ಹುಳಿಯಾರು ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅನುಮಾನಸ್ಪದ ಸಾವು: ಕೇಸ್ ತನಿಖೆ ಹೊಣೆ ಸಿಐಡಿಗೆ
ತುಮಕೂರು, ಮಾರ್ಚ್ 20: ಹುಳಿಯಾರು ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಸ್ವತಃ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರೇ ಮಾಹಿತಿ ನೀಡಿದ್ದಾರೆ. ಜೂಜಾಟ ಕೇಸ್ ಸಂಬಂಧ ವಿಚಾರಣೆಗೆ ಪೊಲೀಸರು ಕರೆತಂದಿದ್ದ ಆರು ಮಂದಿಯ ಪೈಕಿ ಓರ್ವ ಮೃತಪಟ್ಟಿದ್ದರು. ಅನುಮಾನಾಸ್ಪದವಾಗಿ ಕಾಂತರಾಜು ಎಂಬವರು ಮೃತಪಟ್ಟಿದ್ದು, ಕುಟುಂಬಸ್ಥರು ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ವಿಚಾರಣೆ ನೆಪದಲ್ಲಿ ಹಲ್ಲೆ ನಡೆಸಿ ಕೊಲೆಗೈಯಲಾಗಿದೆ ಎಂಬ ಆರೋಪ…