ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು ಗೊತ್ತಾ?
ಬೆಂಗಳೂರು, ಮಾರ್ಚ್ 26: ಆರ್ಸಿಬಿ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯಕ್ಕೆ ಕೇವಲ ಎರಡು ದಿನಗಳು ಬಾಕಿ ಇರುವಾಗ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳು ಬಿರುಸಿನಿಂದ ನಡೆದಿವೆ. 500ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯಿಂದ ಪ್ರಮುಖ ಮಾಕ್ ಡ್ರಿಲ್ ನಡೆಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಪೊಲೀಸ್ ಇಲಾಖೆಯು ಈ ಭದ್ರತಾ ಸಿದ್ಧತೆಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಜೂನ್ 4ರಂದು ನಡೆದ ಕಾಲ್ತುಳಿತ ಪ್ರಕರಣದಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಈ ತಾಲೀಮಿನ ಮುಖ್ಯ ಉದ್ದೇಶವಾಗಿದೆ….