ಗುವಾಹಟಿ, ಡಿಸೆಂಬರ್ 20: ಪ್ರಧಾನಿ ನರೇಂದ್ರ ಮೋದಿ (PM Modi in Guwahati) ಇಂದು ಅಸ್ಸಾಂನ ಗುವಾಹಟಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಇದು ಅಸ್ಸಾಂನ ಮೂಲಸೌಕರ್ಯ ಬೆಳವಣಿಗೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಟರ್ಮಿನಲ್ ಉದ್ಘಾಟನೆಯ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಅಭಿವೃದ್ಧಿಯ ಆಚರಣೆಯ ದಿನ. ಇದು ಅಸ್ಸಾಂ ಮಾತ್ರವಲ್ಲದೆ ಇಡೀ ಈಶಾನ್ಯದ ಅಭಿವೃದ್ಧಿಯ ಆಚರಣೆಯಾಗಿದೆ. ಅಸ್ಸಾಂ ಯಾವ ರೀತಿ ಅಭಿವೃದ್ಧಿಯ ಹಬ್ಬವನ್ನು ಆಚರಿಸುತ್ತಿದೆ ಎಂದು ಇಡೀ ದೇಶ ನೋಡುತ್ತಿದೆ” ಎಂದು ಹೇಳಿದ್ದಾರೆ.
ಸುಮಾರು 4,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸದಾಗಿ ಉದ್ಘಾಟನೆಗೊಂಡ ಟರ್ಮಿನಲ್ ಭಾರತದ ಮೊದಲ ಪ್ರಕೃತಿ ಪ್ರೇರಿತ ವಿಮಾನ ನಿಲ್ದಾಣದ ಟರ್ಮಿನಲ್ ಆಗಿದೆ. ಅಸ್ಸಾಂ ಪ್ರದೇಶದ ನೈಸರ್ಗಿಕ ಭೂದೃಶ್ಯವನ್ನು ಪ್ರತಿಬಿಂಬಿಸುವಂತೆ ವಿನ್ಯಾಸಗೊಳಿಸಲಾದ ಈ ಟರ್ಮಿನಲ್ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸುತ್ತದೆ ಮತ್ತು ಸಂಪರ್ಕವನ್ನು ಸುಧಾರಿಸುತ್ತದೆ. ಹಾಗೇ, ಅಸ್ಸಾಂ ಮತ್ತು ನೆರೆಯ ರಾಜ್ಯಗಳಲ್ಲಿ ಪ್ರವಾಸೋದ್ಯಮ, ವ್ಯಾಪಾರ ಮತ್ತು ಆರ್ಥಿಕ ಚಟುವಟಿಕೆಯನ್ನು ಹೆಚ್ಚಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಡಿಸೆಂಬರ್ 20: ದೇಶವನ್ನು ಪೋಲಿಯೋ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ಕರ್ನಾಟಕದಾದ್ಯಂತ (Karnataka) ನಾಳೆಯಿಂದ ಡಿ. 24ರ ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ–2025 (National Pulse Polio Programme) ಆರಂಭವಾಗಲಿದೆ. ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಕರ್ನಾಟಕ ಆರೋಗ್ಯ ಇಲಾಖೆ ಪೋಷಕರಿಗೆ ಮನವಿ ಮಾಡಿದೆ.
ಪೋಲಿಯೋ ಮಾರಕರೋಗವಾಗಿದ್ದು, ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯವನ್ನು ಉಂಟುಮಾಡಬಹುದು. ಈ ರೋಗಕ್ಕೆ ಯಾವುದೇ ಚಿಕಿತ್ಸೆ ಇಲ್ಲದಿದ್ದರು ಲಸಿಕೆ ಮೂಲಕ ಇದನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಿದೆ. ಎರಡು ಹನಿ ಲಸಿಕೆ ನಿಮ್ಮ ಮಗುವಿನ ಭವಿಷ್ಯವನ್ನು ನಿರ್ಧರಿಸಲಿದೆ ಎಂಬ ಘೋಷವಾಕ್ಯದಡಿ ಸರ್ಕಾರ ಅಭಿಯಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಹತ್ತಿರದ ಸರ್ಕಾರಿ ಆಸ್ಪತ್ರೆಗಳು, ಅಂಗನವಾಡಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಬಸ್, ರೆಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಲಸಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮೊದಲ ದಿನ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಬಳಿಕ ಎರಡು ದಿನ ಆರೋಗ್ಯ ಇಲಾಖೆ ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡಿ ಲಸಿಕೆ ಪಡೆಯದ ಮಕ್ಕಳಿಗೆ ಲಸಿಕೆ ನೀಡುತ್ತಾರೆ.
ಜಿಬಿಎಗೆ 11 ಲಕ್ಷಕ್ಕೂ ಹೆಚ್ಚು ಲಸಿಕೆ ಹಾಕಿಸುವ ಗುರಿ ನೀಡಿದ ಆರೋಗ್ಯ ಇಲಾಖೆ
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆಯೂ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ತನ್ನ ಐದು ನಿಗಮಗಳ ಮೂಲಕ ಒಟ್ಟು 11,34,988 ಮಕ್ಕಳಿಗೆ ಲಸಿಕೆ ಹಾಕುವ ಗುರಿ ನೀಡಿದೆ.
ಇನ್ನು ಈ ಕುರಿತಾಗಿ ಟ್ವೀಟ್ ಮಾಡಿರುವ ಜಿಬಿಎ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ–2025 ಅನ್ನು ಡಿಸೆಂಬರ್ 21ರಿಂದ 24, 2025ರವರೆಗೆ ಹಮ್ಮಿಕೊಂಡಿದ್ದು, ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಪೋಷಕರಿಗೆ ಮನವಿ ಮಾಡಿದೆ.
ಜಿಬಿಎ ಟ್ವೀಟ್
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – 2025 ಅನ್ನು ಡಿಸೆಂಬರ್ 21ರಿಂದ 24, 2025ರವರೆಗೆ ಹಮ್ಮಿಕೊಂಡಿದ್ದು, ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಪೋಷಕರಿಗೆ ಮನವಿ.
ಜೀವದ ಎರಡು ಹನಿಗಳಿಂದ ಪೋಲಿಯೋ ವಿರುದ್ಧ ವಿಜಯ ಸಾಧಿಸುವುದನ್ನು ಮುಂದುವರಿಸೋಣ.
ಜೀವದ ಎರಡು ಹನಿಗಳಿಂದ ಪೋಲಿಯೋ ವಿರುದ್ಧ ವಿಜಯ ಸಾಧಿಸುವುದನ್ನು ಮುಂದುವರಿಸೋಣ. ನಿಮ್ಮ ಹತ್ತಿರದ ಪೋಲಿಯೋ ಬೂತ್, ಯುಪಿಎಚ್‌ಸಿ ಹಾಗೂ ನಮ್ಮ ಕ್ಲಿನಿಕ್‌ಗಳ ಮಾಹಿತಿ ಪಡೆಯಲು QR ಕೋಡ್ ಅನ್ನು ಸ್ಕ್ಯಾನ್ ಮಾಡಿ, ಅಥವಾ https://gba.karnataka.gov.in/polio/ ಭೇಟಿ ನೀಡಬಹುದಾಗಿದೆ.
ಕೊಲ್ಕತ್ತಾ, ಡಿಸೆಂಬರ್ 20: ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ತೃಣಮೂಲ ಕಾಂಗ್ರೆಸ್ (ಟಿಎಂಸಿ) ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಡಳಿತವು ನುಸುಳುಕೋರರನ್ನು ರಕ್ಷಿಸಲು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅನ್ನು ವಿರೋಧಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ನಾಡಿಯಾ ಜಿಲ್ಲೆಯ ತಾಹೆರ್‌ಪುರದಲ್ಲಿ ದೂರವಾಣಿ ಮೂಲಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ, ನುಸುಳುಕೋರರು ಬಂಗಾಳದಲ್ಲಿ ಟಿಎಂಸಿಯ ಬೆಂಬಲವನ್ನು ಪಡೆದಿದ್ದಾರೆ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಟಿಎಂಸಿಯ ‘ಮಹಾ ಜಂಗಲ್ ರಾಜ್’ ಅನ್ನು ಕೊನೆಗೊಳಿಸಲಿದೆ ಎಂದು ಪ್ರತಿಪಾದಿಸಿದ ಪ್ರಧಾನಿ ಮೋದಿ, ಬಂಗಾಳದಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಓಲೈಕೆಯ ರಾಜಕೀಯ ಆಳ್ವಿಕೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ಟಿಎಂಸಿ ಬಿಜೆಪಿಯನ್ನು ವಿರೋಧಿಸಬಹುದು. ಆದರೆ ಬಿಹಾರದ ಚುನಾವಣಾ ಫಲಿತಾಂಶಗಳು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಾಗಿಲು ತೆರೆದಿವೆ ಎಂದು ಅವರು ಹೇಳಿದ್ದಾರೆ.
“ಬಿಹಾರವು ಬಂಗಾಳದಲ್ಲಿ ಬಿಜೆಪಿಯ ಗೆಲುವಿಗೆ ದಾರಿ ಮಾಡಿಕೊಟ್ಟಿದೆ. ಬಿಹಾರದ ಜಂಗಲ್ ರಾಜ್ ಅನ್ನು ತೊಡೆದುಹಾಕಲಾಯಿತು. ಈಗ ನಾವು ಪಶ್ಚಿಮ ಬಂಗಾಳದಲ್ಲಿ ‘ಮಹಾ ಜಂಗಲ್ ರಾಜ್’ ಅನ್ನು ತೊಡೆದುಹಾಕಬೇಕಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಕೆಟ್ಟ ಹವಾಮಾನದಿಂದಾಗಿ ನಾಡಿಯಾವನ್ನು ತಲುಪಲು ಸಾಧ್ಯವಾಗದಿದ್ದಕ್ಕಾಗಿ ಕ್ಷಮೆ ಯಾಚಿಸಿದ ಪ್ರಧಾನಿ ಮೋದಿ, ಬಿಜೆಪಿ ಯಾವುದೇ ಬೆಲೆ ತೆತ್ತಾದರೂ ಪಶ್ಚಿಮ ಬಂಗಾಳದ ಅಭಿವೃದ್ಧಿಯನ್ನು ಮಾಡುತ್ತದೆ ಎಂದು ಹೇಳಿದರು. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವಂತೆ ಜನರಿಗೆ ಮನವಿ ಮಾಡಿದ ಅವರು ಬಂಗಾಳಕ್ಕೆ ಅದರಲ್ಲೂ ವಿಶೇಷವಾಗಿ ಹಿಂದುಳಿದಿರುವ ಪ್ರದೇಶಗಳಿಗೆ ಸಂಪರ್ಕವನ್ನು ಒದಗಿಸಲು ಬಿಜೆಪಿ ಬಯಸುತ್ತದೆ ಎಂದು ಹೇಳಿದ್ದಾರೆ.
ಇದಕ್ಕೂ ಮೊದಲು, ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ರಣಘಾಟ್‌ನಲ್ಲಿ ಪ್ರಧಾನಿ ಮೋದಿ ಬಹು ಅಭಿವೃದ್ಧಿ ಕಾರ್ಯಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದರಲ್ಲಿ ಸುಮಾರು 3,200 ಕೋಟಿ ರೂ. ಮೌಲ್ಯದ ಎರಡು ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಕೂಡ ಸೇರಿವೆ. ಇದರಲ್ಲಿ NH-34 ರ 66.7 ಕಿಮೀ ಉದ್ದದ ಬಾರಾಜಗುಲಿ-ಕೃಷ್ಣನಗರ ವಿಭಾಗದ 4 ಪಥ ನಿರ್ಮಾಣ ಯೋಜನೆಯೂ ಒಂದು. NH-34 ರ 17.6 ಕಿಮೀ ಉದ್ದದ ಬಾರಾಜಸತ್-ಬಾರಾಜಗುಲಿ ವಿಭಾಗದ 4 ಪಥ ನಿರ್ಮಾಣಕ್ಕೂ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಈ ಯೋಜನೆಗಳು ಕೋಲ್ಕತ್ತಾವನ್ನು ಸಿಲಿಗುರಿಯೊಂದಿಗೆ ಸಂಪರ್ಕಿಸಲು ಸಹಾಯ ಮಾಡುತ್ತದೆ ಮತ್ತು ಜನರ ಪ್ರಯಾಣದ ಸಮಯವನ್ನು ಸುಮಾರು 2 ಗಂಟೆಗಳ ಕಾಲ ಕಡಿಮೆ ಮಾಡುತ್ತದೆ. ಈ ಯೋಜನೆಗಳು ಈ ಪ್ರದೇಶದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಸುಧಾರಿಸಲು ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸಲು ಸಹಾಯ ಮಾಡುತ್ತವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಾವ್ಯಾ (Kavya) ಹಾಗೂ ಗಿಲ್ಲಿ ಗೆಳೆತನದ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಇಬ್ಬರ ಮಧ್ಯೆ ಆಗಾಗ ಕಿರಿಕ್ಗಳು ಆಗುತ್ತಲೇ ಇರುತ್ತವೆ. ನಂತರ ಇವರು ಮತ್ತೆ ಒಂದಾಗುತ್ತಾರೆ. ಇದು ಸಾಕಷ್ಟು ಬಾರಿ ರಿಪೀಟ್ ಆಗಿದೆ. ಈಗ ಕಾವ್ಯಾ ಅವರು ನಡೆದುಕೊಂಡ ರೀತಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಗಿಲ್ಲಿ ಅಭಿಮಾನಿಗಳಿಗೆ ಈ ನಡೆ ಸಾಕಷ್ಟು ಬೇಸರ ಮೂಡಿಸಿದೆ. ಅಷ್ಟಕ್ಕೂ ಅಲ್ಲಿ ನಡೆದಿದ್ದು ಏನು? ಆ ಬಗ್ಗೆ ಇಲ್ಲಿದೆ ವಿವರ.
ಬಿಗ್ ಬಾಸ್ ಚಟುವಟಿಕೆ ಒಂದನ್ನು ಆಯೋಜನೆ ಮಾಡಿದ್ದರು. ಇದರ ಅನುಸಾರ ಮನೆಯ ಪ್ರತಿ ಸ್ಪರ್ಧಿ ಮತ್ತೋರ್ವ ಸ್ಪರ್ಧಿಯನ್ನು ಕರೆದು ಅವರಿಂದ ತಮಗೆ ಆದ ನೋವನ್ನು ಹೇಳಬೇಕು. ಅವರು ಯಾವಾಗ ಸಿಟ್ಟಲ್ಲಿ ಮಾತನಾಡಿದ್ದು ಎಂಬುದನ್ನು ಹೇಳಿ, ಚಾಕೋಲೇಟ್ ನೀಡಿ ಸಿಹಿಯಾಗಿ ಮಾತನಾಡುವಂತೆ ಕೋರಬೇಕು. ಈ ವೇಳೆ ಗಿಲ್ಲಿ ಅವರು ಕಾವ್ಯಾ ಬಗ್ಗೆ ಹೇಳಿದರು.
ಕಾವ್ಯಾ ಅವರಿಂದ ಆದ ಒಂದು ಬೇಸರದ ಘಟನೆಯನ್ನು ನೆನಪಿಸಿಕೊಂಡರು ಗಿಲ್ಲಿ. ಆ ಸಂದರ್ಭದಲ್ಲಿ ಕಾವ್ಯಾ ಸಿಹಿಯಾಗಿ ಮಾತನಾಡಬಹುದಿತ್ತು ಎಂದು ಅಭಿಪ್ರಾಯಪಟ್ಟರು. ಇದನ್ನು ಕಾವ್ಯಾ ಕೇಳಿಸಿಕೊಂಡರು. ಹೋಗುವಾಗ ಶೇಕ್ ಹ್ಯಾಂಡ್ ಮಾಡಲು ಗಿಲ್ಲಿ ಮುಂದಾದರು. ಆದರೆ, ಇದಕ್ಕೆ ಕಾವ್ಯಾ ಒಪ್ಪಲೇ ಇಲ್ಲ. ಅವರು ಕೈ ಕುಲುಕದೇ ನೇರವಾಗಿ ಅಲ್ಲಿಂದ ಕೆಳಗಿಳಿದು ಬಂದರು. ಈ ವಿಡಿಯೋ ಚರ್ಚೆಗೆ ಕಾರಣ ಆಗಿದೆ. ‘ಗಿಲ್ಲಿ ಗೆಳೆತನವನ್ನು ಕಡೆಗಣಿಸಬೇಡಿ. ಮುಂದೊಂದು ದಿನ ಅವರ ಕಾಲ್ಶೀಟ್ ಪಡೆಯಲು ಸಾಲಲ್ಲಿ ನಿಲ್ಲಬೇಕಾಗುತ್ತದೆ’ ಎಂದೆಲ್ಲ ಫ್ಯಾನ್ಸ್ ಬರೆದುಕೊಂಡಿದ್ದಾರೆ.
ಇನ್ನೊಂದು ತಿಂಗಳಲ್ಲಿ ‘ಬಿಗ್ ಬಾಸ್’ ಫಿನಾಲೆ ನಡೆಯಲಿದೆ. ಈ ಬಾರಿ ಶೋನ ಗೆಲ್ಲೋದು ಯಾರು ಎನ್ನುವ ಪ್ರಶ್ನೆ ಮೂಡಿದೆ. ಈಗಾಗಲೇ 13 ಮಂದಿ ಮನೆಯಲ್ಲಿ ಇದ್ದಾರೆ. ಈ ವಾರ ಯಾವುದೇ ಎಲಿಮಿನೇಷನ್ ಇಲ್ಲ. ಹೀಗಾಗಿ, ರಜತ್ ಹಾಗೂ ಚೈತ್ರಾ ಅವರು ಬಿಗ್ ಬಾಸ್ ಮನೆಯಿಂದ ಹೊರಕ್ಕೆ ಬರುತ್ತಾರೆ ಎಂದು ಹೇಳಲಾಗುತ್ತಾ ಇದೆ. ಡಿಸೆಂಬರ್ 21ರ ಎಪಿಸೋಡ್ನಲ್ಲಿ ಈ ಬಗ್ಗೆ ಗೊತ್ತಾಗಲಿದೆ.
ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಸಹ ಇದೇ ಡಿಸೆಂಬರ್ನಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾ ಸಹ ಕನ್ನಡದ ಬಹು ನಿರೀಕ್ಷಿತ ಸಿನಿಮಾ ಆಗಿದೆ. ಡಿಸೆಂಬರ್ 25ರಂದು ಸಿನಿಮಾ ತೆರೆಗೆ ಬರಲಿದೆ. ಸಿನಿಮಾದ ಟ್ರೈಲರ್ ಡಿಸೆಂಬರ್ 7ಕ್ಕೆ ಬಿಡುಗಡೆ ಆಗಲಿದೆ.
ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಕಾರ್ಯದಲ್ಲಿ ಸುದೀಪ್ ನಿರತರಾಗಿದ್ದಾರೆ. ಸಿನಿಮಾನಲ್ಲಿ ನಟಿಸಿರುವ ಜೊತೆಗೆ ಸಿನಿಮಾಕ್ಕೆ ಸಹ ನಿರ್ಮಾಪಕರೂ ಆಗಿದ್ದಾರೆ ಕಿಚ್ಚ ಸುದೀಪ್. ಸೂಪರ್ ಹಿಟ್ ‘ಮ್ಯಾಕ್ಸ್’ ಸಿನಿಮಾದ ತಂತ್ರಜ್ಞರ ತಂಡವೇ ‘ಮಾರ್ಕ್’ ಸಿನಿಮಾಕ್ಕೂ ಜೊತೆಯಾಗಿದೆ. ಸಿನಿಮಾ ಬಿಡುಗಡೆಗೆ ಇನ್ನೂ ನಾಲ್ಕು ದಿನಗಳು ಇರುವಂತೆಯೇ ಸಿನಿಮಾದ ಟಿಕೆಟ್ ಬುಕಿಂಗ್ ಓಪನ್ ಆಗಿದೆ. ಮಾತ್ರವಲ್ಲದೆ ಬುಕಿಂಗ್ ಓಪನ್ ಆದ ಕೆಲವೇ ಗಂಟೆಗಳಲ್ಲಿ ಮಾರ್ನಿಂಗ್ ಶೋಗಳು ಹೌಸ್ಫುಲ್ ಸಹ ಆಗುತ್ತಿವೆ.
‘ಮಾರ್ಕ್’ ಸಿನಿಮಾದ ಫ್ಯಾನ್ಸ್ ಶೋ ಟಿಕೆಟ್ ಬುಕಿಂಗ್ ಮಾತ್ರವೇ ಓಪನ್ ಆಗಿದೆ. ಬೆಂಗಳೂರು, ಮೈಸೂರು ಇನ್ನೂ ಕೆಲವು ಕಡೆಗಳಲ್ಲಿ ‘ಮಾರ್ಕ್’ ಸಿನಿಮಾದ ವಿಶೇಷ ಶೋ ಅನ್ನು ಬೆಳಿಗ್ಗೆ 6 ಗಂಟೆ ವೇಳೆಗೆ ಪ್ರದರ್ಶನ ಮಾಡಲಾಗುತ್ತಿದ್ದು, ಪ್ರಸ್ತುತ ಈ ವಿಶೇಷ ಶೋನ ಟಿಕೆಟ್ಗಳು ಮಾತ್ರವೇ ಮುಂಗಡ ಬುಕಿಂಗ್ಗೆ ಲಭ್ಯವಿದೆ. ವೀರೇಶ್, ಸಿದ್ಧೇಶ್ವರ, ನವರಂಗ್, ಸಂತೋಷ್, ಶ್ರೀನಿವಾಸ್, ಸೌಂದರ್ಯ (ದೊಡ್ಡಬಳ್ಳಾಪುರ) ಇನ್ನೂ ಕೆಲವು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಈಗಾಗಲೇ ‘ಮಾರ್ಕ್’ ಸಿನಿಮಾದ ಮಾರ್ನಿಂಗ್ ಶೋ ಟಿಕೆಟ್ ಸಂಪೂರ್ಣವಾಗಿ ಸೋಲ್ಡ್ ಔಟ್ ಆಗಿವೆ.
ಬೆಂಗಳೂರಿನಲ್ಲಿ ಮಾತ್ರವೇ ಅಲ್ಲ, ಮೈಸೂರು, ಚಿತ್ರದುರ್ಗ, ತುಮಕೂರು, ಕೋಲಾರ, ಶಿವಮೊಗ್ಗ ಇನ್ನೂ ಕೆಲವು ಜಿಲ್ಲಾ ಕೇಂದ್ರ, ತಾಲ್ಲೂಕು ಕೇಂದ್ರಗಳ ಚಿತ್ರಮಂದಿರಗಳಲ್ಲಿ ‘ಮಾರ್ಕ್’ ಸಿನಿಮಾದ ಅರ್ಲಿ ಮಾರ್ನಿಂಗ್ ಶೋ ಅನ್ನು ಪ್ರದರ್ಶನ ಮಾಡಲಾಗುತ್ತಿದ್ದು, ಅಡ್ವಾನ್ಸ್ ಬುಕಿಂಗ್ ಓಪನ್ ಆದ ಕೆಲವೇ ಗಂಟೆಗಳಲ್ಲಿ ಟಿಕೆಟ್ಗಳು ಸೋಲ್ಡ್ ಔಟ್ ಆಗಿವೆ. ಅದರಲ್ಲೂ ಈ ವಿಶೇಷ ಶೋಗೆ ಟಿಕೆಟ್ ದರವನ್ನೂ ಸಹ ಹೆಚ್ಚು ಮಾಡಲಾಗಿದೆ. ವಿಶೇಷ ಶೋಗೆ 400 ರೂಪಾಯಿ, ಕೆಲವು ಚಿತ್ರಮಂದಿರಗಳಲ್ಲಿ 500 ರೂಪಾಯಿ ಟಿಕೆಟ್ ದರ ನಿಗದಿಪಡಿಸಲಾಗಿದೆ.
‘ಮಾರ್ಕ್’ ಸಿನಿಮಾ ಡಿಸೆಂಬರ್ 25 ಕ್ಕೆ ಬಿಡುಗಡೆ ಆಗುತ್ತಿದ್ದು, ಅದೇ ದಿನ ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಸಹ ಬಿಡುಗಡೆ ಆಗುತ್ತಿದೆ. ಆದರೆ ಸುದೀಪ್ ಹಾಗೂ ತಂಡ ಜಾಣತನದಿಂದ ಅಡ್ವಾನ್ಸ್ ಬುಕಿಂಗ್ ಮೊದಲೇ ಓಪನ್ ಮಾಡಿದ್ದಾರೆ ಮಾತ್ರವಲ್ಲದೆ ಬೆಳಿಗ್ಗೆ 6 ಗಂಟೆಯ ವಿಶೇಷ ಶೋ ಪ್ರದರ್ಶನವನ್ನು ಸಹ ಮಾಡುವುದರ ಮೂಲಕ ಹೆಚ್ಚಿನ ಗಳಿಕೆಯ ಭರವಸೆ ಮೂಡಿಸಿದ್ದಾರೆ. ‘ಮಾರ್ಕ್’ ಸಿನಿಮಾನಲ್ಲಿ ಸುದೀಪ್ ಜೊತೆಗೆ ಶೈನ್ ಟಾಮ್ ಚಾಕೊ, ಯೋಗಿ ಬಾಬು ಇನ್ನೂ ಕೆಲವು ಪ್ರತಿಭಾವಂತ ನಟರು ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ವಿಜಯ್ ಕಾರ್ತಿಕೇಯ. ಸಿನಿಮಾಕ್ಕೆ ಸಂಗೀತ ನೀಡಿರುವುದು ಅಜನೀಶ್ ಲೋಕನಾಥ್.
ಶಿವರಾಜ್ಕುಮಾರ್ ಅವರು ‘ಓಂ’ ಸಿನಿಮಾದಲ್ಲಿ ನಟಿಸಿದ್ದಾರೆ. ಉಪೇಂದ್ರ ಈ ಚಿತ್ರಕ್ಕೆ ಡೈರೆಕ್ಟರ್. ಸಿನಿಮಾ ಶೂಟ್ ವೇಳೆ ನಡೆದ ಘಟನೆ ಬಗ್ಗೆ ಉಪೇಂದ್ರ ಅವರು ಮಾತನಾಡಿದ್ದಾರೆ. ‘45’ ಚಿತ್ರದ ಪ್ರಚಾರದ ಸಂದರ್ಭದಲ್ಲಿ ಉಪ್ಪಿ ಈ ಘಟನೆ ನೆನಪಿಸಿಕೊಂಡರು. ಒಂದು ದೃಶ್ಯದ ಬಗ್ಗೆ ಶಿವಣ್ಣಗೆ ಅಸಮಾಧಾನ ಇತ್ತು. ಈ ಬಗ್ಗೆ ಉಪೇಂದ್ರ ಬಳಿ ನಿರಂತರವಾಗಿ ಕೇಳಿದ್ದರಂತೆ. ಆದರೆ, ದೃಶ್ಯ ತೆಗೆಯಲು ಉಪೇಂದ್ರ ಒಪ್ಪಲೇ ಇಲ್ಲ. ಕೊನೆಗೆ ಶಿವಣ್ಣ ಅವರು ಯಾರದ್ದೋ ಬಳಿ ಹೇಳಿ ಕಳುಹಿಸಿದರಂತೆ. ಅವರು ಬಂದು ಹೇಳಿದಾಗ, ‘ಈ ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ’ ಎಂದಿದ್ದರು. ಇದನ್ನು ಆ ವ್ಯಕ್ತಿ ಶಿವಣ್ಣಗೆ ಹೇಳಿದ್ದರು. ಮರಳಿ ಉಪ್ಪಿ ಬಳಿ ಬಂದ ಶಿವಣ್ಣ, ‘ಇನ್ಮುಂದೆ ಏನನ್ನೂ ಹೇಳೋದಿಲ್ಲ’ ಎಂದಿದ್ದರಂತೆ.
ಬಾಗಲಕೋಟೆ, ಡಿಸೆಂಬರ್ 20: ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿ (Teacher Couple) ಹಲ್ಲೆ (Assaulted) ನಡೆಸಿ ರಾಕ್ಷಸಿ ಕೃತ್ಯ ಮೆರೆದಿರುವಂತಹ ಘಟನೆ ಬಾಗಲಕೋಟೆ ನವನಗರದ 54ನೇ ಸೆಕ್ಟರ್ನಲ್ಲಿರುವ ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿಶಾಲೆಯಲ್ಲಿ ನಡೆದಿದೆ. ದೀಪಕ್ ರಾಠೋಡ್(16) ಹಲ್ಲೆಗೊಳಗಾದ ಬುದ್ಧಿಮಾಂದ್ಯ ಬಾಲಕ. ಮಹಾರಾಷ್ಟ್ರ ಮೂಲದ ಶಿಕ್ಷಕ ಅಕ್ಷಯ್ ಇಂಗಳಕರ್ ಬೆಲ್ಟ್, ಪ್ಲಾಸ್ಟಿಕ್ ಪೈಪ್‌ನಿಂದ ಹಲ್ಲೆ ಮಾಡಿದರೆ, ಅವರ ಪತ್ನಿ ಮಾಲಿನಿ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯವೆಸಗಿದ್ದಾರೆ. ಹಲ್ಲೆಯನ್ನ ಪ್ರಶ್ನಿಸಲು ಬಂದ ಪೋಷಕರಿಗೆ ಶಿಕ್ಷಕ ದಂಪತಿ ಬೆದರಿಕೆ ಹಾಕಿದ್ದಾರೆ. ಸದ್ಯ ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಶಿಕ್ಷಕ ಅಕ್ಷಯ್ ಮತ್ತು ಅವರ ಪತ್ನಿ ಮಾಲಿನಿಯಿಂದ ಮಾತ್ರವಲ್ಲದೆ ಸಹ ಶಿಕ್ಷಕ ವಿಶಾಲ್ ಪಾಟೀಲ್ನಿಂದಲೂ ಬಾಲಕನ ಮೇಲೆ ಹಲ್ಲೆ ಮಾಡಲಾಗಿದೆ. ಸದ್ಯ ಬುದ್ಧಿಮಾಂದ್ಯ ಶಾಲೆಯ ಮುಂದೆ ಪೋಷಕರು ಜಮಾಯಿಸಿದ್ದಾರೆ. ಈ ನೀಚ ಶಿಕ್ಷಕ ದಂಪತಿ ಕೃತ್ಯಕ್ಕೆ ಮಕ್ಕಳ ಪೋಷಕರು ಕಣ್ಣೀರು ಹಾಕಿದ್ದು, ಇವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಸದ್ಯ ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಶಿಕ್ಷಕ ದಂಪತಿಯನ್ನ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಬಾಲಕನ ತಾಯಿ ಹೇಳಿದ್ದಿಷ್ಟು
ಇನ್ನು ಟಿವಿ9 ಎದುರು ದೀಪಕ್ ರಾಠೋಡ್ ತಾಯಿ ಪಾರ್ವತಿ ಕಣ್ಣೀರಿಟ್ಟಿದ್ದು, ನಾನು ಪ್ರತಿ ತಿಂಗಳು ಆರು ಸಾವಿರ ರೂ ಹಣ ಕೊಡುತ್ತೇವೆ. ನಮ್ಮ ಮಕ್ಕಳಿಗೆ ಬಾತ್ ರೂಮ್, ಶೌಚಾಲಯ ತೊಳೆಯುವುದಕ್ಕೆ ಹಚ್ಚುತ್ತಾರೆ. ಒಪ್ಪದಿದ್ದಾಗ ಕಣ್ಣಲ್ಲಿ ಖಾರದ ಪುಡಿ ಹಾಕುವುದು, ಬೆಲ್ಟ್ ಹಾಗೂ ಪ್ಲಾಸ್ಟಿಕ್ ಪೈಪ್‌ನಿಂದ ಹಲ್ಲೆ ಮಾಡಿದ್ದಾರೆ. ಅವರ ಮೇಲೆ ಕಠಿಣ ಕ್ರಮ ಆಗಬೇಕು. ಇದನ್ನು ಕೇಳಲು ಬಂದರೆ ಏನು ಮಾಡಿಕೊಳ್ಳುತ್ತೀರಾ ಮಾಡಿಕೊಳ್ಳಿ ಅಂತಾರೆ. ನಮ್ಮ ಮಗ ಅಷ್ಟೇ ಅಲ್ಲ ಬೇರೆ ಮಕ್ಕಳಿಗೂ ಹಲ್ಲೆ ಮಾಡಿದ್ದಾರೆ. ಈ ಶಾಲೆಯ ಲೈಸೆನ್ಸ್ ರದ್ದು ಮಾಡಿ ಬಂದ್ ಮಾಡಬೇಕು ಎಂದು ಬಾಲಕನ ತಾಯಿ ಹಾಗೂ ಕುಟುಂಬಸ್ಥರು ಆಗ್ರಹಿಸಿದ್ದಾರೆ.
ಪೊಲೀಸ್ ವಿಚಾರಣೆ ವೇಳೆ ಶಿಕ್ಷಕ ಮತ್ತು ಪತ್ನಿ ವಾದ
ಹಲ್ಲೆ ಸಂಬಂಧ ಬಾಗಲಕೋಟೆಯ ನವನಗರ ಠಾಣೆ ಪೊಲೀಸರಿಂದ ಶಿಕ್ಷಕ ಅಕ್ಷಯ್, ಪತ್ನಿ ಮಾಲಿನಿ ವಿಚಾರಣೆ ಮಾಡಿದ್ದು, ನಾವು ಹಲ್ಲೆ ಮಾಡಿಲ್ಲ ಎಂದು ವಾದ ಮಾಡಿದ್ದಾರೆ. ನಾವು ಖಾರದಪುಡಿ ಎರಚಿಲ್ಲ ಹುಡುಗರೇ ಎರಚಿಕೊಂಡಿದ್ದಾರೆ. ಬೇಕಿದ್ದರೆ ಬೇರೆ ಹುಡುಗರನ್ನ ಕೇಳಿ ಎಂದು ಶಿಕ್ಷಕ ದಂಪತಿ ಸಮರ್ಥನೆ ನೀಡಿದ್ದಾರೆ.
ಈರುಳ್ಳಿ (onions) ಹಾಕಿದ್ರೆ ಅಡುಗೆಯ ರುಚಿ ಮತ್ತಷ್ಟು ಹೆಚ್ಚುತ್ತದೆ. ಹಾಗಾಗಿ ಪ್ರತಿ ಅಡುಗೆಯಲ್ಲೂ ಈರುಳ್ಳಿಯನ್ನು ಬಳಕೆ ಮಾಡಲಾಗುತ್ತದೆ. ಆದ್ರೆ ಕಣ್ಣಲ್ಲಿ ನೀರು ಬರುವ ಕಾರಣ, ಕಿರಿಕಿರಿ ಉಂಟಾಗುವ ಕಾರಣ ಈರುಳ್ಳಿಯನ್ನು ಕತ್ತರಿಸುವುದೇ ಹಲವರಿಗೆ ತುಂಬಾನೇ ಕಷ್ಟದ ಕೆಲಸವಾಗಿಬಿಟ್ಟಿದೆ. ಈರುಳ್ಳಿ ಹೆಚ್ಚುವಾಗ ಕಣ್ಣಲ್ಲಿ ನೀರು ಬರಲು ಅದರಲ್ಲಿರುವ ಸಲ್ಫರ್ ಸಂಯುಕ್ತಗಳು ಕಾರಣ. ಹೌದು ಈರುಳ್ಳಿ ಕಟ್ ಮಾಡುವಾಗ ಸಲ್ಫರ್ ಸಂಯುಕ್ತಗಳು ಗಾಳಿಯಲ್ಲಿ ಬಿಡುಗಡೆಯಾಗಿ ಕಣ್ಣುಗಳಲ್ಲಿನ ತೇವಾಂಶದೊಂದಿಗೆ ಸೇರಿಕೊಂಡು ಕಿರಿಕಿರಿ ಮತ್ತು ಕಣ್ಣೀರನ್ನು ಉಂಟುಮಾಡುತ್ತದೆ. ಹೀಗಿರುವಾಗ ಈ ಒಂದಷ್ಟು ತಂತ್ರಗಳನ್ನು ಪಾಲಿಸುವ ಮೂಲಕ ಯಾವುದೇ ಕಿರಿಕಿರಿ, ಕಣ್ಣಿನ ಉರಿ ಇಲ್ಲದೆ ಆರಾಮದಾಯಕವಾಗಿ ಈರುಳ್ಳಿ ಕತ್ತರಿಸಬಹುದು.
ಈರುಳ್ಳಿ ಕತ್ತರಿಸುವಾಗ ಕಣ್ಣೀರು ಬರಬಾರದೆಂದರೆ ಈ ಸಲಹೆ ಪಾಲಿಸಿ:
ಈರುಳ್ಳಿಯನ್ನು ನೀರಲ್ಲಿ ನೆನೆಸಿ: ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರಬಾರದೆಂದರೆ ಅವುಗಳನ್ನು ಸಿಪ್ಪೆ ತೆಗೆದು ಕತ್ತರಿಸುವ ಅರ್ಧ ಗಂಟೆ ಮೊದಲು ನೀರಿನಲ್ಲಿ ನೆನೆಸಿಡಿ. ನೀವು ಹೀಗೆ ಮಾಡುವುದರಿಂದ, ಈರುಳ್ಳಿಯಲ್ಲಿರುವ ಅನಿಲಗಳು ನೀರಿನೊಂದಿಗೆ ಚೆನ್ನಾಗಿ ಬೆರೆತು ನಿಮ್ಮ ಕಣ್ಣುಗಳಲ್ಲಿ ನೀರು ಬರದಂತೆ ತಡೆಯುತ್ತದೆ.
ಈರುಳ್ಳಿಯನ್ನು ಫ್ರಿಡ್ಜ್‌ನಲ್ಲಿಡಿ: ನೀವು ಬಯಸಿದರೆ, ಕತ್ತರಿಸುವ ಮೊದಲು ಈರುಳ್ಳಿಯನ್ನು 10 ನಿಮಿಷಗಳ ಕಾಲ ರೆಫ್ರಿಜರೇಟರ್‌ನಲ್ಲಿ ಇಡಬಹುದು. ಹೀಗೆ ಈರುಳ್ಳಿಯನ್ನು ತಂಪಾಗಿಸುವುದರಿಂದ ಸಲ್ಫರ್ ಸಂಯುಕ್ತಗಳ ಪರಿಣಾಮವನ್ನು ಕಡಿಮೆಯಾಗುತ್ತದೆ ಮತ್ತು ಈರುಳ್ಳಿ ಕತ್ತರಿಸುವಾಗ ಕಣ್ಣೀರು ಬರುವುದಿಲ್ಲ.
ಫ್ಯಾನ್ ಅಡಿಯಲ್ಲಿ ಈರುಳ್ಳಿ ಕತ್ತರಿಸಿ: ಫ್ಯಾನ್ ಆನ್ ಮಾಡಿ ಈರುಳ್ಳಿ ಕತ್ತರಿಸಲು ಪ್ರಯತ್ನಿಸಿ. ಏಕೆಂದರೆ ಗಾಳಿಯ ಹರಿವು ಸಲ್ಫರ್ ಸಂಯುಕ್ತಗಳು ಕಣ್ಣುಗಳನ್ನು ತಲುಪುವುದನ್ನು ತಡೆಯುತ್ತದೆ.
ಚಾಕುವಿನ ಮೇಲೆ ನಿಂಬೆ ರಸವನ್ನು ಹಚ್ಚಿ: ಈರುಳ್ಳಿ ಕ್ತರಿಸುವಾಗ ಕಣ್ಣುಗಳಲ್ಲಿ ನೀರು ಬರುವುದನ್ನು ತಡೆಯಲು ಒಂದು ಉತ್ತಮ ಮಾರ್ಗವೆಂದರೆ ಈರುಳ್ಳಿ ಕತ್ತರಿಸುವ ಮೊದಲು ಚಾಕುವಿಗೆ ನಿಂಬೆ ರಸವನ್ನು ಹಚ್ಚುವುದು. ಇದು ತುಂಬಾ ಪ್ರಯೋಜನಕಾರಿಯಾಗಿದೆ.
ಬಿಸಿ ನೀರು ಹತ್ತಿರದಲ್ಲಿಡಿ: ಈರುಳ್ಳಿ ಕತ್ತರಿಸುವಾಗ ಬಿಸಿನೀರನ್ನು ನಿಮ್ಮ ಹತ್ತಿರದಲ್ಲಿ ಇರಿಸಿ. ಇದು ಈರುಳ್ಳಿಯಿಂದ ಆವಿಯನ್ನು ಹೊರಹಾಕುವ ಮೂಲಕ ಆಮ್ಲವನ್ನು ತಟಸ್ಥಗೊಳಿಸುತ್ತದೆ. ಇದರಿಂದ ತಡೆಯಬಹುದು.
ಇದಲ್ಲದೆ ಈರುಳ್ಳಿ ಕತ್ತರಿಸುವಾಗ ಆಗಾಗ್ಗೆ ಕಣ್ಣುಗಳನ್ನು ಸ್ವಚ್ಛ ನೀರಿನಿಂದ ತೊಳೆಯುವುದರಿಂದಲೂ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.
ಢಾಕಾ, ಡಿಸೆಂಬರ್ 20: ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಹಿಂದೂ ವ್ಯಕ್ತಿಯನ್ನು ಥಳಿಸಿ, ಕಟ್ಟಿಹಾಕಿ, ಬೆಂಕಿ ಹಚ್ಚಲಾಗಿತ್ತು. ವಿದ್ಯಾರ್ಥಿ ರಾಜಕೀಯ ನಾಯಕನ ಸಾವಿನ ನಂತರ ಬಾಂಗ್ಲಾದೇಶಾದ್ಯಂತ (Bangladesh) ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದ ಕಾರಣದಿಂದಾಗಿ ಧರ್ಮನಿಂದನೆಯ ಆರೋಪದ ಮೇಲೆ ಬಾಂಗ್ಲಾದೇಶದ ಮೈಮೆನ್ಸಿಂಗ್ ಪ್ರದೇಶದಲ್ಲಿ ಹಿಂದೂ ವ್ಯಕ್ತಿಯ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರನ್ನು ಬಂಧಿಸಲಾಗಿದೆ.
ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದ ನಂತರ 7 ಶಂಕಿತರನ್ನು ಬಂಧಿಸಲಾಗಿದೆ ಎಂದು ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಹೇಳಿದ್ದಾರೆ. ಬಂಧಿತರನ್ನು ಎಂಡಿ ಲಿಮನ್ ಸರ್ಕಾರ್, ಎಂಡಿ ತಾರೆಕ್ ಹೊಸೈನ್, ಎಂಡಿ ಮಾಣಿಕ್ ಮಿಯಾ, ಇರ್ಷಾದ್ ಅಲಿ, ನಿಜುಮ್ ಉದ್ದೀನ್, ಅಲೋಮ್‌ಗಿರ್ ಹೊಸೈನ್ ಮತ್ತು ಎಂಡಿ ಮಿರಾಜ್ ಹೊಸೈನ್ ಅಕಾನ್ ಎಂದು ಗುರುತಿಸಲಾಗಿದೆ.
ಮೈಮೆನ್‌ಸಿಂಗ್‌ನ ಭಾಲುಕಾದಲ್ಲಿ ಧರ್ಮನಿಂದನೆಯ ಆರೋಪದ ಮೇಲೆ ಯುವ ಗಾರ್ಮೆಂಟ್ ಕಾರ್ಖಾನೆ ಕಾರ್ಮಿಕ ದೀಪು ಚಂದ್ರ ದಾಸ್‌ನನ್ನು ಉದ್ರಿಕ್ತ ಗುಂಪೊಂದು ಹೊಡೆದು ಕೊಂದಿತ್ತು. ಸಾವಿರಾರು ಜನರು ನೋಡುತ್ತಿರುವಾಗಲೇ ಆತನನ್ನು ಕಟ್ಟಿಹಾಕಿ, ಕೊಂದು ನಂತರ ಅವರ ದೇಹವನ್ನು ಸುಟ್ಟುಹಾಕಲಾಯಿತು.
ಈ ಘಟನೆಯು ಬಾಂಗ್ಲಾದೇಶದ ಅಲ್ಪಸಂಖ್ಯಾತರು ಮತ್ತು ನೆರೆಯ ಭಾರತದ ರಾಜಕೀಯ ವಲಯಗಳಲ್ಲಿ ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿತು. ಇದು ಕಳೆದ ವರ್ಷದ ವಿದ್ಯಾರ್ಥಿ ದಂಗೆಯಲ್ಲಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಬಾಂಗ್ಲಾದೇಶದಲ್ಲಿ ಹಿಂದೂಗಳು ಎದುರಿಸುತ್ತಿರುವ ಅಪಾಯವನ್ನು ಒತ್ತಿಹೇಳುತ್ತದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಡಿಸೆಂಬರ್ 20: ನಗರದಲ್ಲಿ ಅನಧಿಕೃತ ನಿವೇಶನಗಳ ವಿರುದ್ಧ ಜಿಬಿಎ ಸಮರ ಸಾರಿದೆ. ಇಂದು ಬೆಳ್ಳಂಬೆಳಗ್ಗೆ ಶ್ರೀನಿವಾಸಪುರದ ಕೋಗಿಲು ಲೇಔಟ್ನಲ್ಲಿ 200 ಹೆಚ್ಚು ಮನೆಗಳ ತೆರವು ಕಾರ್ಯ ಮಾಡಲಾಗಿತು. 14 ಎಕರೆ ಪಾಲಿಕೆ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ 190ಕ್ಕೂ ಹೆಚ್ಚು ಮನೆಗಳನ್ನು ನೆಲಸಮಗೊಳಿಸಲಾಗಿದೆ. ಜಿಬಿಎ ಕಾರ್ಯಕ್ಕೆ ಸೂರು ಕಳೆದುಕೊಂಡವರು ಹಿಡಿಶಾಪ ಹಾಕಿದ್ದಾರೆ. ಒಂದೇ ಒಂದೂ ಸೂಚನೆ ಕೊಡದೇ ಕೆಡವಿದ್ದಾರೆ ಅಂತಾ ಕೆಂಡಕಾರದ್ದಾರೆ.