ಕಾಂಗ್ರೆಸ್‌ನಲ್ಲಿ ತುರ್ತು ಪರಿಸ್ಥಿತಿ ಮನಸ್ಥಿತಿ ಇನ್ನೂ ಜೀವಂತವಾಗಿದೆ; ಅಶೋಕ್ ಗೆಹ್ಲೋಟ್ ಹೇಳಿಕೆಗೆ ಬಿಜೆಪಿ ತಿರುಗೇಟು – Kannada News | Congress has not shed Emergency mindset BJP Hits back on Ashok Gehlot’s remarks
ನವದೆಹಲಿ, ಜೂನ್ 15: ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ (Ashok Gehlot) ಇಂದು ನೀಡಿದ್ದ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದೆ. ಇಂದು ಇಂದಿರಾ ಗಾಂಧಿ ಬದುಕಿರುತ್ತಿದ್ದರೆ, ಅವರು ಅಧಿಕಾರದಲ್ಲಿರುತ್ತಿದ್ದರೆ ಬಿಜೆಪಿಯನ್ನು ಬ್ಯಾನ್ ಮಾಡುತ್ತಿದ್ದರು ಎಂದು ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಕಾಂಗ್ರೆಸ್ ನಾಯಕತ್ವಕ್ಕೆ ಇಂದಿಗೂ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಲ್ಲ. ಅವರು ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಲು ಬಯಸುತ್ತಾರೆ ಎಂದು ಬಿಜೆಪಿ ಆರೋಪಿಸಿದೆ. “ಕಾಂಗ್ರೆಸ್ ಪಕ್ಷಕ್ಕೆ ಇಂದಿಗೂ…