ಬಾಗಲಕೋಟೆ, ಏಪ್ರಿಲ್ 04: ಉಪ ಚುನಾವಣೆಗೆ ಯಾವುದೇ ಅಜೆಂಡಾ ಎಂಬುದನ್ನು ಕಾಂಗ್ರೆಸ್ ಇಟ್ಟುಕೊಂಡಿಲ್ಲ. ನಮ್ಮ ಕೆಲಸಗಳನ್ನು ಜನರ ಮುಂದೆ ಇಟ್ಟಿದ್ದು, ಮತದಾರರು ಅವುಗಳ ವಿಮರ್ಶೆ ಮಾಡಿ ವೋಟ್ ಹಾಕಲಿದ್ದಾರೆ. ಬಿಜೆಪಿಗರು ನನ್ನ ಮೇಲೆ ಮಾತಿನ ದಾಳಿ ನಡೇಸೋದು ಬಿಟ್ಟು, ರಾಜ್ಯದಲ್ಲಿ ಅಧಿಕಾರದಲ್ಲಿದ್ದ 9 ವರ್ಷ ನಾವೇನು ಮಾಡಿದ್ದೇವೆ ಎಂಬುದನ್ನು ಹೇಳುತ್ತಿಲ್ಲ. ಸಿದ್ದರಾಮಯ್ಯನವರ ಮೇಲೆ ಅಟ್ಯಾಕ್ ಮಾಡಿ ಎಂದು ಆರ್ಎಸ್ಎಸ್ನವರು ಬಿಜೆಪಿಗರಿಗೆ ಹೇಳಿಕೊಟ್ಟಿದ್ದು, ಬಡವರ ಮತ್ತು ಹಿಂದುಳಿದವರ ಪರ ನಾನು ಇರೋದಕ್ಕೇ ಅವರು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಹಿಂದಿನ ಉಪ ಚುನಾವಣೆಗಳಂತೆ ಈಗಿನ ಎರಡೂ ಬೈ ಎಲೆಕ್ಷನ್ಗಳಲ್ಲಿಯೂ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನೂ ಸಿಎಂ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಏಪ್ರಿಲ್ 04: 01 ಏಪ್ರಿಲ್ 2019ಕ್ಕಿಂತ ಹಿಂದೆ ರಿಜಿಸ್ಟ್ರೇಷನ್ ಆಗಿರುವ ಎಲ್ಲಾ ವಾಹನಗಳಿಗೂ ವಾಹನ ಮಾಲೀಕರು ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್ (ಹೆಚ್ಎಸ್ಆರ್ಪಿ HSRP)ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು, ಇದರಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಆ ಮೂಲಕ ಹರಡುತ್ತಿರುವ ಸುಳ್ಳು ಸುದ್ದಿಗೆ ಬ್ರೇಕ್ ಹಾಕಲಾಗಿದೆ. ಈ ಕುರಿತಾಗಿ ರಾಜ್ಯ ಸಾರಿಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.
ವದಂತಿಗೆ ತೆರೆ ಎಳೆದ ರಾಜ್ಯ ಸಾರಿಗೆ ಇಲಾಖೆ
ಹಳೆಯ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಲ್ಲ ಎಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿಬಿಡಲಾಗಿತ್ತು. ಇದೀಗ ಅದೆಲ್ಲದಕ್ಕೂ ರಾಜ್ಯ ಸಾರಿಗೆ ಇಲಾಖೆ ತೆರೆ ಎಳೆದಿದೆ.
ಸಾರಿಗೆ ಇಲಾಖೆಯ ಪ್ರಕಾರ 01 ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದ್ದು, ಈ ನಿಯಮದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ತಿಳಿಸಿದೆ. ರಾಜ್ಯದ ಎಲ್ಲಾ ವಾಹನ ಮಾಲೀಕರು ತಮ್ಮ ಹಳೆಯ ವಾಹನಗಳಿಗೆ ತಕ್ಷಣವೇ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.
ಪ್ರಕಟಣೆಯಲ್ಲಿ ಏನಿದೆ?
ಕೇಂದ್ರ ಸರ್ಕಾರವು 1989ರ ಕೇಂದ್ರ ಮೋಟಾರು ವಾಹನ ನಿಯಮಗಳ 50ನೇ ವಿಧಿಯ ಅನ್ವಯ, 01 ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್ಪಿ ಅಳವಡಿಕೆ ಕಡ್ಡಾಯ ಮಾಡಿದೆ. ಈ ನಿಯಮವು 2018ರಲ್ಲಿ ಜಾರಿಗೊಂಡಿದ್ದು, ರಾಜ್ಯದಲ್ಲಿಯೂ ಈ ನಿಯಮ ಅನ್ವಯವಾಗುತ್ತಿದೆ. ರಾಜ್ಯ ಸಾರಿಗೆ ಇಲಾಖೆ 2023ರಲ್ಲಿ ಹೊರಡಿಸಿದ ಅಧಿಸೂಚನೆ ಪ್ರಕಾರ, 2019ರ ಏಪ್ರಿಲ್ 1ರ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿತ್ತು.
ಈ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ, ನ್ಯಾಯಾಲಯವು ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ಅವಕಾಶ ನೀಡಿದ್ದು, ಹೆಚ್ಎಸ್ಆರ್ಪಿ ಅಳವಡಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿರ್ಧಾರವನ್ನು ಅನುಸರಿಸುವಂತೆ ಸೂಚಿಸಿತ್ತು. ಇದೇ ಸಂದರ್ಭದಲ್ಲಿ, ವಾಹನ ಮಾಲೀಕರು ತಮ್ಮ ಹಳೆಯ ವಾಹನಗಳಿಗೆ ಹೆಚ್ಎಸ್ಆರ್ಪಿ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.
ಐಪಿಎಲ್ 2026 (IPL 2026) ಏಪ್ರಿಲ್ 5 ರಂದು ಡಬಲ್ ಹೆಡರ್ ಪಂದ್ಯಗಳು ನಡೆಯಿವೆ. ದಿನದ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಿದರೆ, ಸಂಜೆಯ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (CSK vs RCB) ತಂಡವನ್ನು ಎದುರಿಸಲಿದೆ. ಸಿಎಸ್ಕೆ ತಂಡ ಇದುವರೆಗೆ ಗೆಲುವಿನ ಖಾತೆ ತೆರೆದಿಲ್ಲ. ಆಡಿದ ಎರಡೂ ಪಂದ್ಯಗಳನ್ನು ಸೋತಿದ್ದು, ಹ್ಯಾಟ್ರಿಕ್ ಸೋಲಿನ ಆತಂಕದಲ್ಲಿದೆ. ಇತ್ತ ತನ್ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿರುವ ಆರ್ಸಿಬಿ, ಇದೀಗ ತನ್ನ ಅಜೇಯ ಓಟವನ್ನು ಮುಂದುವರೆಸಲು ನೋಡುತ್ತಿದೆ. ಹೀಗಾಗಿ ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯ ಯಾವಾಗ ನಡೆಯಲಿದೆ?
ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯವು ಏಪ್ರಿಲ್ 5 ರ ಭಾನುವಾರದಂದು ನಡೆಯಲಿದೆ.
ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯ ಎಲ್ಲಿ ನಡೆಯಲಿದೆ?
ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯಯ ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ?
ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯವು ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ.
ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯನ್ನು ಟಿವಿಯಲ್ಲಿ ವೀಕ್ಷಿಸುವುದು ಹೇಗೆ?
ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯವನ್ನು ವೀಕ್ಷಿಸಬಹುದು.
ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯನ್ನು ಮೊಬೈಲ್‌ನಲ್ಲಿ ವೀಕ್ಷಿಸುವುದು ಹೇಗೆ?
ಜಿಯೋ-ಹಾಟ್‌ಸ್ಟಾರ್ ಅಪ್ಲಿಕೇಶನ್ ಬಳಸಿಕೊಂಡು ನಿಮ್ಮ ಮೊಬೈಲ್ಲ್ಲಿ ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಐಪಿಎಲ್ 2026 ರ 11 ನೇ ಪಂದ್ಯವನ್ನು ನೀವು ವೀಕ್ಷಿಸಬಹುದು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಇದುವರೆಗೆ 35 ಪಂದ್ಯಗಳು ನಡೆದಿವೆ. ಇದರಲ್ಲಿ ಸಿಎಸ್ಕೆ 21 ಪಂದ್ಯಗಳನ್ನು ಗೆದ್ದಿದ್ದರೆ, ಆರ್ಸಿಬಿ 13 ಪಂದ್ಯಗಳನ್ನು ಗೆದ್ದುಕೊಂಡಿದೆ. ಉಳಿದಂತೆ ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಆದಾಗ್ಯೂ ಕಳೆದ ಆವೃತ್ತಿಯಿಂದ ಆರ್ಸಿಬಿ ಬಲಿಷ್ಠವಾಗಿ ಕಾಣುತ್ತಿದ್ದು, ಸಿಎಸ್ಕೆ ವಿರುದ್ಧ ಗೆಲುವು ಸಾಧಿಸುವ ಆತ್ಮವಿಶ್ವಾಸದಲ್ಲಿ ಬೀಗುತ್ತಿದೆ.
ಬೆಂಗಳೂರು, ಏಪ್ರಿಲ್ 04: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಾಳೆ ಐಪಿಎಲ್ ಮ್ಯಾಚ್ ಹಿನ್ನೆಲೆ ಈಗಾಗಲೇ ಅಗತ್ಯ ಕ್ರಮಗಳನ್ನು ಆಯೋಜಕರು ಮತ್ತು ಬೆಂಗಳೂರು ಪೊಲೀಸರು ಕೈಗೊಂಡಿದ್ದಾರೆ. ಅಭಿಮಾನಿಗಳ ಅನುಕೂಲಕ್ಕಾಗಿ ಬಿಎಂಆರ್ಸಿಎಲ್ ಈಗಾಗಲೇ ಮೆಟ್ರೋ ರೈಲುಗಳ ಸಮಯ ವಿಸ್ತರಣೆ ಮಾಡಿರುವ ನಡುವೆ, ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಜನಸಂದಣಿ ನಿಯಂತ್ರಣದ ನಿಟ್ಟಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಬಿಎಂಟಿಸಿ ಬಸ್ಗಳ ವ್ಯವಸ್ಥೆ ಮಾಡಲಾಗಿದ್ದು, 8 ಬಸ್ಗಳು ಓಡಾಟ ನಡೆಸಲಿವೆ.
ಬಸ್ ಸಂಚರಿಸಲಿರುವ ಮಾರ್ಗಗಳು
ಚಿನ್ನಸ್ವಾಮಿ ಸ್ಟೇಡಿಯಂ ಟು ಕಾಡುಗೋಡಿ ಬಸ್ ನಿಲ್ದಾಣ, HAL ರಸ್ತೆ
ಚಿನ್ನಸ್ವಾಮಿ ಸ್ಟೇಡಿಯಂ ಟು ಸರ್ಜಾಪುರ
ಚಿನ್ನಸ್ವಾಮಿ ಸ್ಟೇಡಿಯಂ ಟು ಎಲೆಕ್ಟ್ರಾನಿಕ್ ಸಿಟಿ
ಚಿನ್ನಸ್ವಾಮಿ ಸ್ಟೇಡಿಯಂ ಟು ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್
ಚಿನ್ನಸ್ವಾಮಿ ಸ್ಟೇಡಿಯಂ ಟು ಜನಪ್ರಿಯ ಟೌನ್ಶಿಪ್, ಮಾಗಡಿ ರಸ್ತೆ
ಈ ವಿಶೇಷ ಬಿಎಂಟಿಸಿ ಬಸ್ಗಳು ಸಿ.ಟಿ.ಒ ಜಂಕ್ಷನ್ನಿಂದ ಬಿ.ಆರ್.ವಿ ಜಂಕ್ಷನ್ ವರೆಗೆ ರಸ್ತೆಯ ಎಡ ಭಾಗದಲ್ಲಿ ನಿಲುಗಡೆಯಾಗಲಿದೆ. ಸಾರ್ವಜನಿಕರು ಈ ವ್ಯವಸ್ಥೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.
ಸ್ಟೇಡಿಯಂಗೆ ಕೆಲ ವಸ್ತುಗಳನ್ನು ತರುವುದು ನಿಷೇಧ
ಕ್ರಿಕೆಟ್ ಪಂದ್ಯದ ದಿನದ ಸಲಹೆ:
ಸುರಕ್ಷತೆ ಮತ್ತು ನಿರಂತರತೆಯಿಂದ ಪಂದ್ಯ ನಡೆಸುವ ನಿಮಿತ್ತ, ಕ್ರೀಡಾಂಗಣದಲ್ಲಿ ಕೆಲ ವಸ್ತುಗಳನ್ನು ತರುವುದು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ದಯವಿಟ್ಟು ನಿರ್ಬಂಧಿತ ವಸ್ತುಗಳನ್ನು ತರದೇ, ಸುರಕ್ಷತಾ ತಪಾಸಣೆಯ ಸಿಬ್ಬಂದಿಗಳೊಂದಿಗೆ ಸಹಕರಿಸಿ.
ಪ್ರತಿಯೊಬ್ಬರಿಗೂ ಸುರಕ್ಷಿತವಾದ ಮತ್ತು ಉತ್ಸಾಹಭರಿತ ಪಂದ್ಯದ… pic.twitter.com/to7NDof6Hy
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) April 4, 2026
ಸುರಕ್ಷತೆ ದೃಷ್ಟಿಯಿಂದ ಕ್ರೀಡಾಂಗಣಕ್ಕೆ ಅಭಿಮಾನಿಗಳು ಕೆಲ ವಸ್ತುಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ದಯವಿಟ್ಟು ನಿರ್ಬಂಧಿತ ವಸ್ತುಗಳನ್ನು ತರದೇ, ಸುರಕ್ಷತಾ ತಪಾಸಣೆಯ ಸಿಬ್ಬಂದಿಗಳೊಂದಿಗೆ ಸಹಕರಿಸಿ ಎಂದೂ ಪೊಲೀಸರು ಮನವಿ ಮಾಡಿದ್ದಾರೆ. ಸಂಶಯಾಸ್ಪದ ವಸ್ತುಗಳು ಕಂಡಿಬಂದಲ್ಲಿ ಅವನ್ನು ವಶಕ್ಕೆ ಪಡೆಯುವುದಾಗಿಯೂ ಮುನ್ನೆಚ್ಚರಿಕೆ ನೀಡಲಾಗಿದೆ.
ನವದೆಹಲಿ, ಏಪ್ರಿಲ್ 4: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಇಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ತ್ರಿಭಾಷಾ ಸೂತ್ರದ ಕುರಿತು ನೀಡಿದ ಹೇಳಿಕೆಗಳನ್ನು ಟೀಕಿಸಿದ್ದಾರೆ. “ತ್ರಿಭಾಷಾ ಹೇರಿಕೆ” ಹೇಳಿಕೆಯನ್ನು ರಾಜಕೀಯ ನ್ಯೂನತೆಗಳನ್ನು ಮುಚ್ಚಲು ಮಾಡುತ್ತಿರುವ “ವಿಫಲ ಪ್ರಯತ್ನ” ಎಂದು ಅವರು ಟೀಕಿಸಿದ್ದಾರೆ.
ಸಿಎಂ ಸ್ಟಾಲಿನ್ ಅವರ ಟೀಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, “ರಾಷ್ಟ್ರೀಯ ಶಿಕ್ಷಣ ನೀತಿ, 2020 ಭಾಷಾ ವಿಮೋಚನೆಗಾಗಿ ಪ್ರಣಾಳಿಕೆಯಾಗಿದೆ. ಇದು ಮಾತೃಭಾಷೆಗೆ ಆದ್ಯತೆ ನೀಡುತ್ತದೆ. ಆದ್ದರಿಂದ ಪ್ರತಿ ತಮಿಳು ಮಗುವೂ ತಮ್ಮದೇ ಆದ ಅದ್ಭುತ ಭಾಷೆಯಲ್ಲಿ ಶ್ರೇಷ್ಠತೆಯನ್ನು ಸಾಧಿಸಬಹುದು” ಎಂದು ಹೇಳಿದ್ದಾರೆ.
ಬಹುಭಾಷಾವಾದವನ್ನು ಬೆದರಿಕೆಯಾಗಿ ಚಿತ್ರಿಸುವುದು ತಪ್ಪು ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಪ್ರತಿಪಾದಿಸಿದ್ದಾರೆ. ತಮಿಳು ಭಾಷಿಕರು ಬಹುಭಾಷಾ, ಆತ್ಮವಿಶ್ವಾಸ ಮತ್ತು ಭಾಷಾಶಾಸ್ತ್ರೀಯವಾಗಿ ಸಬಲೀಕರಣಗೊಂಡಾಗ ಆ ಭಾಷೆ ಶ್ರೀಮಂತವಾಗುತ್ತದೆ ಎಂದು ಹೇಳಿದ್ದಾರೆ. NEP ಎಲ್ಲಾ ಭಾಷೆಗಳನ್ನು ಸಮಾನವಾಗಿ ಉತ್ತೇಜಿಸುವ ಮೂಲಕ ಸಾಂವಿಧಾನಿಕ ತತ್ವಗಳನ್ನು ಎತ್ತಿಹಿಡಿಯುತ್ತದೆ ಮತ್ತು ಅಸ್ತಿತ್ವದಲ್ಲಿರುವ ದ್ವಿಭಾಷಾ ವ್ಯವಸ್ಥೆಯ ಮಿತಿಗಳನ್ನು ಪರಿಹರಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Hon’ble Chief Minister of Tamil Nadu, Thiru @mkstalin ji, your narrative of “imposition” is a tired attempt to mask political failures. The National Education Policy 2020 is, in fact, a manifesto for linguistic liberation. It prioritises the mother tongue so every Tamil child can… https://t.co/DhDP5ECM4e
ಸಮಗ್ರ ಶಿಕ್ಷಾ, ಶಿಕ್ಷಕರ ತರಬೇತಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳನ್ನು ಬಲಪಡಿಸುವುದು ಮತ್ತು ಶಿಕ್ಷಕರಿಗೆ ರಾಷ್ಟ್ರೀಯ ವೃತ್ತಿಪರ ಮಾನದಂಡಗಳು ಮತ್ತು ಮಾರ್ಗದರ್ಶನಕ್ಕಾಗಿ ರಾಷ್ಟ್ರೀಯ ಮಿಷನ್‌ನಂತಹ ರಾಷ್ಟ್ರೀಯ ಚೌಕಟ್ಟುಗಳಂತಹ ಉಪಕ್ರಮಗಳ ಮೂಲಕ ಅದರ ಅನುಷ್ಠಾನವನ್ನು ಧರ್ಮೇಂದ್ರ ಪ್ರಧಾನ್ ಎತ್ತಿ ತೋರಿಸಿದ್ದಾರೆ.
ತಮಿಳುನಾಡಿನಲ್ಲಿ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಲು ಭಾರತದ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ನೀಡಿದ್ದರೂ ಡಿಎಂಕೆ ಸರ್ಕಾರವು ಶೈಕ್ಷಣಿಕ ಸಮಾನತೆಗಿಂತ ರಾಜಕೀಯ ನಿರೂಪಣೆಗಳಿಗೆ ಆದ್ಯತೆ ನೀಡುತ್ತಾ ಅವುಗಳ ಅನುಷ್ಠಾನಕ್ಕೆ ಅಡ್ಡಿಯಾಗುತ್ತಲೇ ಇದೆ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಭಾರತೀಯ ಸಿನಿಮಾಗಳಲ್ಲಿ (Indian Cinema) ಸ್ಟಾರ್ ನಟರಿಗೆ ಸಿಕ್ಕಷ್ಟು ಸಂಭಾವನೆ, ಮಾನ್ಯತೆ ಸಿನಿಮಾದ ಇನ್ಯಾವುದೇ ವಿಭಾಗದ ಇನ್ಯಾವುದೇ ತಂತ್ರಜ್ಞರಿಗೆ ದೊರೆಯುವುದಿಲ್ಲ. ಸಂಗೀತ ನಿರ್ದೇಶಕರನ್ನಂತೂ ಕೇಳುವವರೇ ಇಲ್ಲ. ಎಷ್ಟೋ ಬಾರಿ ಕೇವಲ ಸಂಗೀತದಿಂದಲೇ ಸಿನಿಮಾಗಳು ಗೆದ್ದಿರುವುದುಂಟು. ಆದರೂ ಸಹ ಸಂಗೀತ ನಿರ್ದೇಶಕರಿಗೆ ಅವರ ಪ್ರತಿಭೆಗೆ ತಕ್ಕಷ್ಟು ಸೂಕ್ತ ಸಂಭಾವನೆ ದೊರೆಯುವುದಿಲ್ಲ. ಇದೀಗ ಎಆರ್ ರೆಹಮಾನ್ ಅವರಿಗೆ ಭಾರಿ ಮೊತ್ತದ ಸಂಭಾವನೆ ದೊರೆತಿದ್ದು, ಭಾರತದ ಇನ್ಯಾವ ಸಂಗೀತ ನಿರ್ದೇಶಕನಿಗೂ ಇಷ್ಟು ದೊಡ್ಡ ಸಂಭಾವನೆ ದೊರೆತಿಲ್ಲ ಎನ್ನಲಾಗುತ್ತಿದೆ.
ವರದಿಗಳ ಪ್ರಕಾರ, ‘ರಾಮಾಯಣ’ ಸಿನಿಮಾಕ್ಕಾಗಿ ಎಆರ್ ರೆಹಮಾನ್ ಅವರು 30 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ. ಭಾರತದ ಯಾವುದೇ ಸಂಗೀತ ನಿರ್ದೇಶಕರು ಇದುವರೆಗೆ ಪಡೆದ ಅತಿ ದೊಡ್ಡ ಸಂಭಾವನೆ ಪಡೆದಿದ್ದೇ ಇಲ್ಲ. ಅವರು ಮಾತ್ರವೇ ಅಲ್ಲದೆ ಸಿನಿಮಾಕ್ಕೆ ಸಂಗೀತ ನೀಡಿರುವ ಹಾನ್ಸ್ ಜಿಮ್ಮರ್ ಸಹ ಭಾರಿ ಮೊತ್ತದ ಸಂಭಾವನೆಯನ್ನು ಈ ಸಿನಿಮಾಕ್ಕೆ ಪಡೆಯುತ್ತಿದ್ದಾರೆ. ರಣಬೀರ್ ಕಪೂರ್, ಸಾಯಿ ಪಲ್ಲವಿ ಮತ್ತು ಯಶ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾಕ್ಕೆ ನಾಲ್ಕು ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿದ್ದು ಕಲಾವಿದರು ಮತ್ತು ತಂತ್ರಜ್ಞರಿಗೆ ದೊಡ್ಡ ಮೊತ್ತದ ಸಂಭಾವನೆಯನ್ನೇ ನೀಡಲಾಗಿದೆ.
ಎಆರ್ ರೆಹಮಾನ್ ಈ ಚಿತ್ರಕ್ಕಾಗಿ ಸುಮಾರು 30 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿರುವ ಜೊತೆಗೆ ಒಪ್ಪಂದದಲ್ಲಿ ಪಾಲು ಸಹ ಪಡೆಯಲಿದ್ದಾರೆ. ಆಡಿಯೋ ಹಕ್ಕುಗಳು ಮಾರಾಟವಾಗುವ ಮೊತ್ತದಲ್ಲಿ ಸಹ ಎಆರ್ ರೆಹಮಾನ್ ಅವರಿಗೆ ನಿರ್ದಿಷ್ಟ ಪಾಲು ಸಿಗಲಿದೆ ಎನ್ನಲಾಗುತ್ತಿದೆ. ‘ರಾಮಾಯಣ’ ಚಿತ್ರವು ಅಂತರಾಷ್ಟ್ರೀಯ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವುದರಿಂದ, ಹ್ಯಾನ್ಸ್ ಜಿಮ್ಮರ್ ಅವರನ್ನು ಸಹ ಸಂಗೀತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
‘ರಾಮಾಯಣ’ ಸಿನಿಮಾವು ಭಾರತದ ಈ ವರೆಗೆ ಅತಿ ದೊಡ್ಡ ಬಜೆಟ್ ಸಿನಿಮಾ ಆಗಿದ್ದು, ಸಿನಿಮಾಕ್ಕೆ 4000 ಕೋಟಿ ಬಜೆಟ್ ಹೂಡಲಾಗಿದೆ. ಸಿನಿಮಾದ ನಾಯಕ ರಣ್ಬೀರ್ ಕಪೂರ್ ಅವರಿಗೆ 150 ಕೋಟಿಗೂ ಹೆಚ್ಚು ಸಂಭಾವನೆ ನೀಡಲಾಗಿದೆಯಂತೆ. ಇನ್ನು ನಟ ಯಶ್ಗೆ ಸುಮಾರು 100 ಕೋಟಿ ಸಂಭಾವನೆ ನೀಡಲಾಗಿದೆ ಎನ್ನಲಾಗುತ್ತಿದೆ. ನಿರ್ದೇಶಕ ನಿತೀಶ್ ತಿವಾರಿಗೆ 50 ಕೋಟಿ ಸಂಭಾವನೆ ಕೊಡಲಾಗಿದೆಯಂತೆ. ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಮೊದಲ ಭಾಗ ದೀಪಾವಳಿಯಂದು ಬಿಡುಗಡೆ ಆಗಲಿದೆ.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026 ) ರ 8 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (Delhi Capitals vs Mumbai Indians) ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 162 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡ ಸಮೀರ್ ರಿಜ್ವಿ (Sameer Rizvi) ಅವರ ಸತತ ಎರಡನೇ ಅರ್ಧಶತಕದ ನೆರವಿನಿಂದ 18.1 ಓವರ್‌ಗಳಲ್ಲಿ 4 ವಿಕೆಟ್‌ಗಳನ್ನು ಕಳೆದುಕೊಂಡು ಜಯದ ನಗೆ ಬೀರಿತು. ಈ ಗೆಲುವಿನೊಂದಿಗೆ ಡೆಲ್ಲಿ ಲೀಗ್ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದರೆ, ಇತ್ತ ಮುಂಬೈ ಇಂಡಿಯನ್ಸ್ ತನ್ನ ಮೊದಲ ಸೋಲನ್ನು ಅನುಭವಿಸಿದೆ.
ಮುಂಬೈಗೆ ಆರಂಭಿಕ ಆಘಾತ
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 162 ರನ್ ಗಳಿಸಿತು. ಆದಾಗ್ಯೂ ತಂಡದ ಆರಂಭ ಉತ್ತಮವಾಗಿರಲಿಲ್ಲ. ಡೆಲ್ಲಿ ವೇಗಿ ಮುಖೇಶ್ ಕುಮಾರ್ ಒಂದೇ ಓವರ್‌ನಲ್ಲಿ ರಯಾನ್ ರಿಕಲ್ಟನ್ ಮತ್ತು ತಿಲಕ್ ವರ್ಮಾ ಅವರನ್ನು ಔಟ್ ಮಾಡುವ ಮೂಲಕ ಮುಂಬೈಗೆ ಆಘಾತ ನೀಡಿದರು. ಆದರೆ ಅನುಭವಿ ರೋಹಿತ್ ಶರ್ಮಾ 26 ಎಸೆತಗಳಲ್ಲಿ 35 ರನ್ ಗಳಿಸಿ ಇನ್ನಿಂಗ್ಸ್ ನಿಭಾಯಿಸುವ ಕೆಲಸ ಮಾಡಿದರು, ಆದರೆ ಅಕ್ಷರ್ ಪಟೇಲ್ ಬೌಲಿಂಗ್ನಲ್ಲಿ ಔಟಾಗುವ ಮೂಲಕ ತಮ್ಮ ಇನ್ನಿಂಗ್ಸ್ ಅಂತ್ಯಗೊಳಿಸಿದರು.
ಸೂರ್ಯಕುಮಾರ್ ಅರ್ಧಶತಕ
ಇನ್ನು ಈ ಪಂದ್ಯದಲ್ಲಿ ಮುಂಬೈ ತಂಡದ ನಾಯಕತ್ವವಹಿಸಿದ್ದ ಸೂರ್ಯಕುಮಾರ್ ಯಾದವ್ 51 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ಇವರ ಜೊತೆಗೆ ನಮನ್ ಧೀರ್ 28 ರನ್‌ಗಳ ಕಾಣಿಕೆ ನೀಡಿದರು. ದೆಹಲಿ ಪರ ಮುಖೇಶ್ ಕುಮಾರ್ 2 ವಿಕೆಟ್ ಪಡೆದರೆ,ಅಕ್ಷರ್ ಪಟೇಲ್, ಲುಂಗಿ ಎನ್‌ಗಿಡಿ, ವಿಪ್ರಜ್ ನಿಗಮ್ ಮತ್ತು ಟಿ ನಟರಾಜನ್ ತಲಾ 1 ವಿಕೆಟ್ ಪಡೆದರು.
ಡೆಲ್ಲಿಗೂ ಉತ್ತಮ ಆರಂಭ ಸಿಗಲಿಲ್ಲ
162 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ತಂಡವು ಕಳಪೆ ಆರಂಭವನ್ನೇ ಪಡೆಯಿತು. ಕೆಎಲ್ ರಾಹುಲ್ ಕೇವಲ ಒಂದು ರನ್‌ಗೆ ಔಟಾದರು. ನಿತೀಶ್ ರಾಣಾ ಕೂಡ ರನೌಟ್ ಆದರು. ನಂತರ ಪಾಥುಮ್ ನಿಸ್ಸಂಕಾ 44 ರನ್ ಬಾರಿಸುವ ಮೂಲಕ ತಂಡವನ್ನು ಒತ್ತಡದಿಂದ ಹೊರತಂದರು. ಆದರೆ ಮೂರನೇ ವಿಕೆಟ್ 73 ರನ್‌ಗಳಿಗೆ ಪತನವಾದ ನಂತರ ತಂಡದ ಒತ್ತಡ ಮತ್ತಷ್ಟು ಹೆಚ್ಚಾಯಿತು. ನಂತರ ತಂಡದ ಇನ್ನಿಂಗ್ಸ್ ನಿಭಾಯಿಸಿದ ಸಮೀರ್ ರಿಜ್ವಿ ಅರ್ಧಶತಕ ಇನ್ನಿಂಗ್ಸ್ ಆಡಿ ತಂಡದ ಗೆಲುವು ಖಚಿತಪಡಿಸಿದರು.
ಆದಾಗ್ಯೂ ಶತಕದಂಚಿನಲ್ಲಿ ಎಡವಿದ ಸಮೀರ್ ರಿಜ್ವಿ 51 ಎಸೆತಗಳಲ್ಲಿ 176.47 ಸ್ಟ್ರೈಕ್ ರೇಟ್‌ನಲ್ಲಿ 90 ರನ್ ಗಳಿಸಿ ಮುಂಬೈ ತಂಡದ ಗೆಲುವಿನ ಹಾದಿಗೆ ಅಡ್ಡಲಾಗಿ ನಿಂತರು. ಅವರ ಇನ್ನಿಂಗ್ಸ್‌ನಲ್ಲಿ ಏಳು ಬೌಂಡರಿ ಮತ್ತು ಏಳು ಸಿಕ್ಸರ್‌ಗಳು ಸೇರಿದ್ದವು. ಅಂದರೆ ಅವರು ಕೇವಲ ಬೌಂಡರಿ ಮತ್ತು ಸಿಕ್ಸರ್‌ಗಳಿಂದ 70 ರನ್ ಗಳಿಸಿದರು. ಸಮೀರ್ ರಿಜ್ವಿ ಅವರ ಈ ಸ್ಮರಣೀಯ ಇನ್ನಿಂಗ್ಸ್‌ನಿಂದಾಗಿ, ದೆಹಲಿ 18.1 ಓವರ್‌ಗಳಲ್ಲಿ ಗುರಿ ತಲುಪಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ವಿಜಯಪುರ/ಚಿಕ್ಕಮಗಳೂರು, ಏಪ್ರಿಲ್ 04: ಹಳ್ಳಿಗಳಲ್ಲಿ ನೆಲೆಸಿರುವವರಿಗೆ ಅದರಲ್ಲೂ ಕೃಷಿಕ ಯುವಕರಿಗೆ ಮದುವೆಗೆ ಹೆಣ್ಣು ಸಿಗೋದೇ ಕಷ್ಟ ಎಂಬ ಸ್ಥಿತಿ ಸದ್ಯ ಸಮಾಜದಲ್ಲಿದೆ. ಇದೇ ಕಾರಣಕ್ಕೆ ಅದೆಷ್ಟೋ ಯುವಕರಿಗೆ ಈವರೆಗೂ ಕಂಕಣ ಭಾಗ್ಯವೇ ಕೂಡಿಬರುತ್ತಿಲ್ಲ. ಈ ನಡುವೆ ವಿವಾಹಕ್ಕೆ ಹುಡುಗಿ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಮಾನಸಿಕವಾಗಿ ತೀವ್ರ ನೊಂದು ಯುವಕರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ರಾಜ್ಯದಲ್ಲಿ ನಡೆದಿವೆ. ವಿಜಯಪುರದಲ್ಲಿ ಕುರಿಗಾಹಿ ನೇಣಿಗೆ ಶರಣಾಗಿದ್ದರೆ ಇತ್ತ ಚಿಕ್ಕಮಗಳೂರಲ್ಲಿ ಕುಡಿದ ಮತ್ತಿನಲ್ಲಿ ಮತ್ತೋರ್ವ ಪ್ರಾಣ ಕಳೆದುಕೊಂಡಿದ್ದಾನೆ.
ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ
2 ವರ್ಷದ ಹಿಂದೆ ಮದುವೆ ನಿಶ್ಚಯವಾಗಿ ಮುರಿದು ಬಿದ್ದಬಳಿಕ ಎಷ್ಟೇ ಹುಡುಕಿದ್ರೂ ಹೆಣ್ಣು ಸಿಗದಿದ್ದಕ್ಕೆ ತೀವ್ರವಾಗಿ ನೊಂದಿದ್ದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಚಿಮ್ಮಲಗಿ 2 ಗ್ರಾಮದ ಯುವಕ ಶಂಕರ ತಳವಾರ(25) ಮರಕ್ಕೆ ನೇಣುಹಾಕಿಕೊಂಡು ಪ್ರಾಣ ಬಿಟ್ಟಿದ್ದಾನೆ. ಈ ಬಗ್ಗೆ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:
ಇತ್ತ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೋರಗಾನಹಳ್ಳಿಯಲ್ಲೂ ಕುಮಾರ್(26) ಇದೇ ಕಾರಣಕ್ಕೆ ಸೂಸೈಡ್ ಮಾಡಿಕೊಂಡಿದ್ದಾನೆ. ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ನಿವಾಸಿಯಾಗಿದ್ದ ಯುವಕ ಕುಡಿದ ಮತ್ತಿನಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಹೆಣ್ಣು ಸಿಗದಿದ್ದಕ್ಕೆ ಮಾನಸಿಕವಾಗಿ ಈತ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದ್ದು, ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಡೂರು ತಾಲೂಕಿನ ಬೋರಗಾನಹಳ್ಳಿಯ ಪರಮೇಶ್ವರಪ್ಪ ಎಂಬುವವರ ತೋಟದಲ್ಲಿ ಕುರಿ ಮಂದೆ ಬಿಟ್ಟುಕೊಂಡಿದ್ದ ಕುಮಾರ್, ರಾಮನವಮಿ ಹಬ್ಬಕ್ಕೆ ಊರಿಗೆ ಹೋದಾಗ ಮದುವೆ ಮಾಡುವಂತೆ ಮನೆಯವರನ್ನು ಒತ್ತಾಯಿಸಿದ್ದ. ಆದರೆ ಇಬ್ಬರು ಸಹೋದರರ ಮದುವೆಯಾದ ಬಳಿಕ ವಿವಾಹ ಮಾಡುವುದಾಗಿ ಪೋಷಕರು ಹೇಳಿದ್ದರು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಶಿರಾ ಬ್ರಹ್ಮಸಂದ್ರ ಗ್ರಾಮಕ್ಕೆ ರವಾನೆ ಮಾಡಲಾಗಿದೆ.
ಬೆಂಗಳೂರು, ಏಪ್ರಿಲ್ 04: ಉಭಯ ಕ್ಷೇತ್ರಗಳಲ್ಲಿ ಉಭಯ ಪಕ್ಷದಿಂದ ಮತ ಶಿಕಾರಿ ನಡೆಯುತ್ತಿದೆ. ಮತದಾನಕ್ಕೆ ಇನ್ನೂ ಐದು ದಿನ ಬಾಕಿ ಇದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ಅಬ್ಬರದ ಪ್ರಚಾರ ಮಾಡಲಾಗಿದೆ. ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah)ಎರಡನೇ ಸುತ್ತಿನ ಪ್ರಚಾರ ಮಾಡಿದ್ದು, ಅಭ್ಯರ್ಥಿ ಉಮೇಶ್ ಮೇಟಿ ಪರ ಅಬ್ಬರದ ಕ್ಯಾಂಪೇನ್ ಮಾಡಿದ್ದಾರೆ. ವಿವಿಧ ಸಮುದಾಯಗಳ ಮತಗಳ ಮೇಲೂ ಕಣ್ಣಿಡಲಾಗಿದೆ. ಈ ಮಧ್ಯೆ ಸಚಿವ ಜಮೀರ್ಗೆ ಸಿದ್ದರಾಮಯ್ಯರಿಂದ ತುರ್ತು ಬುಲಾವ್ ನೀಡಲಾಗಿದೆ. ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಸಚಿವ ಜಮೀರ್ಗೆ ಸಿದ್ದರಾಮಯ್ಯರಿಂದ ತುರ್ತು ಬುಲಾವ್
ಇನ್ನು ಅಹಿಂದ ಮತಗಳ ಕ್ರೋಢೀಕರಣಕ್ಕಾಗಿ ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಿಶೇಷ ಸಭೆ ಮಾಡಿದ್ದಾರೆ. ಎಂ.ಸಿ.ವೇಣುಗೋಪಾಲ್, ಡಾ.ಪರಮೇಶ್ವರ್ ಮತ್ತು ಮಹದೇವಪ್ಪ ಜೊತೆ ಸಭೆ ಮಾಡಿದ್ದು, ಈ ವೇಳೆ ಉಪಚುನಾವಣೆ ಪ್ರಚಾರಕ್ಕೆ ಬರುವಂತೆ ಜಮೀರ್ಗೆ ಕರೆ ಮಾಡುವಂತೆ ಕೆ.ಸಿ.ವೇಣುಗೋಪಾಲ್ಗೆ ಸೂಚಿಸಿದ್ದಾರೆ.
ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ಸಿಗಲಿಲ್ಲ ಅಂತಾ ಬೇಸರಗೊಂಡಿದ್ದ ಸಚಿವ ಜಮೀರ್ ನಾಳೆ ದಾವಣಗೆರೆ ಎಂಟ್ರಿ ಕೊಡಲಿದ್ದಾರೆ. ಕೇರಳದ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಜಮೀರ್, ನಾಳೆ ದಾವಣಗೆರೆಯಲ್ಲಿ ಪ್ರಚಾರ ಮಾಡಲಿದ್ದಾರೆ. ಜಮೀರ್‌ಗಾಗಿಯೇ ವಿಶೇಷ ವಿಮಾನ ಬುಕ್ ಮಾಡಿರುವ ಸಿಎಂ, ಕೇರಳದಿಂದ ದಾವಣಗೆರೆಗೆ ಕರೆಸಿಕೊಳ್ಳುತ್ತಿದ್ದಾರೆ. ನಂತರ ಬಾಗಲಕೋಟೆಯಲ್ಲಿ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಈ ಸಂಬಂಧ ಸಭೆ ನಡೆಸಿರುವ ಸಿಎಂ, ಅಹಿಂದ ಮತಗಳನ್ನ ಸೆಳೆಯಲು ತಂತ್ರ ರೂಪಿಸಿದ್ದಾರೆ.
ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ
ಇನ್ನು ಟಿವಿ9 ಜೊತೆ ಎಕ್ಸ್‌ಕ್ಲೂಸಿವ್ ಆಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅವರಿಗೆ ನನ್ನ ಅಟ್ಯಾಕ್ ಮಾಡುವುದು ಬಿಟ್ಟರೇ ಬೇರೆನಿದೆ ಅಂತಾ ವಾಗ್ದಾಳಿ ಮಾಡಿದ್ದಾರೆ. ಕುಟುಂಬದವರಿಗೆ ಟಿಕೆಟ್ ನೀಡಿರುವ ಬಗ್ಗೆ ಸ್ಫಷ್ಟನೆ ನೀಡಿದ್ದಾರೆ. ಹಾಗೆಯೇ 2028ಕ್ಕೂ ಈ ಚುನಾವಣೆಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ದಾವಣಗೆರೆಯಲ್ಲಿ ಸಮುದಾಯವಾರು ಮತಬೇಟೆ
ಬಿಜೆಪಿ ಕಲಿಗಳು ಕೂಡಾ ಅಖಾಡದಲ್ಲಿ ಅಬ್ಬರಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿ ಮಠ ಪರವಾಗಿ ಮತಬೇಟೆಯಾಡಿದ್ದಾರೆ. ಬಿಜೆಪಿ ಲಿಂಗಾಯತ ಮತಗಳ ಕಬ್ಜ ಮಾಡಲು ಕ್ಯಾಂಪೇನ್ ಮಾಡುತ್ತಿದೆ. ಕಾಂಗ್ರೆಸ್ ಪರ ಸಚಿವರು, ಶಾಸಕರು ಅಖಾಡಕ್ಕಿಳಿದಿದ್ರೆ, ಬಿಜೆಪಿ ಪರ ಬಿ.ವೈ ವಿಜಯೇಂದ್ರ, ವಿ.ಸೋಮಣ್ಣ, ಹೆಚ್.ಡಿ ಕುಮಾರಸ್ವಾಮಿ ಕ್ಯಾಂಪೇನ್ ಮಾಡಿದ್ದಾರೆ. ಗ್ಯಾರಂಟಿಯನ್ನೇ ಅಸ್ತ್ರ ಮಾಡಿಕೊಂಡಿರುವ ಕಾಂಗ್ರೆಸ್‌ಗೆ ತಿವಿದಿದ್ದಾರೆ.
ಐಪಿಎಲ್ 2026 ರ ಒಂಬತ್ತನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಗುಜರಾತ್ ಟೈಟಾನ್ಸ್ ತಂಡವು ತಮ್ಮ ತವರು ಮೈದಾನವಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡಲಿದ್ದು, ಸೀಸನ್ನ ಮೊದಲ ಗೆಲುವನ್ನು ಎದುರು ನೋಡುತ್ತಿದೆ. ಇತ್ತ ತನ್ನ ಮೊದಲ ಪಂದ್ಯದಲ್ಲಿನ ಗೆಲುವಿನೊಂದಿಗೆ ಮಿಂಚುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡವು ಅಜೇಯ ಓಟವನ್ನು ಮುಂದುವರೆಸಲು ನೋಡಲಿದೆ.