IPL 2026: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಮ್ಯಾಚ್, ಮಾರ್ಚ್ 28ಕ್ಕೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್
ಬೆಂಗಳೂರು, ಮಾರ್ಚ್ 25: ಮಾರ್ಚ್ 28ಕ್ಕೆ ಐಪಿಎಲ್ (IPL 2026) ಆರಂಭವಾಗಲಿದ್ದು, ಬೆಂಗಳೂರಿನ (Bangalore) ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಹಾಗೂ ಎಸ್ಆರ್ಎಚ್ ಮಧ್ಯೆ ಮ್ಯಾಚ್ ನಡೆಯಲಿದೆ. ಪಂದ್ಯಕ್ಕೆ ನಗರ ಪೊಲೀಸರು ಭಾರೀ ಭದ್ರತೆ ಒದಗಿಸುತ್ತಿದ್ದು, ಸಂಚಾರ ಸಮಸ್ಯೆ ನಿರ್ವಹಣೆಗೂ ಕ್ರಮ ಕೈಗೊಂಡಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರು ಟ್ರಾಫಿಕ್ ಅಡ್ವೈಸರಿ ಪ್ರಕಟಿಸಿದ್ದು, ಅಭಿಮಾನಿಗಳ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕಾಗಿ ಹಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಕಳೆದ ವರ್ಷದ ಕಾಲ್ತುಳಿತ ಘಟನೆ ಮರುಕಳಿಸದಂತೆ ಈ ಬಾರಿ…