ಪೊಲೀಸ್ ಇಲಾಖೆಗೆ ಸೇರಿದ 80 ಕೋಟಿ ರೂ. ಮೌಲ್ಯದ ಆಸ್ತಿ ಕಬಳಿಕೆ! ಬೆಸ್ಕಾಂ ಅಧಿಕಾರಿಗಳು ಸೇರಿ ಹಲವರ ಮೇಲೆ ಎಫ್ಐಆರ್
ಬೆಂಗಳೂರು, ಏಪ್ರಿಲ್ 01: ಪೊಲೀಸ್ ಇಲಾಖೆಗೆ ಸೇರಿದ ಸುಮಾರು 80 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಕಬಳಿಸಲು ಯತ್ನಿಸಿರುವ ಗಂಭೀರ ಆರೋಪ ಬೆಳಕಿಗೆ ಬಂದಿದೆ. ಈ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಸ್ಕಾಂ, ಬಿಬಿಎಂಪಿ ಅಧಿಕಾರಿಗಳು ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಮಹಿಳೆಯ ಹೆಸರಲ್ಲಿ ಬಂದ ವಿದ್ಯುತ್ ಬಿಲ್ ಹಳೆಯ ಮಲ್ಲೇಶ್ವರಂ ಪೊಲೀಸ್ ಠಾಣೆ ಹಾಗೂ ಪೊಲೀಸ್ ವಸತಿ ಗೃಹಗಳಿರುವ ಈ ಜಾಗಕ್ಕೆ 100 ವರ್ಷಕ್ಕೂ ಹೆಚ್ಚು ಇತಿಹಾಸವಿದೆ. 1913ರ ಮಾಪನ…