Bank Job 2026: ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನಲ್ಲಿ ನೇಮಕಾತಿ; 82 ಹುದ್ದೆಗೆ ಅರ್ಜಿ ಆಹ್ವಾನ
ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಹೊಸಪೇಟೆ ಖಾಲಿ ಇರುವ ವಿವಿಧ 82 ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನ ಆರಂಭಿಸಲು ಬಯಸುವ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈ ನೇಮಕಾತಿಯು ಕರ್ನಾಟಕ ಸರ್ಕಾರದ ಸಹಕಾರ ಇಲಾಖೆಯ ನಿಯಮಾವಳಿಗಳ ಅನ್ವಯ ನಡೆಯಲಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು ನಾಲ್ಕು ವರ್ಗದ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ವ್ಯವಸ್ಥಾಪಕರು ಅಥವಾ ಪ್ರಥಮ ದರ್ಜೆ ಸಹಾಯಕರ 22 ಹುದ್ದೆಗಳಿಗೆ 44,425…