ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕುಸಿತ: ಉಡುಪಿ-ಮಂಗಳೂರಿನ ಈ ಎಲ್ಲ ಕಾಲೇಜುಗಳು ಕ್ಲೋಸ್ – Kannada News | 22 Private Colleges Under Mangaluru University to Shut Down Due to Decline in Student Admissions
ಮಂಗಳೂರು, ಡಿಸೆಂಬರ್ 25: ಖಾಸಗಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿತ ಹಿನ್ನೆಲೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಮಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ನಿಗದಿತ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ಆಗದ ಕಾರಣ, ಮುಂದಿನ ಶೈಕ್ಷಣಿಕ ವರ್ಷದಿಂದ ಈ ಕಾಲೇಜುಗಳು ಬಂದ್ ಆಗಲಿವೆ. ಪ್ರಸಕ್ತ ವರ್ಷದಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಕೋರ್ಸ್ ಪೂರ್ಣಗೊಳಿಸಲು ಅವಕಾಶ ಇರಲಿದೆ. ಮುಚ್ಚಲಿರುವ ಕಾಲೇಜುಗಳು: ಆಬಾ ವುಮೆನ್ಸ್ ಪ್ರಥಮ ದರ್ಜೆ ಕಾಲೇಜು ಸುರತ್ಕಲ್…