Viral: ಬೆಂಗಳೂರಿಗೆ ಹೋಗಲು ಇಷ್ಟವಿಲ್ಲ; 34 ಲಕ್ಷ ರೂ ಸಂಬಳದ ಜಾಬ್ ಆಫರ್ ತಿರಸ್ಕರಿಸಿದ ಯುವಕ
ಉದ್ಯೋಗ (employment) ಎಲ್ಲರಿಗೂ ಅತ್ಯವಶ್ಯಕ. ಆದರೆ ಈಗಿನ ಕಾಲದಲ್ಲಿ ಎಷ್ಟೇ ಓದಿಕೊಂಡಿದ್ದರೂ ಕೈ ತುಂಬಾ ಸಂಬಳ ಸಿಗುವ ಒಂದೊಳ್ಳೆ ಉದ್ಯೋಗ ಗಿಟ್ಟಿಸಿಕೊಳ್ಳುವುದು ತುಂಬಾನೇ ಕಷ್ಟ. ತಾವು ಓದಿರುವುದಕ್ಕೆ ತಕ್ಕ ಉದ್ಯೋಗವಿಲ್ಲದೇ ಸಿಕ್ಕ ಕೆಲಸವನ್ನೇ ಅನಿವಾರ್ಯ ಕಾರಣಕ್ಕಾಗಿ ಮಾಡುವವರೇ ಹೆಚ್ಚು. ಆದರೆ ದೆಹಲಿಯ ಗುರುಗ್ರಾಮ ಮೂಲದ ಇಂಜಿನಿಯರ್‌ರೊಬ್ಬ ಬೆಂಗಳೂರಿಗೆ (Bengaluru) ಶಿಫ್ಟ್ ಆಗೋಕೆ ಆಗಲ್ಲ ಎನ್ನುವ ಒಂದೇ ಒಂದು ಕಾರಣಕ್ಕೆ 34 ಲಕ್ಷ ರೂ ವಾರ್ಷಿಕ ಸಂಬಳ ಸಿಗುವ ಕೆಲಸದ ಆಫರ್ ತಿರಸ್ಕರಿಸಿದ್ದಾನೆ. ಉದ್ಯೋಗದ ಕುರಿತು ಈ ಯುವಕ…