ಐಪಿಎಲ್ ಟಿಕೆಟ್ಗಾಗಿ ಶಾಸಕರ ಪಟ್ಟು: ನಾವು ಸಾಮಾನ್ಯರೇ? ಕ್ಯೂನಲ್ಲಿ ನಿಲ್ಲಲಾಗದೆಂದ ಕಾಶಪ್ಪನವರ್ಗೆ ತೇಜಸ್ವಿ ಸೂರ್ಯ ಟಾಂಗ್!
ಬೆಂಗಳೂರು, ಮಾರ್ಚ್ 27: ಬೆಂಗಳೂರಿನಲ್ಲಿ (Bangalore) ಐಪಿಎಲ್ (IPL 2026) ಕ್ರೇಜ್ ಆರಂಭವಾಗುತ್ತಿದ್ದಂತೆಯೇ, ಇತ್ತ ವಿಧಾನಸೌಧದ ಒಳಗೂ ಟಿಕೆಟ್ ಕಿರಿಕ್ ಶುರುವಾಗಿದೆ. ‘ನಾವು ವಿಐಪಿಗಳು, ಸಾಮಾನ್ಯರಂತೆ ಕ್ಯೂನಲ್ಲಿ ನಿಂತು ಟಿಕೆಟ್ ಪಡೆಯಲು ಸಾಧ್ಯವಿಲ್ಲ. ಪ್ರತಿ ಶಾಸಕರಿಗೂ 5 ವಿಐಪಿ ಟಿಕೆಟ್ ನೀಡಬೇಕು’ ಎಂಬ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಹೇಳಿಕೆ ಈಗ ರಾಜ್ಯಮಟ್ಟದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ವಿಜಯಾನಂದ ಕಾಶಪ್ಪನವರ್ ಹೇಳಿದ್ದೇನು? ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ವಿಧಾನಸಭೆಯಲ್ಲಿ ಕೆಎಸ್ಸಿಎ (KSCA) ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ….