ಬೆಂಗಳೂರಿನ 50 ವಾರ್ಡ್‌ಗಳಲ್ಲಿ ಕಸ ಸಂಗ್ರಹಣೆ ಸ್ಥಗಿತ! ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿರುವ ಕಾರ್ಮಿಕರು
ಬೆಂಗಳೂರು, ಮಾರ್ಚ್ 24: ನಗರದಲ್ಲಿ ತ್ಯಾಜ್ಯ ಸಂಗ್ರಹಣೆಯಲ್ಲಿ (Waste Management) ಅಡಚಣೆ ಉಂಟಾಗಿದ್ದು, ಕನಿಷ್ಠ 50 ವಾರ್ಡ್‌ಗಳಲ್ಲಿ ಕಸದ ಸಂಗ್ರಹಣೆ ಸೋಮವಾರ ಸ್ಥಗಿತಗೊಂಡಿತ್ತು. ವೇತನ ಬಾಕಿ ಹಾಗೂ ಕಸ ವಿಂಗಡಣೆ ಕುರಿತ ಹೊಸ ನಿಯಮದ ವಿರುದ್ಧ ಪ್ರತಿಭಟನೆಯಾಗಿ ಆಟೋ ಟಿಪ್ಪರ್ ಚಾಲಕರು ಮತ್ತು ಲೋಡರ್‌ಗಳು ಸಾಮೂಹಿಕ ರಜೆ ಹಾಕಿದ್ದರಿಂದ ಈ ಅವ್ಯವಸ್ಥೆ ಉಂಟಾಗಿದೆ. ವೇತನ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದ ಸಿಇಒ ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ಸಂಸ್ಥೆ (BSWML) ಮೂಲದಲ್ಲೇ ಕಸದ ವಿಂಗಡಣೆ ಕಡ್ಡಾಯವಾಗಬೇಕು ಎಂದು…