ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವು ಪ್ರಕರಣ: ಸ್ಫೋಟಕ ವಿಷ್ಯ ಹೇಳಿದ ಪಶುವೈದ್ಯಕೀಯ ಸಂಘದ ಸದಸ್ಯ
ಅನೇಕಲ್, ಮಾ.24: ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿನ ಕುರಿತು ಕರ್ನಾಟಕ ಪಶುವೈದ್ಯಕ ಸಂಘವು ಗಂಭೀರ ಆರೋಪಗಳನ್ನು ಮಾಡಿದೆ. ಸಂಘದ ಅಧ್ಯಕ್ಷ ಡಾ. ಶಿವಶರಣಪ್ಪ ಎಲ್ಗೊಡ್ ಮಾತನಾಡಿ, ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿಗೆ ಡಿಸಿಎಫ್ ಅವರ ಸಂಪೂರ್ಣ ತಪ್ಪಿದೆ ಎಂದು ಹೇಳಿದ್ದಾರೆ. ಮಧ್ಯರಾತ್ರಿಯಲ್ಲಿ ಯಾವುದೇ ರಕ್ಷಣೆ ಇಲ್ಲದೆ ವನ್ಯಜೀವಿ ಚಿಕಿತ್ಸೆಗೆ ಕಳುಹಿಸಿದ್ದು ದೊಡ್ಡ ತಪ್ಪು. ಈ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಡಿಸಿಎಫ್ ಅವರನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಸಂಘ ಆಗ್ರಹಿಸಿದೆ. ಅಲ್ಲದೆ, ಪಶುವೈದ್ಯರನ್ನು…