ಕರ್ನಾಟಕದ ವಿವಿಧ ಬ್ಯಾಂಕುಗಳಲ್ಲಿ ಕ್ಲೇಮ್ ಆಗದೇ ಉಳಿದಿರುವ ಹಣ ಎಷ್ಟು ಗೊತ್ತಾ? ಅನ್ಕ್ಲೇಮ್ಡ್ ಡೆಪಾಸಿಟ್ ಮರಳಿಪಡೆಯುವುದು ಹೇಗೆ? – Kannada News | Rs 3,400 crore lies unclaimed in various bank accounts in Karnataka, says RBI officer
ಮಂಗಳೂರು, ಡಿಸೆಂಬರ್ 25: ಕರ್ನಾಟಕದ ವಿವಿಧ ಬ್ಯಾಂಕುಗಳಲ್ಲಿ ಹತ್ತಕ್ಕೂ ಹೆಚ್ಚು ವರ್ಷಗಳಿಂದ ಕ್ಲೇಮ್ ಆಗದೇ ಉಳಿದಿರುವ ಹಣ 3,400 ಕೋಟಿ ರೂನಷ್ಟಿದೆಯಂತೆ. ಆರ್ಬಿಐ (RBI) ಬೆಂಗಳೂರು ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಅರುಣ್ ಕುಮಾರ್ ಈ ಮಾಹಿತಿ ನೀಡಿದ್ದಾರೆ. ಜಿಲ್ಲಾ ಸಮಾಲೋಚನ ಸಮಿತಿ (ಡಿಸಿಸಿ) ಮತ್ತು ಜಿಲ್ಲಾ ಮಟ್ಟದ ಪರಾಮರ್ಶೆ ಸಮಿತಿ (ಡಿಎಲ್ಆರ್ಸಿ) ಸಭೆಯಲ್ಲಿ ಆರ್ಬಿಐ ಅಧಿಕಾರಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ಹತ್ತಕ್ಕೂ ಹೆಚ್ಚು ವರ್ಷಗಳಿಂದ ಬ್ಯಾಂಕ್ ಖಾತೆಗಳು, ಡೆಪಾಸಿಟ್ ಪ್ಲಾನ್ಗಳು ಬಳಕೆ ಇಲ್ಲದೇ ನಿಷ್ಕ್ರಿಯವಾಗಿದ್ದರೆ…