ಸುಮ್ನೆ ಇರೋಕಾಗ್ದೆ ಭಾರತ-ಇರಾನ್ ನಡುವೆ ಬೆಂಕಿ ಹಚ್ಚಲು ಕುತಂತ್ರ ನಡೆಸಿದ ಪಾಕ್
ನವದೆಹಲಿ, ಮಾರ್ಚ್ 20: ಯುದ್ಧಭೂಮಿಯಲ್ಲಿ ಗೆಲ್ಲಲಾಗದೆ ಒಪ್ಪಂದವನ್ನು ಮಾಡಿಕೊಂಡ ರಾಷ್ಟ್ರಗಳಿಗೆ ರಕ್ಷಣೆಯನ್ನೂ ನೀಡಲಾಗದೆ ಅತಂತ್ರವಾಗಿರುವ ಪಾಕಿಸ್ತಾನ(Pakistan)ವು ಇರಾನ್ ಹಾಗೂ ಭಾರತದ ನಡುವೆ ವೈಷಮ್ಯವನ್ನು ಹುಟ್ಟುಹಾಕಲು ಕುತಂತ್ರ ನಡೆಸುತ್ತಿರುವುದು ಬಹಿರಂಗವಾಗಿದೆ. ಇತ್ತೀಚೆಗೆ ಅಮೆರಿಕದ ಸೇನೆಯು ಇರಾನ್ನ ಯುದ್ಧನೌಕೆ ಐರಿಸ್ ಡೇನಾವನ್ನು ಹೊಡೆದುಹಾಕಿತ್ತು, ಇದು ಭಾರತದಲ್ಲಿ ಸಮರಭ್ಯಾಸ ನಡೆಸಿಕೊಂಡು ಇರಾನ್ನತ್ತ ಹೊರಟಿದ್ದ ಯುದ್ಧನೌಕೆಯಾಗಿತ್ತು. ಶ್ರೀಲಂಕಾದ ಬಳಿಯ ಹಿಂದೂ ಮಹಾಸಾಗರದಲ್ಲಿ ಈ ಅವಘಡ ಸಂಭವಿಸಿತ್ತು. ಇರಾನ್ ಇಸ್ರೇಲ್ ಅಮೆರಿಕ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ಪಾಕಿಸ್ತಾನದಲ್ಲಿಯೂ ಯುದ್ಧದ ಸನ್ನಿವೇಶ ನಿರ್ಮಾಣವಾಗಿದೆ. ಒಂದೆಡೆ ಅಫ್ಘಾನಿಸ್ತಾನ…