ಕೆಎಸ್‌ಆರ್‌ಟಿಸಿಗೆ ರಾಷ್ಟ್ರಮಟ್ಟದ ‘ಸ್ಕಾಚ್’ ಗೌರವ: ಪಾರದರ್ಶಕ ನೇಮಕಾತಿ ಮತ್ತು ತರಬೇತಿಗೆ ಸಂದ ದೊಡ್ಡ ಜಯ!
ಬೆಂಗಳೂರು, ಮಾ.28: ನಿಗಮವು ತನ್ನ “ಪಾರದರ್ಶಕ ನೇಮಕಾತಿ ಮತ್ತು ಪರಿಣಾಮಕಾರಿ ತರಬೇತಿ ಕಾರ್ಯಕ್ರಮ”ಕ್ಕೆ ಪ್ರತಿಷ್ಠಿತ ಸ್ಕೋಚ್ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದೆ. ನಿಗಮವು ಅರ್ಜಿ ಸಲ್ಲಿಕೆದಿಂದ ಆಯ್ಕೆ ಪ್ರಕ್ರಿಯೆಯವರೆಗೆ, ಘಟಕ ನಿಯೋಜನೆ ವರೆಗೆ ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತು ಏಕರೂಪತೆಯನ್ನು ಕಾಪಾಡಿಕೊಂಡು ಮೂಲಕ ಮಾನವ ಹಸ್ತಕ್ಷೇಪವನ್ನು ನಿಲ್ಲಿಸಲಾಗಿದೆ. ತಂತ್ರಜ್ಞಾನ ಆಧಾರಿತ ನೇಮಕಾತಿ ವ್ಯವಸ್ಥೆ, ಸ್ವಯಂ ಚಾಲಿತ ಚಾಲನಾ ಪರೀಕ್ಷೆ, ಆನ್ಲೈನ್ ಪರೀಕ್ಷೆಗಳು, ದಾಖಲೆಗಳ ಡಿಜಿಟಲ್ ಪರಿಶೀಲನೆ, ವೆಬ್ ಕ್ಯಾಸ್ಟಿಂಗ್, ಅಟೋ ಜನರೇಟಡ್ ಅಂಕಪಟ್ಟಿ ನೀಡುವ ಮೂಲಕ 2000 ಚಾಲಕ/ ನಿರ್ವಾಹಕರು,…