ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಸವಾಲು: ವಿಜಯೇಂದ್ರಗೆ ಸಿಎಂ ಅಂಕಿ-ಸಂಖ್ಯೆ ಸಮೇತ ತಿರುಗೇಟು
ಬೆಂಗಳೂರು, (ಮಾರ್ಚ್ 31): ಕರ್ನಾಟಕದ ಆರ್ಥಿಕ (karnataka economy) ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಆಗ್ರಹಿಸಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಸಹ ಅಂಕಿ-ಸಂಖ್ಯೆ ಸಮೇತ ಮಾಧ್ಯಮ ಪ್ರಕಟಣೆ ಮೂಲಕ ತಿರುಗೇಟು ನೀಡಿದ್ದಾರೆ. ವಿಜಯೇಂದ್ರ ಒತ್ತಾಯಿಸಿರುವುದು ಆರ್ಥಿಕ ಕ್ಷೇತ್ರದ ಬಗೆಗಿನ ಅವರ ಅಜ್ಞಾನ. ಆಡಳಿತದ ಅನುಭವದ ಕೊರತೆ ಮತ್ತು ರಾಜಕೀಯ ಹತಾಶೆಯನ್ನು ತೋರಿಸುತ್ತೆ. ಕಳೆದ ತಿಂಗಳಷ್ಟೇ ಈ ಆರ್ಥಿಕ ವರ್ಷದ ಆಯವ್ಯಯಪತ್ರವನ್ನು ಮಂಡಿಸಿದ್ದೇನೆ. ಅದು ಅಂಕಿ-ಅಂಶಗಳ ಕಾಗದದ ಕಂತೆ…