Headlines

nagaraj11081993

‘ಎಲ್ಲೂ ಇಲ್ಲ ಅಂದ್ರೆ ಕೊನೆಗೆ ಸ್ಯಾಂಡಲ್​​ವುಡ್​​ನಲ್ಲಾದರೂ ಕೆಲಸ ಮಾಡಬಹುದು’; ವಿರಾಟ್ ಕೊಹ್ಲಿ

ಐಪಿಎಲ್ ಕಾರಣಕ್ಕೆ ವಿರಾಟ್ ಕೊಹ್ಲಿ ಅವರು ಸದ್ಯ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಭಾನುವಾರ ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಸಿಎಸ್​ಕೆ ವಿರುದ್ಧದ ಪಂದ್ಯಕ್ಕಾಗಿ ಸಿದ್ಧತೆ ನಡೆಸುತ್ತಿದ್ದಾರೆ. ಈ ಮಧ್ಯೆ ಅವರು ದ್ಯಾನಿಶ್ ಸೇಠ್ ಜೊತೆ ಯೂಟ್ಯೂಬ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ಕೇವಲ ಐದು ನಿಮಿಷ ಇರೋ ಈ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಸ್ಯಾಂಡಲ್​​ವುಡ್​​ನಲ್ಲಿ ಆ್ಯಕ್ಟ್ ಮಾಡೋ ಬಗ್ಗೆ ಕೊಹ್ಲಿ ಮಾತನಾಡಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ಆರ್​​ಸಿಬಿ ಇನ್​​ಸೈಡರ್ ನ್ಯಾಗ್ಸ್ (ದ್ಯಾನಿಶ್ ಸೇಠ್) ಇದ್ದಲ್ಲಿ ಫನ್​​ಗೆ ಬರ ಇರೋದಿಲ್ಲ. ಐಪಿಎಲ್ ಮ್ಯಾಚ್…

Read More

ಪೋಕ್ಸೋ ಪ್ರಕರಣಗಳನ್ನು ತಕ್ಷಣ ವರದಿ ಮಾಡಬೇಕು; ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ!

ಬೆಂಗಳೂರು, ಏಪ್ರಿಲ್ 04: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾಸಗಿ ಆಸ್ಪತ್ರೆಗಳಿಗಾಗಿ ಮಹತ್ವದ ನಿರ್ದೇಶನ ಹೊರಡಿಸಿದೆ. ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ, ಪೋಕ್ಸೋ ಕಾಯ್ದೆ 2012ರಡಿ (POCSO Act) ಕಡ್ಡಾಯವಾಗಿ ವರದಿ ಸಲ್ಲಿಸುವಂತೆ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಪತ್ತೆಯಾದಾಗ ಖಾಸಗಿ ಆಸ್ಪತ್ರೆಗಳು ತಕ್ಷಣವೇ ಪೊಲೀಸ್ ಇಲಾಖೆ ಅಥವಾ ವಿಶೇಷ ಕಿಶೋರ ಪೊಲೀಸ್ ಘಟಕಕ್ಕೆ ಮಾಹಿತಿ ನೀಡಬೇಕು ಎಂದು ಇಲಾಖೆಯು ಸ್ಪಷ್ಟಪಡಿಸಿದೆ. ಸಾಮಾನ್ಯವಾಗಿ ಇಂತಹ ಪ್ರಕರಣಗಳು ಆಸ್ಪತ್ರೆಗಳಿಗೆ…

Read More

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಓರ್ವ ಸ್ಥಳದಲ್ಲೇ ಸಾವು, ಮೂವರಿಗೆ ಗಾಯ

ಪೆದ್ದಪಲ್ಲಿ, ಏ.4: ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಗೋದಾವರಿಖನಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ನಗರದ ರಾಜೇಶ್ ಥಿಯೇಟರ್ ಬಳಿ ಈ ದುರ್ಘಟನೆ ನಡೆದಿದೆ. ಅತಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಾಹನದ ಒಳಗಿದ್ದ ನಾಲ್ವರು ಸಿಲುಕಿಕೊಂಡಿದ್ದರು. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಶ್ರೀಧರ್ ಎಂಬುವವರು ಸ್ಥಳದಲ್ಲೇ…

Read More

ಸಂಸದ ಶಶಿ ತರೂರ್ ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ಕೇರಳ, ಏ.4: ಮಲಪ್ಪುರಂ ಜಿಲ್ಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಗಾವಲು ವಾಹನವನ್ನು ತಡೆಹಿಡಿಯಲಾಗಿದೆ ಎಂದು ಆರೋಪಿಸಲಾಗಿದೆ. ಇದರ ಜತೆಗೆ ಅವರ ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ವಿಡಿಯೋವೊಂದು ಎಕ್ಸ್​ ಖಾತೆಯಲ್ಲಿ ವೈರಲ್​​ ಆಗಿದೆ. ಶಶಿ ತರೂರ್ ಅವರು ವಂಡೂರಿನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ತಿರುವಳ್ಳಿ ಚೆಲ್ಲಿತೋಡು ಸೇತುವೆ ಬಳಿ ಬೆಂಗಾವಲು ಪಡೆಯನ್ನು ತಡೆಹಿಡಿಯಲಾಯಿತು. ಭದ್ರತಾ ಸಿಬ್ಬಂದಿಯ ದೂರಿನ ಆಧಾರದ ಮೇಲೆ, ವಂದೂರು ಪೊಲೀಸರು ಪ್ರಕರಣ…

Read More

Vasthu Tips: ಮನೆ ನಿರ್ಮಾಣ ಕಾರ್ಯದಲ್ಲಿ ವಿಘ್ನ ಬರಬಾರದೆಂದರೆ ಈ ವಾಸ್ತು ನಿಯಮ ಪಾಲಿಸಿ

ಪ್ರತಿಯೊಬ್ಬರಿಗೂ ಸ್ವಂತ ಮನೆಯ ಕನಸು ಇರುತ್ತದೆ. ಈ ಕನಸನ್ನು ನನಸು ಮಾಡುವಾಗ, ಗೃಹಾರಂಭಕ್ಕೆ ಸರಿಯಾದ ಸಮಯವನ್ನು ಆಯ್ಕೆ ಮಾಡಿಕೊಳ್ಳುವುದು ಅತ್ಯಗತ್ಯ. ಹಿಂದೂ ಸನಾತನ ಸಂಸ್ಕೃತಿ ಮತ್ತು ಪರಂಪರೆಗಳಲ್ಲಿ, ಕೆಲವು ನಿರ್ದಿಷ್ಟ ಮಾಸಗಳಲ್ಲಿ ಶಂಕುಸ್ಥಾಪನೆ ಅಥವಾ ಪಾಯ ಪೂಜೆ ಮಾಡುವುದು ನಿರ್ವಿಘ್ನವಾಗಿ ಕಾರ್ಯ ನೆರವೇರಲು ಸಹಾಯಕವಾಗುತ್ತದೆ. ಈ ಬಗ್ಗೆಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಮನೆ ನಿರ್ಮಾಣದ ಸಮಯದಲ್ಲಿ ಜ್ಯೋತಿಷ್ಯಶಾಸ್ತ್ರದ ಪ್ರಕಾರ ಜಾತಕದಲ್ಲಿರುವ…

Read More

ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂಬ ಜಿಗುಪ್ಸೆ: ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡು ಕುರಿಗಾಹಿ ಯುವಕ ಆತ್ಮಹತ್ಯೆ!

ಚಿಕ್ಕಮಗಳೂರು, ಏಪ್ರಿಲ್ 4: ಮದುವೆ ವಯಸ್ಸು ಮೀರಿದರೂ ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಯುವಕನೊಬ್ಬ ಕುಡಿದ ಮತ್ತಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲ್ಲೂಕಿನ ಬೋರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬ್ರಹ್ಮಸಂದ್ರ ಗ್ರಾಮದ ನಿವಾಸಿ ಕುಮಾರ್ (26) ಮೃತಪಟ್ಟ ದುರ್ದೈವಿ. ಕುಮಾರ್ ಕಡೂರು ತಾಲ್ಲೂಕಿನ ಬೋರಗಾನಹಳ್ಳಿಯ ಪರಮೇಶ್ವರಪ್ಪ ಎಂಬುವವರ ತೋಟದಲ್ಲಿ ಕುರಿ ಮಂದೆ ಬಿಟ್ಟುಕೊಂಡು ಕೆಲಸ ಮಾಡುತ್ತಿದ್ದ. ಘಟನೆಯ ಹಿನ್ನೆಲೆ ಇತ್ತೀಚೆಗೆ ರಾಮನವಮಿ…

Read More

ಪಂಜಾಬ್ ಕಿಂಗ್ಸ್ ತಂಡದ ಎಲ್ಲಾ ಆಟಗಾರರಿಗೆ ದಂಡದ ಶಿಕ್ಷೆ..!

IPL 2026: ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ (Slow Over-rate) ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಹಾಗೂ ಪ್ಲೇಯಿಂಗ್ ಇಲೆವೆನ್​ನ ಆಟಗಾರರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ. ಏಪ್ರಿಲ್ 4 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ನಿಗದಿತ ಸಮಯದೊಳಗೆ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾಗಿದೆ. ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಕನಿಷ್ಠ ಓವರ್ ರೇಟ್…

Read More

‘ಧುರಂಧರ್’ ರೆಹಮಾನ್ ಡಕಾಯಿತ್ ಪಾತ್ರದ ಆಫರ್ ಮೊದಲು ಹೋಗಿದ್ದು ದಕ್ಷಿಣದ ಈ ಸ್ಟಾರ್ ನಟನಿಗೆ

‘ಧುರಂದರ್’ ಹಾಗೂ ‘ಧುರಂಧರ್ 2’ ಸಿನಿಮಾಗಳು (Dhurandhar 2 Movie) ಗಮನ ಸೆಳೆದಿವೆ. ಈ ಸಿನಿಮಾದ ಎಲ್ಲಾ ಪಾತ್ರಗಳು ಮೆಚ್ಚುಗೆ ಪಡೆದಿವೆ. ಸಾಮಾನ್ಯವಾಗಿ ಬಿಗ್ ಬಜೆಟ್ ಸಿನಿಮಾಗಳಲ್ಲಿ ಹೀರೋ, ಹೀರೋಯಿನ್, ವಿಲನ್ ಪಾತ್ರ ಮಾತ್ರ ಹೈಲೈಟ್ ಆಗುತ್ತದೆ. ಆದರೆ, ‘ಧುರಂಧರ್’ ಸಿನಿಮಾಗಳಲ್ಲಿ ಆ ರೀತಿ ಆಗಿಲ್ಲ. ಎಲ್ಲಾ ಪಾತ್ರಕ್ಕೂ ಸರಿಯಾದ ತೂಕ ಇದೆ. ಈ ಸಿನಿಮಾದಲ್ಲಿ ಬಂದಿದ್ದ ರೆಹಮಾನ್ ಡಕಾಯಿತ್ ಪಾತ್ರ ಜನ ಮೆಚ್ಚುಗೆ ಪಡೆದಿದೆ. ಈ ಪಾತ್ರವನ್ನು ಮೊದಲು ಮೂವರಿಗೆ ನೀಡಲಾಗಿತ್ತಂತೆ. ಆ ಮೂವರು ರಿಜೆಕ್ಟ್…

Read More

IPL 2026: ನಾಯಕತ್ವದಿಂದ ಅಜಿಂಕ್ಯಾ ರಹಾನೆ ಹೊರಕ್ಕೆ?, ಕೆಕೆಆರ್​ನಿಂದ ಶಾಕಿಂಗ್ ನಿರ್ಧಾರ?

ಬೆಂಗಳೂರು (ಏ. 04): ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಅಜಿಂಕ್ಯಾ ರಹಾನೆ (Ajinkya Rahane) ನಾಯಕತ್ವ ತೂಗುಯ್ಯಾಲೆಯಲ್ಲಿದೆಯಂತೆ, ಸದ್ಯದಲ್ಲೇ ರಿಂಕು ಸಿಂಗ್ ಅವರ ಸ್ಥಾನದಲ್ಲಿ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮೂಲದಿಂದ ಈ ಸುದ್ದಿಗಳು ಬರುತ್ತಿವೆ. ಕೆಕೆಆರ್ ಆಡಳಿತ ಮಂಡಳಿಯು ಋತುವಿನ ಮಧ್ಯದಲ್ಲಿ ಅಜಿಂಕ್ಯಾ ರಹಾನೆ ಅವರನ್ನು ನಾಯಕತ್ವದಿಂದ ತೆಗೆದುಹಾಕಬಹುದು ಮತ್ತು ಉಪನಾಯಕ ರಿಂಕು ಅವರಿಗೆ ಈ ಅವಕಾಶ ಸಿಗಲಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಮುಂಬೈ ವಿರುದ್ಧದ…

Read More

ಸಿಎಸ್‌ಕೆ ಸೋಲಿಗೆ ರುತುರಾಜ್ ಗಾಯಕ್ವಾಡ್ ದೂರಿದ್ದು ಯಾರನ್ನ ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 7ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 209 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 18.4 ಓವರ್​ಗಳಲ್ಲಿ 210 ರನ್​ಗಳಿಸಿ 5 ವಿಕೆಟ್​ಗಳ ಗೆಲುವು ದಾಖಲಿಸಿದೆ. ಇದರೊಂದಿಗೆ ಸಿಎಸ್​ಕೆ ತಂಡವು ಬ್ಯಾಕ್ ಟು ಬ್ಯಾಕ್ 2 ಪಂದ್ಯಗಳಲ್ಲಿ ಸೋಲನುಭವಿಸಿದಂತಾಗಿದೆ. ಈ ಸೋಲಿನ ಬಳಿಕ ಮಾತನಾಡಿದ…

Read More