ಉಪ ಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ‘ಕೈ’ ಅಭ್ಯರ್ಥಿಗಳ ಹೆಸರು ಘೋಷಣೆ
ಬೆಂಗಳೂರು, ಮಾರ್ಚ್ 22: ಸಾಕಷ್ಟು ಲೆಕ್ಕಾಚಾರಗಳ ಬಳಿಕ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಕಾಂಗ್ರೆಸ್ ಕೊನೆಗೂ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಬಾಗಲಕೋಟೆಯಿಂದ ಉಮೇಶ್ ಮೇಟಿ ಮತ್ತು ದಾವಣಗೆರೆ ದಕ್ಷಿಣದಿಂದ ಶಾಮನೂರು ಕುಟುಂಬದ ಸಮರ್ಥ್ ಅಭ್ಯರ್ಥಿಗಳಾಗಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಬಹಳ ಹೆಚ್ಚಿದ್ದು, ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆಯುತ್ತಿತ್ತು. ಈ ಹಿನ್ನೆಲೆ ಅಳೆದು ತೂಗಿ, ಕೆಲ ನಾಯಕರ ಮನವೊಲಿಸಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಆ ಮೂಲಕ ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ್…