2027 ರ ಏಕದಿನ ವಿಶ್ವಕಪ್ಗೆ ಈಗಲೇ 20 ಆಟಗಾರರ ಪಟ್ಟಿ ಸಿದ್ಧಪಡಿಸಿದ ಬಿಸಿಸಿಐ
ಕಳೆದ ಮೂರು ವರ್ಷಗಳಲ್ಲಿ ಹ್ಯಾಟ್ರಿಕ್ ಐಸಿಸಿ (ICC) ಟ್ರೋಫಿ ಗೆದ್ದಿರುವ ಟೀಂ ಇಂಡಿಯಾ (Team India) ಇದೀಗ ಸತತ 4ನೇ ಐಸಿಸಿ ಪ್ರಶಸ್ತಿ ಗೆಲುವಿನತ್ತ ಮಹತ್ವದ ಹೆಜ್ಜೆ ಇಟ್ಟಿದೆ. 2024 ರಲ್ಲಿ ಟಿ20 ವಿಶ್ವಕಪ್ ಎತ್ತಿಹಿಡಿದಿದ್ದ ಭಾರತ, ಆ ಬಳಿಕ 2025 ರಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು. ಇದೀಗ 2026 ರಲ್ಲಿ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಇನ್ನು ಮುಂದಿನ ವರ್ಷ ಅಂದರೆ 2027 ರಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ಆ ಟ್ರೋಫಿಯನ್ನು ಬಾಚಿಕೊಳ್ಳಲು…