IPL 2026: ಕಿಂಗ್ ಕೊಹ್ಲಿ 2.0.. ಟಾಪ್ ಗೇರ್ನಲ್ಲಿ ವಿರಾಟ್ ಬ್ಯಾಟಿಂಗ್; ವಿಡಿಯೋ ನೋಡಿ
ಇಂಡಿಯನ್ ಪ್ರೀಮಿಯರ್ ಲೀಗ್‌ನ 19 ನೇ ಸೀಸನ್ ಮಾರ್ಚ್ 28 ರಿಂದ ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯ ಹಾಲಿ ಚಾಂಪಿಯನ್ ಆರ್ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಇನ್ನ 9 ದಿನಗಳು ಮಾತ್ರ ಉಳಿದಿವೆ. ಹೀಗಾಗಿ ಉಭಯ ತಂಡಗಳು ಮೈದಾನದಲ್ಲಿ ಬೆವರು ಹರಿಸುತ್ತಿವೆ. ಇತ್ತ ಆರ್ಸಿಬಿ ಕೂಡ ತಯಾರಿಯನ್ನು ಚುರುಕುಗೊಳಿಸಿದ್ದು, ತಂಡದ ಬ್ಯಾಟಿಂಗ್ ಜೀವಾಳ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ, ತಂಡವನ್ನು ಕೂಡಿಕೊಂಡ ಬಳಿಕ ಮೊದಲ ಬಾರಿಗೆ ನೆಟ್ಸ್ನಲ್ಲಿ ಬ್ಯಾಟ್ ಹಿಡಿದು ಅಬ್ಬರಿಸಿದ್ದಾರೆ….