All posts by nagaraj11081993

ಗೌರವ ಡಾಕ್ಟರೇಟ್ ನಿರಾಕರಿಸಿದ ಬಸವರಾಜ ಬೊಮ್ಮಾಯಿ, ಹಾವೇರಿ ವಿವಿಗೆ ಹೇಳಿದಿಷ್ಟು

ಗೌರವ ಡಾಕ್ಟರೇಟ್ ನಿರಾಕರಿಸಿದ ಬಸವರಾಜ ಬೊಮ್ಮಾಯಿ, ಹಾವೇರಿ ವಿವಿಗೆ ಹೇಳಿದಿಷ್ಟು

ಹಾವೇರಿ, (ಏಪ್ರಿಲ್ 05): ಹಾವೇರಿ ವಿಶ್ವವಿದ್ಯಾಲಯವು (haveri university) ತಮಗೆ ನೀಡಲು ನಿರ್ಧರಿಸಿದ್ದ ಗೌರವ ಡಾಕ್ಟರೇಟ್ (honorary doctorate) ಅನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಅವರು ವಿನಮ್ರವಾಗಿ ನಿರಾಕರಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕ ಸೇವೆಯಲ್ಲಿರುವ ತಮಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ಅತಿ ದೊಡ್ಡ ಪ್ರಶಸ್ತಿ ಎಂದು ಹೇಳಿಕೊಂಡಿದ್ದಾರೆ. ತಮ್ಮ ಸಿಂಡಿಕೇಟ್ ಸಭೆಯಲ್ಲಿ ತಮಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಬೊಮ್ಮಾಯಿ ಅವರು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಬೊಮ್ಮಾಯಿ ಹೊರಡಿಸಿದ ಪ್ರಕರಣೆಯಲ್ಲೇನಿದೆ?

ಈ ಕುರಿತು ಪ್ರಕಟಣೆ ನೀಡಿರುವ ಅವರು, “ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ. ಸಾರ್ವಜನಿಕ ಸೇವೆಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ಅತ್ಯಂತ ದೊಡ್ಡ ಗೌರವವೆಂದು ಭಾವಿಸುತ್ತೇನೆ. ಆದ್ದರಿಂದ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ವಿನಮ್ರವಾಗಿ ಪುನರುಚ್ಚರಿಸುತ್ತೇನೆ ” ಎಂದಿದ್ದಾರೆ.

“ಗೌರವ ಡಾಕ್ಟರೇಟ್ ಎಂಬುದು ದೀರ್ಘಕಾಲದಿಂದ ಯಾವುದಾದರೂ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಬೇಕಾದ ಗೌರವವೆಂಬುದು ನನ್ನ ಅಭಿಪ್ರಾಯ. ಹೀಗಾಗಿ ಇದನ್ನು ಅಂಥ ಸಾಧಕರಿಗೆ ನೀಡಬೇಕು. ರಾಜಕಾರಣಿಗಳಿಗೆ ಅಥವಾ ಸ್ವಯಂ ಪ್ರೇರಣೆಯಿಂದ ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಗೌರವ ಡಾಕ್ಟರೇಟ್ ನೀಡುವುದು ಸಮಂಜಸವಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ವಿಷಯದಲ್ಲಿ ಪುನರ್ ವಿಚಾರ ಮಾಡಬೇಕೆಂದು ವಿನಂತಿಸುತ್ತೇನೆ ” ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೇ ತಮ್ಮ ಸಿಂಡಿಕೇಟ್ ಸಭೆಯಲ್ಲಿ ತಮಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಬೊಮ್ಮಾಯಿ ಅವರು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹುಬ್ಬಳ್ಳಿ ಲವ್ ಜಿಹಾದ್ ಕೇಸ್​ಗೆ ಟ್ವಿಸ್ಟ್: ಯುವಕನ ವಿರುದ್ಧ ದೂರು ಬೆನ್ನಲ್ಲೇ ಯುವತಿಯ ವಿಡಿಯೋಗಳು ವೈರಲ್

ಹುಬ್ಬಳ್ಳಿ, ಏಪ್ರಿಲ್​ 05: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಎರಡು ದಿನದ ಹಿಂದಷ್ಟೇ ನಡೆದ ಲವ್ ಜಿಹಾದ್ (Love Jihad) ಆರೋಪ ಪ್ರಕರಣ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಈ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಮುಸ್ಲಿಂ ಯುವಕನೋರ್ವ ಪ್ರೀತಿಯ ಹೆಸರಲ್ಲಿ ನಾಟಕವಾಡಿ ಹಿಂದೂ ಯುವತಿಯ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮುಫಿಜ್ ಮಿಯಾನ್ನವರ್ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದ್ದು, ಯುವತಿ ಮಾಡಿದ್ದು ಎನ್ನಲಾಗುತ್ತಿರುವ ಹೇಳಿಕೆಗಳ ಅನೇಕ ವಿಡಿಯೋಗಳು ವೈರಲ್ ಆಗಿವೆ.

ಹಿಂದೂ ಯುವತಿ ಮಾಡಿದ್ದು ಎನ್ನಲಾದ ವಿಡಿಯೋ ವೈರಲ್​​

ಹುಬ್ಬಳ್ಳಿ ಮತ್ತೊಂದು ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ವರ್ಷದ ಹಿಂದೆ ಯುವತಿ ಮಾಡಿದ್ದು ಎಂದು ಹೇಳಲಾಗುತ್ತಿರುವ ಹೇಳಿಕೆಗಳ ಅನೇಕ ವಿಡಿಯೋಗಳು ಇದೀಗ ವೈರಲ್ ಆಗಿವೆ. ನಾವಿಬ್ಬರು ಇಷ್ಟಪಟ್ಟಿದ್ದೆವು. ಅದರಂತೆ ಧಾರವಾಡ ಸಬ್ ರಿಜಿಸ್ಟರ್ ಕಚೇರಿಯಲ್ಲಿ ವಿವಾಹ ನೋಂದಣಿ ಮಾಡಿಸಿದ್ದೆವು ಎನ್ನಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್​​: ಪ್ರೀತಿ ಹೆಸರಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ; ದೂರು ದಾಖಲು

ನಾನು ನೋಂದಣಿಗೆ ಸಹಿ ಮಾಡಿದ್ದು ಆರ್​ಎಸ್​ಎಸ್​ನವರಿಗೆ ಗೊತ್ತಾಗಿತ್ತು. ಹೀಗಾಗಿ ನಮ್ಮ ಮನೆಗೆ ಬಂದು ಅನೇಕ ಬಾರಿ ಕೌನ್ಸಿಲಿಂಗ್ ಮಾಡಿದ್ದರು. ಅವರ ಧರ್ಮ ಬೇರೆ, ನಮ್ಮ ಧರ್ಮ ಬೇರೆ ಅಂತ ಹೇಳಿದ್ದರು. ನಾನು ಮುಫಿಜ್ ಮದುವೆಯಾಗದೇ ಇದ್ದರೆ ಸಾಯುತ್ತೇನೆ ಅಂತ ಹೇಳಿದ್ದೆ. ಹೀಗಾಗಿ ಆತನ ಹೆತ್ತವರು ಮದುವೆಗೆ ಒಪ್ಪಿಕೊಂಡಿದ್ದರು.

ಇದನ್ನೂ ಓದಿ: ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ; ವಿಡಿಯೋ ವೈರಲ್

ಆರ್​ಎಸ್​ಎಸ್​ನವರು ಬಂದು ಅನೇಕ ಬಾರಿ ಕೌನ್ಸಿಲಿಂಗ್ ಮಾಡಿದ್ದಾರೆ. ಮುಫಿಜ್ ಮೇಲೆ ಕೇಸ್ ಹಾಕಿಸುತ್ತೇವೆ ಅಂತ ಹೇಳಿದ್ದರು. ಆತನ ಮೇಲೆ ಕೇಸ್ ಹಾಕಲು ನನ್ನ ಒಪ್ಪಿಗೆ ಇಲ್ಲಾ ಎಂದಿದ್ದ ಯುವತಿ ಆದರೆ ಇದೀಗ ಮುಫಿಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

SRH vs LSG: W,W,W,W.. ಸನ್‌ರೈಸರ್ಸ್​ಗೆ ಆರಂಭದಲ್ಲೇ ಮರ್ಮಾಘಾತ

Source link

ಏಕವಚನದಲ್ಲಿ ಬೈದಿದ್ದ ಸಚಿವ ಎಸ್​​ಎಸ್​ ಮಲ್ಲಿಕಾರ್ಜುರನ್ನು ಕ್ಷಮಿಸಿ ಪ್ರಚಾರಕ್ಕೆ ಬಂದ ಜಮೀರ್

ದಾವಣಗೆರೆ, (ಏಪ್ರಿಲ್ 05): ದಾವಣಗೆರೆ ದಕ್ಷಿಣದಲ್ಲಿ ಉಪ ಚುನಾವಣೆ (Davanagere South By Elction) ಪ್ರಚಾರದ ಕಾವು ಜೋರಾಗುತ್ತಿದೆ. ಈ ನಡುವೆ ಸಮರ್ಥ್ ಪರವಾಗಿ ಜನಾಭಿಪ್ರಾಯ ರೂಪಿಸುವ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯದ ಕಾಂಗ್ರೆಸ್ ನಾಯಕರ ಮೇಲೆ ಒತ್ತಡವೂ ಹೆಚ್ಚಾಗುತ್ತಿದೆ. ಟಿಕೆಟ್​​ ಸಂಬಂಧ ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ಎಸ್​​ಎಸ್​ ಮಲ್ಲಿಕಾರ್ಜುನ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು. ಕ್ಷೇತ್ರಕ್ಕೆ ಬರುವುದೇ ಬೇಡ ಎಂದು ಸ್ವತಃ ಮಲ್ಲಿಕಾರ್ಜುನ, ಜಮೀರ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು. ಇದು ಮುಸ್ಲಿಂ ಸಮುದಾಯದ ಅಸಮಾಧಾನಕ್ಕೆ ಕಾರಣವಾಗಿದ್ದು, ಎಸ್​​ಎಸ್​​ ಮಲ್ಲಿಕಾರ್ಜುನ ಜಮೀರ್ ಅಹಮ್ಮದ್ ಖಾನ್ ಅವರ ಬಳಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದರು. ಇನ್ನೊಂದೆಡೆ ತಮ್ಮ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ್ದಿ, ಹಾಗೇ ಮಲ್ಲಿಕಾರ್ಜುನ ಅವರ ಮಾತಿನಿಂದ ಅಸಮಾಧಾನಗೊಂಡಿದ್ದ ಜಮೀರ್, ದಾವಣಗೆರೆ ಉಪಚುನಾವಣೆ ಪ್ರಚಾರದಿಂದ ಅಂತರ ಕಾಯ್ದುಕೊಂಡಿದ್ದರು. ಜಮೀರ್ ಅನುಪಸ್ಥಿತಿಯಲ್ಲಿ ಕ್ಷೇತ್ರದಲ್ಲಿ ಶಾಸಕರಾದ ಸಲೀಂ ಅಹ್ಮದ್, ರಿಜ್ವಾನ್ ಅರ್ಷದ್, ಎನ್ ಎ ಹ್ಯಾರಿಸ್, ಯಾಸೀನ್ ಖಾನ್ ಪಠಾಣ್ ಬೀಡುಬಿಟ್ಟಿದ್ದರು. ಆದರೂ ಸಹ ಕಾಂಗ್ರೆಸ್ ನಾಯಕರು ಹೋದಲೆಲ್ಲ ಮುಸ್ಲಿಂ ಸಮುದಾಯದ ಜನರು, ಜಮೀರ್ ಅವರನ್ನ ಕರೆಯಿಸಿ ಎಂದು ಘೋಷಣೆ ಕೂಗಿದ ಪ್ರಸಂಗಗಳ ಸಹ ನಡೆದಿವೆ.

ಇದು ನಾಯಕರ ದೊಡ್ಡ ತಲೆನೋವಿಗೆ ಕಾರಣವಾಗಿತ್ತು. ಅಲ್ಲದೇ ಜಮೀರ್ ಅವರಿಂದ ಮುಸ್ಲಿಂ ಮತಗಳು ವಿಭನೆಯಾಗುವ ಆತಂಕಕ್ಕೂ ಕಾರಣವಾಗಿತ್ತು. ಹೀಗಾಗಿ ಹೈಕಮಾಂಡ್, ಜಮೀರ್ ಅವರನ್ನ ದಾವಣಗೆರೆ ತೆರಳು ಸೂಚಿಸಿದೆ. ಅದರಂತೆ ಇಂದು (ಏಪ್ರಿಲ್ 05) ಜಮೀರ್ ದಾವಣಗೆರೆ ದಕ್ಷಿಣ ಕ್ಷೇತ್ರದ ಅಖಾಡಕ್ಕಿಳಿದಿದ್ದಾರೆ. ಇನ್ನು ಇದೇ ವೇಳೆ ಮಲ್ಲಿಕಾರ್ಜುನ ಅವರು ಬೈದಿರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನಿಗೆ ಉತ್ತರಿಸಿದ ಜಮೀರ್, ಮಲ್ಲಿಕಾರ್ಜುನ ಅವರು ನನ್ನ ಅಣ್ಣ, ಸಿಟ್ಟಿನಲ್ಲಿ ಏನೋ ಬೈದಿದ್ದಾರೆ ಎಂದಿದ್ದಾರೆ. ಈ ಮೂಲಕ ಮಲ್ಲಿಕಾರ್ಜುನ ಅವರನ್ನ ಕ್ಷಮಿಸಿ ಅವರ ಪುತ್ರನ ಪರ ಪ್ರಚಾರಕ್ಕಿಳಿದಿದ್ದಾರೆ.

ಇದನ್ನೂ ಓದಿ: ದಾವಣಗರೆ ದಕ್ಷಿಣ ಬೈ ಎಲೆಕ್ಷನ್​​ನಿಂದ ಜಮೀರ್ ದೂರವಾಗಿದ್ಯಾಕೆ? ಅಸಲಿಗೆ ಆಗಿದ್ದೇನು?

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಚಿತ್ರಮಂದಿರದಲ್ಲಿ ಪ್ರೇಕ್ಷಕರಿಗೆ ಸಾಷ್ಟಾಂಗ ನಮಸ್ಕಾರ ಹಾಕಿದ ಪ್ರಭಾಸ್ ಆಪ್ತ ಗೆಳೆಯ

ಸಿನಿಮಾ (Cinema) ಪ್ರಚಾರದ ವೇಳೆ ನಟರು ನಾನಾ ಅವತಾರಗಳೆತ್ತುತ್ತಾರೆ. ಇದ್ದಕ್ಕಿದ್ದಂತೆ ಪ್ರೇಕ್ಷಕರು ಭಗವಂತರಂತೆ ಕಾಣುತ್ತಾರೆ, ಪ್ರೇಕ್ಷಕರನ್ನು ತಮ್ಮ ಸಿನಿಮಾಗಳತ್ತ ಸೆಳೆಯಲು ಏನೇನೋ ಮಾಡುತ್ತಾರೆ. ಕೆಲವು ಕಣ್ಣೀರು ಸಹ ಹಾಕಿದ್ದುಂಟು. ಇದೀಗ ತೆಲುಗಿನ ಖ್ಯಾತ ನಟರೊಬ್ಬರು ಚಿತ್ರಮಂದಿರದಲ್ಲಿ ಪ್ರೇಕ್ಷಕರಿಗೆ ಸಾಷ್ಟಾಂಗ ನಮಸ್ಕಾರ ಹಾಕಿದ್ದಾರೆ. ನಟನ ಈ ವರ್ತನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ನಾನಾ ರೀತಿಯ ಕಮೆಂಟ್​​ಗಳು ಹರಿದು ಬರುತ್ತಿವೆ.

ಪ್ರಭಾಸ್ ಅವರ ಆಪ್ತ ಗೆಳೆಯರೂ ಆಗಿರುವ ನಟ ಶರವಾನಂದ ಅವರು ‘ಬೈಕರ್’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದು, ಇದೇ ಶುಕ್ರವಾರ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ. ಈ ಸಿನಿಮಾಕ್ಕಾಗಿ ಸಾಕಷ್ಟು ತೂಕ ಕಳೆದುಕೊಂಡು, ಫಿಟ್ ಆಗಿದ್ದು ಮಾತ್ರವೇ ಅಲ್ಲದೆ, ಬೈಕ್ ರೈಡಿಂಗ್ ಅನ್ನು ಸಹ ಕಲಿತಿದ್ದಾರೆ ಶರವಣ. ಸಿನಿಮಾನಲ್ಲಿ ಕೆಲವಾರು ಸ್ಟಂಟ್ ದೃಶ್ಯಗಳನ್ನು ಖುದ್ದಾಗಿ ಮಾಡಿದ್ದಾರೆ ನಟ. ಇದೇ ಕಾರಣಕ್ಕೆ ಸಿನಿಮಾದ ಭರ್ಜರಿ ಪ್ರಚಾರದಲ್ಲಿ ಶರವಾನಂದ ಭಾಗಿ ಆಗಿದ್ದಾರೆ.

ತೆಲಂಗಾಣದ ಹೈದರಾಬಾದ್​ನ ಮೂಸಾಪೇಟನಲ್ಲಿರುವ ಶ್ರೀರಾಮುಲು ಥಿಯೇಟರ್​​ಗೆ ನಟ ಶರವಾನಂದ ಭೇಟಿ ನೀಡಿದ್ದರು. ಈ ವೇಳೆ ನಟ ರಾಜಶೇಖರ್ ಸಹ ಅವರೊಟ್ಟಿಗಿದ್ದರು. ಈ ವೇಳೆ ಪ್ರೇಕ್ಷಕರನ್ನುದ್ದೇಶಿಸಿ ಮಾತನಾಡಿದ ನಟ ಶರವಾನಂದ, ‘ನಾನು ಒಳ್ಳೆಯ ಸಿನಿಮಾಗಳನ್ನು ಮಾಡಿದ್ದೇನೆ. ನಿಮಗೆ ಇಷ್ಟವಾದ ಕೆಲ ಸಿನಿಮಾಗಳನ್ನು ಮಾಡಿದ್ದೇನೆ, ಕೆಲವು ಬಹಳ ಒಳ್ಳೆಯ ಸಿನಿಮಾಗಳನ್ನೂ ಮಾಡಿದ್ದೇನೆ. ಆದರೆ ಮತ್ತೊಮ್ಮೆ, ಅಭಿಲಾಷ್ (‘ಬೈಕರ್’ ಸಿನಿಮಾ ನಿರ್ದೇಶಕ) ನನ್ನನ್ನು ಇಲ್ಲಿಗೆ ಕರೆತಂದು ನಿರ್ದೇಶಕನೊಬ್ಬ ತನ್ನ ನಾಯಕನನ್ನು ನಿಜವಾಗಿಯೂ ಪ್ರೀತಿಸಿದಾಗ ಏನಾಗುತ್ತದೆ ಎಂಬುದನ್ನು ತೋರಿಸಿದ್ದಾನೆ. ನನ್ನ ಸಹೋದರ, ನನ್ನ ಚಿನ್ನ, ಭಾರತದ ಭವಿಷ್ಯ ಅಭಿಲಾಷ್ ಅದನ್ನು ತೋರಿಸಿದ್ದಾನೆ. ನಾನು ಇಂದು ಇಲ್ಲಿ ನಿಂತು ಪ್ರಮಾಣ ಮಾಡಿ ಹೇಳುತ್ತೇನೆ, ‘ಬೈಕರ್’ ನನ್ನ ಅತ್ಯುತ್ತಮ ಚಿತ್ರ. ಮತ್ತು ಈ ಕನಸನ್ನು ನನಗೆ ನೀಡಿದ ಈ ಚಿತ್ರಮಂದಿರಕ್ಕೆ ನನ್ನ ಸಾಷ್ಟಾಂಗ ನಮಸ್ಕಾರಗಳು’ ಎನ್ನುತ್ತಾ, ಕೆಳಗೆ ಮಲಗಿ ಸಾಷ್ಟಾಂಗ ನಮಸ್ಕಾರವನ್ನು ಶರವಾನಂದ ಮಾಡಿದ್ದಾರೆ.

ಇದನ್ನೂ ಓದಿ:‘ರಾಮಾಯಣ’ ಸಿನಿಮಾ ಅವಧಿ 6 ಗಂಟೆ; ಚಿತ್ರತಂಡದ ಎದುರಿಗೆ ಇದೆ ದೊಡ್ಡ ಸವಾಲು

‘ಬೈಕರ್’ ಸಿನಿಮಾ ಹೆಸರೇ ಸೂಚಿಸುವಂತೆ ಬೈಕರ್ ಒಬ್ಬನ ಕತೆಯಾಗಿದೆ. ಸಿನಿಮಾದ ಬಗ್ಗೆ ಧನಾತ್ಮಕ ಅಭಿಪ್ರಾಯಗಳು ವ್ಯಕ್ತವಾಗಿವೆ. ಸಿನಿಮಾನಲ್ಲಿ ಶರವಾನಂದ ಜೊತೆಗೆ ಮಾಳವಿಕಾ ನಾಯರ್ ನಾಯಕಿಯಾಗಿ ನಟಿಸಿದ್ದಾರೆ. ರಾಜಶೇಖರ್ ಅವರು ತಂದೆ ಪಾತ್ರದಲ್ಲಿ, ಅತುಲ್ ಕುಲಕರ್ಣಿ ಸಹ ಪ್ರಮುಖವಾದ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಭಾಸ್ ಅವರ ಪಾಲುದಾರಿಕೆ ಹೊಂದಿರುವ ಯುವಿ ಕ್ರಿಯೇಷನ್ಸ್ ‘ಬೈಕರ್’ ಸಿನಿಮಾಕ್ಕೆ ಬಂಡವಾಳ ಹೂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

KSOU VC Recruitment 2026: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (KSOU) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಪ್ರತಿಷ್ಠಿತ ಕುಲಪತಿ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮೈಸೂರಿನಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಅನುಭವವಿರುವ ಶಿಕ್ಷಣ ತಜ್ಞರಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಈ ನೇಮಕಾತಿಯು ಕರ್ನಾಟಕ ಸರ್ಕಾರದ ಮಾನದಂಡಗಳ ಅನ್ವಯ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ಮತ್ತು ಸೌಲಭ್ಯಗಳನ್ನು ನೀಡಲಾಗುತ್ತದೆ.

ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಪ್ರಕ್ರಿಯೆ:

ಈ ಉನ್ನತ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವವರು ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿಯ ಮಾನದಂಡಗಳನ್ನು ಪೂರೈಸಿರಬೇಕು. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಆಫ್‌ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ. ಭರ್ತಿ ಮಾಡಿದ ಅರ್ಜಿಯನ್ನು ‘ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಪಿಬಿ ಸಂಖ್ಯೆ 5033, ಲೋಕ ಭವನ, ಬೆಂಗಳೂರು – 560001’ ಈ ವಿಳಾಸಕ್ಕೆ ಕಳುಹಿಸುವುದರ ಜೊತೆಗೆ, ಅದರ ಸಾಫ್ಟ್ ಕಾಪಿಯನ್ನು ಅಧಿಕೃತ ಇಮೇಲ್ ವಿಳಾಸ us.university.rb@karnataka.gov.inಕ್ಕೂ ತಲುಪಿಸುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಪ್ರಮುಖ ದಿನಾಂಕಗಳು ಮತ್ತು ಗಮನಿಸಬೇಕಾದ ಅಂಶಗಳು:

ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಮೇ 10 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ತಮ್ಮ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು ಮತ್ತು ವೃತ್ತಿ ಅನುಭವದ ವಿವರಗಳನ್ನೊಳಗೊಂಡ ರೆಸ್ಯೂಮ್ ಅನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು. ಅರ್ಜಿಯನ್ನು ಕಳುಹಿಸುವಾಗ ರಿಜಿಸ್ಟರ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕವೇ ಕಳುಹಿಸುವುದು ಸೂಕ್ತ. ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಎಲ್ಲಾ ವಿವರಗಳು ಸರಿಯಾಗಿವೆ ಎಂದು ಖಚಿತಪಡಿಸಿಕೊಳ್ಳುವುದು ಅಭ್ಯರ್ಥಿಗಳ ಜವಾಬ್ದಾರಿಯಾಗಿರುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಡೊನಾಲ್ಡ್ ಟ್ರಂಪ್ ಸತ್ತರಾ? ಸೋಷಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ ಸುದ್ದಿ; ನಿಜವಾ, ವದಂತಿಯಾ?

ವಾಷಿಂಗ್ಟನ್, ಏಪ್ರಿಲ್ 5: ಇರಾನ್ ಅನ್ನು ಹೊಸಕಿ ಹಾಕುವುದಾಗಿ ಬೆದರಿಕೆ ಹಾಕುತ್ತಿರುವ ಡೊನಾಲ್ಡ್ ಟ್ರಂಪ್ ಅವರೇ ಇನ್ನಿಲ್ಲವಾಗಿದ್ದಾರೆ (Donald Trump death rumours) ಎನ್ನುವಂತಹ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಹಬ್ಬತೊಡಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಅವರನ್ನು ವಾಲ್ಟರ್ ರೀಡ್ ನ್ಯಾಷನಲ್ ಮಿಲಿಟರಿ ಮೆಡಿಕಲ್ ಸೆಂಟರ್​ಗೆ (Walter Reed National Military Medical Center) ದಾಖಲಿಸಲಾಗಿದೆ. ಅವರು ಸತ್ತೇ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಟ್ರಂಪ್ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಇದ್ದಾರೆ. ಅವರಿಗೇನೂ ಆಗಿಲ್ಲ ಎನ್ನುವ ಪ್ರತಿವಾದಗಳೂ ಇವೆ. ಆದರೆ, ಟ್ರಂಪ್ ಅನಾರೋಗ್ಯಗೊಂಡಿರುವ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಮಾಹಿತಿ ಹೊರಬಂದಿಲ್ಲ.

ಟ್ರಂಪ್ ಅವರನ್ನು ವಾಲ್ಟರ್ ರೀಡ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಕೆಲ ವರದಿಗಳು ಹೇಳುತ್ತಿವೆ ಎಂದು ವಿಜ್ಞಾನಿ, ವೈದ್ಯಕೀಯ ತಜ್ಞೆ ಎಂದು ಹೇಳಿಕೊಳ್ಳುವ ಡಾ. ಜೇನ್ ರೂಬಿ ಎಂಬಾಕೆ ಟ್ವೀಟ್ ಮಾಡಿದ್ದಾರೆ. ವಾಲ್ಟರ್ ರೀಡ್ ಆಸ್ಪತ್ರೆಯ ಸುತ್ತಲಿನ ರಸ್ತೆಗಳನ್ನು ಮುಚ್ಚಲಾಗಿದೆ. ಅಧ್ಯಕ್ಷರು ಇವತ್ತು ಸಾರ್ವಜರಿಕರಿಗೆ ಕಾಣಿಸಿಕೊಳ್ಳುವುದಿಲ್ಲವೆಂದು ಶ್ವೇತ ಭವನ ಪ್ರಕಟಿಸಿದೆ ಎಂದು ತಮ್ಮ ಮಾಹಿತಿಗೆ ಇಂಬುಕೊಡುವ ಸಂಗತಿಗಳನ್ನು ಡಾ. ಜೇನ್ ತಿಳಿಸಿದ್ದಾರೆ.

ಇದನ್ನೂ ಓದಿ: ಶತ್ರುಗಳ ನೆಲದಲ್ಲಿ ಬಿದ್ದಿದ್ದ ತನ್ನ ಪೈಲಟ್​ನನ್ನು ಅಮೆರಿಕ ರಕ್ಷಿಸಿಕೊಂಡಿದ್ದು ಹೇಗೆ?

ಚಾರ್ಲಿ ಕಿರ್ಕ್ ಎನ್ನುವ ವ್ಯಕ್ತಿಯೊಬ್ಬರು, ಡೊನಾಲ್ಡ್ ಟ್ರಂಪ್ ಅವರ ಬೆಂಗಾವಲು ವಾಹನಗಳು ಆಸ್ಪತ್ರೆಯತ್ತ ಸಾಗುತ್ತಿರುವ ದೃಶ್ಯದ ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದಾರೆ. ಆದರೆ, ಈ ವಿಡಿಯೋ 2024ರ ಜುಲೈನದ್ದು. ಚುನಾವಣಾ ಪ್ರಚಾರ ಭಾಷಣದ ವೇಳೆ ಟ್ರಂಪ್ ಗಾಯಗೊಂಡಾಗ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆಗಿನ ದೃಶ್ಯ ಇದು ಎಂದು ಅನೇಕ ಜನರು ಸ್ಪಷ್ಟನೆ ಕೊಟ್ಟಿದ್ದಾರೆ.

2024ರ ಜುಲೈನಲ್ಲಿ ಟ್ರಂಪ್ ಅವರನ್ನು ಗುರಿಯಾಗಿಸಿ ಗುಂಡು ಹಾರಿಸಲಾಗಿತ್ತು. ಗುಂಡು ಕಿವಿಯನ್ನು ಸವರಿಕೊಂಡು ಹೋಗಿತ್ತು. ಟ್ರಂಪ್ ಕೊನೆ ಕ್ಷಣದಲ್ಲಿ ತಲೆ ಅಲುಗಾಡಿಸಿದ ಪರಿಣಾಮ ಅವರು ಸಾವಿನಿಂದ ಬಚಾವಾಗಿದ್ದರು. ಆಗ ಗಾಯಗೊಂಡಿದ್ದ ಅವರನ್ನು ಪೆನ್​ಸಿಲ್ವೇನಿಯಾದ ಬಟ್ಲರ್​ನ ಆಸ್ಪತ್ರೆಯೊಂದಕ್ಕೆ ಸೇರಿಸಲಾಗಿತ್ತು. ಆದರೆ, ಈಗ ವಾಲ್ಟರ್ ರೀಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ. ಮೇರಿಲ್ಯಾಂಡ್​ನ ಬೆಥೆಸಾದಲ್ಲಿರುವ ವಾಲ್ಟರ್ ರೀಡ್ ಆಸ್ಪತ್ರೆಯಲ್ಲಿ ಐದು ತಿಂಗಳ ಹಿಂದೆ ಟ್ರಂಪ್ ಅವರನ್ನು ದಾಖಲಿಸಲಾಗಿತ್ತು ಎಂದು ಕೆಲ ಓದುಗರು ಸ್ಪಷ್ಟಪಡಿಸಿದ್ದಾರೆ.

ಟ್ರಂಪ್ ಸತ್ತಿದ್ದಾರೆ, ಸ್ಟೀಫನ್ ಮಿಲ್ಲರ್ ಅಧ್ಯಕ್ಷಗಿರಿ ನಿಭಾಯಿಸುತ್ತಿದ್ದಾರಾ?

ಡೊನಾಲ್ಡ್ ಟ್ರಂಪ್ ಅವರು ತಮ್ಮ ಟ್ರೂತ್ ಸೋಷಿಯಲ್​ನಲ್ಲಿ ನಿನ್ನೆ ಇರಾನ್ ವಿರುದ್ಧ ಎಚ್ಚರಿಕೆಯ ಸಂದೇಶ ಪೋಸ್ಟ್ ಮಾಡಿದ್ದರು. ಹಾರ್ಮುಜ್ ಜಲಸಂಧಿ ತೆರೆಯಲು ಅಥವಾ ಒಪ್ಪಂದ ಮಾಡಿಕೊಳ್ಳಲು ಇರಾನ್​ಗೆ ನೀಡಿದ್ದ 10 ದಿನಗಳ ಡೆಡ್​ಲೈನ್ ಮುಗಿಯುತ್ತಾ ಬಂದಿದೆ. ಅವರ ಮೇಲೆ ನರಕ ವಕ್ಕರಿಸಲು 48 ಗಂಟೆ ಮಾತ್ರ ಇದೆ ಎಂದು ಟ್ರಂಪ್ ಬರೆದುಕೊಂಡಿದ್ದರು.

ಇದನ್ನೂ ಓದಿ: 48 ಗಂಟೆಗಳಲ್ಲಿ ಒಪ್ಪಂದವಾಗದಿದ್ದರೆ ನರಕ ನೋಡುತ್ತೀರಿ; ಇರಾನ್‌ಗೆ ಟ್ರಂಪ್ ಹೊಸ ಎಚ್ಚರಿಕೆ

ಆದರೆ, ಟ್ರಂಪ್ ಈ ಟ್ವೀಟ್ ಬರೆದಿಲ್ಲ. ಅವರು ಈಗ ವಾಲ್ಟರ್ ರೀಡ್​ನಲ್ಲಿ ಇದ್ದಾರೆ. ಕೊನೆಯ ಕ್ಷಣಗಳನ್ನು ಎದುರಿಸುತ್ತಿದ್ದಾರೆ. ಶ್ವೇತ ಭವನದ ಅಧಿಕಾರಿ ಸ್ಟೀಫನ್ ಮಿಲ್ಲರ್ ಅವರು ಹಂಗಾಮಿ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಒಬ್ಬರು ಟ್ವೀಟ್ ಮಾಡಿದ್ದಾರೆ.

ಆದರೆ, ಹೆಚ್ಚಿನ ಆನ್​ಲೈನ್ ಸಮುದಾಯವು ಈ ಸುದ್ದಿಯನ್ನು ಸುಳ್ಳು ಎಂದು ಹೇಳಿವೆ. ಹಿಂದೆಲ್ಲಾ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮೊದಲಾದ ಬೇರೆ ಬೇರೆ ನಾಯಕರ ವಿಷಯದಲ್ಲೂ ಇಂಥ ಸಾವಿನ ವದಂತಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿರುವುದುಂಟು.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಕುಣಿ’ ಕಿರುಚಿತ್ರಕ್ಕೆ ಫಿದಾ ಆದ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು

ಸತ್ಯ ಹೆಗಡೆ ಅವರು ತಮ್ಮ ‘ಸತ್ಯ ಹೆಗಡೆ ಸ್ಟುಡಿಯೋಸ್’ (Satya Hegde Studios) ಯೂಟ್ಯೂಬ್ ಮೂಲಕ ಅನೇಕ ಹೊಸ ಪ್ರತಿಭೆಗಳಿಗೆ ವೇದಿಕೆ ಒದಗಿಸುತ್ತಾ ಬರುತ್ತಿದ್ದಾರೆ. ಹಲವು ಕಿರುಚಿತ್ರಗಳು (Shorts Films) ಅವರ ಯೂಟ್ಯೂಬ್ ಚಾನೆಲ್ ಮೂಲಕ ಬಿಡುಗಡೆ ಆಗಿವೆ. ಈಗ ರಿಲೀಸ್ ಆಗಿರುವ ಹೊಸ ಕಿರುಚಿತ್ರ ‘ಕುಣಿ’ (Kuni) ಕೂಡ ಗಮನ ಸೆಳೆಯುತ್ತಿದೆ. 29 ನಿಮಿಷಗಳ ಅವಧಿ ಇರುವ ಈ ಕಿರುಚಿತ್ರಕ್ಕೆ ಹರೀಶ್ ಲೇಖಿ ಅವರು ನಿರ್ದೇಶನ ಮಾಡಿದ್ದಾರೆ.

‘ಕುಣಿ’ ಶಾರ್ಟ್​ಫಿಲ್ಮ್ ಈಗಾಗಲೇ ವಿವಿಧ ಫಿಲ್ಮ್ ಫೆಸ್ಟಿವಲ್​ಗಳಲ್ಲಿ ಪ್ರದರ್ಶನ ಕಂಡಿದೆ. 50ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಈ ಕಿರುಚಿತ್ರಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ತಂದೆ ಮತ್ತು ಮಗನ ನಡುವಿನ ಬಾಂಧವ್ಯದ ಕಹಾನಿ ಈ ಕಿರುಚಿತ್ರದಲ್ಲಿ ಇದೆ. ನೋಡಿದ ಪ್ರೇಕ್ಷಕರು ಮೆಚ್ಚುಗೆಯ ಕಮೆಂಟ್ ಮಾಡುತ್ತಿದ್ದಾರೆ.

ನಾಗತಿಹಳ್ಳಿ ಚಂದ್ರಶೇಖರ್, ಕಾರ್ಕೋಚ್ ಸುಧಿ, ರಾಜೇಶ್ ನಟರಂಗ, ಸಾಗರ್ ಪುರಾಣಿಕ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ‘ಕುಣಿ’ ಕಿರುಚಿತ್ರಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಎಲ್ಲರಿಂದ ಸಿಗುತ್ತಿರುವ ಮೆಚ್ಚುಗೆ ಕಂಡು ಈ ತಂಡಕ್ಕೆ ಖುಷಿಯಾಗಿದೆ. ಒಳ್ಳೆಯ ಕಿರುಚಿತ್ರಗಳನ್ನು ನಿರ್ಮಾಣ ಮಾಡುವ ಇನ್ನಷ್ಟು ಪ್ರತಿಭೆಗಳಿಗೆ ಉತ್ಸಾಹ ತುಂಬಿದಂತಾಗಿದೆ.

‘ಕುಣಿ ಕಿರುಚಿತ್ರ:

ನಟ ರಾಜೇಶ್ ನಟರಂಗ ಅವರು ಮಾತನಾಡಿ, ‘ಕುಣಿ ಕಿರುಚಿತ್ರ ಒಂದು ಉತ್ಕೃಷ್ಟವಾದ ಕೃತಿ. ಒಳ್ಳೆಯ ಥೀಮ್ ಇದರಲ್ಲಿದೆ. ಇದರ ಬರವಣಿಗೆ ಬಹಳ ಸೂಕ್ಷ್ಮ ಆಗಿದೆ. ನಮ್ಮ ಸುತ್ತಮುತ್ತ ನಡೆಯುವ ಕಥೆ ಇದೆ. ಜನರೇಷನ್ ಗ್ಯಾಪ್ ಬಗ್ಗೆ ಈ ಕಿರುಚಿತ್ರ ಮಾತನಾಡುತ್ತದೆ. ಪ್ರತಿಯೊಬ್ಬ ನಟರು ಇದರಲ್ಲಿ ಉತ್ತಮವಾಗಿ ನಟಿಸಿದ್ದಾರೆ. ಕ್ಲೈಮ್ಯಾಕ್ಸ್ ಅದ್ಭುತವಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಅಂತಾರಾಷ್ಟ್ರೀಯ ಕಿರುಚಿತ್ರೋತ್ಸವ 2026: ಉಚಿತ ಪ್ರವೇಶಾವಕಾಶ

‘ಉತ್ತರ ಕರ್ನಾಟಕದ ಪ್ರತಿಭೆಗಳು ಸೇರಿ ಮಾಡಿದ ಕಿರುಚಿತ್ರ ಇದು. ಎಲ್ಲ ಫ್ಯಾಮಿಲಿಯಲ್ಲಿ ಇರುವ ಸಂಕೀರ್ಣತೆಯನ್ನು ಇದರಲ್ಲಿ ಚೆನ್ನಾಗಿ ತೋರಿಸಿದ್ದಾರೆ. ನಮ್ಮ ಉತ್ತರ ಕರ್ನಾಟಕದ ಈ ರೀತಿ ಪ್ರತಿಭೆಗಳು ಇನ್ನಷ್ಟು ಹೊರಬರಲಿ ಅಂತ ನಾನು ಹಾರೈಸುತ್ತೇನೆ’ ಎಂದು ಸಾಗರ್ ಪುರಾಣಿಕ್ ಅವರು ಹೇಳಿದ್ದಾರೆ. ನಟ ಕಾಕ್ರೋಚ್ ಸುಧಿ ಅವರಿಗೂ ಈ ಕಿರುಚಿತ್ರ ತುಂಬಾ ಇಷ್ಟ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕಳ್ಳ ಬೆಕ್ಕನ್ನು ಕಂಡು ಹಿಡಿಯಬಲ್ಲಿರಾ

ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (optical illusion) ಅಥವಾ ಒಗಟನ್ನು ಬಿಡಿಸುವ ಮೋಜಿನ ಆಟಗಳು ಎಲ್ಲರ ಗಮನ ಸೆಳೆಯುತ್ತಿವೆ. ಈ ಒಗಟಿನ ಚಿತ್ರಗಳನ್ನು ಬಿಡಿಸುವುದು ಖುಷಿಕೊಟ್ಟರೂ ತಲೆಗೆ ಹುಳ ಬಿಡುತ್ತದೆ. ಎಷ್ಟೇ ಯೋಚನೆ ಮಾಡಿದರೂ ಉತ್ತರ ಹೊಳೆಯುವುದೇ ಇಲ್ಲ. ಇದೀಗ ವೈರಲ್ ಆಗಿರುವ ಈ ಇಲ್ಯೂಷನ್ ಚಿತ್ರವು ಟ್ರಿಕ್ಕಿಯಾಗಿದೆ. ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಬೆಕ್ಕನ್ನು 10 ಸೆಕೆಂಡುಗಳಲ್ಲಿ ಪತ್ತೆ ಹಚ್ಚಬೇಕು.  ನಿಮ್ಮ ಮೆದುಳಿಗೆ ಸ್ವಲ್ಪ ಕೆಲಸ ನೀಡಿ.

ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು?

ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಸುಂದರ ಭೂ ದೃಶ್ಯವನ್ನು ಕಾಣಬಹುದು. ಮರುಭೂಮಿಯಲ್ಲಿ ಬೆಳೆಯುವ ಸಸ್ಯಗಳು ಮತ್ತು ಬೆಟ್ಟಗಳು ನಿಮ್ಮ ಕಣ್ಣಿಗೆ ಕಾಣಿಸುತ್ತದೆ. ಆದರೆ ಇಲ್ಲಿ ಬೆಕ್ಕೊಂದು ಅಡಗಿ ಕುಳಿತಿವೆ. ನೀವು ಹತ್ತಿರದಿಂದ ನೋಡಿದರೆ ಮಾತ್ರ ಈ ಬೆಕ್ಕು ಕಾಣಲು ಸಾಧ್ಯ. ನೀವು ಈ ಕಳ್ಳಬೆಕ್ಕನ್ನು ಕಂಡು ಹಿಡಿಯಲು ಸಾಧ್ಯವೇ ಎಂದು ನೋಡಿ.

ಇದನ್ನೂ ಓದಿ: ಬುದ್ಧಿವಂತರಿಗೊಂದು ಸವಾಲ್;‌ ಜಸ್ಟ್ 9 ಸೆಕೆಂಡುಗಳಲ್ಲಿ ಈ ಗಾರ್ಡನ್‌ನಲ್ಲಿರುವ ಚಿಟ್ಟೆಯನ್ನು ಗುರುತಿಸಬಲ್ಲಿರಾ

ಬೆಕ್ಕು ನಿಮ್ಮ ಕಣ್ಣಿಗೆ ಕಾಣಿಸಿತೇ?

ಎಷ್ಟೇ ದೃಷ್ಟಿ ಹರಿಸಿದರೂ ಕಳ್ಳ ಬೆಕ್ಕನ್ನು ಕಂಡು ಹಿಡಿಯಲು ಸಾಧ್ಯವಾಗಿಲ್ಲ ಎಂದು ತಲೆ ಕೆಡಿಸಿಕೊಳ್ಳಬೇಡಿ. ನೀವು ಅತ್ಯುತ್ತಮ ವೀಕ್ಷಣಾ ಕೌಶಲ್ಯ ಹಾಗೂ ತೀಕ್ಷ್ಣ ದೃಷ್ಟಿ ಹೊಂದಿದ್ದರೆ ಈ ಒಗಟಿನ ಚಿತ್ರವನ್ನು ಕೇವಲ 10 ಸೆಕೆಂಡುಗಳಲ್ಲಿ ಬಿಡಿಸಲು ಸಾಧ್ಯ. ಆದರೆ ಬೆಕ್ಕು ಎಲ್ಲಿದೆ ಎಂದು ಈ ಕೆಳಗಿನ ಚಿತ್ರದಲ್ಲಿ ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಬಾಗಲಕೋಟೆ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ; ಇಬ್ಬರು ಪೊಲೀಸ್ ಆಫೀಸರ್ಸ್ ಎತ್ತಂಗಡಿ

ಬಾಗಲಕೋಟೆ, ಏಪ್ರಿಲ್​ 05: ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ (By-election) ಗೆಲ್ಲೋದಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ತಂತ್ರ ಪ್ರತಿತಂತ್ರ ಹೂಡುತ್ತಿವೆ. ಈ ಮಧ್ಯೆ ನಿನ್ನೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು. ದೊಡ್ಡ ಹೈಡ್ರಾಮಾವೇ ನಡೆದಿತ್ತು. ಇದೀಗ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ.

ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಸಂಘಟನೆ ಅಪಪ್ರಚಾರ ಮಾಡಿದ ಆರೋಪ ಕೇಳಿಬಂದಿದೆ. ಕುಮಾರೇಶ್ವರ ಕ್ಯಾಂಪಸ್​​ನಲ್ಲಿ ಕರಪತ್ರ ಹಿಡಿದು ಬಂದಿದ್ದ 18 NSUI ಕಾರ್ಯಕರ್ತರು ಹಾಗೂ ಬಿಜೆಪಿಯ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿತ್ತು. ಬಳಿಕ ಐವರು NSUI ಕಾರ್ಯಕರ್ತರನ್ನು ಪೊಲೀಸರು ಠಾಣೆಗೆ ಕರೆ ತಂದಿದ್ದರು. ಬಾಗಲಕೋಟೆ ನವನಗರದ ಸಿಪಿಐ ಕಚೇರಿಯಲ್ಲಿ ಗದ್ದಲ ಉಂಟಾಗಿತ್ತು. ಠಾಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ಜಮಾವಣೆಗೊಂಡು ಗೊಂದಲಮಯ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಅಪಪ್ರಚಾರ ಆರೋಪ

ಇದೀಗ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆ ಸಿಪಿಐ ವಿಜಯ ಮುರಗುಂಡಿ ಮತ್ತು ನವನಗರ ಪೊಲೀಸ್ ಠಾಣೆ ಪಿಎಸ್​ಐ ಅಶೋಕ ಚೌಹಾಣ್​​ರನ್ನು ಎತ್ತಂಗಡಿ ಮಾಡಿ ಡಿಜಿ & ಐಜಿಪಿ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಉತ್ತರ ವಲಯ ಐಜಿಪಿ ಕಚೇರಿಗೆ PSI ಅಶೋಕ್​ರನ್ನ ವರ್ಗಾವಣೆ ಮಾಡಲಾಗಿದ್ದು, ವಿಜಯಪುರ ಮಹಿಳಾ ಠಾಣೆಗೆ ಸಿಪಿಐ ವಿಜಯ ಮುರಗುಂಡಿ ಅವರನ್ನ ವರ್ಗಾವಣೆ ಮಾಡಲಾಗಿದೆ.

ಬಾಗಲಕೋಟೆ ಡಿಸಿ ಭೇಟಿ ಮಾಡಿದ ಬಿಜೆಪಿ ನಾಯಕರು

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಡಿಸಿ ಕಚೇರಿಗೆ ವಿಪಕ್ಷ ನಾಯಕ ಆರ್.ಅಶೋಕ ನೇತೃತ್ವದಲ್ಲಿ ಬಿಜೆಪಿ ನಾಯಕರು ಡಿಸಿ ಭೇಟಿ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದವರ ವಿರುದ್ಧ ಕ್ರಮಕೈಗೊಳ್ಳಿ ಹಾಗೂ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡುವಂತೆ ಮನವಿ ಪತ್ರ ನೀಡಲಾಗಿದೆ. ವಿಪಕ್ಷ ನಾಯಕ ಅಶೋಕ್​​, ಸಂಸದ ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ನಾರಾಯಣಸ ಭಾಂಡಗೆ, MLC ಪೂಜಾರ
ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್, ಅರುಣ ಶಹಾಪುರ ಭಾಗಿ ಆಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link