ಬೆಂಗಳೂರಿನಲ್ಲಿ ಮೆಗಾ ಡಿಪೋರ್ಟೇಷನ್ ಆಪರೇಷನ್: ಬರೋಬ್ಬರಿ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು
ಬೆಂಗಳೂರು, ಏಪ್ರಿಲ್ 04: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ (Bangladeshi Illegal Immigrants) ಮೇಲೆ ಸಿಸಿಬಿ ಮತ್ತು ನಗರ ಪೊಲೀಸರು ಬೃಹತ್ ಕಾರ್ಯಾಚರಣೆ ಕೈಗೊಂಡಿದ್ದಾರೆ. ಇದುವರೆಗೆ ಬರೋಬ್ಬರಿ 272 ಜನರನ್ನು ಬೆಂಗಳೂರಿನಿಂದ ಯಶಸ್ವಿಯಾಗಿ ಗಡಿಪಾರು ಮಾಡಲಾಗಿದೆ. 272 ಜನರ ಗಡಿಪಾರು ಮಾರ್ಚ್ ಮೊದಲ ವಾರದಲ್ಲಿ ದೆಹಲಿ ಪೊಲೀಸರು ದೆಹಲಿ ಮತ್ತು ಕೊಲ್ಕತ್ತಾದಲ್ಲಿ ಐವರು ಬಾಂಗ್ಲಾ ಮೂಲದ ಉಗ್ರರ ಬಂಧನದ ಬೆನ್ನಲ್ಲೇ ದೇಶದಲ್ಲಿ ಅಕ್ರಮ ವಲಸಿಗರ ಪತ್ತೆಗೆ ಸೂಚಿಸಲಾಗಿತ್ತು. ಅದರಂತೆ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ…