ಮಹಿಳಾ ಕಸ್ಟಮ್ ಅಧಿಕಾರಿ ಮೇಲೆ ಅತ್ಯಾಚಾರ, ಬ್ಲ್ಯಾಕ್ ಮೇಲ್ ಆರೋಪ: ಉದ್ಯಮಿ ಅರೆಸ್ಟ್
ಬೆಂಗಳೂರು, ಏಪ್ರಿಲ್ 05: ಮಹಿಳಾ ಕಸ್ಟಮ್ ಅಧಿಕಾರಿಗೆ ಬ್ಲ್ಯಾಕ್ ಮೇಲ್ ಮತ್ತು ಅತ್ಯಾಚಾರ ಆರೋಪ ಸಂಬಂಧ ಎಂ.ಕೃಪಲಾನಿ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಹಿಳಾ ಅಧಿಕಾರಿಗೆ ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಹೇಳಿದಂತೆ ಕೇಳದಿದ್ದರೆ ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ಕೃಪಲಾನಿ ಕಿರುಕುಳಕ್ಕೆ ಬೇಸತ್ತು ಕೊನೆಗೂ ಈ ಬಗ್ಗೆ ಮಹಿಳಾ ಅಧಿಕಾರಿ ದೂರು ನೀಡಿದ್ದು, ಯಲಹಂಕ ಠಾಣೆಯಲ್ಲಿ ಈತನ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ್ದರು. ಬಳಿಕ ಇಂದಿರಾನಗರ ಪೊಲೀಸ್ ಠಾಣೆಗೆ…