ್!

ಬೆಂಗಳೂರು, ಡಿಸೆಂಬರ್ 27: ಬೆಂಗಳೂರು ನವವಿವಾಹಿತೆ ಗಾನವಿ (26) (Ganavi Suicide Case)ಆತ್ಮಹತ್ಯೆ ಪ್ರಕರಣದಲ್ಲೀಗ ಮಹತ್ವದ ತಿರುವು ಸಿಕ್ಕಿದೆ. ಎರಡು ತಿಂಗಳ ಹಿಂದೆಯಷ್ಟೇ ಸೂರಜ್​ ಅನ್ನು ವರಿಸಿದ್ದ ಗಾನವಿ ಆತ್ಮಹತ್ಯೆಗೆ ಯತ್ನಿಸಿ, ನಂತರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಆಕೆಯ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿರುವುದರ ಜೊತೆ ಆತನ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿರುವುದು ಈ ಪ್ರಕರಣಕ್ಕೆ ಹೊಸ ತಿರುವು ತಂದಿದೆ.

ಮರ್ಯಾದೆಗೆ ಅಂಜಿ ಸೂರಜ್ ಆತ್ಮಹತ್ಯೆ

ಗಂಡನೊಂದಿಗೆ ಮನಸ್ತಾಪ ಮಾಡಿಕೊಂಡು ಪಾಲಕರ ಮನೆಗೆ ಮರಳಿದ್ದ ಗಾನವಿ, ಆತ್ಮಹತ್ಯೆಗೆ ಯತ್ನಿದಸಿದ್ದರು. ಅಸ್ವಸ್ಥಳಾಗಿದ್ದ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಬ್ರೈನ್ ಡೆಡ್ ಆಗಿದ್ದ ಕಾರಣ ಕೊನೆಯುಸಿರೆಳೆದಿದ್ದರು. ಇದೀಗ ಮಹಾರಾಷ್ಟ್ರದಲ್ಲಿ ಸೂರಜ್ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ. ಗಾನವಿಯ ಸಾವಿನ ಬಳಿಕ ಸೂರಜ್ ತಾಯಿ ಜಯಂತಿ ಹಾಗೂ ಸಹೋದರ ಸಂಜಯ್ ಜೊತೆ ನಾಗಪುರಕ್ಕೆ ತೆರಳಿದ್ದರು. ಪತ್ನಿಯ ಆತ್ಮಹತ್ಯೆಯ ವಿಚಾರದಲ್ಲಿ ಆಕೆಯ ಪೋಷಕರು ಹಾಗೂ ಸಂಬಂಧಿಕರ ಆಕ್ರೋಶ ಮತ್ತು ಅವರಿಂದಾದ ಅವಮಾನ ತಡೆಯಲಾಗದೆ ತಾಯಿ- ಮಗ ಇಬ್ಬರೂ ಈ ನಿರ್ಧಾರ ತೆಗೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ ‘ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ’

ಗಾನವಿಯ ವಿವಾಹಪೂರ್ವ ಸಂಬಂಧದ ವಿಚಾರದಿಂದ ದಾಂಪತ್ಯದಲ್ಲಿ ಬಿರುಕು

ಸೂರಜ್ ಮತ್ತು ಗಾನವಿ ಹನಿಮೂನ್‌ಗೆ ಶ್ರೀಲಂಕಾಗೆ ತೆರಳಿದ್ದರು. ಆದರೆ ಅಲ್ಲಿ ದಂಪತಿ ನಡುವೆ ಕಲಹಗಳು ಏರ್ಪಟ್ಟಿತ್ತು. ಜೊತೆಗೆ ಗಾನವಿಯ ವಿವಾಹಪೂರ್ವ ಸಂಬಂಧದ ವಿಚಾರದಿಂದ ದಾಂಪತ್ಯದಲ್ಲಿ ಕಲಹ ಉಂಟಾಗಿತ್ತು ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಎಲ್ಲಾ ಕಾರಣದಿಂದ ಹನಿಮೂನ್ ಮಧ್ಯದಲ್ಲೇ ಮೊಟಕುಗೊಳಿಸಿ ಗಾನವಿ ಬೆಂಗಳೂರಿಗೆ ವಾಪಸ್ ಆಗಿದ್ದರು. ಶ್ರೀಲಂಕಾದಿಂದ ವಾಪಸ್ ಆದ ಬಳಿಕ ಗಾನವಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ಆರಂಭದಲ್ಲೇ ನಿಯಮ ಮುರಿದಿದ್ದಕ್ಕೆ ಬಿಗ್ ಬಾಸ್ ಎಚ್ಚರಿಕೆ – Kannada News | Gilli Nata Became Captain Of Bigg Boss Kannada House For the first Time

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಇಷ್ಟು ದಿನ ಅವರು ಕ್ಯಾಪ್ಟನ್ ಆಗಿಲ್ಲ ಎಂಬ ಕೊರಗು ಅವರಲ್ಲಿ ಇತ್ತು. ಈ ಕೊರಗು ಈಡೇರಿದೆ. ಗಿಲ್ಲಿ ಟಾಸ್ಕ್ ಆಡಿಯೇ ಕ್ಯಾಪ್ಟನ್ ಆಗಿದ್ದಾರೆ. ಗಿಲ್ಲಿ ನಿಯಮ ಮುರಿಯಲು ಎತ್ತಿದ ಕೈ. ಈಗ ಕ್ಯಾಪ್ಟನ್ ಆಗುತ್ತಿದ್ದಂತೆ ಅವರು ನಿಯಮ ಮುರಿದಿದ್ದಾರೆ. ಆ ಸಂದರ್ಭದ ಪ್ರೋಮೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಹ ಸ್ಪರ್ಧಿಗಳ ಕುಟುಂಬದವರ ಹಾರೈಕೆ: ಕೊನೆಗೂ ಕ್ಯಾಪ್ಟನ್ ಆದ ಗಿಲ್ಲಿ – Kannada News | Bigg Boss Kannada: Gilli became house captain by family members vote

ಈ ವಾರ ಬಿಗ್​​ಬಾಸ್ (Bigg Boss) ಮನೆಯಲ್ಲಿ ಫ್ಯಾಮಿಲಿ ವಾರವಾಗಿತ್ತು. ಮನೆಯ ಸದಸ್ಯರಿಗೆ ಯಾವುದೇ ಟಾಸ್ಕ್ ಇರಲಿಲ್ಲ. ಆದರೆ ಮನೆಯ ಸದಸ್ಯರ ಓಟಿನ ಆಧಾರದ ಮೇಲೆ ಮನೆಯ ಕ್ಯಾಪ್ಟನ್ ಆಯ್ಕೆ ನಡೆದಿದೆ. ಮನೆಗೆ ಬಂದ ಸ್ಪರ್ಧಿಗಳ ಕುಟುಂಬದವರೇ ಈ ಬಾರಿ ಕ್ಯಾಪ್ಟನ್ ಆಯ್ಕೆ ಮಾಡಬೇಕಿತ್ತು. ಅದರಂತೆ ಯಾರಿಗೆ ಯಾರು ಕ್ಯಾಪ್ಟನ್ ಆಗಬೇಕು ಎಂದು ಎಲ್ಲರೂ ಸೂಚಿಸಿದರು. ಈ ವೇಳೆ ಗಿಲ್ಲಿಗೆ ಹೆಚ್ಚು ಓಟು ಬಂದಿತ್ತು, ಅಶ್ವಿನಿ ಅವರಿಗೂ ಸಹ ಹೆಚ್ಚು ಮತಗಳು ಬಂದಿದ್ದವು.

ಅಂತಿಮವಾಗಿ ಅಶ್ವಿನಿ ಮತ್ತು ಗಿಲ್ಲಿ ನಡುವೆ ಅಂತಿಮ ಕ್ಯಾಪ್ಟೆನ್ಸಿ ಟಾಸ್ಕ್ ನಡೆದಿದ್ದು, ಟಾಸ್ಕ್​​ನಲ್ಲಿ ಗಿಲ್ಲಿ ಗೆಲುವು ಸಾಧಿಸಿ ಮೊಟ್ಟ ಮೊದಲ ಬಾರಿಗೆ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಗಿಲ್ಲಿ ಕ್ಯಾಪ್ಟನ್ ಆಗಿರುವ ಎಪಿಸೋಡ್ ಇನ್ನೂ ಪ್ರಸಾರ ಆಗಿಲ್ಲವಾದರೂ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ಜೋರಾಗಿ ನಡೆದಿದೆ. ಇಂದು (ಡಿಸೆಂಬರ್ 27) ಬೆಳಿಗ್ಗೆ ಬಿಡುಗಡೆ ಮಾಡಿರುವ ಪ್ರೋಮೊನಲ್ಲಿ ಸಹ ಗಿಲ್ಲಿ ಕ್ಯಾಪ್ಟನ್ ಆಗಿದ್ದನ್ನೇ ಹಾಕಲಾಗಿದೆ.

ಅಂತೂ ಇಂತು ಮೊಟ್ಟ ಮೊದಲ ಬಾರಿಗೆ ಗಿಲ್ಲಿ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಬೇರೆಯವರು ಕ್ಯಾಪ್ಟನ್ ಆದಾಗೆಲ್ಲ ಗಿಲ್ಲಿ ಟಾರ್ಗೆಟ್ ಆಗಿರುತ್ತಿದ್ದರು. ಗಿಲ್ಲಿಯಿಂದ ಕೆಲಸ ತೆಗೆಸುವುದೇ ಬೇರೆ ಕ್ಯಾಪ್ಟನ್​​ಗಳಿಗೆ ಹರ ಸಾಹಸ ಆಗಿರುತ್ತಿತ್ತು. ರಘು, ರಾಶಿಕಾ ಇನ್ನೂ ಕೆಲವರು ಕ್ಯಾಪ್ಟನ್ ಆಗಿದ್ದಾಗೆಲ್ಲ ಗಿಲ್ಲಿಯನ್ನು ಸಖತ್ ಆಗಿ ಗೋಳು ಹೊಯ್ದು ಕೊಂಡಿದ್ದೂ ಸಹ ಇದೆ. ಆದರೆ ಈಗ ಸ್ವತಃ ಗಿಲ್ಲಿಯೇ ಕ್ಯಾಪ್ಟನ್ ಆಗಿದ್ದು, ಅವರು ಕ್ಯಾಪ್ಟೆನ್ಸಿಯನ್ನು ಹೇಗೆ ನಿಭಾಯಿಸುತ್ತಾರೆ ಎಂಬುದು ಕಾದು ನೋಡಬೇಕಿದೆ.

ಇದನ್ನೂ ಓದಿ:ಗಿಲ್ಲಿ ಬಗ್ಗೆ ಇದ್ದ ದೊಡ್ಡ ಅನುಮಾನ ಕ್ಲಿಯರ್ ಮಾಡಿದ ತಂದೆ-ತಾಯಿ

ಗಿಲ್ಲಿ ಕ್ಯಾಪ್ಟನ್ ಆಗಿರುವುದು ಮನೆಯ ಕೆಲವರಿಗೆ ಇಷ್ಟವಾದರೆ ಇನ್ನು ಕೆಲವರಿಗೆ ಇಷ್ಟವಾದಂತಿಲ್ಲ. ರಘು ಹಾಗೂ ಸೂರಜ್ ಅವರು ‘ಗಿಲ್ಲಿ ಹೇಗೋ ಟಾಸ್ಕ್ ಆಡಿ ಗೆದ್ದು ಕ್ಯಾಪ್ಟನ್ ಆಗುವುದಿಲ್ಲ ಆದರೆ ಹೀಗಾದರೂ ಕ್ಯಾಪ್ಟನ್ ಆಗಲಿ ಎಂದು ಬಿಗ್​ಬಾಸ್ ಹೀಗೆ ಮಾಡಿದ್ದಾರೆ’ ಎಂದೆಲ್ಲ ಮಾತನಾಡಿದ್ದಾರೆ.

ಆದರೆ ಗಿಲ್ಲಿಯ ದುರಾದೃಷ್ಟಕ್ಕೆ, ಗಿಲ್ಲಿ ಕ್ಯಾಪ್ಟನ್ ಆದ ವಾರವೇ ಸುದೀಪ್ ಅವರು ಬಿಗ್​​ಬಾಸ್​​ಗೆ ಗೈರಾಗಿದ್ದಾರೆ. ಈ ವಾರ ಸುದೀಪ್ ಅವರು ಬಿಗ್​​ಬಾಸ್ ನಡೆಸಲು ಬರುತ್ತಿಲ್ಲ. ಪ್ರತಿ ವಾರವೂ ಸುದೀಪ್ ಅವರು ಬಂದಾಗ ಹೊಸ ಕ್ಯಾಪ್ಟನ್​​ಗೆ ಶುಭಾಶಯ ಕೋರುವುದು ಸಾಮಾನ್ಯ. ಆದರೆ ಗಿಲ್ಲಿ ಕ್ಯಾಪ್ಟನ್ ಆದಾಗಲೇ ಸುದೀಪ್ ಅವರು ಗೈರಾಗಿ, ಗಿಲ್ಲಿ ಅವಕಾಶದಿಂದ ವಂಚಿತರಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಕಾಂಗ್ರೆಸ್ ಸರ್ಕಾರದ ‘ಬುಲ್ಡೋಜರ್ ರಾಜ್’ ನೀತಿಯಿಂದ ಬೀದಿಗೆ ಬಂದ ಮುಸ್ಲಿಂ ಕುಟುಂಬ: ಪಿಣರಾಯಿ ವಿಜಯನ್ ಆಕ್ರೋಶ – Kannada News | Bengaluru Demolition: Pinarayi Vijayan Condemns Karnataka’s ‘Bulldozer Policy’

ಬೆಂಗಳೂರು, ಡಿ.27: ಕರ್ನಾಟಕದ ರಾಜ್ಯ ಸರ್ಕಾರಕ್ಕೂ ಉತ್ತರ ಪ್ರದೇಶದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಾಂಗ್ರೆಸ್​​​ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನ (Bengaluru) ಯಲಹಂಕದ ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳನ್ನು ನೆಲಸಮ ಮಾಡಿರುವುದು ತುಂಬಾ ದುಃಖಕರ ವಿಚಾರ, ಅಲ್ಲಿ ಮುಸ್ಲಿಂ ಕುಟುಂಬಗಳು ಹಲವು ವರ್ಷಗಳಿಂದ ವಾಸಿಸುತ್ತಿದ್ದವು. ಇದೀಗ ಏಕಾಏಕಿ ಬಂದು ಮನೆಗಳನ್ನು ನೆಲಸಮ ಮಾಡಿದ್ರೆ ಅವರು ಎಲ್ಲಿಗೆ ಹೋಗಬೇಕು. ಈ ಚಳಿಯಲ್ಲಿ ಮಕ್ಕಳ, ಮಹಿಳೆಯರನ್ನು ಬೀದಿಗೆ ಹಾಕಿದ್ದಾರೆ ಎಂದು ಅವರು ಸೋಶಿಯಲ್​​ ಮೀಡಿಯಾದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಎಕ್ಸ್​​​ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ. “ಬೆಂಗಳೂರಿನ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿ ವರ್ಷಗಳಿಂದ ವಾಸಿಸುತ್ತಿದ್ದ ಮುಸ್ಲಿಂ ಕುಟುಂಬಗಳನ್ನು ಬೀದಿಗೆ ಹಾಕಿ,”ಬುಲ್ಡೋಜರ್ ರಾಜ್” ಕ್ರಮವನ್ನು ಅನುಸರಿಸುತ್ತಿದ್ದಾರೆ. ದುಃಖಕರ ವಿಚಾರವೆಂದರೆ ಸಂಘ ಪರಿವಾರದ ಅಲ್ಪಸಂಖ್ಯಾತ ವಿರೋಧಿ ರಾಜಕೀಯವನ್ನು ಈಗ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೂಡ ಮಾಡುತ್ತಿದೆ. ಭಯ ಮತ್ತು ಕ್ರೂರತೆಯ ಬಲದ ಮೂಲಕ ಆಡಳಿತ ನಡೆಸುವಾಗ, ಸಾಂವಿಧಾನಿಕ ಮೌಲ್ಯಗಳು ಮತ್ತು ಮಾನವ ಘನತೆಯು ಮೊದಲ ಬಲಿಪಶುಗಳಾಗುತ್ತವೆ. ಈ ಮೋಸದ ಪ್ರವೃತ್ತಿಯನ್ನು ವಿರೋಧಿಸಲು ಮತ್ತು ಸೋಲಿಸಲು ಎಲ್ಲಾ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಶಕ್ತಿಗಳು ಒಟ್ಟಾಗಿ ಒಟ್ಟುಗೂಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಶೆಡ್‌, ಶೀಟ್‌ ಮನೆಗಳು ನೆಲಸಮ: ಸಿಡಿದೆದ್ದ ಸ್ಥಳೀಯರು

150ಕ್ಕೂ ಹೆಚ್ಚು ಅಕ್ರಮ ಶೆಡ್‌, ಶೀಟ್‌ ಮನೆಗಳು ನೆಲಸಮ:

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಕೋಗಿಲು ಬಂಡೆ ಬಳಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಗೆ ಮೀಸಲಿಟ್ಟ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 150ಕ್ಕೂ ಅಧಿಕ ಶೆಡ್‌ ಹಾಗೂ ಶೀಟ್‌ ಮನೆಗಳನ್ನು ಶನಿವಾರ ತೆರವುಗೊಳಿಸಲಾಗಿದೆ.ಕೋಗಿಲು ಬಳಿ ಇರುವ 14.36 ಎಕರೆ ಜಮೀನಿನಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯಿಂದ ಬಯೋ ಮೆಥನೈಸೇಶನ್ ಪ್ಲಾಂಟ್, ಅನಿಮಲ್ ರೆಂಡರಿಂಗ್, ಅನಿಮಲ್ ಇನ್ಸಿನರೇಷನ್, ಎಳನೀರು ಬುರುಡೆ ಸಂಸ್ಕರಣಾ ಮತ್ತು ಸ್ಯಾನಿಟರಿ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ನಿರ್ಮಾಣ ಮಾಡಬೇಕು ಎಂಬ ಯೋಜನೆಯನ್ನು ಹಾಕಿತ್ತು. ಈ ಪ್ರದೇಶದಲ್ಲಿ ಸುಮಾರು 5 ಎಕರೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ 150 ಕ್ಕೂ ಹೆಚ್ಚು ಶೆಡ್, ಮನೆಗಳನ್ನು 9 ಟ್ರ್ಯಾಕ್ಟರ್, 9 ಜೆಸಿಬಿ ಯಂತ್ರ ಬಳಸಿ ನೆಲಸಮಗೊಳಿಸಲಾಗಿದೆ. ಇದೀಗ ಅಲ್ಲಿ ಸ್ಥಳೀಯು ಸರ್ಕಾರದ ಈ ಕ್ರಮದ ವಿರುದ್ಧ ರೂಚ್ಚಿಗೆದ್ದು, ಪ್ರತಿಭಟನೆ ಮಾಡಿದ್ದಾರೆ. ಯಾವುದೇ ನೋಟಿಸ್​​ ನೀಡದೆ, ಏಕಾಏಕಿ ಬಂದು ಮನೆ ಕೆಡವಿದ್ದಾರೆ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಾವೇರಿ: 2 ವಾರಗಳಿಂದ ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಗ್ರಾಮಸ್ಥರು ಮಾಡಿದ್ದೇನು ನೋಡಿ! – Kannada News | Haveri: Villagers Patrol Nights with Sticks as Serial House Thefts Continue for Two Weeks

ಹಾವೇರಿ, ಡಿಸೆಂಬರ್ 27: ಹಾವೇರಿ ಜಿಲ್ಲೆಯ ಮಾರನಬೀಡ ಗ್ರಾಮದಲ್ಲಿ ಮನೆ ಕಳ್ಳತನದ ಹಾವಳಿ ತೀವ್ರಗೊಂಡಿದೆ. ಕಳೆದ ಎರಡು ವಾರಗಳಿಂದ ಸರಣಿ ಕಳ್ಳತನಗಳು ವರದಿಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಇದರ ಪರಿಣಾಮವಾಗಿ, ಹಗಲಿನಲ್ಲಿ ಹೊಲಗಳಲ್ಲಿ ದುಡಿದು ಬಳಲಿದರೂ, ರಾತ್ರಿಯಿಡೀ ನಿದ್ದೆಗೆಟ್ಟು ತಮ್ಮ ಮನೆಗಳ ರಕ್ಷಣೆಗೆ ನಿಂತಿದ್ದಾರೆ. ಮೈ ಕೊರೆಯುವ ಚಳಿಯನ್ನೂ ಲೆಕ್ಕಿಸದೆ, ಗ್ರಾಮಸ್ಥರು ದೊಣ್ಣೆ ಮತ್ತು ಕೋಲುಗಳನ್ನು ಹಿಡಿದು ಗ್ರಾಮದಾದ್ಯಂತ ಗಸ್ತು ತಿರುಗುತ್ತಿದ್ದಾರೆ.

ಪೊಲೀಸರಿಗೆ ಮಾಹಿತಿ ನೀಡಿದರೂ ಯಾವುದೇ ನೆರವು ಸಿಗದ ಕಾರಣ, ತಮ್ಮ ಆಸ್ತಿಪಾಸ್ತಿಗಳನ್ನು ಕಳ್ಳರಿಂದ ರಕ್ಷಿಸಿಕೊಳ್ಳಲು ತಾವೇ ಗಸ್ತು ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಹಾವೇರಿ ನಗರ, ನರೇಗಲ್ಲ ಮತ್ತು ತವರಮರಳಿಹಳ್ಳಿಗಳಲ್ಲೂ ಇದೇ ರೀತಿ ಕಳ್ಳತನ ಪ್ರಕರಣಗಳು ವರದಿಯಾಗಿವೆ. ಕಳ್ಳರ ಕಾಟದಿಂದ ಭಯದಲ್ಲಿ ಜೀವಿಸುವಂತಾಗಿದ್ದು, ಪೊಲೀಸ್ ಇಲಾಖೆ ತಕ್ಷಣ ಎಚ್ಚೆತ್ತು ಭದ್ರತೆ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಹಾವೇರಿ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ – Kannada News | Ryan Rickelton slams Century in SA20 Opener

ಸೌತ್ ಆಫ್ರಿಕಾ ಟಿ20 ಲೀಗ್​ನ ಹಾಲಿ ಚಾಂಪಿಯನ್ಸ್ ಎಂಐ ಕೇಪ್​ಟೌನ್ ವಿರುದ್ಧ ಡರ್ಬನ್​ ಸೂಪರ್ ಜೈಂಟ್ಸ್ ಭರ್ಜರಿ ಜಯ ಸಾಧಿಸಿದೆ. ಕೇಪ್​ಟೌನ್​ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಡರ್ಬನ್ ಸೂಪರ್ ಜೈಂಟ್ಸ್ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಡರ್ಬನ್ ಸೂಪರ್ ಜೈಂಟ್ಸ್ ಪರ ಡೆವೊನ್ ಕಾನ್ವೆ 64 ರನ್ ಬಾರಿಸಿದರೆ, ಕೇನ್ ವಿಲಿಯಮ್ಸನ್ 40 ರನ್​ಗಳ ಕೊಡುಗೆ ನೀಡಿದರು. ಇನ್ನು ಮಾರ್ಕ್ರಾಮ್ 35 ರನ್ ಕಲೆಹಾಕಿದರೆ, ಇವಾನ್ ಜೋನ್ಸ್ 33 ರನ್​ಗಳ ರನ್​ಗಳಿಸಿದರು. ಈ ಮೂಲಕ ಡರ್ಬನ್ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 232 ರನ್ ಕಲೆಹಾಕಿತು.

233 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಎಂಐ ಕೇಪ್​ಟೌನ್ ಪರ ಆರಂಭಿಕನಾಗಿ ರಯಾನ್ ರಿಕೆಲ್ಟನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. 63 ಎಸೆತಗಳನ್ನು ಎದುರಿಸಿದ ರಿಕೆಲ್ಟನ್ 11 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 113 ರನ್ ಬಾರಿಸಿದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಎಂಐ ಕೇಪ್​ಟೌನ್ ತಂಡವು 20 ಓವರ್​ಗಳಲ್ಲಿ 217 ರನ್​ಗಳಿಸಿ 15 ರನ್​ಗಳಿಂದ ಸೋಲೊಪ್ಪಿಕೊಂಡಿತು.

 

 

Source link

Bengaluru Air Quality: ಬೆಂಗಳೂರಿನಲ್ಲಿ ಹೆಚ್ಚಿದ ಕಳಪೆ ಏರ್ ಕ್ವಾಲಿಟಿ, ಜಿಬಿಎ ನಿರ್ಧಾರ ಏನು? – Kannada News | Bangalore Air Pollution Crisis: Bengaluru’s increasing vehicle is also causing poor air quality, GBA to take action

ಬೆಂಗಳೂರಿನಲ್ಲಿ ಹೆಚ್ಚಿದ ಕಳಪೆ ಏರ್ ಕ್ವಾಲಿಟಿ, ಜಿಬಿಎ ನಿರ್ಧಾರ ಏನು?

ಬೆಂಗಳೂರು, ಡಿಸೆಂಬರ್ 27: ಹಲವು ದಿನಗಳಿಂದ ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ (Bengaluru Air Quality) ಹೆಚ್ಚಿನ ಏರುಪೇರಾಗುತ್ತಲೇ ಇದೆ. ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 173 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಕಳೆದ 4 ವರ್ಷಗಳಲ್ಲಿ ಈ ವರ್ಷವೇ ಗಾಳಿಯ PM (Particulate Matter) ಪ್ರಮಾಣ ಸಹ ಮಿತಿ ಮೀರಿದೆ. ಇಂದೂ ಸಹ PM2.5 87 ಇದ್ದರೆ, PM10 121 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ.

ವಾಯುಮಾಲಿನ್ಯ ತಡೆಗೆ ಜಿಬಿಎ ಮುಂದು

ಬೆಂಗಳೂರಿನಲ್ಲಿ 1.2 ಕೋಟಿ ದಾಟಿರುವ ವಾಹನಗಳಿಂದ ಹೊರಸೂಸುವ ಹೊಗೆ ನಗರದ ಮಾಲಿನ್ಯಕ್ಕೆ ಕೊಡುಗೆ ನೀಡುತ್ತಿದೆ. ಸಂಚಾರ ದಟ್ಟಣೆ ಹೆಚ್ಚಿರುವ ಸಿಲ್ಕ್ ಬೋರ್ಡ್ ಮತ್ತು ವೈಟ್‌ಫೀಲ್ಡ್‌ನಂತಹ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟವು ನಗರದ ಸರಾಸರಿಗಿಂತ 30% ಹೆಚ್ಚು ದಾಖಲಾಗುತ್ತಿದೆ. ಇದು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಗಾಳಿಯ ಗುಣಮಟ್ಟ 150 ದಾಟಿದರೆ ಶ್ವಾಸಕೋಶ ಕಾಯಿಲೆಯ ಜೊತೆಗೆ ಹೃದಯ ಸಂಬಂಧಿ ರೋಗಗಳೂ ಬರಬಹುದೆಂದು ತಜ್ಞರು ಹೇಳುತ್ತಾರೆ.

ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಯುಮಾಲಿನ್ಯಕ್ಕೆ ಕಾರಣ ಪತ್ತೆಹಚ್ಚಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಕ್ರಮ ಕೈಗೊಂಡಿದೆ. ನಗರದೆಲ್ಲೆಡೆ 85 ಮೆಟ್ರೋ ನಿಲ್ದಾಣ, 55 ಬಿಎಂಟಿಸಿ ಟಿಟಿಎಂಸಿ, ಪ್ರಮುಖ ರಸ್ತೆ ಮತ್ತು ಕೈಗಾರಿಕಾ ಪ್ರದೇಶಗಳಲ್ಲಿ ಸೆನ್ಸರ್ ಅಳವಡಿಕೆ ನಡೆಯಲಿದೆ. ಪ್ರತಿ ಮಾಪನಕ್ಕೆ ಗರಿಷ್ಠ 3 ಲಕ್ಷ ರೂ. ವೆಚ್ಚವಾಗಲಿದ್ದು, ಒಟ್ಟು 15 ಕೋಟಿ ರೂ. ವೆಚ್ಚದಲ್ಲಿ ವಾಯುಮಾಲಿನ್ಯ ತಪಾಸಣಾ ಉಪಕರಣ ಖರೀದಿಸಲು ನಿರ್ಧರಿಸಲಾಗಿದೆ.

ಕಳಪೆ ಏರ್ ಕ್ವಾಲಿಟಿಯಿಂದ ಶ್ವಾಸಕೋಶದ ಕ್ಯಾನ್ಸರ್

PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –173
  • ಮಂಗಳೂರು – 154
  • ಮೈಸೂರು – 132
  • ಬೆಳಗಾವಿ – 161
  • ಕಲಬುರ್ಗಿ – 105
  • ಶಿವಮೊಗ್ಗ – 92
  • ಬಳ್ಳಾರಿ – 201
  • ಹುಬ್ಬಳ್ಳಿ- 108
  • ಉಡುಪಿ –142
  • ವಿಜಯಪುರ –82

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 8:22 am, Sat, 27 December 25

Source link