‘ಪೆದ್ದಿ’ ಸಿನಿಮಾ ಶೂಟಿಂಗ್ ಮುಗಿಯಿತೇ? ರಾಮ್ ಚರಣ್ ಕೊಟ್ಟರು ಉತ್ತರ
ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾದ ಬಿಡುಗಡೆ ಕುರಿತು ಸಾಕಷ್ಟು ಊಹಾಪೋಹಗಳು, ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಮಾರ್ಚ್ ತಿಂಗಳಲ್ಲೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಪದೇ ಪದೇ ಬಿಡುಗಡೆ ಮುಂದೂಡಿಕೊಂಡೇ ಬರುತ್ತಿದೆ. ಇದೀಗ ಸಿನಿಮಾ ಏಪ್ರಿಲ್ 30 ರಂದು ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ಆದರೆ ಇದು ಸಹ ಸುಳ್ಳಾಗಲಿದ್ದು, ಸಿನಿಮಾ ಮತ್ತೆ ಮುಂದೂಡಲ್ಪಡಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇತ್ತೀಚೆಗೆ ಬಿಡುಗಡೆ ಆದ ‘ಪೆದ್ದಿ’ ಪೋಸ್ಟರ್ನಲ್ಲಿ ಬಿಡುಗಡೆ ದಿನಾಂಕವೇ ಇಲ್ಲದಿರುವುದು ಇನ್ನಷ್ಟು ಅನುಮಾನಗಳನ್ನು…