ಇರಾನ್ ಯುದ್ಧದ ನಡುವೆ ಸೌದಿ ಕ್ರೌನ್ ಪ್ರಿನ್ಸ್ ಜೊತೆ ಪ್ರಧಾನಿ ಮೋದಿ ಮಾತುಕತೆ
ನವದೆಹಲಿ, ಮಾರ್ಚ್ 28: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತನಾಡಿದ್ದಾರೆ. ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಪ್ರಾದೇಶಿಕ ಸ್ಥಿರತೆ ಮತ್ತು ಕಡಲ ಭದ್ರತೆಗೆ ಆ ಯುದ್ಧದ ಪರಿಣಾಮಗಳ ಬಗ್ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಮುಖ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವುದಾಗಿ…