nagaraj11081993

‘ಟಾಕ್ಸಿಕ್’: ಯಶ್​​ ಎದುರು ಕಿಯಾರಾ ಆಯ್ಕೆ ಆಗಿದ್ದು ಹೇಗೆ? ಏಕೆ?

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಬಿಡುಗಡೆ ಮುಂದೂಡಲ್ಪಟ್ಟಿದೆ. ಮಾರ್ಚ್ 19ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಈಗ ಜೂನ್ 04ಕ್ಕೆ ತೆರೆಗೆ ಬರಲಿದೆ. ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ ‘ಟಾಕ್ಸಿಕ್’ ಸಿನಿಮಾ. ಯಶ್ ನಟನೆಯ ಈ ಸಿನಿಮಾನಲ್ಲಿ ಹಲವು ಸ್ಟಾರ್ ನಟಿಯರು ನಾಯಕಿಯರಾಗಿ ನಟಿಸಿದ್ದಾರೆ. ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಮತ್ತು ತಾರಾ ಸುತರಿಯಾ ಅವರುಗಳು ನಟಿಸಿದ್ದಾರೆ. ಆದರೆ…

Read More

ಧಾರಾವಾಡ: ಆಲಿಕಲ್ಲು ಮಳೆಗೆ ಉದುರಿದ ಮಾವು; ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಕಂಗಾಲಾದ ಅನ್ನದಾತ!

ಧಾರಾವಾಡ, ಮಾ.28: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ಆರಂಭದಲ್ಲೇ ವರುಣನ ಅಟ್ಟಹಾಸ ಶುರುವಾಗಿದೆ. ಕಳೆದ ಹತ್ತು ದಿನಗಳಿಂದ ಸುರಿಯುತ್ತಿರುವ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಧಾರಾವಾಡ ಜಿಲ್ಲೆಯ ಮಾವು ಬೆಳೆಗಾರರು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಮರದಲ್ಲಿ ನಳನಳಿಸುತ್ತಿದ್ದ ಮಾವಿನ ಕಾಯಿಗಳು ಈಗ ನೆಲಪಾಲಾಗಿವೆ. ಧಾರಾವಾಡ ಜಿಲ್ಲೆಯ ಕಲಘಟಗಿ, ಹುಬ್ಬಳ್ಳಿ ಮತ್ತು ಧಾರಾವಾಡ ತಾಲೂಕುಗಳಲ್ಲಿ ಅತಿ ಹೆಚ್ಚು ಮಾವು ಬೆಳೆಯಲಾಗುತ್ತದೆ. ಇಲ್ಲಿನ ಹೆಮ್ಮೆಯ ‘ಆಲ್ಪಾನ್ಸೋ’ (ಆಪೂಸ್) ಮಾವಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆಯಿದೆ. ಕಳೆದ ವರ್ಷ ಫಸಲು ಬಾರದೆ ಕಂಗಾಲಾಗಿದ್ದ…

Read More

ಬೇಸಿಗೆಯಲ್ಲಿ ದೇಹದ ನೀರಿನಾಂಶ ಕಾಪಾಡಿಕೊಳ್ಳಲು ಈ ಹಣ್ಣುಗಳನ್ನು ಪ್ರತಿನಿತ್ಯ ಸೇವನೆ ಮಾಡಿ

ಬೇಸಿಗೆ (summer) ಸಮಯದಲ್ಲಿನ ವಿಪರೀತ ಉರಿ ಬಿಸಿಲು ನಮ್ಮನ್ನು ಹೈರಾಣಾಗಿಸಿ ಬಿಡುತ್ತದೆ.  ಈ ಸಮಯದಲ್ಲಿ ದೇಹವನ್ನು ಎಷ್ಟು ಪ್ರಮಾಣದಲ್ಲಿ ತಂಪಾಗಿ ಮತ್ತು ಚೈತನ್ಯಭರಿತವಾಗಿ ಇಟ್ಟುಕೊಂಡರೂ ಸಾಲದು. ಹೌದು ಉರಿ ಬಿಸಿಲಿನ ಬೇಗೆಗೆ ಬೆವರು ನೀರಿನಂತೆ ಹರಿದು ಹೋಗುತ್ತಾ ಇರುತ್ತದೆ. ಇದರಿಂದಾಗಿ ನಿರ್ಜಲೀಕರಣ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಬೇಸಿಗೆಯಲ್ಲಿ ಕಾಣಿಸಿಕೊಳ್ಳುವ ಈ ಸಮಸ್ಯೆಯಿಂದ ಪಾರಾಗಲು ಜನ ನೀರಿನ ಜೊತೆಗೆ ಫ್ರೂಟ್ಸ್‌ ಜ್ಯೂಸ್‌ಗಳನ್ನು ಸಹ ಸೇವನೆ ಮಾಡುತ್ತಾರೆ. ಇವುಗಳ ಜೊತೆಗೆ ಈ ಒಂದಷ್ಟು ಹಣ್ಣುಗಳನ್ನು ಸೇವನೆ ಮಾಡುವ ಮೂಲಕವೂ ದೇಹದಲ್ಲಿ ಸಾಕಷ್ಟು…

Read More

ಬಸ್ ಶೆಲ್ಟರ್ ನಿರ್ಮಾಣಕ್ಕೆ ಜೆಡಿಎಸ್ ಸೇರಿ ಇತರರ ವಿರೋಧ: ಗುದ್ದಲಿ ಪೂಜೆ ಮಾಡದೆ ತೆರಳಿದ ಕಾಂಗ್ರೆಸ್​ ಶಾಸಕ

ರಾಮನಗರ, ಮಾರ್ಚ್​ 28: ರೇಷ್ಮೆನಗರಿ ರಾಮನಗರ, ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾ ಕೇಂದ್ರ. ಸಿಲಿಕಾನ್ ಸಿಟಿಯಿಂದ ಕೂಗಳತೆ ದೂರದಲ್ಲಿದ್ದರು, ಜಿಲ್ಲಾ ಕೇಂದ್ರದಲ್ಲಿ ಒಂದು ಬಸ್ ಶೆಲ್ಟರ್ (bus shelter) ಇಲ್ಲ. ಹೀಗಾಗಿ ಪ್ರಾಧಿಕಾರದ ವತಿಯಿಂದ ಸುಸಜ್ಜಿತ ಬಸ್ ಶೆಲ್ಟರ್ ಕಾಮಗಾರಿಗೆ ಗುದ್ದಲಿ ಪೂಜೆ ಹಮ್ಮಿಕೊಳ್ಳಲಾಗಿತ್ತು. ಗುದ್ದಲಿಪೂಜೆ ನೆರವೇರಿಸಲು ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ (MLA Iqbal Hussain)​ ಕೂಡ ಆಗಮಿಸಿದ್ದರು. ಆದರೆ‌ ತಂಗುದಾಣ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು‌. ಹೀಗಾಗಿ ಗುದ್ದಲಿಪೂಜೆ ನೆರವೇರಿಸದೇ ಶಾಸಕರು ವಾಪಾಸ್…

Read More

ಒಂದಲ್ಲ ಎರಡು ಐಪಿಎಲ್ ಟಿಕೆಟ್ ಬೇಕು ಎಂದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ನೀಡಿದ ಉತ್ತರವೇನು?

ಬೆಂಗಳೂರು, ಮಾ.28: ಐಪಿಎಲ್ ಕ್ರೇಜ್ ಈಗ ಕೇವಲ ಮೈದಾನಕ್ಕೆ ಮಾತ್ರ ಸೀಮಿತವಾಗಿಲ್ಲ, ಬದಲಿಗೆ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ. ಐಪಿಎಲ್ ಪಂದ್ಯಗಳ ವೀಕ್ಷಣೆಗೆ ಶಾಸಕರಿಗೆ ಟಿಕೆಟ್ ನೀಡುವ ವಿಚಾರ ಸದನದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಸುರೇಶ್ ಕುಮಾರ್ ಅವರಂತಹ ಕೆಲವು ಹಿರಿಯ ಶಾಸಕರು ನಮಗೆ ಟಿಕೆಟ್ ಬೇಡ ಎಂದು ಅಸಮಾಧಾನ ವ್ಯಕ್ತಪಡಿಸಿದರೆ, ಇನ್ನು ಕೆಲವರು ಟಿಕೆಟ್‌ಗಾಗಿ ಪಟ್ಟು ಹಿಡಿದಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಐಪಿಎಲ್ ಪಂದ್ಯಗಳಿಗಾಗಿ ಶಾಸಕರು ಮತ್ತು ಎಂಎಲ್‌ಸಿಗಳಿಗೆ ನೀಡಲಾಗುತ್ತಿದ್ದ ಟಿಕೆಟ್ ಸಂಖ್ಯೆಯನ್ನು ಹೆಚ್ಚಿಸುವಂತೆ…

Read More

ಇರಾನ್ ಯುದ್ಧದ ನಡುವೆ ಸೌದಿ ಕ್ರೌನ್ ಪ್ರಿನ್ಸ್ ಜೊತೆ ಪ್ರಧಾನಿ ಮೋದಿ ಮಾತುಕತೆ

ನವದೆಹಲಿ, ಮಾರ್ಚ್ 28: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತನಾಡಿದ್ದಾರೆ. ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಪ್ರಾದೇಶಿಕ ಸ್ಥಿರತೆ ಮತ್ತು ಕಡಲ ಭದ್ರತೆಗೆ ಆ ಯುದ್ಧದ ಪರಿಣಾಮಗಳ ಬಗ್ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಮುಖ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವುದಾಗಿ…

Read More

RCB vs SRH: W,W,W.. ಹೇಜಲ್​ವುಡ್ ಸ್ಥಾನ ತುಂಬಿದ ಜಾಕೋಬ್ ಡಫಿ

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026 ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಕಣಕ್ಕಿಳಿದಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಎಸ್​ಆರ್​ಹೆಚ್ ತಂಡಕ್ಕೆ ಆರಂಭಿಕ ಆಘಾತ ಎದುರಾಗಿದೆ. ಕೇವಲ 29 ರನ್​ಗಳಿಗೆ ತಂಡದ 3 ಪ್ರಮುಖ ವಿಕೆಟ್​ಗಳು ಪತನವಾಗಿವೆ. ಸನ್​ರೈಸರ್ಸ್​ಗೆ ಈ ಆಘಾತ ನೀಡಿದ್ದು, ಆರ್​ಸಿಬಿ ಪರ ಐಪಿಎಲ್​ಗೆ ಪಾದಾರ್ಪಣೆ ಮಾಡಿರುವ ಕಿವೀಸ್ ವೇಗಿ ಜಾಕೋಬ್ ಡಫಿ ವಾಸ್ತವವಾಗಿ ಆಸ್ಟ್ರೇಲಿಯಾದ ಅನುಭವಿ ವೇಗದ…

Read More

ಭೂಗತ ಲೋಕದಿಂದ ಬೆದರಿಕೆ: ಭಯಾನಕ ಅನುಭವ ಬಿಚ್ಚಿಟ್ಟ ನಟ ವರುಣ್ ಧವನ್

90ರ ದಶಕದಲ್ಲಿ ಬಾಲಿವುಡ್ (Bollywood)​​ ಅನ್ನು ಭೂಗತ ಜಗತ್ತು ಇನ್ನಿಲ್ಲದಂತೆ ಕಾಡಿತ್ತು. ಹಲವಾರು ಸಿನಿಮಾ ನಟ, ನಿರ್ದೇಶಕ, ನಿರ್ಮಾಪಕ, ನಟಿಯರಿಗೆ ಭೂಗತ ಲೋಕದ ದುರುಳರಿಂದ ಬೆದರಿಕೆ ಕರೆಗಳು ಬರುತ್ತಿದ್ದವು. ಟಿ-ಸೀರೀಸ್ ಮಾಲೀಕನ ಕೊಲೆಯನ್ನೂ ಈ ಭೂಗತ ಲೋಕದ ಮಂದಿ ಮಾಡಿದ್ದರು. ಕೆಲವು ನಟರು, ಭಯಗೊಂಡು ಭೂಗತ ಲೋಕದವರ ಪಾರ್ಟಿಗಳಲ್ಲಿ ಸಹ ಕಾಣಿಸಿಕೊಂಡಿದ್ದರು. ಆದರೆ ಕೆಲವರು ಮಾತ್ರ ಧೈರ್ಯವನ್ನು ಅದೆಲ್ಲವನ್ನೂ ಎದುರಿಸಿದ್ದರು. ಇದೀಗ ನಟ ವರುಣ್ ಧವನ್, ತಮ್ಮ ಮನೆಗೆ ಭೂಗತ ಲೋಕದ ಕರೆ ಬಂದಿದ್ದ ಘಟನೆಯನ್ನು ಸಂದರ್ಶನವೊಂದರಲ್ಲಿ…

Read More

2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ಪ್ರಜ್ವಲ್ ರೇವಣ್ಣ ಕೇಸ್ ತನಿಖೆ ನಡೆಸಿದ್ದ ಸುಮನ್ ಪನ್ನೇಕರ್‌ ಸೇರಿ 153 ಪೊಲೀಸರು ಆಯ್ಕೆ

ಬೆಂಗಳೂರು, ಮಾ.28: ಪೊಲೀಸ್ ಇಲಾಖೆಯಲ್ಲಿ ಅಸಾಧಾರಣ ಸೇವೆ ಮತ್ತು ದಕ್ಷತೆ ಮೆರೆದ ಒಟ್ಟು 153 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ 2025ನೇ ಸಾಲಿನ ಪ್ರತಿಷ್ಠಿತ ‘ಮುಖ್ಯಮಂತ್ರಿ ಪದಕ’ (Chief Minister’s Medal) ಪ್ರಕಟವಾಗಿದೆ. ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಈ ಪದಕಗಳನ್ನು ಪ್ರದಾನ ಮಾಡಲಾಗುವುದು. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ (SIT) ತಂಡದಲ್ಲಿದ್ದ ಐಪಿಎಸ್ ಅಧಿಕಾರಿ, ಬಳ್ಳಾರಿ ಎಸ್​ಪಿ ಡಾ. ಸುಮನ್ ಡಿ. ಪನ್ನೇಕರ್…

Read More

IPL 2026: ಅಗಲಿದ 11 ಜೀವಗಳಿಗೆ 1 ನಿಮಿಷದ ಮೌನಾಚರಣೆ; ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ತಂಡಗಳು

2026 ರ ಐಪಿಎಲ್ ಇಂದಿನಿಂದ ಆರಂಭವಾಗಿದೆ. ಲೀಗ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್​ಸಿಬಿ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ತವರಿನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯ ರಜತ್ ಪಾಟಿದರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಆರ್​ಸಿಬಿ ಪರ ಇಬ್ಬರು ಆಟಗಾರರು ಐಪಿಎಲ್​ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಪಂದ್ಯ ಆರಂಭಕ್ಕೂ ಮುನ್ನ ಉಭಯ ತಂಡಗಳಿಂದ ಅಗಲಿದ 11 ಅಮಾಯಕ ಜೀವಗಳಿಗೆ…

Read More