ಸುದೀಪ್ ಎದುರೇ ಧ್ರುವಂತ್ಗೆ ಬೆದರಿಕೆ ಹಾಕಿದ ರಕ್ಷಿತಾ ಶೆಟ್ಟಿ – Kannada News | Bigg Boss Kannada 12: Rakshita Shetty threatens Dhruvanth Infront of Dhruvanth
ಮತ್ತೊಂದು ವೀಕೆಂಡ್ ಬಂದಿದೆ. ಸುದೀಪ್ (Sudeep) ಮತ್ತೆ ಬಂದಿದ್ದಾರೆ. ಶನಿವಾರದ ಎಪಿಸೋಡ್ನಲ್ಲಿ ಸುದೀಪ್ ಅವರು ಸಾಧ್ಯವಾದಷ್ಟು ಗಂಭೀರವಾಗಿರುತ್ತಾರೆ. ಆದರೆ ಶನಿವಾರದ ಎಪಿಸೋಡ್ ಈ ಹಿಂದಿನ ಶನಿವಾರದ ಎಪಿಸೋಡ್ಗಳಿಗಿಂತಲೂ ತುಸು ಭಿನ್ನವಾಗಿತ್ತು. ಸುದೀಪ್ ಅವರು ಆರಂಭದಿಂದ ತುಸು ತಮಾಷೆಯಾಗಿಯೇ ಎಪಿಸೋಡ್ ಪ್ರಾರಂಭಿಸಿದರು. ಅದರಲ್ಲೂ ಸೀಕ್ರೆಟ್ ರೂಂನಲ್ಲಿರುವ ಧ್ರುವಂತ್ ಮತ್ತು ರಕ್ಷಿತಾ ಅವರನ್ನು ಮಾತನಾಡಿಸುವಾಗ ಸ್ವತಃ ನಕ್ಕ ಸುದೀಪ್ ಸ್ಪರ್ಧಿಗಳನ್ನು, ಪ್ರೇಕ್ಷಕರನ್ನೂ ಸಹ ನಗಿಸಿದರು. ‘ನನಗೆ ಈ ವಾರ ಬಹಳ ಎಂಟರ್ಟೈನ್ಮೆಂಟ್ ಆಗಿದ್ದಿದ್ದು ಬಿಗ್ಬಾಸ್ ಮನೆಯ ಮೇಯಿನ್ ಮನೆಯವರ ಆಟ…