All posts by nagaraj11081993

ಸಂಜನಾ ಬುರ್ಲಿ ಮದುವೆಯ ಫೋಟೋಗಳು ಎಷ್ಟು ಸುಂದರವಾಗಿವೆ ನೋಡಿ

Source link

Girl Child as Lakshmi: ಹೆಣ್ಣು ಮಗು ಜನಿಸಿದರೆ ಮನೆಯ ಅದೃಷ್ಟವೇ ಬದಲಾಗುತ್ತದೆಯೇ? ಶಾಸ್ತ್ರಗಳು ಹೇಳುವುದೇನು?

ಭಾರತೀಯ ಪರಂಪರೆಯಲ್ಲಿ ಹೆಣ್ಣು ಮಗುವಿನ ಜನನವು ಕೇವಲ ಒಂದು ಕುಟುಂಬದ ವಿಸ್ತರಣೆಯಲ್ಲ, ಅದು ಸಾಕ್ಷಾತ್ ಲಕ್ಷ್ಮಿ ದೇವಿಯ ಆಗಮನವೆಂದೇ ಶತಶತಮಾನಗಳಿಂದ ನಂಬಿಕೊಂಡು ಬರಲಾಗಿದೆ. ಮನೆಯ ಅಂಗಳದಲ್ಲಿ ಹೆಣ್ಣು ಮಗುವಿನ ನಗು ಕೇಳಿಸಿದರೆ ಅಲ್ಲಿ ದಾರಿದ್ರ್ಯ ಸುಳಿಯುವುದಿಲ್ಲ ಎಂಬ ಮಾತು ಕೇವಲ ಭಾವನಾತ್ಮಕ ನುಡಿಯಲ್ಲ, ಅದರ ಹಿಂದೆ ಆಳವಾದ ಆಧ್ಯಾತ್ಮಿಕ ಮತ್ತು ಜ್ಯೋತಿಷ್ಯ ಶಾಸ್ತ್ರದ ಕಾರಣಗಳಿವೆ. ಹೆಣ್ಣು ಮಗು ಜನಿಸಿದಾಗ ಆಕೆಯ ಜಾತಕದಲ್ಲಿರುವ ಗ್ರಹಗತಿಗಳು ಇಡೀ ಕುಟುಂಬದ ಅದೃಷ್ಟವನ್ನೇ ಬದಲಿಸುವ ಶಕ್ತಿ ಹೊಂದಿರುತ್ತವೆ ಎಂದು ಶಾಸ್ತ್ರಗಳು ಉಲ್ಲೇಖಿಸುತ್ತವೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೆಣ್ಣು ಮಗುವಿನ ಜಾತಕದಲ್ಲಿ ಚಂದ್ರ, ಶುಕ್ರ ಮತ್ತು ಗುರು ಗ್ರಹಗಳು ಬಲವಾಗಿದ್ದರೆ, ಆಕೆ ಕಾಲಿಟ್ಟ ಕ್ಷಣದಿಂದಲೇ ಮನೆಯಲ್ಲಿ ಆರ್ಥಿಕ ಪ್ರಗತಿ ಮತ್ತು ಸುಖ-ಶಾಂತಿ ನೆಲೆಸುತ್ತದೆ. ಸ್ತ್ರೀ ಶಕ್ತಿಯು ಮನೆಯಲ್ಲಿನ ನಕಾರಾತ್ಮಕತೆಯನ್ನು ದೂರಮಾಡಿ, ಸಕಾರಾತ್ಮಕ ಶಕ್ತಿಯನ್ನು ವೃದ್ಧಿಸುತ್ತದೆ. ಅದಕ್ಕಾಗಿಯೇ ಹೆಣ್ಣು ಮಗುವನ್ನು ‘ಭಾಗ್ಯಲಕ್ಷ್ಮಿ’ ಎಂದು ಕರೆಯಲಾಗುತ್ತದೆ. ಆಕೆಯ ಜನನದ ನಂತರ ತಂದೆ-ತಾಯಿಯ ಬಾಳಿನಲ್ಲಿ ಸ್ಥಗಿತಗೊಂಡಿದ್ದ ಕೆಲಸಗಳು ಪೂರ್ಣಗೊಳ್ಳುವುದು, ಹೊಸ ಆಸ್ತಿ ಅಥವಾ ವಾಹನಗಳ ಖರೀದಿಯಂತಹ ಶುಭ ಘಟನೆಗಳು ಸಂಭವಿಸುವುದು ಆಕೆಯ ಅದೃಷ್ಟದ ಪ್ರತಿಫಲವೆಂದೇ ಪರಿಗಣಿತವಾಗಿದೆ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

“ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾ:” ಎನ್ನುವ ವೇದವಾಣಿಯಂತೆ, ಎಲ್ಲಿ ಸ್ತ್ರೀಯರಿಗೆ ಗೌರವ ಸಿಗುತ್ತದೆಯೋ ಅಲ್ಲಿ ದೇವತೆಗಳು ನೆಲೆಸುತ್ತಾರೆ. ಮಗಳನ್ನು ಪ್ರೀತಿ ಮತ್ತು ಗೌರವದಿಂದ ಕಾಣುವ ಮನೆಯಲ್ಲಿ ಶುಕ್ರ ಗ್ರಹವು ಬಲಗೊಳ್ಳುತ್ತದೆ. ಜ್ಯೋತಿಷ್ಯದಲ್ಲಿ ಶುಕ್ರನು ಐಶ್ವರ್ಯ ಮತ್ತು ಭೌತಿಕ ಸುಖಗಳ ಕಾರಕನಾಗಿದ್ದು, ಮಗಳ ಸಂತೋಷವು ಪರೋಕ್ಷವಾಗಿ ಕುಟುಂಬದ ಸಮೃದ್ಧಿಗೆ ದಾರಿಯಾಗುತ್ತದೆ. ಹೀಗೆ ತನ್ನೊಂದಿಗೆ ಪುಣ್ಯದ ಫಲವನ್ನು ಹೊತ್ತು ತರುವ ಮಗಳು, ಇಡೀ ಕುಟುಂಬಕ್ಕೆ ದೈವಿಕ ಆಶೀರ್ವಾದದ ರೂಪವಾಗಿದ್ದಾಳೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನೇಪಾಳ: ಬಲೆನ್ ಶಾ ಅಧಿಕಾರ ಸ್ವೀಕಾರ ಬೆನ್ನಲ್ಲೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ

ಕಾಠ್ಮಂಡು, ಮಾರ್ಚ್ 28: ನೇಪಾಳ (Nepal) ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ನೂತನ ಪ್ರಧಾನಿಯಾಗಿ ಬಾಲೆನ್ ಶಾ ಹಾಗೂ ಸಂಪುಟ ಸಚಿವರು ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ (KP Sharma Oli) ಅವರನ್ನು ಬಂಧಿಸಲಾಗಿದೆ. ಕಳೆದ ವರ್ಷ ನಡೆದ ಭ್ರಷ್ಟಾಚಾರ ವಿರೋಧಿ ‘ಜೆನ್ ಜಿ (Gen Z)’ ಪ್ರತಿಭಟನೆಯ ವೇಳೆ ಕನಿಷ್ಠ 77 ಜನರ ಸಾವಿಗೆ ಕಾರಣವಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಲಿ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಒಲಿ ಅವರೊಂದಿಗೆ ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸ್ ವಕ್ತಾರ ಓಂ ಅಧಿಕಾರಿ ಖಚಿತಪಡಿಸಿದ್ದಾರೆ.

ವಿಶೇಷ ನ್ಯಾಯಾಲಯದ ಮಾಜಿ ನ್ಯಾಯಾಧೀಶ ಗೌರಿ ಬಹದ್ದೂರ್ ಕಾರ್ಕಿ ನೇತೃತ್ವದ ತನಿಖಾ ಸಮಿತಿಯು ನೀಡಿದ ಶಿಫಾರಸಿನ ಮೇರೆಗೆ ಈ ಬಂಧನವಾಗಿದೆ. ಪ್ರತಿಭಟನಾಕಾರರ ಮೇಲೆ ಅತಿಯಾದ ಮತ್ತು ಅನಿಯಂತ್ರಿತ ಬಲಪ್ರಯೋಗ ಮಾಡಿದ್ದಲ್ಲದೆ, ಹಿಂಸಾಚಾರವನ್ನು ತಡೆಯುವಲ್ಲಿ ಒಲಿ ಸರ್ಕಾರ ವಿಫಲವಾಗಿತ್ತು ಎಂದು ತನಿಖಾ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ವಿಶೇಷವೆಂದರೆ, ಬಾಲೆನ್ ಶಾ ಅವರು ನೇಪಾಳದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಮರುದಿನವೇ ಈ ಪ್ರಮುಖ ಬೆಳವಣಿಗೆ ನಡೆದಿದೆ.

ಇದನ್ನೂ ಓದಿ:  ಭಾರತಕ್ಕೆ ಶಾಕ್ ನೀಡಲಿದೆಯೇ ರಷ್ಯಾ? ಏಪ್ರಿಲ್ 1 ರಿಂದ ಕಚ್ಚಾ ತೈಲ ರಫ್ತು ಸ್ಥಗಿತ!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ನೂತನ ಗೃಹ ಸಚಿವ ಸುದನ್ ಗುರುಂಗ್, ‘ಕೊಟ್ಟ ಮಾತಿನಂತೆ ನಾವು ನಡೆದಿದ್ದೇವೆ. ಕಾನೂನಿಗಿಂತ ಯಾರೂ ಮೇಲಲ್ಲ. ಇದು ಯಾರ ವಿರುದ್ಧದ ಸೇಡಲ್ಲ, ಬದಲಾಗಿ ನ್ಯಾಯದ ಆರಂಭವಷ್ಟೇ’ ಎಂದು ಉಲ್ಲೇಖಿಸಿದ್ದಾರೆ. ಸೆಪ್ಟೆಂಬರ್ 8 ರಂದು ಪ್ರತಿಭಟನಾಕಾರರ ಮೇಲೆ ನಡೆದ ದಾಳಿಯನ್ನು ಹತ್ಯೆ ಎಂದು ಪರಿಗಣಿಸಿ ವಿಚಾರಣೆ ನಡೆಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ರಿಲೀಸ್ ಆಗಿ ಕೆಲವೇ ವಾರಕ್ಕೆ ಒಟಿಟಿಗೆ ಬರ್ತಿದೆ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ

ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇತ್ತೀಚೆಗೆ ಥಿಯೇಟರ್​ ಅಲ್ಲಿ ಬಿಡುಗಡೆ ಕಂಡಿತು. ಮಾರ್ಚ್ 19ರಂದ ಸಿನಿಮಾ ‘ಧುರಂಧರ್ 2’ ಎದುರು ರಿಈಸ್ ಆಗಿ, 100 ಕೋಟಿ ರೂಪಾಯಿ ಗಳಿಸಲು ಒದ್ದಾಡುತ್ತಿದೆ. ಮಾಸ್ ಆ್ಯಕ್ಷನ್ ಎಂಟರ್ಟೈನರ್ ಆಗಿರುವ ಈ ಚಿತ್ರದಲ್ಲಿ ಶ್ರೀಲೀಲಾ ನಾಯಕಿ. ರಾಶಿ ಖನ್ನಾ ಕೂಡ ಮತ್ತೊಂದು ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಕಾಲಿವುಡ್ ನಟ ಪಾರ್ಥಿಬನ್ ಈ ಚಿತ್ರದಲ್ಲಿ ಖಳನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರ ರಿಲೀಸ್ ಆದ ಕೆಲವೇ ವಾರದಲ್ಲಿ ಒಟಿಟಿಗೆ ಬರುತ್ತಿದೆ.

ಪವನ್ ಕಲ್ಯಾಣ್ ಅವರ ‘ಉಸ್ತಾದ್ ಭಗತ್ ಸಿಂಗ್’ ಜನರಿಗೆ ಇಷ್ಟ ಆಗಿಲ್ಲ. ಹರೀಶ್ ಶಂಕರ್ ಅವರ ಡೈಲಾಗ್ಸ್, ಶ್ರೀಲೀಲಾ ಮತ್ತು ರಾಶಿ ಖನ್ನಾ ಅವರ ಗ್ಲಾಮರ್ ಕೆಲಸಕ್ಕೆ ಬರಲಿಲ್ಲ. ಚಿತ್ರದಲ್ಲಿನ ಕೆಲ ಸಕಾರಾತ್ಮಕ ಅಂಶಗಳ ಹೊರತಾಗಿಯೂ, ಉಸ್ತಾದ್ ಭಗತ್ ಸಿಂಗ್ ಅವರ ಚಿತ್ರ ಕಥೆ ಮತ್ತು ನಿರೂಪಣೆಯ ವಿಷಯದಲ್ಲಿ ಸ್ವಲ್ಪ ದುರ್ಬಲವಾಗಿ ಕಾಣುತ್ತದೆ. ಇದರ ಜೊತೆಗೆ, ‘ಧುರಂಧರ್ 2’ ಬಿಡುಗಡೆಯು ಉಸ್ತಾದ್‌ಗೆ ಮೈನಸ್ ಆಗಿ ಪರಿಣಮಿಸಿದೆ. ಇದರಿಂದಾಗಿ, ಪವನ್ ಕಲ್ಯಾಣ್ ಅವರ ಚಿತ್ರವು ಸಾಧಾರಣ ಕಲೆಕ್ಷನ್‌ಗಳನ್ನು ಮಾತ್ರ ಪಡೆಯುತ್ತಿದೆ. ಈಗ ಚಿತ್ರದ OTT ಸ್ಟ್ರೀಮಿಂಗ್ ಬಗ್ಗೆ ಒಂದು ಕುತೂಹಲಕಾರಿ ಸುದ್ದಿ ಕೇಳಿಬರುತ್ತಿದೆ.

ಇದನ್ನೂ ಓದಿ: ‘ಧುರಂಧರ್ 2’ ವಿರುದ್ಧ ‘ಉಸ್ತಾದ್ ಭಗತ್ ಸಿಂಗ್’ ಬಾಕ್ಸ್ ಆಫೀಸ್ ಹರಸಾಹಸ

‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳು ಥಿಯೇಟ್ರಿಕಲ್ ಬಿಡುಗಡೆಗೂ ಮೊದಲೇ ಮಾರಾಟವಾಗಿವೆ. ಜನಪ್ರಿಯ OTT ಕಂಪನಿ ನೆಟ್‌ಫ್ಲಿಕ್ಸ್ ಈ ಚಿತ್ರವನ್ನು ಭಾರಿ ಬೆಲೆಗೆ ಖರೀದಿಸಿದೆ. ಚಿತ್ರದ ನಿರ್ಮಾಪಕ ನವೀನ್ ಎರ್ನೇನಿ ಪತ್ರಿಕಾಗೋಷ್ಠಿಯಲ್ಲಿ, ಉಸ್ತಾದ್ ಚಿತ್ರವು ಥಿಯೇಟ್ರಿಕಲ್ ಬಿಡುಗಡೆಯಾದ ಸುಮಾರು 5 ವಾರಗಳ ಅಂತರದಲ್ಲಿ OTT ನಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದರು. ಆದರೆ, ಅದಕ್ಕೂ ಮೊದಲೇ ಅಂದರೆ ಏಪ್ರಿಲ್ 16ರಂದು ಸಿನಿಮಾ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ ಎನ್ನಲಾಗಿದೆ.

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ 65 ಕೋಟಿ ರೂಪಾಯಿ ಗಳಿಸಿದೆ. ದಿನ ಕಳೆದಂತೆ ಚಿತ್ರವು ಕಡಿಮೆ ಕಲೆಕ್ಷನ್ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: CSK ಅಭಿಮಾನಿಗಳಿಗೆ ಬಿಗ್ ಶಾಕ್: ಎಂಎಸ್​ ಧೋನಿ ಅಲಭ್ಯ..!

Source link

‘ನೀವೆಲ್ಲಾ ಟೆರರಿಸ್ಟ್​ಗಳು’: ಮುಸ್ಲಿಮ್ ವಿದ್ಯಾರ್ಥಿಗೆ ಕ್ಲಾಸ್​ನಲ್ಲೇ ಅವಮಾನಿಸಿದ ಪ್ರೊಫೆಸರ್!

ಬೆಂಗಳೂರು, ಮಾರ್ಚ್​ 28: ಪಿಇಎಸ್ ವಿಶ್ವವಿದ್ಯಾಲಯನಲ್ಲಿ ಪ್ರೊಫೆಸರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಬನಶಂಕರಿ ರಿಂಗ್ ರೋಡ್‌ನಲ್ಲಿರುವ ಕ್ಯಾಂಪಸ್‌ನಲ್ಲಿ ಪಾಠ ಮಾಡುತ್ತಿದ್ದ ವೇಳೆ ಕೋಪಗೊಂಡ ಪ್ರೊಫೆಸರ್ ಡಾ. ಮೂರಳಿಧರ ದೇಶಪಾಂಡೆ ತರಗತಿಯಲ್ಲಿದ್ದ ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದು ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಎರಡು ದಿನಗಳ ಹಿಂದೆ ನಡೆದಿದೆ.

ಪಾಠದ ಮಧ್ಯದಲ್ಲಿ ಮಕ್ಕಳ ಗಲಾಟೆಯಿಂದಲೋ ಏನೋ ದೇಶಪಾಂಡೆ ಗರಂ ಆಗಿದ್ದು, ನೀವೆಲ್ಲಾ ಭಯೋತ್ಪಾದಕರು ಎಂದೆಲ್ಲಾ ನಿಂದಿಸಿದ್ದಾರೆ. ಇದೇ ವೇಳೆ ತರಗತಿಯಲ್ಲಿ ಕುಳಿತಿದ್ದ ವಿದ್ಯಾರ್ಥಿಗಳು ತಮ್ಮ ಮೊಬೈಲ್​ನಲ್ಲಿ ಘಟನೆಯನ್ನು ಸೆರೆ ಹಿಡಿದಿದ್ದಾರೆ. ಇದೇ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಈ ಬಗ್ಗೆ ದೂರು ದಾಖಲಿಸಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿದ ವಿಶ್ವವಿದ್ಯಾಲಯ ಆಡಳಿತವು ತಕ್ಷಣ ಕ್ರಮ ಕೈಗೊಂಡು ಪ್ರೊಫೆಸರ್ ಅವರನ್ನು ಅಮಾನತು ಮಾಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Viral: ಇದು ರೈತನ ವಿಭಿನ್ನ ರಾಮನವಮಿ ಸೆಲೆಬ್ರೇಶನ್; ಹೂಕೋಸಿನಲ್ಲಿ ಮೂಡಿ ಬಂದ ರಾಮ, ಸೀತೆ, ಹನುಮಂತ

ಮರ್ಯಾದಾ ಪುರುಷ, ಪುರುಷೋತ್ತಮ ಭಗವಾನ್ ಶ್ರೀ ರಾಮನ (Shri Rama) ಜನ್ಮದಿನವನ್ನು ದೇಶದೆಲ್ಲೆಡೆ ಶ್ರದ್ಧಾಭಕ್ರಿಯಿಂದ ಆಚರಿಸಲಾಗಿದೆ. ಹಿಂದೂಗಳಿಗೆ ಯುಗಾದಿ (Ugadi festival) ವರುಷದ ಮೊದಲ ಹಬ್ಬವಾದರೆ, ತದನಂತರ ಬರುವುದೇ ಈ ರಾಮನವಮಿ (Rama Navami). ಈ ಹಬ್ಬದಂದು ಕೋಟ್ಯಾಂತರ ಭಕ್ತರು ರಾಮನನ್ನು ಪೂಜಿಸಿ, ಆರಾಧಿಸುತ್ತಾರೆ. ಆದರೆ ಇಲ್ಲೊಬ್ಬ ರೈತನು ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ ಹನುಮಂತನ ಚಿತ್ರ ಬಿಡಿಸಿದ ರಾಮನವಮಿಯನ್ನು ಸಂಭ್ರಮಿಸಿದ್ದಾನೆ. ಈ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮೆಚ್ಚುಗೆಗೆ ಪಾತ್ರವಾಗಿದೆ.

ನಂದಿನಿ ವೆಂಕಟಾದ್ರಿ (Nandini Venkatadri) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಯುವ ರೈತನೊಬ್ಬ ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ, ಹನುಮಂತನ ಚಿತ್ರ ಬಿಡಿಸಿದ ರಾಮನವಮಿಯನ್ನು ವಿಭಿನ್ನವಾಗಿ ಆಚರಿಸುವುದನ್ನು ಕಾಣಬಹುದು. ಹೊಲದಲ್ಲಿ ಹೂಕೋಸಿನ ರಾಶಿಯನ್ನು ಕಾಣಬಹುದು. ಮೂವರು ಮಹಿಳೆಯರು ಕೆಲಸದಲ್ಲಿ ತೊಡಗಿಕೊಂಡಿದ್ದು, ಯುವ ರೈತನೊಬ್ಬ ಹೂಕೋಸನ್ನು ಜೋಡಿಸಿ ರಾಮ, ಸೀತೆ, ಹನುಮಂತನ ಚಿತ್ರ ಬಿಡಿಸಿ ಅದರ ಪಕ್ಕ ಕುಳಿತಿರುವುದನ್ನು ನೀವು ನೋಡಬಹುದು.

ವೈರಲ್ ಪೋಸ್ಟ್‌ ಇಲ್ಲಿದೆ

ಇದನ್ನೂ ಓದಿ: ಮಾಡಿದ್ದುಣ್ಣೋ ಮಹಾರಾಯ, ಹೋಳಿ ಆಚರಿಸುತ್ತಿದ್ದವರ ಮೇಲೆ ಕಸ ಸುರಿಯಲು ಹೋಗಿ ಏನಾಯ್ತು ನೋಡಿ

ಮಾರ್ಚ್ 27 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ ತೊಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ನಮ್ಮ ಭಕ್ತಿಯ ಭಾವನೆಯನ್ನು ವ್ಯಕ್ತಪಡಿಸಲು ಹಲವಾರು ಮಾರ್ಗಗಳಿವೆ, ಆದ್ದರಿಂದ, ಇದು ನೈಸರ್ಗಿಕ ಹೂವಿನ ಗೌರವವಾದ ಹೂಕೋಸು ಮೂಲಕ ಭಕ್ತಿಯನ್ನು ವ್ಯಕ್ತಪಡಿಸುವ ಅತ್ಯಂತ ವಿಶಿಷ್ಟ ಮಾರ್ಗವಾಗಿದೆ ಎಂದಿದ್ದಾರೆ. ಇನ್ನೊಬ್ಬರು, ಇದು ತುಂಬಾ ಸುಂದರ ಹಾಗೂ ಹೃದಯ ಸ್ಪರ್ಶಿಯಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಜೈ ಶ್ರೀರಾಮ್ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು

‘ಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಸಿದ್ದೇಗೌಡ್ರು ಹೆಸರಿನ ಪಾತ್ರವನ್ನು ಧನಂಜಯ್ ಮಾಡುತ್ತಿದ್ದಾರೆ. ಅವರು ಯುವ ಕಲಾವಿದ. ಈಗ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ರಚಿತಾ ರಾಮ್​​ಗೋಸ್ಕರ ಅವರು ಕವಿಯಾಗಿದ್ದಾರೆ. ಸಾಲುಗಳ ಮೂಲಕ ರಚಿತಾಗೆ ಪ್ರಪೋಸ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಸಿದ್ದೇಗೌಡ್ರ ಸಾಲುಗಳು ಗಮನ ಸೆಳೆದಿವೆ. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರವಿಶಂಕರ್ ಗುರೂಜಿ ವಿರುದ್ಧದ ಭೂ ಕಬಳಿಕೆ ಪ್ರಕರಣ ರದ್ದು: ಹೈ ಕೋರ್ಟ್ ಮಹತ್ವದ ತೀರ್ಪು!

ಬೆಂಗಳೂರು, ಮಾರ್ಚ್​ 28: ರವಿಶಂಕರ್ ಗುರೂಜಿ (Shri Shri Ravi Shankar Guruji) ವಿರುದ್ಧದ ಭೂ ಕಬಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಪೀಠ, ರವಿಶಂಕರ್ ವಿರುದ್ಧ ಯಾವುದೇ ಸ್ಪಷ್ಟ ಆರೋಪಗಳಿಲ್ಲದೆ ಪ್ರಕರಣ ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ತಿಳಿಸಿ ಬೆಂಗಳೂರು ಮಹಾನಗರ ಟಾಸ್ಕ್ ಫೋರ್ಸ್ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಿದೆ.

ಸ್ಪಷ್ಟ ಆರೋಪವಿಲ್ಲ, ಸಾಕ್ಷಿಗಳಿಲ್ಲ!

ಬೆಂಗಳೂರು ಮಹಾನಗರ ಟಾಸ್ಕ್ ಫೋರ್ಸ್ 19 ಸೆಪ್ಟೆಂಬರ್ 2025ರಂದು ಕರ್ನಾಟಕ ಭೂ ಆದಾಯ ಕಾಯ್ದೆ 1964 ಅಡಿಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿತ್ತು. ಕಾಗ್ಗಳಿಪುರ ಗ್ರಾಮದ ವಿವಿಧ ಸರ್ವೇ ಸಂಖ್ಯೆಗಳಲ್ಲಿನ ಸರ್ಕಾರಿ ಭೂಮಿ, ಕೆರೆ ಮತ್ತು ರಾಜಕಾಲುವೆ ಅಕ್ರಮವಾಗಿ ಕಬಳಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಪಿಐಎಲ್, ಲ್ಯಾಂಡ್ ಗ್ರಾಬಿಂಗ್ ವಿಶೇಷ ನ್ಯಾಯಾಲಯದ ವಿಚಾರಣೆ ಮತ್ತು ತಹಶೀಲ್ದಾರ್ ವರದಿ ಆಧರಿಸಿ ದೂರು ದಾಖಲಿಸಲಾಗಿತ್ತು.

ಇದನ್ನೂ ಓದಿ 70 ಗಂಟೆ ಕೆಲಸ ಮಾಡುವುದಕ್ಕಿಂತ, ಎಷ್ಟು ಮಾನಸಿಕವಾಗಿ ಸಿದ್ಧರಾಗಿದ್ದೀರಾ ಎನ್ನುವುದು ಮುಖ್ಯ: ರವಿಶಂಕರ್ ಗುರೂಜಿ

ಈ ಹಿನ್ನೆಲೆಯಲ್ಲಿ ಶ್ರೀ ಶ್ರೀ ರವಿಶಂಕರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ಪರಿಶೀಲಿಸಿದ ಕರ್ನಾಟಕ ಹೈಕೋರ್ಟ್ ದೂರುದಲ್ಲಿ ಅರ್ಜಿದಾರರ ವಿರುದ್ಧ ಯಾವುದೇ ಸ್ಪಷ್ಟ ಆರೋಪಗಳಿಲ್ಲವೆಂದು ಗಮನಿಸಿದೆ. ಹೀಗಾಗಿ ಕೇವಲ ಪ್ರತಿವಾದಿಯಾಗಿ ಹೆಸರು ಸೇರಿಸಿರುವುದನ್ನು ಆಧಾರವನ್ನಾಗಿಟ್ಟುಕೊಂಡು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಪ್ರಾಥಮಿಕ ಸಾಕ್ಷ್ಯಗಳಿಲ್ಲದೆ ಪ್ರಕರಣ ಮುಂದುವರಿಸುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯವು ಗುರೂಜಿ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಐಪಿಎಲ್​ನಲ್ಲಿ ‘ಬಾಡಿ ಕಂಟ್ರೋಲ್’ ನಿಯಮ ಜಾರಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮೊದಲ ಪಂದ್ಯದ ಮೂಲಕ ‘ಬಾಡಿ ಕಂಟ್ರೋಲ್’ ನಿಯಮವನ್ನು ಪರಿಚಯಿಸಲಾಗುತ್ತಿದೆ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ RCB ಮತ್ತು SRH ನಡುವಣ ಪಂದ್ಯದ ಮೂಲಕ ಈ ನಿಯಮವನ್ನು ಜಾರಿಗೊಳಿಸಲಾಗುತ್ತದೆ. ಈ ನಿಯಮವು ಫೀಲ್ಡರ್​ಗಳ ಮೇಲೆ ನೇರ ಪರಿಣಾಮ ಬೀರಲಿದೆ.

ಏನಿದು ಬಾಡಿ ಕಂಟ್ರೋಲ್ ನಿಯಮ?

ಬಾಡಿ ಕಂಟ್ರೋಲ್ ಎಂಬುದು ದೇಹದ ಮೇಲಿನ ನಿಯಂತ್ರಣ. ಅಂದರೆ ಇಲ್ಲಿ ಈ ನಿಯಮವನ್ನು ಫೀಲ್ಡರ್​ಗಳಿಗಾಗಿ ಪರಿಚಯಿಸಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಕ್ಯಾಚ್ ಹಿಡಿದಾಗ ಈ ನಿಯಮ ಅನ್ವಯವಾಗಲಿದೆ.

ಕ್ಯಾಚ್ ಹಿಡಿಯುವಾಗ ಫೀಲ್ಡರ್ ಚೆಂಡಿನ ಮೇಲೆ ಮತ್ತು ತಮ್ಮ ದೇಹದ ಸಮತೋಲನದ ಮೇಲೆ ಎಷ್ಟು ನಿಯಂತ್ರಣ ಹೊಂದಿರಬೇಕು ಎಂಬುದರ ಕುರಿತು ಈಗಾಗಲೇ 10 ಫ್ರಾಂಚೈಸಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಅದರಂತೆ ಈ ಬಾರಿಯ ಐಪಿಎಲ್​ನ ಕ್ಯಾಚ್ ನಿಯಮದಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ.

ಐಪಿಎಲ್ ಕ್ಯಾಚ್ ನಿಯಮಗಳು:

  • ಸಂಪೂರ್ಣ ನಿಯಂತ್ರಣ: ಐಪಿಎಲ್ ನಿಯಮ 33.3ರ ಪ್ರಕಾರ, ಫೀಲ್ಡರ್ ಚೆಂಡನ್ನು ಹಿಡಿದ ನಂತರ ತನ್ನ ದೇಹದ ಚಲನೆಯ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸುವವರೆಗೆ ಕ್ಯಾಚ್ ಪೂರ್ಣಗೊಳ್ಳುವುದಿಲ್ಲ.
  • ಸಂಭ್ರಮಾಚರಣೆ ಮತ್ತು ಸ್ಥಿರತೆ: ಫೀಲ್ಡರ್ ಕ್ಯಾಚ್ ಹಿಡಿದ ತಕ್ಷಣ ಸಂಭ್ರಮಿಸಲು ಶುರುಮಾಡಿ ಆ ಸಂದರ್ಭದಲ್ಲಿ ಚೆಂಡು ಕೈಜಾರಿದರೆ ಅಥವಾ ಅವರು ಸಮತೋಲನ ತಪ್ಪಿ ಬೌಂಡರಿ ಲೈನ್ ಮುಟ್ಟಿದರೆ ಅದನ್ನು ‘ನಾಟ್ ಔಟ್’ ಎಂದು ಪರಿಗಣಿಸಲಾಗುತ್ತದೆ.
  • ದೇಹದ ನಿಯಂತ್ರಣ: ಕ್ಯಾಚ್ ಹಿಡಿದ ಬಳಿಕ ದೇಹದ ಚಲನೆಯು ಸಂಪೂರ್ಣ ನಿಯಂತ್ರಣಕ್ಕೆ ಬಂದ ಬಳಿಕವಷ್ಟೇ ಸಂಭ್ರಮಿಸಬೇಕು. ಕ್ಯಾಚ್ ಹಿಡಿದ ತಕ್ಷಣವೇ ಚೆಂಡನ್ನು ಎಸೆಯುವಂತಿಲ್ಲ ಎಂದು ತಿಳಿಸಲಾಗಿದೆ. ಒಂದು ವೇಳೆ ಸಂಭ್ರಮದ ವೇಳೆ ಚೆಂಡು ಕೈ ಜಾರಿದರೆ ಅದನ್ನು ಕ್ಯಾಚ್ ಎಂದು ಪರಿಗಣಿಸಲಾಗುವುದಿಲ್ಲ. ಇದನ್ನೇ ಕ್ರಿಕೆಟ್​ನಲ್ಲಿ ಫೀಲ್ಡರ್​ಗಳ ಬಾಡಿ ಕಂಟ್ರೋಲ್ ಎಂದು ಕರೆಯಲಾಗುತ್ತದೆ.
  • ಬೌಂಡರಿ ಲೈನ್ ನಿಯಮ: ಫೀಲ್ಡರ್ ಬೌಂಡರಿ ಲೈನ್ ಒಳಗಿನಿಂದಲೇ ಜಿಗಿದು ಚೆಂಡನ್ನು ಹಿಡಿಯಬೇಕು. ಗಾಳಿಯಲ್ಲಿರುವಾಗ ಚೆಂಡನ್ನು ಒಳಕ್ಕೆ ತಳ್ಳಿ ನಂತರ ಮೈದಾನದ ಒಳಗೆ ಬಂದು ಕ್ಯಾಚ್ ಪೂರ್ಣಗೊಳಿಸಬೇಕು.
  • ರಿಲೇ ಕ್ಯಾಚ್: ಒಬ್ಬ ಫೀಲ್ಡರ್ ಬೌಂಡರಿ ಹೊರಗಿನಿಂದ ಪದೇ ಪದೇ ಜಿಗಿಯುತ್ತಾ (Bunny Hop) ಚೆಂಡನ್ನು ಒಳಕ್ಕೆ ತಳ್ಳುವುದು ಈಗ ಅಮಾನ್ಯ ಎಂದು ಪರಿಗಣಿಸಲಾಗುತ್ತದೆ.
  • ಒಂದೇ ಅವಕಾಶ: ಫೀಲ್ಡರ್ ಬೌಂಡರಿ ಲೈನ್ ಒಳಗಿಂದ ಜಿಗಿದು ಒಮ್ಮೆ ಚೆಂಡನ್ನು ಒಳಗೆ ತಳ್ಳಲು ಪ್ರಯತ್ನಿಸಿ, ಬೌಂಡರಿ ದಾಟಿದ ಬಳಿಕ ಹೊರಗಿನಿಂದ ಜಿಗಿದು ಮತ್ತೆ ಹೊರ ತಳ್ಳಲು ಅವಕಾಶವಿಲ್ಲ. ಅಂದರೆ ಬೌಂಡರಿ ಲೈನ್​ ಒಳಗೆ ನಿಂತು ಗಾಳಿಯಲ್ಲಿ ಹಾರಿ ಚೆಂಡನ್ನು ಮತ್ತೊಮ್ಮೆ ಹೊರಹಾಕಿದರೆ ಅದನ್ನು ಸಿಕ್ಸ್ ಎಂದು ಪರಿಗಣಿಸಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: IPL 2026: RCB ಪರ ಇಬ್ಬರು ಪಾದಾರ್ಪಣೆ ಸಾಧ್ಯತೆ

ಈ ನಿಯಮಗಳು ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಪಂದ್ಯದ ಮೂಲಕವೇ ಜಾರಿಗೆ ಬರಲಿದೆ ಎಂದು ಐಪಿಎಲ್ ಗರ್ವನರ್ ಕೌನ್ಸಿಲ್ ತಿಳಿಸಿದೆ.

 

 

Source link