Headlines

nagaraj11081993

Horoscope Today: ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 5, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ತದಿಗೆ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.     Source…

Read More

RCB vs CSK ಪಂದ್ಯಕ್ಕೆ 6 ಆಟಗಾರರು ಅಲಭ್ಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಬಹುನಿರೀಕ್ಷಿತ ಈ ಪಂದ್ಯದಿಂದ 6 ಆಟಗಾರರು ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಆ ಆಟಗಾರರು ಯಾರೆಂದರೆ… ಮಹೇಂದ್ರ ಸಿಂಗ್ ಧೋನಿ: ಅಭಿಮಾನಿಗಳ ನೆಚ್ಚಿನ 'ಥಲಾ' ಸ್ನಾಯು ಸೆಳೆತದ (Calf Strain) ಸಮಸ್ಯೆಯಿಂದಾಗಿ ಚೇತರಿಸಿಕೊಳ್ಳುತ್ತಿದ್ದು,  ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಮ್ಯಾಥ್ಯೂ ಶಾರ್ಟ್: ಆಸ್ಟ್ರೇಲಿಯಾದ ಆಲ್​ರೌಂಡರ್ ಮ್ಯಾಥ್ಯೂ ಶಾರ್ಟ್ ಹೆಬ್ಬೆರಳು…

Read More

ಮಹಿಳಾ ಕಸ್ಟಮ್ ಅಧಿಕಾರಿ ಮೇಲೆ ಅತ್ಯಾಚಾರ, ಬ್ಲ್ಯಾಕ್ ಮೇಲ್ ಆರೋಪ: ಉದ್ಯಮಿ ಅರೆಸ್ಟ್​​

ಬೆಂಗಳೂರು, ಏಪ್ರಿಲ್​​ 05: ಮಹಿಳಾ ಕಸ್ಟಮ್ ಅಧಿಕಾರಿಗೆ ಬ್ಲ್ಯಾಕ್ ಮೇಲ್ ಮತ್ತು ಅತ್ಯಾಚಾರ ಆರೋಪ ಸಂಬಂಧ ಎಂ.ಕೃಪಲಾನಿ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಹಿಳಾ ಅಧಿಕಾರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಹೇಳಿದಂತೆ ಕೇಳದಿದ್ದರೆ ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ಕೃಪಲಾನಿ ಕಿರುಕುಳಕ್ಕೆ ಬೇಸತ್ತು ಕೊನೆಗೂ ಈ ಬಗ್ಗೆ ಮಹಿಳಾ ಅಧಿಕಾರಿ ದೂರು ನೀಡಿದ್ದು, ಯಲಹಂಕ ಠಾಣೆಯಲ್ಲಿ ಈತನ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ್ದರು. ಬಳಿಕ ಇಂದಿರಾನಗರ ಪೊಲೀಸ್ ಠಾಣೆಗೆ…

Read More

Daily Devotional: ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಯಾವುದೇ ಶುಭ ಸಮಾರಂಭದಲ್ಲಿ ಒಳ್ಳೆಯ ಆಹಾರ ಸೇವನೆಯ ನಂತರ ತಾಂಬೂಲ ಸೇವಿಸುವುದು ವಾಡಿಕೆ. ಇದು ಜೀರ್ಣಕ್ರಿಯೆಗೆ ಸಹಕಾರಿ ಹಾಗೂ ಮಹಾಲಕ್ಷ್ಮಿ, ಐಶ್ವರ್ಯ ಮತ್ತು ಸಂತೋಷದ ಸಂಕೇತವಾಗಿದೆ. ಆದರೆ ವಿದ್ಯಾರ್ಥಿಗಳು ತಾಂಬೂಲ ಸೇವನೆಯಿಂದ ದೂರವಿರಬೇಕು ಎಂದು ಶಾಸ್ತ್ರಗಳು ಹೇಳುತ್ತವೆ. ಬ್ರಹ್ಮಚಾರಿಗಳು ಕೂಡ ಇದನ್ನು ಸೇವಿಸಬಾರದು. ತಾಂಬೂಲದಲ್ಲಿ ವೀಳ್ಯದೆಲೆ, ಅಡಿಕೆ, ಸುಣ್ಣ, ಏಲಕ್ಕಿ, ಕಸ್ತೂರಿ, ಜಾಜಿ, ಜಾಪತ್ರೆ ಇರುತ್ತವೆ. ಇದನ್ನು ಸೇವಿಸುವುದರಿಂದ ವಿದ್ಯಾರ್ಥಿಗಳ…

Read More

ಪೊಲೀಸ್ ಕ್ವಾಟ್ರಸ್ ಜಾಗಕ್ಕೆ ಸ್ಕೆಚ್ ಹಾಕಿದ್ದ ಭೂಗಳ್ಳರು ಅಂದರ್: ಮೂವರು ಅರೆಸ್ಟ್​​

ಬೆಂಗಳೂರು, ಏಪ್ರಿಲ್​​ 05: ಮಲ್ಲೇಶ್ವರಂನಲ್ಲಿನ ಪೊಲೀಸ್ ಕ್ವಾಟ್ರಸ್ ಜಾಗ ಕಬಳಿಸಲು ಸ್ಕೆಚ್​​ ಹಾಕಿದ್ದ ಭೂಗಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. 25 ಸಾವಿರ ಚದರಡಿ ಜಾಗವನ್ನು ಲಪಟಾಯಿಸಲು ಮುಂದಾಗಿದ್ದ ವಂಚಕರು, ಅದಕ್ಕೆ ಬೇಕಾದ ದಾಖಲೆಗಳನ್ನು ಕೂಡ ಸಿದ್ಧಪಡಿಸಿಕೊಂಡಿದ್ದರು. ಪ್ರಕರಣ ಸಂಬಂಧ ಕೃಷ್ಣ ಮೂರ್ತಿ, ಶ್ರೀನಾಥ್ ನಗರಗಡ್ಡೆ ಮತ್ತು ಕೃಷ್ಣ ಎಂಬವರನ್ನು ಅರೆಸ್ಟ್​​ ಮಾಡಲಾಗಿದ್ದು, ಇದೇ ರೀತಿ ನಗರದ ಹಲವು ಕಡೆ ಸರ್ಕಾರಿ ಜಾಗ ನುಂಗಿರುವ ಬಗ್ಗೆ ವಿಚಾರಣೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಈ ಬಗ್ಗೆ ಮಲ್ಲೇಶ್ವರಂ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ತಮ್ಮ ಬಗ್ಗೆ ಜನರಿಂದ ತಿಳಿಯುವ ಕುತೂಹಲ

ಮೇಷ ರಾಶಿ: ಜೀವನದಲ್ಲಿ ಬದಲಾವಣೆಯೆ ಶಾಶ್ವತ ಎನ್ನುವ ವಾಕ್ಯವನ್ನು ಸ್ಮರಿಸುತ್ತ ಮುಂದಡಿಯಿಡಿ. ನೆಮ್ಮದಿ ನಿಮ್ಮೆದುರು ನಿಲ್ಲುವುದು. ಇಂದು ಸಂಗಾತಿಗೆ ನಿಮ್ಮ ಮೇಲೆ ಅಭಿಮಾನ ಬರಬಹುದು. ಅವಿವಾಹಿತರು ವಿವಾಹದ ಬಗ್ಗೆ ಬಂಧುಗಳ ಜೊತೆ ಚರ್ಚಿಸುವಿರಿ. ಮನಸ್ಸಿನ ನಿಯಂತ್ರಣವು ಲಯವನ್ನು ತಪ್ಪಬಹುದು. ನೀವು ಇಂದು ವೃತ್ತಿಪರ ರಂಗದಲ್ಲಿ ನಿಮಗೆ ಪ್ರಶಂಸೆ ಸಿಗುವ ಸಾಧ್ಯತೆ ಇದೆ. ಹೊಸತನ್ನು ಕಲಿಯುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ. ವೃಷಭ ರಾಶಿ: ಸಾಲದ ವಿಚಾರ…

Read More

GT vs RR: ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ ಗುಜರಾತ್; ರಾಜಸ್ಥಾನ್​ಗೆ 2ನೇ ಜಯ

ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿನಡೆದ ಐಪಿಎಲ್ 2026 ರ 9ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ ಗುಜರಾತ್ ಟೈಟನ್ಸ್ ಲೀಗ್​ನಲ್ಲಿ ಸತತ ಎರಡನೇ ಪಂದ್ಯವನ್ನು ಸೋತರೆ, ಇತ್ತ ಸಾಂಘಿಕ ಪ್ರದರ್ಶನ ನೀಡಿದ ರಾಜಸ್ಥಾನ್ ಸತತ ಎರಡನೇ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ 210 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್ 204 ರನ್​ ಕಲೆಹಾಕಲಷ್ಟೇ ಶಕ್ತವಾಗಿ 7 ರನ್​ಗಳಿಂದ…

Read More

ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್​​; ಸಿಪಿಐ ಕಚೇರಿ ಎದುರು ಹೈಡ್ರಾಮಾ

ಬಾಗಲಕೋಟೆ, ಏಪ್ರಿಲ್​​ 04: ಉಪಚುನಾವಣಾ ಕಣದಲ್ಲಿ ರಾಜಕೀಯ ಜಿದ್ದಾಜಿದ್ದಿ ತಾರಕಕ್ಕೇರಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಬಾಗಲಕೋಟೆಯಲ್ಲಿ ಕರಪತ್ರ ಯುದ್ಧ ಶುರುವಾಗಿದೆ. ವಿದ್ಯಾರ್ಥಿಗಳಿಗೆ ಕರಪತ್ರ ಹಂಚುತ್ತಿದ್ದಾರೆಂದು ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ ವಿರುದ್ಧ ಬಿಜೆಪಿ ಗಂಭೀರ ಆರೋಪ ಮಾಡಿದೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ್ ಅವರ ವಿರುದ್ಧ ಕರಪತ್ರಗಳನ್ನು ಹಂಚಲಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರು ಕರಪತ್ರ ಸಾಗಿಸುತ್ತಿದ್ದ ಕಾರೊಂದನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಬಾಗಲಕೋಟೆಯ ಸಿಪಿಐ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಅದೇ ಸ್ಥಳಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಕೂಡ…

Read More

ಬಾಲಿವುಡ್​ಗೆ ಎಚ್ಚರಿಕೆ ಕೊಟ್ಟ ಯುಪಿ ಸಿಎಂ ಯೋಗಿ ಆದಿತ್ಯನಾಥ್

ಸಿನಿಮಾಗಳು (Cinema) ಸಮಾಜದ ಮೇಲೆ ದೊಡ್ಡ ಮಟ್ಟದಲ್ಲಿ ಪ್ರಭಾವ ಬೀರುತ್ತವೆ. ಕೆಲ ದಶಕಗಳ ಹಿಂದೆ ಸಮಾಜಕ್ಕೆ ಸಂದೇಶ ನೀಡುವ ಸಿನಿಮಾಗಳು, ಸಮಾಜದಲ್ಲಿ ಇದ್ದ ಡೊಂಕನ್ನು ಎತ್ತಿ ತೋರಿಸುವ ಸಿನಿಮಾಗಳು ನಿರ್ಮಾಣ ಆಗುತ್ತಿದ್ದವು. ಎಲ್ಲ ಭಾಷೆಗಳಲ್ಲಿಯೂ ಸಹ ಈ ರೀತಿಯ ಸಿನಿಮಾಗಳು ನಿರ್ಮಾಣ ಆಗುತ್ತಿದ್ದವು ಆದರೆ ಇತ್ತೀಚೆಗೆ ಸಿನಿಮಾಗಳಲ್ಲಿ ಒಳಿತಿಗಿಂತಲೂ ಕೆಡುಕನ್ನೇ ವೈಭವೀಕರಿಸಲಾಗುತ್ತಿದೆ. ಕೆಡುಕೇ ಉತ್ತಮ ಎಂಬ ರೀತಿಯಲ್ಲಿ ತೋರಿಸಲಾಗುತ್ತಿದೆ. ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿದ್ದಾರೆ. ಚಿತ್ರರಂಗಕ್ಕೆ ಅವರು ಎಚ್ಚರಿಕೆಯನ್ನೂ ಸಹ ನೀಡಿದ್ದಾರೆ….

Read More

ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!

ಜೈಪುರ, ಏಪ್ರಿಲ್ 4: ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಯುವಕನೊಬ್ಬ ಅಪಾಯಕಾರಿ ಸಾಹಸ ಮಾಡಿದ್ದಾನೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಲು ಯುವಕನೊಬ್ಬ ಪೆಟ್ರೋಲ್ ಪಂಪ್‌ನಲ್ಲಿ ತನ್ನ ಸ್ಕಾರ್ಪಿಯೋಗೆ ಡೀಸೆಲ್ ತುಂಬಿಸಿದ ನಂತರ ಡೀಸೆಲ್​ನಿಂದಲೇ ತನ್ನ ಗಾಡಿಯನ್ನು ತೊಳೆದಿರುವ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗಿದ್ದು, ಈ ಕೃತ್ಯ ಎಸಗಿದ ಆತನನ್ನು ಬಂಧಿಸಲು ಒತ್ತಾಯಿಸಲಾಗಿತ್ತು. ಆತನನ್ನು ಪೊಲೀಸರು ಬಂಧಿಸಿದ್ದು, ವಿಡಿಯೋ ಮಾಡಿದವನನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More