ಟೆಸ್ಟ್ ಕ್ರಿಕೆಟ್‌ಗೆ ಹೊಸ ಕಾಯಕಲ್ಪ: ಬಿಸಿಸಿಐ ಭರ್ಜರಿ ಪ್ಲ್ಯಾನ್
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈಗ ಟೆಸ್ಟ್ ಮತ್ತು ರೆಡ್ ಬಾಲ್ (ಕೆಂಪು ಚೆಂಡು) ಕ್ರಿಕೆಟ್‌ಗೆ ಹೊಸ ಚೈತನ್ಯ ನೀಡಲು ಸಜ್ಜಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮುಂಬರುವ ದಿನಗಳಲ್ಲಿ ಯುವ ಆಟಗಾರರನ್ನು ಟೆಸ್ಟ್ ಕ್ರಿಕೆಟ್‌ಗೆ ಸಿದ್ಧಪಡಿಸಲು ಬಿಸಿಸಿಐ ಹಲವಾರು ಕ್ರಾಂತಿಕಾರಿ ಕ್ರಮಗಳನ್ನು ಕೈಗೊಳ್ಳಲಿದೆ. ಅದರ ಸಂಪೂರ್ಣ ಜವಾಬ್ದಾರಿಯನ್ನು ಸೆಂಟರ್ ಆಫ್ ಎಕ್ಸಲೆನ್ಸ್ (CoE) ಮುಖ್ಯಸ್ಥರಾದ ವಿವಿಎಸ್ ಲಕ್ಷ್ಮಣ್ ಅವರಿಗೆ ನೀಡಲಾಗುತ್ತಿದೆ. ಟೆಸ್ಟ್ ಕ್ರಿಕೆಟ್ನ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿದ್ದ ವಿವಿಎಸ್ ಲಕ್ಷ್ಮಣ್ ಅವರ ನೇತೃತ್ವದಲ್ಲಿ ಬಿಸಿಸಿಐ ಶೀಘ್ರದಲ್ಲೇ…