Headlines

nagaraj11081993

ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು: ರೈತರಲ್ಲಿ ಆತಂಕ

ರಾಮನಗರ, ಮಾರ್ಚ್​​ 22: ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿವೆ. ಈಗಾಗಲೇ ಚನ್ನಪಟ್ಟಣ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇತ್ತೀಚೆಗೆ ಒಂದು  ಆನೆಯನ್ನ ಸೆರೆ ಹಿಡಿಯಲಾಗಿತ್ತು. ಇದರಿಂದ ಜನರು ಕೊಂಚ ನಿಟ್ಟುಸಿರು ಬಿಡುವ ನಡುವೆಯೇ ಇದೀಗ ಗ್ರಾಮದಲ್ಲಿ ಮತ್ತೆ ಮೂರು ಕಾಡಾನೆಗಳು ಕಾಣಿಸಿಕೊಂಡಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಕಾಡಾನೆಗಳನ್ನು ಹಿಮ್ಮೆಟ್ಟಿಸುವ ಯತ್ನ ನಡೆಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

Goddess Durga: ಭಯ, ಆತಂಕ, ಒಂಟಿತನದಿಂದ ಮುಕ್ತಿ ಪಡೆಯಲು ಒಂಬತ್ತು ಮಂಗಳವಾರ ಈ ಕೆಲಸ ಮಾಡಿ

ಭಕ್ತಿಪೂರ್ವಕವಾಗಿ ಭಗವಂತನನ್ನು ಆರಾಧಿಸುವ ಅನೇಕ ವಿಧಾನಗಳಲ್ಲಿ, ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು ಅರ್ಪಿಸುವುದು ಒಂದು ವಿಶೇಷ ಮಹತ್ವವನ್ನು ಹೊಂದಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿ ಹೇಳುವಂತೆ, ದುರ್ಗಾ ಅಂದರೆ ದುರ್ಗತಿನಾಶಿನಿ, ಅಂದರೆ ಎಲ್ಲಾ ದುರ್ಗತಿಗಳನ್ನು ನಾಶಪಡಿಸುವ ಶಕ್ತಿ ಸ್ವರೂಪಿಣಿ ತಾಯಿ. ಮಹಾಲಕ್ಷ್ಮಿ, ಮಹಾಕಾಳಿ, ಮಹಾಸರಸ್ವತಿ ಈ ತ್ರಿಶಕ್ತಿಗಳೂ ಕೂಡ ದುರ್ಗಾದೇವಿಯ ಅಂಶಗಳೇ ಆಗಿವೆ. ಈ ಕಾರಣಕ್ಕಾಗಿ ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು…

Read More

ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!

ಬಾಗಲಕೋಟೆ, ಮಾರ್ಚ್​ 22: ಹೊನ್ನಾಕಟ್ಟಿ ಚೆಕ್ ಪೋಸ್ಟ್‌ನಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಹಣ ರಾಯಚೂರಿನ ಬಿ. ವೀರೇಶ್ ಬಾಬು ಅವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಈ ಹಣವನ್ನು ರಾಯಚೂರಿನಿಂದ ಬೆಳಗಾವಿ ಕಡೆಗೆ ಕಾರಿನಲ್ಲಿ ಸಾಗಿಸಲಾಗುತ್ತಿತ್ತು. ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರು ಯಾವುದೇ ಸೂಕ್ತ ದಾಖಲೆಗಳಿಲ್ಲದೆ ನಗದು ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿ, ತಕ್ಷಣವೇ ಹಣವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ರಾಜ್ಯದಲ್ಲಿ ಬಾಗಲಕೋಟೆ ಹಾಗೂ…

Read More

ಧುರಂಧರ್ 2: ಪಾಕಿಸ್ತಾನದ ಪೊಲೀಸ್ ಆಗಲು ಕೈತುಂಬಾ ಸಂಬಳ ಪಡೆದ ಸಂಜಯ್ ದತ್

ಬಾಲಿವುಡ್‌ ನಟ ಸಂಜಯ್ ದತ್ (Sanjay Dutt) ಅವರಿಗೆ ‘ಧುರಂಧರ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾದಿಂದ ಖ್ಯಾತಿ ಹೆಚ್ಚಾಗಿದೆ. ಈ ಚಿತ್ರಗಳಲ್ಲಿ ಅವರು ನಿರ್ವಹಿಸಿರುವ ಪಾಕಿಸ್ತಾನಿ ಪೊಲೀಸ್ ಅಧಿಕಾರಿಯ ಪಾತ್ರಕ್ಕೆ ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಹುಬೇಡಿಕೆಯ ನಟನಾಗಿರುವ ಅವರು ಈ ಪಾತ್ರಕ್ಕಾಗಿ ದೊಡ್ಡ ಮೊತ್ತದ ಸಂಭಾವನೆ ಪಡೆದಿದ್ದಾರೆ. ಆ ಬಗ್ಗೆ ಮಾಹಿತಿ ಸಿಕ್ಕಿದೆ. ಮೂಲಗಳ ಪ್ರಕಾರ, ಸಂಜಯ್ ದತ್ ಅವರಿಗೆ ಬರೋಬ್ಬರಿ 10 ಕೋಟಿ ರೂಪಾಯಿ ಸಂಭಾವನೆ (Sanjay Dutt…

Read More

ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್​​ಗೆ ಬಿಗ್​​ ಶಾಕ್​​: ಅತ್ಯಾಚಾರ ಪ್ರಕರಣ ದಾಖಲು

ಮಂಗಳೂರು, ಮಾರ್ಚ್​​ 22: ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದ್ದ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್​​ಗೆ  ಬಿಗ್​​ ಶಾಕ್​​ ಸಿಕ್ಕಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ಠಾಣೆಯಲ್ಲಿ ಸಂದೇಶ್​​ ವಿರುದ್ಧ ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಎಫ್​ಐಆರ್​ ದಾಖಲಾಗಿದೆ. 2018 ರಿಂದ 2023ರವರೆಗೆ ಶಿಕ್ಷಕಿ ಮನೆಗೆ ಹೋಗಿ ಬೆದರಿಸಿ ಅತ್ಯಾಚಾರ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. 2020ರಲ್ಲಿ ಸಂದೇಶ್​​​ ಬೆಳ್ತಂಗಡಿ ಸರ್ಕಲ್ ವ್ಯಾಪ್ತಿಯಲ್ಲಿರುವ ವೇಣೂರು ಪೊಲೀಸ್…

Read More

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಅಮೆರಿಕಾದಿಂದ LPG ಸರಕು; ಮಂಗಳೂರು ಬಂದರಿಗೆ ಬಂತು‘ಪೈಕ್ಸಿಸ್ ಪಯನಿಯರ್’!

ಬೆಂಗಳೂರು, ಮಾರ್ಚ್​ 22: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದ ಇಂಧನ ಸರಬರಾಜಿನ ಬಗ್ಗೆ ಉಂಟಾದ ಆತಂಕದ ನಡುವೆಯೇ ಅಮೆರಿಕಾದಿಂದ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಸಾಗಣೆ ಭಾರತಕ್ಕೆ ತಲುಪಿದೆ. ಸಿಂಗಾಪುರ್ ಧ್ವಜದಡಿಯಲ್ಲಿ ಸಾಗುವ ‘ಪೈಕ್ಸಿಸ್ ಪಯನಿಯರ್’ ಹಡಗು ಭಾನುವಾರ ಬೆಳಗ್ಗೆ ನವ ಮಂಗಳೂರು ಬಂದರಿಗೆ ಆಗಮಿಸಿದೆ. ಬಂದರಿಗೆ ಬಂದಿರುವ ಹಡಗಿನಲ್ಲಿರುವ LPG ಪ್ರಮಾಣ ಎಷ್ಟು? ನವ ಮಂಗಳೂರು ಬಂದರು ಪ್ರಾಧಿಕಾರದ ಮಾಹಿತಿ ಪ್ರಕಾರ 47,236 ಟನ್ ಸಾಮರ್ಥ್ಯದ ಈ ಹಡಗು ಬೆಳಗ್ಗೆ ಸುಮಾರು 6 ಗಂಟೆಗೆ ಬರ್ತ್…

Read More

ಪತ್ನಿ ಜತೆ ಫೋನ್​ನಲ್ಲಿ ಮಾತನಾಡುತ್ತಿರುವಾಗಲೇ ಸ್ಫೋಟ, ಸೌದಿಯಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿ ಸಾವು

ಸೌದಿ, ಮಾರ್ಚ್​ 22: ಪತ್ನಿ ಜತೆ ಫೋನ್​​ನಲ್ಲಿ ಮಾತನಾಡುತ್ತಿರುವಾಗಲೇ ಸೌದಿಯಲ್ಲಿ ಇರಾನ್(Iran) ವೈಮಾನಿಕ ದಾಳಿ ನಡೆಸಿದ್ದು ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ರವಿ ಗೋಪಾಲ್ ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಬಘೈನ್ ಗ್ರಾಮದವರಾಗಿದ್ದಾರೆ. ರವಿಯ ಮೃತದೇಹವನ್ನು ಸ್ವದೇಶಕ್ಕೆ ತರಲು ಕುಟುಂಬವು ಹೆಣಗಾಡುತ್ತಿದ್ದು, ಅಧಿಕಾರಿಗಳು ಇಲ್ಲಿಯವರೆಗೆ ಮೌನವಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಮಾರ್ಚ್ 18ರ ರಾತ್ರಿ, ಕಾರ್ಖಾನೆಯಲ್ಲಿ ಕೆಲಸ ಮುಗಿಸಿದ ನಂತರ, ರವಿ ತನ್ನ ಪತ್ನಿ ರಿತು ಜೊತೆ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ, ಹಠಾತ್ ಸ್ಫೋಟ…

Read More

ಬೆಂಗಳೂರಲ್ಲಿ 16 ದಿನಗಳ ಶಿಶುವಿಗೆ ರೋಬೋಟಿಕ್ ಮೇದೋಜೀರಕ ಗ್ರಂಥಿ ಶಸ್ತ್ರಚಿಕಿತ್ಸೆ

ಬೆಂಗಳೂರು, ಮಾರ್ಚ್​​ 22: ಜನ್ಮತಃ ಹೈಪರ್‌ಇನ್ಸುಲಿನಿಸಮ್ (Congenital Hyperinsulinism) ಎನ್ನುವ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ 16 ದಿನದ ಶಿಶುವಿಗೆ ರೋಬೋಟಿಕ್​​ ಶಸ್ತ್ರಚಿಕಿತ್ಸೆಯನ್ನು ವೈಟ್‌ಫೀಲ್ಡ್‌ನ ಮಣಿಪಾಲ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ತೀವ್ರ ಹೈಪೋಗ್ಲೈಸೀಮಿಯಾ (ರಕ್ತದಲ್ಲಿ ಶರ್ಕರ ಪ್ರಮಾಣ ಕಡಿಮೆಯಾಗುವುದು) ಪರಿಣಾಮವಾಗಿ ಶಿಶುವಿಗೆ ಶಾಶ್ವತ ಮೆದುಳು ಹಾನಿಯ ಅಪಾಯ ಉಂಟಾಗಿತ್ತು. 4.6 ಕೆ.ಜಿ ತೂಕ ಹೊಂದಿದ್ದ ಈ ನವಜಾತ ಶಿಶುವಿಗೆ ಹೆಚ್ಚಿನ ಪ್ರಮಾಣದ ಇಂಟ್ರಾವೀನಸ್ ಗ್ಲೂಕೋಸ್ ನೀಡುತ್ತಿದ್ದರೂ ರಕ್ತದಲ್ಲಿ ಶರ್ಕರ ಪ್ರಮಾಣ ತೀವ್ರವಾಗಿ ಕುಸಿಯುತ್ತಿತ್ತು. ಈ ಹಿನ್ನೆಲೆ ತುರ್ತು ಚಿಕಿತ್ಸೆ…

Read More

Video: ಓಡಿ ಬಂದು ರಸ್ತೆ ದಾಟಲು ಹೋಗಿ ಜಾರಿಬಿದ್ದು ವಾಹನದಡಿಗಾದ ಯುವತಿ

ರಷ್ಯಾ, ಮಾರ್ಚ್​ 22: ಯುವತಿಯೊಬ್ಬಳು ಓಡಿ ಬಂದು ರಸ್ತೆ ದಾಟಲು ಹೋಗಿ ವಾಹನದಡಿಗಾಗಿರುವ ಘಟನೆ ರಷ್ಯಾದ ಕ್ರಾಸ್ನೊಯಾರ್ಸ್ಕ್‌ನ ಆಸ್ಟಿಲೆರೊ ಜಿಲ್ಲೆಯಲ್ಲಿ ನಡೆದಿದೆ. ಯುವತಿಯೊಬ್ಬಳು ರಸ್ತೆ ದಾಟುತ್ತಿದ್ದಾಗ ಜಾರಿಬಿದ್ದಿದ್ದು, ವಾಹನವೊಂದು ಆಕೆಯ ಮೇಲೆ ಹತ್ತಿದೆ. ಯುವತಿ ವಾಹನದ ಕೆಳಗೆ ಸಿಲುಕಿಕೊಂಡಿದ್ದು, ಕಾರು ಕೆಲವು ಮೀಟರ್​ಗಳಷ್ಟು ದೂರ ಆಕೆಯನ್ನು ಎಳೆದುಕೊಂಡು ಹೋಗಿದೆ. ಬಳಿಕ ಹೇಗೋ ಸಾಹಸ ಮಾಡಿ ಆಕೆಯನ್ನು ಹೊರಗೆ ತೆಗೆಯಲಾಯಿತು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಹನಿಮೂನ್ ಫೋಟೋ ವೈರಲ್

ದಕ್ಷಿಣ ಭಾರತದ ಖ್ಯಾತ ಸೆಲೆಬ್ರಿಟಿಗಳಾದ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಅವರು ಮದುವೆಯ ಬಳಿಕ ಹನಿಮೂನ್​​ಗೆ ತೆರಳಿದ್ದಾರೆ. ಈ ನವಜೋಡಿಯ ಹನಿಮೂನ್ (Honeymoon) ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉದಯಪುರದಲ್ಲಿ ನಡೆದ ಅದ್ದೂರಿ ಮದುವೆಯ ನಂತರ, ಈ ದಂಪತಿ ಥೈಲ್ಯಾಂಡ್‌ಗೆ ಹಾರಿದ್ದಾರೆ. ಅಲ್ಲಿನ ಸುಂದರ ದ್ವೀಪದಲ್ಲಿ ಕಾಲ ಕಳೆಯುತ್ತಿದ್ದಾರೆ. ತಮ್ಮ ಖಾಸಗಿತನವನ್ನು ಕಾಪಾಡಿಕೊಳ್ಳಲು ಯಾವುದೇ ಐಷಾರಾಮಿ ರೆಸಾರ್ಟ್‌ ಬದಲು ವಿಲ್ಲಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈಗ ವೈರಲ್ ಆಗಿರುವ ಫೋಟೋದಲ್ಲಿ, ಪ್ರಕೃತಿಯ ನಡುವೆ…

Read More