ಆಟವಾಡುತ್ತಿದ್ದ ಬಾಲಕನನ್ನು ಫುಟ್‌ಬಾಲ್‌ನಂತೆ ಒದ್ದ ಜಿಮ್ ಟ್ರೈನರ್ನ ಮತ್ತಷ್ಟು ಕೃತ್ಯಗಳು ಬಯಲು – Kannada News | A man kicked to child In Bengaluru: Reveled Accused gym trainer Ranjan Cases
ಬೆಂಗಳೂರು, (ಡಿಸೆಂಬರ್ 19): ಆಟವಾಡುತ್ತಿದ್ದ ಬಾಲಕನಿಗೆ ಕಾಲಿನಿಂದ ಒದ್ದು ದುರುಳನೊಬ್ಬ ಕ್ರೌರ್ಯ ಮರೆದಿರುವ ಘಟನೆ ಬೆಂಗಳೂರಿನ ಬನಶಂಕರಿ ಠಾಣಾ ವ್ಯಾಪ್ತಿಯ ತ್ಯಾಗರಾಜನಗರದಲ್ಲಿ ನಡೆದಿದೆ. ತನ್ನ ಪಾಡಿಗೆ ತಾನು ಆಟವಾಡ್ತಿದ್ದ ಬಾಲಕನನ್ನ ರಂಜನ್ ಎಂಬಾತ ಫುಟ್‌ಬಾಲ್‌ನಂತೆ ಒದ್ದು ವಿಕೃತಿ ಮೆರೆದಿದ್ದಾನೆ. ರಂಜನ್ ಹಲ್ಲೆಯಿಂದ ಬಾಲಕನ ಮೈ-ಕೈಗೆ ಗಾಯವಾಗಿದ್ದು, ಬಾಲಕನ ತಾಯಿ ದೂರು ಆಧರಿಸಿ ಬನಶಂಕರಿ ಪೊಲೀಸರು ಆರೋಪಿ ರಂಜನ್ನನ್ನ ಬಂಧಿಸಿದ್ದಾರೆ. ಹಲ್ಲೆ ಸಂಬಂಧ ಪೋಷಕರು ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ರಸ್ತೆಯಲ್ಲಿನ ಸಿಸಿಟಿವಿ ಚೆಕ್ ಮಾಡಿದ್ದಾರೆ….